Union Budget 2024:ಆರೋಗ್ಯ ಕ್ಷೇತ್ರಕ್ಕ ಬೂಸ್ಟರ್ ಡೋಸ್;ಗರ್ಭಕಂಠ ಕ್ಯಾನ್ಸರ್ ತಡೆ ಲಸಿಕೆಗೆ ಉತ್ತೇಜನ

By Suvarna News  |  First Published Feb 1, 2024, 2:57 PM IST

2024ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿ ಕೆಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. 


ನವದೆಹಲಿ (ಫೆ.1): ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಮಧ್ಯಂತರ ಬಜೆಟ್ 2024 ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿ ಕೆಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಕೋವಿಡ್ -19 ಸಂದರ್ಭದಲ್ಲಿ ಭಾರತ ಅನೇಕ ಸವಾಲುಗಳನ್ನು ಎದುರಿಸಿದೆ. ಹಾಗೆಯೇ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಭದ್ರ ಬುನಾದಿಯನ್ನು ನಿರ್ಮಿಸಿದೆ ಎಂದು ಬಜೆಟ್ ಮಂಡನೆ ಸಂದರ್ಭದಲ್ಲಿ ವಿತ್ತ ಸಚಿವೆ ತಿಳಿಸಿದ್ದಾರೆ.  ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ ಆರೋಗ್ಯ ಕವರ್ ವಿಸ್ತರಣೆ, ಹೆಣ್ಣುಮಕ್ಕಳು ಹಾಗೂ ಮಹಿಳೆಯರಿಗೆ ಗರ್ಭಕಂಠ ಕ್ಯಾನ್ಸರ್ ತಡೆ ಲಸಿಕೆಗೆ ಪ್ರೋತ್ಸಾಹ ಸೇರಿದಂತೆ ಕೆಲವು ಮಹತ್ವದ ಘೋಷಣೆಗಳನ್ನು ಈ ಬಜೆಟ್ ನಲ್ಲಿ ಮಾಡಲಾಗಿದೆ.

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಅಯುಷ್ಮಾನ್ 
ಆಯುಷ್ಮಾನ್ ಭಾರತ್ ಯೋಜನೆ ಯಶಸ್ವಿ ಅನುಷ್ಠಾನದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಆದರೂ ಇದರಡಿಯಲ್ಲಿ ಅವರಿಗೆ ಈ ತನಕ ಆರೋಗ್ಯ ಕವರೇಜ್ ಪ್ರಯೋಜನ ಸಿಕ್ಕಿರಲಿಲ್ಲ. ಹೀಗಾಗಿ ಈ ಬಾರಿಯ ಬಜೆಟ್ ನಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಪ್ರಯೋಜನಗಳನ್ನು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ವಿಸ್ತರಿಸಲಾಗಿದೆ. 

Tap to resize

Latest Videos

undefined

ಮಹಿಳಾ ಸಬಲೀಕರಣಕ್ಕೆ ನಿರ್ಮಲಾ ಒತ್ತು, ನಾರಿಗೆ ಶಕ್ತಿ ತುಂಬಲು ಕಸರತ್ತು

ಗರ್ಭಕಂಠ ಕ್ಯಾನ್ಸರ್ ತಡೆ ಲಸಿಕೆಗೆ ಉತ್ತೇಜನ
ಗರ್ಭಕಂಠ ಕ್ಯಾನ್ಸರ್ ತಡೆಗೆ 9-14 ವಯಸ್ಸಿನ ಹೆಣ್ಣುಮಕ್ಕಳಿಗೆ ಲಸಿಕೆ ನೀಡಲು ಸರ್ಕಾರ ಉತ್ತೇಜನ ನೀಡಲಿದೆ ಎಂಬ ವಿಚಾರವನ್ನು ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ತಿಳಿಸಿದ್ದಾರೆ.

ಇಂದ್ರಾಧನುಷ್ ಅಭಿಯಾನದ ಯಶಸ್ಸಿಗೆ ‘U-Win’
ಶಿಶುಗಳ ಲಿಸಿಕಾ ಕಾರ್ಯಕ್ರಮ ಇಂದ್ರಧನುಷ್ ಅನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಲಸಿಕೆಗಳ ನಿರ್ವಹಣೆಗೆ ಸಂಬಂಧಿಸಿ ‘U-Win’ಎಂಬ ಹೊಸ ಪ್ಲಾಟ್ ಫಾರ್ಮ್ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ಮಗುವಿನ ಲಸಿಕೆಗೆ ಸಂಬಂಧಿಸಿದ ಮಾಹಿತಿಗಳು ಸಿಗಲಿವೆ.  

