Karnataka Budget 2022 : ಬೊಮ್ಮಾಯಿ ಬಜೆಟ್‌ನಲ್ಲಿ ಬೆಂಗಳೂರಿಗೆ ದಕ್ಕಿದ್ದೇನು?

By Contributor Asianet  |  First Published Mar 4, 2022, 1:27 PM IST

* ಕರ್ನಾಟಕ ಬಜೆಟ್  2022  ಮಂಡನೆ
* ಬಜೆಟ್ ಮಂಡಿಸಿದ ಸಿಎಂ ಬಸವರಾಜ ಬೊಮ್ಮಯಿ
* ಬೆಂಗಳೂರು ಮಹಾನಗರಕ್ಕೆ ಭರಪೂರ ಕೊಡುಗೆ


ಬೆಂಗಳೂರು(ಮೇ. 04) ಕೊರೋನಾ (Corionavirus) ಸವಾಲಿನ ನಡುವೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕರ್ನಾಟಕ ಬಜೆಟ್ 2022ನ್ನು (Karnataka Budget 2022) ಮಂಡಿಸಿದ್ದಾರೆ. ರಾಜಧಾನಿ ಬೆಂಗಳೂರು (Bengaluru) ಮಹಾನಗರಕ್ಕೆ ಭರಪೂರ ಕೊಡುಗೆ ನೀಡಿದ್ದು ನಗರದ ಸಮಗ್ರ ಅಭಿವೃದ್ಧಿ ಗುರಿ ಎಂದು ತಿಳಿಸಿದ್ದಾರೆ. ಹಾಗಾದರೆ ಬೆಂಗಳೂರು ನಗರಕ್ಕೆ ಸಿಕ್ಕ ಕೊಡುಗೆಗಳು ಏನು?

 ಬಜೆಟ್ ನಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಕಾರಾಗೃಹದಲ್ಲಿ ಅತ್ಯಾಧುನಿಕ ಮಾದರಿಯ ಉಪಕರಣಗಳು ಮತ್ತು ಮೊಬೈಲ್ ಜಾಮರ್ ಗಳ ಅಳವಡಿಕೆ ಮಾಡಲಾಗುತ್ತಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣಕ್ಕೆ ಬಜೆಟ್ ಹಣ ಮೀಸಲಿಟ್ಟಿದೆ.

Tap to resize

Latest Videos

undefined

ಕರ್ನಾಟಕ ಬಜೆಟ್ ಕ್ಷಣ ಕ್ಷಣದ ಮಾಹಿತಿ

*  ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು 6 ಸಾವಿರ ಕೋಟಿ ವೆಚ್ಚದಲ್ಲಿ ಅಮೃತ್ ನಗರೋತ್ಥಾನ ಯೋಜನೆ

* ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಏರ್ ಪೋರ್ಟ್ ಗೆ ಸಂಪರ್ಕ ಕಲ್ಪಿಸೋ ಮೆಟ್ರೋ ಕಾಮಗಾರಿಯನ್ನ 2025 ರೊಳಗೆ ಪೂರ್ಣ ಮಾಡಲು ಕ್ರಮ

* ಬನಶಂಕರಿ ಜಂಕ್ಷನ್ ನಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ಸ್ಕೈ ವಾಕ್ ನಿರ್ಮಾಣ

* ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಗ್ರೇಡ್ ಸಪರೇಟರ್ ಮತ್ತು ಮೇಲ್ಸೇತುವೆ ಕಾಮಗಾರಿಗಳನ್ನ ಬಿಬಿಎಂಪಿ ಬಿಡಿಎ ಮತ್ತು ಎನ್ಎಚ್ ಹೈವೇ ಸಂಸ್ಥೆಗಳಿಂದ ಜಂಟಿಯಾಗಿ ಕೈಗೆತ್ತುಕೊಳ್ಳಲಾಗುವುದು

* ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆ ಬಾಕಿ 1297 ಎಕರೆ ಜಮೀನಿನ ಭೂಸ್ವಾಧೀನ ಪ್ರಕ್ರಿಯೆ ಮುಗಿಸಿ ಆಧುನಿಕ ಸ್ಮಾರ್ಟ್ ಸಿಟಿ ಮಾಡಿ ಅಭಿವೃದ್ಧಿ

*  ಸಾಲಿನಲ್ಲಿ 33 ಕಿ.ಮೀ ಮೆಟ್ರೋ ಮಾರ್ಗ ಸೇರಿಸಲಾಗುವುದು. ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ 58.19 ಕಿ.ಮೀ ಮೆಟ್ರೋ ಕಾಮಗಾರಿ ಆರಂಭವಾಗಿದ್ದು 2025 ರೊಳಗೆ ಪೂರ್ಣಗೊಳ್ಳಲಿದೆ

