Davos 2022: ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಸಿಎಂ ಬೊಮ್ಮಾಯಿ ಆಹ್ವಾನ

Published : May 26, 2022, 03:15 AM IST
Davos 2022: ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಸಿಎಂ ಬೊಮ್ಮಾಯಿ ಆಹ್ವಾನ

ಸಾರಾಂಶ

ಕರ್ನಾಟಕದಲ್ಲಿ ಕೈಗಾರಿಕೆ ಮತ್ತು ಉದ್ಯಮಗಳ ಸ್ಥಾಪನೆಗೆ ಪೂರಕವಾದ ವಾತಾವರಣವಿದ್ದು ನವೆಂಬರ್‌ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೂಡಿಕೆದಾರರಿಗೆ ಕರೆ ನೀಡಿದ್ದಾರೆ.

ದಾವೋಸ್‌ (ಮೇ.26): ಕರ್ನಾಟಕದಲ್ಲಿ ಕೈಗಾರಿಕೆ ಮತ್ತು ಉದ್ಯಮಗಳ ಸ್ಥಾಪನೆಗೆ ಪೂರಕವಾದ ವಾತಾವರಣವಿದ್ದು ನವೆಂಬರ್‌ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೂಡಿಕೆದಾರರಿಗೆ ಕರೆ ನೀಡಿದ್ದಾರೆ.

ದಾವೋಸ್‌ನಲ್ಲಿ ಜರುಗಿದ ವಿಶ್ವ ಆರ್ಥಿಕ ಶೃಂಗ ಸಭೆಯ ಸಂದರ್ಭದಲ್ಲಿ ಕರ್ನಾಟಕದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದ ಲಾಂಚ್‌ ಇವೆಂಟ್‌ನಲ್ಲಿ ಮಾತನಾಡಿದ ಅವರು, ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ ಎರಡು ನೀತಿಗಳನ್ನು ಕರ್ನಾಟಕದಲ್ಲಿ ಜಾರಿಗೆ ತರಲಾಗಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹ ನೀಡುವ ಆರ್‌ ಆ್ಯಂಡ್‌ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹಕಗಳ ನೀತಿಯನ್ನು ಜಾರಿಗೆ ತರಲಾಗಿದೆ ಎಂದರು.

Davos 2022: ಕರ್ನಾಟಕದಲ್ಲಿ 50,000 ಕೋಟಿ ಹೂಡಿಕೆಗೆ ಸಿಎಂ ಒಪ್ಪಂದ

ಐಟಿ-ಬಿಟಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ಕರ್ನಾಟಕದಲ್ಲಿ ಕಾರ್ಮಿಕ ನೀತಿ, ಭೂಮಿ ಹಾಗೂ ಲೈಸೆನ್ಸ್‌ ಗಳನ್ನು ಪಡೆಯುವ ಸರಳ ಪ್ರಕ್ರಿಯೆಗಳ ಮೂಲಕ ಈಸ್‌ ಆಫ್‌ ಡೂಯಿಂಗ್‌ ಬಿಸಿನೆಸ್‌ ನೀಡುವುದು ಕರ್ನಾಟಕ ಸರ್ಕಾರಕ್ಕೆ ಆದ್ಯತೆಯ ವಿಷಯವಾಗಿದೆ. ಕರ್ನಾಟಕ, ಅದರಲ್ಲಿಯೂ ಬೆಂಗಳೂರು ನಗರ ಎಲ್ಲ ರಂಗಗಳ ಸಂಶೋಧನಾ ಕಾರ್ಯಗಳಿಗೆ ಕೇಂದ್ರವಾಗಿದೆ. ಬಹಳಷ್ಟುಯೂನಿಕಾರ್ನ್‌ಗಳು, ಡೆಕಾಕಾರ್ನಾಗಳು ಬೆಂಗಳೂರಿನಲ್ಲಿದೆ. ಕರ್ನಾಟಕ ಮಾನವೀಯ ಮೌಲ್ಯಗಳು, ಕಾಸ್ಮೊಪಾಲಿಟನ್‌ ಚಿಂತನೆ ಹಾಗೂ ಸಂಸ್ಕೃತಿ ವೈವಿಧ್ಯತೆಗಳಿಂದ ಕೂಡಿದೆ.

ಆವಿಷ್ಕಾರ ಹಾಗೂ ಸಂಶೋಧನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಬೆಂಗಳೂರು ಟೆಕ್‌ ಸಮಿಟ್‌, ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ನವೆಂಬರ್‌ನಲ್ಲಿ ಆಯೋಜಿಸಲಾಗುತ್ತಿದೆ. ಕೈಗಾರಿಕೆಗಳೂ ಸೇರಿದಂತೆ ಎಲ್ಲ ವಲಯಗಳಿಗೂ ನೀತಿಗಳನ್ನು ರೂಪಿಸಲಾಗಿದೆ. ರಾಜ್ಯದಲ್ಲಿ ಸ್ಟಾರ್ಚ್‌ ಅಪ್‌ಗಳಿಗೆ ಆರ್ಥಿಕ ಸಹಾಯ, ಪ್ರೋತ್ಸಾಹಕಗಳನ್ನು ಸರ್ಕಾರ ಒದಗಿಸುತ್ತಿದೆ. ರಾಜ್ಯದಲ್ಲಿ ಬಂಡವಾಳ ಹೂಡುವ ಉದ್ಯಮಗಳು, ಕೈಗಾರಿಕೆಗಳಿಗೆ ಸರ್ಕಾರ ಎಲ್ಲ ಸಹಕಾರವನ್ನು ನೀಡಲಿದೆ ಎಂದು ತಿಳಿಸಿದರು.

ಮತಾಂತರ ನಿಷೇಧ ಕಾಯ್ದೆಯಿಂದ ಅಭಿವೃದ್ಧಿಗೆ ಅಡ್ಡಿಯಲ್ಲ: ಸಿಎಂ ಬೊಮ್ಮಾಯಿ

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಬೈಜೂಸ್‌ ಸಂಸ್ಥೆಯ ಮುಖ್ಯಸ್ಥರಾದ ದಿವ್ಯಾ ಗೋಕುಲನಾಥ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೈಜೂಸ್‌ ಸಂಸ್ಥೆ ಬೆಂಗಳೂರಿನಲ್ಲಿ ಅಭಿವೃದ್ಧಿ ಹೊಂದಲು ಸಹಕಾರ ನೀಡಿದ ಕರ್ನಾಟಕ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ನೌಕರರಿಗೆ 8ನೇ ವೇತನ ಆಯೋಗ ಬಂಪರ್, ಜ.1ರಿಂದ ಪಿಯೋನ್‌ಗೆ 45000, ಸೆಕ್ರೆಟರಿಗೆ 5 ಲಕ್ಷ ರೂ ಸ್ಯಾಲರಿ
2026ರಲ್ಲಿ ಚಿನ್ನದ ಬೆಲೆ ಎಷ್ಟಾಗುತ್ತೆ? ಹೊಸವರ್ಷದಂದು ಚಿನ್ನದಲ್ಲಿಚಿನ್ನದಲ್ಲಿ 3 ಲಕ್ಷ ರೂ. ಹೂಡಿಕೆ ಮಾಡಿದ್ರೆ ಮುಂದಿನ ವರ್ಷ ನಿಮ್ಮ ಕೈ ಸೇರುವ ಹಣವೆಷ್ಟು?