ಬಾಣಂತಿ ಹಾಗೂ ಶಿಶು ಕಾಳಜಿ ಯೋಜನೆಗಳು
ಬಾಣಂತಿ ಹಾಗೂ ಶಿಶು ಕಾಳಜಿಗೆ ಸಂಬಂಧಿಸಿದ ಎಲ್ಲ ಯೋಜನೆಗಳನ್ನು ಒಂದೇ ಸಮಗ್ರ ಕಾರ್ಯಕ್ರಮದಡಿಯಲ್ಲಿ ತರಲಾಗುವುದು. ಇದರಿಂದ ಅನುಷ್ಠಾನ ಸುಲಭವಾಗಲಿದೆ. 

ಅಂಗನವಾಡಿ ಕೇಂದ್ರಗಳ ಉನ್ನತೀಕರಣ
'ಸಕ್ಷಮ್ ಅಂಗನವಾಡಿ ಹಾಗೂ ಪೋಷನ್ 2.0' ಅಡಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಅ ಮೂಲಕ ಮಕ್ಕಳು ಹಾಗೂ ಗರ್ಭಿಣಿಯರಿಗೆ ಉತ್ತಮ ಪೌಷ್ಟಿಕಾಂಶ ಒದಗಿಸಲಾಗುವುದು ಹಾಗೂ ಮಕ್ಕಳ ಕಾಳಜಿ ಹಾಗೂ ಪ್ರಗತಿಗೆ ಒತ್ತು ನೀಡಲಾಗುವುದು.

ವೈದ್ಯಕೀಯ ಕಾಲೇಜುಗಳು
ದೇಶದಲ್ಲಿ ಅನೇಕ ಯವಕ/ಯುವತಿಯರು ವೈದ್ಯರಾಗಬೇಕೆಂಬ ಹಂಬಲ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈಗಿರುವ ಆಸ್ಪತ್ರೆಗಳ ಮೂಲಸೌಕರ್ಯವನ್ನು ವಿವಿಧ ವಿಭಾಗಗಳ ಅಡಿಯಲ್ಲಿ ಅಭಿವೃದ್ಧಿಗೊಳಿಸುವ ಮೂಲಕ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಯೋಜನೆ ರೂಪಿಸುತ್ತಿದೆ. 

Live Blog ಕೇಂದ್ರ ಬಜೆಟ್‌ 2024: ಜನಪ್ರಿಯ ಬಜೆಟ್ ಅಲ್ಲ, ಜುಲೈನಲ್ಲಿ ವಿಕಸಿತ ಭಾರತದ ನೀಲಿನಕ್ಷೆ ಘೋಷಣೆ...

ಹೊಸ ನರ್ಸಿಂಗ್ ಕಾಲೇಜುಗಳು
ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸುವ ಕುರಿತು ಕೂಡ ವಿತ್ತ ಸಚಿವೆ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. ಇತ್ತೀಚೆಗೆ 157 ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಿರುವ ಬಗ್ಗ ಕೂಡ ಅವರು ಮಾಹಿತಿ ನೀಡಿದ್ದಾರೆ. 

ಸಿಕಲ್ ಸೆಲ್ ರಕ್ತಹೀನತೆ ನಿವಾರಣೆಗೆ ಕ್ರಮ
2047ರೊಳಗೆ ಸಿಕಲ್ ಸೆಲ್ ಅನಿಮಿಯಾವನ್ನು ನಿವಾರಣೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಇದಕ್ಕಾಗಿ ಏಳು ಕೋಟಿ ಜನರನ್ನು ಪರೀಕ್ಷೆಗೊಳಪಡಿಸುವ ಗುರಿ ಕೂಡ ಹೊಂದಿದೆ.

ಐಸಿಎಂಅರ್ ಲ್ಯಾಬ್ ಗಳಲ್ಲಿ ಸಂಶೋಧನೆಗೆ ಅವಕಾಶ
ಆಯ್ದ ಐಸಿಎಂಆರ್ ಪ್ರಯೋಗಾಲಯಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಸಿಬ್ಬಂದಿಗೆ ಸಂಶೋಧನೆಗೆ ಅವಕಾಶ ಕಲ್ಪಿಸೋದಾಗಿ ಬಜೆಟ್ ನಲ್ಲಿ ವಿತ್ತ ಸಚಿವರು ಬಜೆಟ್ ನಲ್ಲಿ ಮಾಹಿತಿ ನೀಡಿದ್ದಾರೆ. 
 

click me!