
ನವದೆಹಲಿ(ಏ.19): ಜಮ್ಮು- ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಡುವಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ, ಇಂದಿನಿಂದ(ಏ.19) ವ್ಯಾಪಾರ ವಹಿವಾಟನ್ನು ಭಾರತ ಅಮಾನತುಗೊಳಿಸಿದೆ.
ದುಷ್ಕರ್ಮಿಗಳು ಗಡಿ ನಿಯಂತ್ರಣ ರೇಖೆ ಆಚೆಯಿಂದ ವ್ಯಾಪಾರ ಮಾರ್ಗವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ಶಸ್ತ್ರಾಸ್ತ್ರ, ಮಾದಕ ವಸ್ತುಗಳು ಮತ್ತು ನಕಲಿ ನೋಟುಗಳನ್ನು ಸಾಗಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವ್ಯಾಪಾರವನ್ನು ಅಮಾನತುಗೊಳಿಸಿರುವುದಾಗಿ ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ರಾಷ್ಟ್ರೀಯ ಭದ್ರತಾ ದಳದ ಪ್ರಕಾರ ಗಡಿ ಬಳಿ ವ್ಯಾಪಾರ ನಡೆಸುವ ಕೆಲವು ವ್ಯಕ್ತಿಗಳು, ಭಾರತದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತೆ ಉತ್ತೇಜಿಸುತ್ತಿರುವ ನಿಷೇಧಿತ ಉಗ್ರ ಸಂಘಟನೆಗಳ ಜೊತೆ ನಂಟು ಹೊಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಜಮ್ಮು- ಕಾಶ್ಮೀರದ ಚಕ್ಕನ್ -ಡಾ ಬಾಗ್ ಮತ್ತು ಸಲಾಮಾಬಾದ್ ಬಳಿ ಎಲ್‌ಒಸಿ ವ್ಯಾಪಾರವನ್ನು ಸ್ಥಗಿತಗೊಳಿಸಲಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.