ಮ್ಯಾಟ್, ಫ್ಲೋರ್ ಮ್ಯಾಟ್, ಚಾಪೆ, ಬ್ಯಾಗ್, ಪರ್ಸ್ ತಯಾರಿಸುವಲ್ಲಿ ಯಶಸ್ವಿ
ಯಶಸ್ವಿ ಮಹಿಳಾ ಉದ್ಯಮಿಯಾಗಿ ಹೊರಹೊಮ್ಮುತ್ತಿರುವ ಚಾಮರಾಜನಗರದ ಮಹಿಳೆ
ಸಬಲೀಕರಣದತ್ತ ಹೆಜ್ಜೆ ಹಾಕಿದ ಗುಂಡ್ಲುಪೇಟೆ ತಾಲೂಕಿನ ಆಲಹಳ್ಳಿಯ ವರ್ಷಾ
ವರದಿ - ಪುಟ್ಟರಾಜು. ಆರ್.ಸಿ. ಏಷಿಯಾನೆಟ್ ಸುವರ್ಣ. ನ್ಯೂಸ್ , ಚಾಮರಾಜನಗರ
ಚಾಮರಾಜನಗರ (ಜೂನ್ 18): ಪ್ರಧಾನಿ ನರೇಂದ್ರ ಮೋದಿ (PM Modi) ಅವರ ಮನ್ ಕಿ ಬಾತ್ (Mann Ki Baat) ಎಷ್ಟೋ ಮಂದಿಗೆ ಪ್ರೇರಣೆಯಾಗಿದೆ. ಮನ್ ಕೀ ಬಾತ್ ನಿಂದಲೇ ಪ್ರೇರಣೆಗೊಂಡ ಚಾಮರಾಜನಗರದ (chamarajanagar) ಮಹಿಳೆಯೊಬ್ಬರು ಕಸದಿಂದ ರಸ ತೆಗೆದು ಯಶಸ್ವಿ ಉದ್ಯಮಿಯಾಗುವತ್ತ(Business) ಮುಂದಡಿ ಇಟ್ಟಿದ್ದಾರೆ. ಅಷ್ಟಕ್ಕೂ ಅವರು ಆರಂಭಿಸಿರುವ ಉದ್ಯಮವಾದರೂ ಏನು ಎಂಬುದನ್ನು ತಿಳಿದರೆ ನಿಜಕ್ಕೂ ಅಚ್ಚರಿಯಾಗುತ್ತದೆ.
ಹೌದು ..ರೈತರು ಬಾಳೆಗೊನೆ ಕೊಯ್ದ ನಂತರ ಬಾಳೆದಿಂಡು ಅನುಪಯುಕ್ತ ಎಂದು ಬಿಸಾಡುತ್ತಾರೆ. ಆದರೆ ಈ ಅನುಪಯುಕ್ತ ಬಾಳೆದಿಂಡಿನಿಂದ ಮ್ಯಾಟ್, ಫ್ಲೋರ್ ಮ್ಯಾಟ್, ಚಾಪೆ, ಬ್ಯಾಗ್, ಪರ್ಸ್ ಗಳನ್ನು ತಯಾರಿಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಚಾಮರಾಜನಗರದ ಪುಷ್ಪಾ, ಗುಂಡ್ಲುಪೇಟೆ (Gundlupet) ತಾಲೂಕು ಆಲಹಳ್ಳಿಯ ವರ್ಷಾ ಎಂ.ಟೆಕ್ ಪದವೀಧರೆಯಾದರೂ ಯಾವುದೇ ಉದ್ಯೋಗಕ್ಕೆ ಸೇರಿರಲಿಲ್ಲ. ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಎಂಬ ಹಂಬಲ ಹೊಂದಿದ್ದ ಅವರಿಗೆ ಬೇರೆಯವರ ಕೈ ಕೆಳಗೆ ಕೆಲಸ ಮಾಡಲು ಇಷ್ಟ ಇರಲಿಲ್ಲ.
