
ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ‘ಮೇಕ್ ಇನ್ ಇಂಡಿಯಾ’ ಯೋಜನೆಯಲ್ಲಿ ಭಾರತ ಮಹತ್ವದ ಮೈಲುಗಲ್ಲು ಸಾಧಿಸಿದ್ದು, 2025ರಲ್ಲಿ 4.51 ಲಕ್ಷ ಕೋಟಿ ರು. ಮೌಲ್ಯದ ಆ್ಯಪಲ್ ಐಫೋನ್‌ಗಳನ್ನು ರಫ್ತು ಮಾಡಿದೆ. ಕಳೆದ 11 ವರ್ಷಗಳಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆ 6 ಪಟ್ಟು ಮತ್ತು ಎಲೆಕ್ಟ್ರಾನಿಕ್ಸ್ ರಫ್ತು 8 ಪಟ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ಸೋಮವಾರ ನೀಡಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪ್ರಧಾನಿ ಮೋದಿಯವರ ಮೇಕ್ ಇನ್ ಇಂಡಿಯಾ ಮತ್ತು ಉತ್ಪಾದಕ ಆರ್ಥಿಕತೆಯಾಗುವ ನಮ್ಮ ದಾರಿಯಲ್ಲಿ ಒಂದು ಪ್ರಮುಖ ಮೈಲಿಗಲ್ಲು ಸಾಧಿಸಿದ್ದೇವೆ. 2025ರಲ್ಲಿ ಆ್ಯಪಲ್ 4.51 ಲಕ್ಷ ಕೋಟಿ ರು. ಮೌಲ್ಯದ ಮೊಬೈಲ್‌ಗಳನ್ನು ರವಾನಿಸಿದೆ. 2021-2025ನೇ ಆರ್ಥಿಕ ವರ್ಷದಲ್ಲಿ ಸ್ಯಾಮ್ಸಂಗ್ 1.5 ಲಕ್ಷ ಕೋಟಿ ರು. ಮೌಲ್ಯದ ಫೋನ್‌ಗಳನ್ನು ರಫ್ತು ಮಾಡಿದೆ. 11 ವರ್ಷಗಳಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆ 6 ಪಟ್ಟು ಮತ್ತು ಎಲೆಕ್ಟ್ರಾನಿಕ್ಸ್ ರಫ್ತು 8 ಪಟ್ಟು ಹೆಚ್ಚಳವಾಗಿದೆ’ ಎಂದು ತಿಳಿಸಿದ್ದಾರೆ.
ಭಾರತವು 15 ಕೋಟಿ ಟನ್ ಅಕ್ಕಿ ಉತ್ಪಾದನೆಯ ಮೂಲಕ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿದೊಡ್ಡ ಅಕ್ಕಿ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭಾನುವಾರ ಘೋಷಿಸಿದ್ದಾರೆ.
ಇದನ್ನೂ ಓದಿ: ಸೆಮಿಕಂಡಕ್ಟರ್ ಯುನಿಟ್ ಸ್ಥಾಪನೆಗೆ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲೇ 94 ಎಕರೆ ಜಾಗ ಗುರುತು
ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಭಾರತವು ಅಕ್ಕಿ ಉತ್ಪಾದನೆಯಲ್ಲಿ ಚೀನಾವನ್ನು ಮೀರಿಸಿ, ವಿಶ್ವದಲ್ಲಿಯೇ ಅತ್ಯಧಿಕ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದೆ. ಚೀನಾ 14 ಕೋಟಿ ಟನ್ ಅಕ್ಕಿ ಉತ್ಪಾದಿಸಿದ್ದರೆ, ಭಾರತ 15 ಕೋಟಿ ಟನ್ ಉತ್ಪಾದಿಸಿ ಅಗ್ರಸ್ಥಾನ ಪಡೆದಿದೆ. ಪರಿಣಾಮ ಭಾರತ ಈಗ ವಿದೇಶಿ ಮಾರುಕಟ್ಟೆಗೂ ಅಕ್ಕಿ ಪೂರೈಸುತ್ತಿದೆ’ ಎಂದಿದ್ದಾರೆ.
ಇದನ್ನೂ ಓದಿ: ಭಾರತದ ಮೇಲೆ ಮತ್ತೆ ತೆರಿಗೆ ದಾಳಿ : ಟ್ರಂಪ್ ಎಚ್ಚರಿಕೆ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.