ಕರ್ನಾಟಕ ಸರ್ಕಾರವು ಬೆಂಗಳೂರಿನ ಸಮೀಪ ಡೀಪ್-ಟೆಕ್ ಪಾರ್ಕ್ ಸ್ಥಾಪಿಸಲು ನಿರ್ಧರಿಸಿದೆ. ಚಿಕ್ಕಬಳ್ಳಾಪುರದ ಜಂಗಮಕೋಟೆಯಲ್ಲಿ ಸ್ಥಾಪನೆಯಾಗಲಿರುವ ಈ ಪಾರ್ಕ್, ಹೈಟೆಕ್ ಉತ್ಪಾದನೆಗೆ ಉತ್ತೇಜನ ನೀಡಲಿದೆ.
ಬೆಂಗಳೂರು (ಮಾ.21): ಕರ್ನಾಟಕ ಸರ್ಕಾರವು ರಾಜ್ಯ ರಾಜಧಾನಿ ಬೆಂಗಳೂರಿನಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಚಿಕ್ಕಬಳ್ಳಾಪುರದ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿರುವ ಜಂಗಮಕೋಟೆಯಲ್ಲಿ ಡೀಪ್-ಟೆಕ್ ಪಾರ್ಕ್ ಅನ್ನು ಸ್ಥಾಪಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. "ಚಿಕ್ಕಬಳ್ಳಾಪುರದ ಜಂಗಮಕೋಟೆಯನ್ನು ಬಾಹ್ಯಾಕಾಶ ತಂತ್ರಜ್ಞಾನ, ಸೆಮಿಕಂಡಕ್ಟರ್‌ಗಳು, ರೊಬೊಟಿಕ್ಸ್, ವೈದ್ಯಕೀಯ ಸಾಧನಗಳು, ಎಲೆಕ್ಟ್ರಿಕ್ ವಾಹನಗಳು, ಡ್ರೋನ್‌ಗಳು ಮತ್ತು ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್ ಮತ್ತು ರಕ್ಷಣೆಯಲ್ಲಿ ಹೈಟೆಕ್ ಉತ್ಪಾದನೆಗೆ ಪ್ರಮುಖ ಡೀಪ್-ಟೆಕ್ ಪಾರ್ಕ್ ಆಗಿ ಅಭಿವೃದ್ಧಿಪಡಿಸಲಾಗುವುದು" ಎಂದು ಎಂಪಿ ಪಾಟೀಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೆಟ್ರೋ ನಗರ ಮತ್ತು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಹೈಟೆಕ್ ಕೈಗಾರಿಕೆಗಳು ನೆಲೆಗೊಳ್ಳುವುದು ನಿರ್ಣಾಯಕವಾಗಿದ್ದು, ಜಂಗಮಕೋಟೆ ಇದಕ್ಕೆ ಸೂಕ್ತ ಸ್ಥಳವಾಗಿದೆ ಎಂದು ತಿಳಿಸಿದ್ದಾರೆ. ಮೈಸೂರಿನ ಕೃಷ್ಣ ರಾಜ ಸಾಗರ ಅಣೆಕಟ್ಟಿನ ವಿನ್ಯಾಸದಲ್ಲಿ ಹೆಸರುವಾಸಿಯಾದ ಸಿವಿಲ್ ಎಂಜಿನಿಯರ್ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಹೆಸರನ್ನು ಇದಕ್ಕೆ ಇಡಲಿದ್ದು, ಸರ್ ಎಂವಿ ಡೀಪ್-ಟೆಕ್ ಪಾರ್ಕ್ ಎನ್ನುವ ಹೆಸರಿನಿಂದ ಗುರುತಿಸಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ಶಿಡ್ಲಘಟ್ಟ ತಾಲೂಕು ಜಂಗಮಕೋಟೆಯ ರೈತರು ನ್ಯಾಯಯುತ ಪರಿಹಾರ, ಉದ್ಯೋಗಾವಕಾಶಗಳು ಮತ್ತು ಪ್ರದೇಶದ ಅಭಿವೃದ್ಧಿಯ ಬದಲಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) 1,033 ಎಕರೆ ಭೂಮಿಯನ್ನು ಹಸ್ತಾಂತರಿಸಲು ಸಿದ್ಧರಿದ್ದಾರೆ ಎಂದು ಪಾಟೀಲ್ ಹೇಳಿದರು. "ಅವರ ಬೇಡಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲಿಸಲಾಗುವುದು ಮತ್ತು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.