ಸ್ವಂತ ಉದ್ಯಮ ಪ್ರಾರಂಭಿಸಬೇಕು, ತಮ್ಮ ಕೈಲಾದಷ್ಟ ಮಹಿಳೆಯರಿಗೆ ಉದ್ಯೋಗ ನೀಡಬೇಕು ಆ ಮೂಲಕ ಸ್ರೀ ಸಬಲೀಕರಣಕ್ಕೆ ಕೈ ಜೋಡಿಸಬೇಕು ಎಂದು ಕನಸು ಹೊತ್ತಿದ್ದ ವರ್ಷಾ ಅವರು ಯು ಟ್ಯೂಬ್ ನಲ್ಲಿ ಸರ್ಚ್ ಮಾಡುತ್ತಿದ್ದಾಗ, ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಪ್ರಸ್ತಾಪಿಸಿದ್ದ ವಿಚಾರವೊಂದು ಗಮನ ಸೆಳೆದಿದೆ. ಅನುಪಯುಕ್ತ ಬಾಳೆದಿಂಡಿನಿಂದ ಹಲವು ರೀತಿಯ ಉಪಯುಕ್ತ ವಸ್ತುಗಳನ್ನು ತಯಾರಿಸಬಹುದು ಉದಾಹರಣೆ ಸಹಿತ ಹೇಳಿದ್ದ ಮೋದಿ ಅವರ ಮಾತಿನಿಂದ ಪ್ರೇರಣೆಗೊಂಡ ವರ್ಷಾ ತಾವೇಕೆ ಪ್ರಯತ್ನಿಸಿಸಬಾರದು ಎಂದುಕೊಂಡು ಮತ್ತೆ ಯೂಟ್ಯೂಬ್ ನಲ್ಲಿ ಸರ್ಚ್ ಮಾಡಿದಾಗ ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಾಳೆ ದಿಂಡಿನಿಂದ ಉತ್ಪನ್ನಗಳ ತಯಾರಿಕೆ ಮಾಡುತ್ತಿರುವ ದೃಶ್ಯಾವಳಿ ನೋಡಿದ್ದಾರೆ. ಬಳಿಕ ಕೊಯಮತ್ತೂರಿನಿಂದ 3 ಲಕ್ಷ ರೂಪಾಯಿಗಳಿಗೆ ಯಂತ್ರೋ ಉಪಕರಣಗಳನ್ನ ಖರೀದಿಸಿ ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿರುವ ತಮ್ಮ ಜಮೀನಿನಲ್ಲಿ ಬಾಳೆ ದಿಂಡು ಉತ್ಪನ್ನಗಳ ತಯಾರಿಕಾ ಉದ್ಯಮ ಆರಂಭಿಸಿದ್ದಾರೆ.
ಈ ಘಟಕದಲ್ಲಿ ಐವರು ಮಹಿಳೆಯರಿಗೆ ಉದ್ಯೋಗ ನೀಡಿರುವ ವರ್ಷಾ: ನಗರ ಪ್ರದೇಶಗಳಲ್ಲಿರುವ ಆರ್ಗ್ಯಾನಿಕ್ ಶಾಪ್, ಗೂಗಲ್, ಫ್ಲಿಪ್ಕಾರ್ಟ್, ಅಮೇಜಾನ್ ಮೂಲಕ ಮಾರುಕಟ್ಟೆ ಸೃಷ್ಟಿಸಿಕೊಳ್ಳಲು ಮುಂದಾಗಿದ್ದಾರೆ. ಬಾಳೆ ದಿಂಡಿನಲ್ಲಿರುವ ರಸದಲ್ಲಿ ಪೊಟ್ಯಾಷಿಯಂ ಅಂಶ ಇರುವುದರಿಂದ ಅದನ್ಮು ಬಿಸಾಡದೆ ರಾಸಾಯನಿಕ ಗೊಬ್ಬರದ ಬದಲು ಬಾಳೆ ದಿಂಡಿನ ರಸ ಹಾಗು ದಿಂಡಿನಿಂದ ನಾರು ತೆಗೆದ ನಂತರ ಉಳಿಯುವ ವೇಸ್ಟ್ ನಿಂದ ಸಾವಯವ ಗೊಬ್ಬರ ತಯಾರಿಸಿ ಅದನ್ನೆ ತಮ್ಮ ಜಮೀನಿಗೆ ಬಳಸುತ್ತಿದ್ದಾರೆ.
