
ನವದೆಹಲಿ(ಜ.04): ಆದಾಯ ತೆರಿಗೆ ವಂಚನೆ ಕಾರಣದಿಂದ ಈಗಾಗಲೇ ಆದಾಯ ತೆರಿಗೆ ಇಲಾಖೆ ಹಲವು ದಾಳಿಗಳನ್ನು ನಡೆಸಿದೆ. ಭ್ರಷ್ಟ ರಾಜಕಾರಣಿಗಳು, ಉದ್ಯಮಿಗಳು, ಸಂಸ್ಥೆಗಳ ಮೇಲೆ ದಾಳಿ ನಡೆದಿದೆ. ಇದೀಗ ಐಟಿ, ZEE ಎಂಟರ್ಟೈನ್ಮೆಂಟ್ ಸಂಸ್ಥೆ ಮೇಲೆ ದಾಳಿ ನಡೆಸಿದೆ. ZEE ಎಂಟರ್ಟೈನ್ಮೆಂಟ್ ಸಂಸ್ಥೆಯ 15 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ.
IT ರಿಟರ್ನ್ ಸಲ್ಲಿಕೆ ಹಾಗೂ ಪ್ರಯೋಜನ; ಹಿಂದೇಟು ಹಾಕಿ ಸೌಲಭ್ಯದಿಂದ ವಂಚಿತರಾಗಬೇಡಿ!.
ತೆರಿಗೆ ವಂಚನೆ ಪ್ರಕರಣದ ಸಂಬಂಧಿಸಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ ಹಾಗೂ ಮುಂಬೈನಲ್ಲಿರುವ ZEE ಎಂಟರ್ಟೈನ್ಮೆಂಟ್ ಸಂಸ್ಥೆ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಈ ವೇಳೆ ಹಲವು ದಾಖಲೆಗಳನ್ನು ಪಡೆದುಕೊಂಡಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಮ್ಮ ಸಂಸ್ಥೆಗೆ ಭೇಟಿ ನೀಡಿದ್ದಾರೆ. ತೆರಿಗೆ ಸಲ್ಲಿಕೆ ಕುರಿತು ಕೆಲ ದಾಖಲೆಗಳನ್ನು ಕೇಳಿದ್ದಾರೆ. ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನಮ್ಮ ಸಿಬ್ಬಂದಿಗಳು ನೀಡಿದ್ದಾರೆ. ಇಷ್ಟೇ ಅಲ್ಲ ಆದಾಯ ತೆರಿಗೆ ಇಲಾಖೆಗೆ ಸಂಪೂರ್ಣ ಸಹಕಾರವನ್ನು ನೀಡಲಿದ್ದೇವೆ ಎಂದು ZEE ಎಂಟರ್ಟೈನ್ಮೆಂಟ್ ವಕ್ತಾರ ಮಾಧ್ಯಮಕ್ಕೆ ಪ್ರತಿಕ್ರಿಸಿಸಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.