ಧಾರವಾಡದಲ್ಲಿ ಆರ್ಥಿಕ ಕಾರಿಡಾರ್, ಪ್ಲಗ್-ಅಂಡ್-ಪ್ಲೇ ಸೌಲಭ್ಯ, ವಿಜಯಪುರ ಮತ್ತು ಕಲಬುರಗಿಯಲ್ಲಿ ಪ್ರಮುಖ ಕೈಗಾರಿಕಾ ಕೇಂದ್ರಗಳು, ಹುಬ್ಬಳ್ಳಿಯಲ್ಲಿ ಸ್ಟಾರ್ಟ್ಅಪ್ ಪಾರ್ಕ್ ಸೇರಿದಂತೆ ಇತರ ಪ್ರಮುಖ ಕೈಗಾರಿಕಾ ಯೋಜನೆಗಳು ವೇಗವಾಗಿ ಪ್ರಗತಿಯಲ್ಲಿವೆ. "ಬೆಳಗಾವಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಕರಾವಳಿ ಕರ್ನಾಟಕ ಸೇರಿದಂತೆ ಹಲವಾರು ಕೈಗಾರಿಕಾ ಪ್ರದೇಶಗಳು ಸ್ವಾಧೀನ ಮತ್ತು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ" ಎಂದು ಪಾಟೀಲ್ ಹೇಳಿದರು.
ಉತ್ಪಾದನೆಯನ್ನು ಉತ್ತೇಜಿಸಲು ಮತ್ತು ಕೈಗಾರಿಕಾ ಇಲಾಖೆಯನ್ನು ಬಲಪಡಿಸಲು ಕರ್ನಾಟಕವು ಏಪ್ರಿಲ್‌ನಲ್ಲಿ ಎರಡು ದಿನಗಳ ಉದ್ಯಮ ಮಂಥನ ಕಾರ್ಯಕ್ರಮವನ್ನು ಆಯೋಜಿಸಲಿದೆ. ಇದು ಕೈಗಾರಿಕೋದ್ಯಮಿಗಳು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸಿ ತಂತ್ರಜ್ಞಾನ, ಹೂಡಿಕೆಗಳು ಮತ್ತು ನೀತಿ ಸುಧಾರಣೆಗಳ ಕುರಿತು ಚರ್ಚಿಸಿ ಮುಂದಿನ ಆರು ತಿಂಗಳ ಯೋಜನೆಗಳನ್ನು ರೂಪಿಸಲಿದೆ. ಅಧಿಕಾರಿಗಳು ಸಂವಹನ, ನೀತಿ ಅರಿವು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ತರಬೇತಿಯನ್ನು ಸಹ ಪಡೆಯಲಿದ್ದಾರೆ ಎಂದು ಪಾಟೀಲ್ ಹೇಳಿದರು.
ದೇವನಹಳ್ಳಿ ಬಳಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಸ್ಥಳ ಮಂಜೂರು: ಕೈಗಾರಿಕಾ ಸಚಿವ ಎಂ.ಬಿ ಪಾಟೀಲ!
ಒಂದೇ ಕಂತಿನಲ್ಲಿ ಪರಿಹಾರ ನೀಡಬೇಕು: ಕೈಗಾರಿಕಾ ಉದ್ದೇಶಗಳಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯಲ್ಲಿ ಸರಕಾರವು ಸ್ವಾಧೀನ ಪಡಿಸಿಕೊಳ್ಳಲಿರುವ ಜಮೀನಿನ ಮಾಲೀಕರಿಗೆ ಒಂದೇ ಕಂತಿನಲ್ಲಿ ಸಂಪೂರ್ಣ ಪರಿಹಾರ ವಿತರಿಸಬೇಕು ಮತ್ತು ಈ ರೈತ ಕುಟುಂಬಗಳ ಒಬ್ಬ ಸದಸ್ಯರಿಗೆ ಉದ್ಯೋಗ ಕೊಡಬೇಕು ಎಂದು `ಜಂಗಮಕೋಟೆ ಹೋಬಳಿ ಕೆಐಎಡಿಬಿ ಜಮೀನುಗಳ ರೈತಪರ ಹೋರಾಟ ಸಮಿತಿ’ಯ ಮುಖಂಡರು ಗುರುವಾರ ಮನವಿ ಸಲ್ಲಿಸಿದ್ದಾರೆ.
ಫೋಸ್ಟ್ ಆಫೀಸ್‌ನಲ್ಲಿ ಗಂಡ-ಹೆಂಡತಿ ಜಂಟಿ ಖಾತೆ ತೆರೆಯಿರಿ; ತಿಂಗಳಿಗೆ 10 ಸಾವಿರ ಪಡೆಯಿರಿ!