ಚಾಮರಾಜನಗರ: ಮಕ್ಕಳು ಶಾಲೆಗೆ ಹೋಗಲ್ಲ ಅಂದ್ರೆ ಕುದುರೆ ಮಾಮ ಹಾಜರ್..!
ಇವರು ತಯಾರಿಸುತ್ತಿರುವ ಬಾಳೆದಿಂಡಿನ ಚಾಪೆಗಳನ್ನು ಕೊಯಮತ್ತೂರಿನ ಕಂಪನಿಯೊಂದು ಖರೀದಿಸುತ್ತಿದ್ದು, ಬಾಳೆದಿಂಡಿನಿಂದ ತಯಾರಿಸಲಾದ ವಸ್ತುಗಳು ಪರಿಸರಸ್ನೇಹಿ ಆಗಿರುವುದರಿಂದ ಬೇಡಿಕೆ ಹೆಚ್ಚಾಗಬಹುದು ಎಂಬ ಆಶಯವನ್ನೂ ಅವರು ಹೊಂದಿದ್ದಾರೆ.ಮೈಸೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿರುವ ಪತಿ ಶ್ರೀಕಂಠಸ್ವಾಮಿ ಅವರು ರಜಾ ದಿನಗಳಲ್ಲಿ ಬಾಳೆ ದಿಂಡಿನ ಉತ್ಪನ್ನಗಳನ್ನು ತಯಾರಿಸುವ ಕೆಲಸದಲ್ಲಿ ನಿರತರಾಗಿ ತಮ್ಮ ಪತ್ನಿಯ ಕಾರ್ಯಕ್ಕೆ ಸಾಥ್ ನೀಡುತ್ತಿದ್ದಾರೆ.
ದಕ್ಷಿಣ ಪದವೀಧರ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿ ಗೆದ್ದ ಕಾಂಗ್ರೆಸ್
ಈ ದಂಪತಿ ಸುತ್ತಮುತ್ತಲಿನ ಜಮೀನಿಗಳಲ್ಲಿ ಬಾಳೆ ಬೆಳೆಯುವ ರೈತರನ್ನು ಸಂಪರ್ಕಿಸಿ ಬಾಳೆ ದಿಂಡು ಬಿಸಾಡದೆ ತಮಗೇ ನೀಡುವಂತೆ ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಒಂದು ಬಾಳೆ ದಿಂಡಿಗೆ 8 ರಿಂದ 10 ರೂಪಾಯಿಗೆ ಖರೀದಿಸಲು ಆಲೋಚಿಸಿದ್ದಾರೆ, ಇದರಿಂದ ಸುತ್ತಮುತ್ತಲಿನ ರೈತರಿಗೂ ಲಾಭವಾಗಲಿದೆ ಎಂಬುದು ಅವರ ಆಶಯವಾಗಿದೆ. ಒಟ್ಟಾರೆ ಪ್ರಧಾನಿ ಮೋದಿ ಅವರ ಮನ್ ಕೀ ಬಾತ್ ವಿದ್ಯಾವಂತ ಮಹಿಳೆಯೊಬ್ಬರು ಯಶಸ್ವಿ ಉದ್ಯಮಿಯಾಗಲು ನಿಜಕ್ಕೂ ಪ್ರೇರಣೆ ನೀಡಿದರೆ ಎಂದರೆ ತಪ್ಪಾಗಲಾರದು.