ಕರ್ನಾಟಕದಲ್ಲಿ ಕ್ಯೂ ಸಿಟಿ ನಿರ್ಮಾಣ, 6.17 ಎಕರೆ ನೀಡಿದ ಸರ್ಕಾರ

Published : Sep 08, 2025, 12:47 PM IST
Q City

ಸಾರಾಂಶ

ಕ್ಯೂ-ಸಿಟಿ ವಿಶ್ವ ದರ್ಜೆಯ ಸೌಲಭ್ಯಗಳನ್ನು ಹೊಂದಿರಲಿದೆ. ಶೈಕ್ಷಣಿಕ ಸಂಸ್ಥೆಗಳು, ನಾವೀನ್ಯತೆ ಕೇಂದ್ರಗಳು, ಕ್ವಾಂಟಮ್ ಹಾರ್ಡ್‌ವೇರ್‌ಗಾಗಿ ಉತ್ಪಾದನಾ ಕ್ಲಸ್ಟರ್‌ಗಳು, ಪ್ರೊಸೆಸರ್‌ಗಳು ಮತ್ತು ಪರಿಕರಗಳನ್ನು ಸಂಯೋಜಿಸುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ. 

ಬೆಂಗಳೂರು (ಸೆ.8): ಕರ್ನಾಟಕ ಸರ್ಕಾರವು ಬೆಂಗಳೂರಿನ ಬಳಿಯ ಹೆಸರಘಟ್ಟದಲ್ಲಿ "ಕ್ವಾಂಟಮ್ ಸಿಟಿ (ಕ್ಯೂ-ಸಿಟಿ)" ಗಾಗಿ 6.17 ಎಕರೆ ಭೂಮಿಯನ್ನು ಮಂಜೂರು ಮಾಡಿದೆ. ಇದರಲ್ಲಿ ಅತ್ಯಾಧುನಿಕ ಪ್ರಯೋಗಾಲಯಗಳು, ನವೋದ್ಯಮಗಳಿಗೆ ಇನ್ಕ್ಯುಬೇಷನ್ ಸೌಲಭ್ಯಗಳು ಮತ್ತು ಶೈಕ್ಷಣಿಕ-ಕೈಗಾರಿಕಾ ಸಹಯೋಗಕ್ಕಾಗಿ ಮೂಲಸೌಕರ್ಯಗಳು ಇರಲಿದದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ.

2035 ರ ವೇಳೆಗೆ ಕರ್ನಾಟಕವು ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿ ದಿಟ್ಟ ಉಪಕ್ರಮಗಳ ಮೂಲಕ 20 ಬಿಲಿಯನ್ ಡಾಲರ್‌ಗಳ ಕ್ವಾಂಟಮ್ ಆರ್ಥಿಕತೆಯನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ ಎಂದು ಸಚಿವರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಈ ದೃಷ್ಟಿಕೋನದ ಭಾಗವಾಗಿ ಮತ್ತು ಭಾರತದ ಮೊದಲ ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶದಲ್ಲಿ ಮಾಡಿದ ಬದ್ಧತೆಗೆ ಅನುಗುಣವಾಗಿ, ಸರ್ಕಾರವು ಕ್ಯೂ-ಸಿಟಿ ಸ್ಥಾಪಿಸಲು ಭೂಮಿಯನ್ನು ಅನುಮೋದಿಸಿದೆ" ಎಂದು ಮಾಹಿತಿ ನೀಡಿದ್ದಾರೆ.

ಅಂತರರಾಷ್ಟ್ರೀಯ ಸೈದ್ಧಾಂತಿಕ ವಿಜ್ಞಾನ ಕೇಂದ್ರ (ICTS–TIFR) ವಿಸ್ತರಣೆಗಾಗಿ ಇನ್ನೂ ಎಂಟು ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ಇದು ಸೈದ್ಧಾಂತಿಕ ವಿಜ್ಞಾನ ಕ್ಷೇತ್ರದಲ್ಲಿ ಕೇಂದ್ರದ ಶೈಕ್ಷಣಿಕ ಮತ್ತು ಸಂಶೋಧನಾ ವಿಸ್ತರಣೆಯನ್ನು ಬೆಂಬಲಿಸುತ್ತದೆ. ಈ ಬೆಳವಣಿಗೆಗಳು ಒಟ್ಟಾಗಿ, ಮುಂದುವರಿದ ವಿಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ಕರ್ನಾಟಕದ ಸ್ಥಾನಮಾನವನ್ನು ಬಲಪಡಿಸುತ್ತದೆ ಎಂದು ಸಚಿವರು ಹೇಳಿದರು.

ಕ್ವಾಂಟಮ್ ಸಿಟಿಯನ್ನು "ಐತಿಹಾಸಿಕ ಮೈಲಿಗಲ್ಲು" ಎಂದು ಕರೆದ ಬೋಸರಾಜು, ಇದು ಜಾಗತಿಕ ಪ್ರತಿಭೆಗಳು ಮತ್ತು ಹೂಡಿಕೆಗಳನ್ನು ಆಕರ್ಷಿಸುತ್ತದೆ, ಭಾರತ ಮತ್ತು ವಿಶ್ವದ ಕ್ವಾಂಟಮ್ ನಕ್ಷೆಯಲ್ಲಿ ಬೆಂಗಳೂರು ಪ್ರಮುಖ ಕೇಂದ್ರವಾಗಿ ಹೊರಹೊಮ್ಮಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಕ್ಯೂ-ಸಿಟಿ ವಿಶ್ವ ದರ್ಜೆಯ ಸೌಲಭ್ಯಗಳನ್ನು ನೀಡಲಿದೆ, ಶೈಕ್ಷಣಿಕ ಸಂಸ್ಥೆಗಳು, ನಾವೀನ್ಯತೆ ಕೇಂದ್ರಗಳು, ಕ್ವಾಂಟಮ್ ಹಾರ್ಡ್‌ವೇರ್‌ಗಾಗಿ ಉತ್ಪಾದನಾ ಕ್ಲಸ್ಟರ್‌ಗಳು, ಪ್ರೊಸೆಸರ್‌ಗಳು ಮತ್ತು ಪರಿಕರಗಳು, ಹಾಗೆಯೇ ಕ್ವಾಂಟಮ್ HPC ಡೇಟಾ ಕೇಂದ್ರಗಳ ಸಹಯೋಗದೊಂದಿಗೆ ಸಂಶೋಧನೆ ಮತ್ತು ಅಭಿವೃದ್ಧಿ ಕ್ಲಸ್ಟರ್‌ಗಳನ್ನು ಸಂಯೋಜಿಸುತ್ತದೆ.

 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಆರ್‌ಬಿಐ ಮಹತ್ವದ ನಿರ್ಧಾರ, ರೆಪೋ ದರ ಬದಲಾವಣೆಯಿಂದ ಸಾಲದ ಬಡ್ಡಿ ಭಾರಿ ಇಳಿಕೆ
ಒಂದು ರಷ್ಯನ್‌ ರುಬೆಲ್‌ಗೆ ಭಾರತದಲ್ಲಿ ಬೆಲೆ ಎಷ್ಟು? ರೂಪಾಯಿ ಅಥವಾ ರುಬೆಲ್‌, ಯಾವುದರ ಮೌಲ್ಯ ಜಾಸ್ತಿ?