ಕರ್ನಾಟಕ ಬಜೆಟ್ 2020: ಮಹದಾಯಿ ಯೋಜನೆಗೆ 500 ಕೋಟಿ ಮೀಸಲು

By Suvarna News  |  First Published Mar 5, 2020, 12:12 PM IST

ಮಹದಾಯಿ ಯೋಜನೆ ಅನುಷ್ಠಾನಕ್ಕೆ 500 ಕೋಟಿ ರು. ಮೀಸಲು| ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಘೋಷಣೆ| ಮಹದಾಯಿ ಯೋಜನೆ ಅನುಷ್ಟಾನಕ್ಕೆ ಇದ್ದ ಎಲ್ಲ ಕಾನೂನು ತೊಡಕುಗಳು ನಿವಾರಣೆ| ಇತ್ತೀಚೆಗಷ್ಟೇ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದ್ದ ಕೇಂದ್ರ ಸರ್ಕಾರ| 


ಬೆಂಗಳೂರು(ಮಾ.05): ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾದ ಮಹಾದಾಯಿ ಯೋಜನೆ ಅನುಷ್ಠಾನಕ್ಕೆ 500 ಕೋಟಿ ರು. ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮಹದಾಯಿ ಹೋರಾಟಗಾರರಿಗೆ ಸಿಹಿ ಸುದ್ದಿಯನ್ನ ನೀಡಿದ್ದಾರೆ. 

"

Latest Videos

undefined

ಕರ್ನಾಟಕ ಬಜೆಟ್ 2020: 'ಮಹದಾಯಿಗೆ ಕನಿಷ್ಠ 1000 ಕೋಟಿ ಮೀಸಲಿಡಲಿ'

ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಇದ್ದ ಎಲ್ಲ ಕಾನೂನು ತೊಡಕುಗಳು ನಿವಾರಣೆಯಾಗಿವೆ. ಹೀಗಾಗಿ ಈ ಯೋಜನೆಯನ್ನ ಅನುಷ್ಟಾನಕ್ಕೆ ತರಲು ಬಜೆಟ್‌ನಲ್ಲಿ 500 ಕೋಟಿ ರು. ಮೀಸಲು ಇಟ್ಟಿರುವುದಾಗಿ ಹೇಳಿದ್ದಾರೆ. 

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕೇಂದ್ರ ಸರ್ಕಾರ ನಡೆ ಪ್ರಶ್ನಿಸಿ ಗೋವಾ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಈ ವಿಚಾರಣೆಯನ್ನ ಕೈಗೆತ್ತಿಕೊಂಡ ಸುಪ್ರೀಂ ಮಹದಾಯಿ ಯೋಜನೆ ಆರಂಭಿಸಬಹುದು ಎಂದು ತೀರ್ಪು ನೀಡುವ ಮೂಲಕ ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನ ವಜಾ ಗೊಳಿಸಿತ್ತು. ಈ ಮೂಲಕ ಬರೋಬ್ಬರಿ ನಾಲ್ಕು ದಶಕಗಳ ಹೋರಾಟಕ್ಕೆ ಜಯ ಸಿಕ್ಕಿದೆ.

ಮಹದಾಯಿ ಕಾನೂನು ಹೋರಾಟ: ರಾಜ್ಯಕ್ಕೆ ಮತ್ತೊಂದು ಜಯ, ಗೋವಾಗೆ ಮುಖಭಂಗ

ಈ ಮೊದಲು ರೈತಸೇನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಅವರು, ಮಹದಾಯಿ ವಿಷಯವಾಗಿ ಸಬೂಬು ಹೇಳಲು ರಾಜ್ಯ ಸರ್ಕಾರದ ಬಳಿ ವಿಷಯವೇ ಇಲ್ಲ. ಈಗ ಏನೇ ಮಾಡಬೇಕಿದ್ದರೂ ಅದನ್ನು ರಾಜ್ಯ ಸರ್ಕಾರವೇ ಮಾಡಬೇಕು. ಇದಕ್ಕಾಗಿ ಈ ಬಜೆಟ್‌ನಲ್ಲಿ ಕನಿಷ್ಠವೆಂದರೂ 1 ಸಾವಿರ ಕೋಟಿಯನ್ನಾದರೂ ಮೀಸಲಿಡಬೇಕು ಎಂದು  ಹೇಳಿದ್ದರು. 
 

click me!