*  ಮೆಟ್ರೋ ಹಂತ್ರ-3 ಯೋಜನೆಯನ್ನು 11,250 ಕೋಟಿ ರೂ ವೆಚ್ಚದಲ್ಲಿ ಕೇಂದ್ರದ ಅನುಮೋದನೆಗೆ ಸಲ್ಲಿಸಲಾಗುವುದು. ಹೆಬ್ಬಾಳದಿಂದ - ಜೆ‌ಪಿ ನಗರದವರೆಗೆ 32 ಕಿ.ಮೀ ರಿಂಗ್ ರಸ್ತೆ ಮಾರ್ಗ ಹಾಗೂ ಹೊಸಹಳ್ಳಿಯಿಂದ-ಕಡಬಗೆರೆಗೆ 13 ಕಿ.ಮೀ ಮಾರ್ಗ 

* 2022-23 ಸಾಲಿನಲ್ಲಿ 37 ಕಿ.ಮೀ ಉದ್ದದ ಸರ್ಜಾಪುರ, ಅಗರ, ಕೋರಮಂಗಲ, ಡೈರಿ ವೃತ್ತದ ಮೂಲಕ ಹೆಬ್ಬ್ಅಳದವರೆಗೆ 15 ಸಾವಿರ ವೆಚ್ಚದಲ್ಲಿ 36 ಕಿ.ಮೀ ಹೊಸಮಾರ್ಗಕ್ಕೆ ಡಿಪಿಆರ್ ತಯಾರಿಸಲು ಕ್ರಮ

* ಬನಶಂಕರಿ ಜಂಕ್ಷನ್ ನಲ್ಲಿ 45 ಕೋಟಿ ವೆಚ್ಚದಲ್ಲಿ ಸ್ಕೈವಾಕ್ (ಪಾದಾಚಾರಿ-ರಸ್ತೆಬದಿ ವ್ಯಾಪಾರಿಗಳ ಸುರಕ್ಷತೆ ಹಾಗೂ ಮೆಟ್ರೋ ನಿಲ್ದಾಣವನ್ನು- ಬಸ್ ನಿಕ್ದಾಣದೊಂದಿಗೆ ಸಂಪರ್ಕಿಸಲು) 

-* ವೈಟ್ ಫೀಲ್ಡ್, ಕೆ.ಆರ್ ಪುರಂ, ಯಶವಂತಪುರ, ಜ್ಞಾನಭಾರತಿ, ಯಲಹಂಕ ನಿಲ್ದಾಣಗಳಲ್ಲಿ 55 ಕೋಟಿ ರೂ ವೆಚ್ಚದಲ್ಲಿ  ರೈಲ್ವೆಯೊಂದಿಗೆ ಮೆಟ್ರೋ ನಿಲ್ದಾಣದ ಸಂಪರ್ಕದ ಕಾಮಗಾರಿ   (ಸಬ್ ಅರ್ಬನ್ ರೈಲ್ವೇ) 

* 73 ಕಿ.ಮೀ ಉದ್ದದ ಫೆರಿಫೆರಲ್ ರಿಂಗ್ ರಸ್ತೆಗೆ ಭೂಸ್ವಾಧೀನ ವೆಚ್ಚ ಸೇರಿ 21,091 ಕೋಟಿ ರೂ ಈಗಾಗಲೇ ಅನುಮೋದನೆಯಾಗಿದ್ದುDBFOT ಮಾದರಿಯಲ್ಕಿ ಗುತ್ತಿಗೆದಾರರೇ ಭೂಸ್ವಾಧೀನ ಮತ್ತು ನಿರ್ಮಾಣ ವೆಚ್ಚ ಭರಿಸುವುದರೊಂದಿಗೆ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ 

*  ಗೊರಗುಂಟೆಪಾಳ್ಹ ಗ್ರೇಡ್ ಸಪರೇಟರ್ ಮೇಲ್ಸೇತುವೆ ನಿರ್ಮಾಣಜ್ಕೆ ಬಿಬಿಎಂಪಿ ಬಿಡಿಎ ಜಂಟಿ ಕಾಮಗಾರಿ 

* ಬಿಡಿಎ ಕೆಂಪೇಗೌಡ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ 

*ಸರ್ ಎಂ ವಿಶ್ವೇಶ್ವರಯ್ಯ ಬಡಾವಣೆ ಬನಶಂಕರಿ 6 ನೇ ಹಂತ ಅಂಜನಾಪುರ ಬಡಾವಣೆಯಕ್ಕಿ ರಸ್ತೆ, ಚರಂಡಿ ಕಾಮಗಾರಿಗೆ 404 ಕೋಟಿ ವೆಚ್ಚದಲ್ಲಿ ಬಿಡಿಎ ಯಿಂದ ನಿರ್ಮಾಣ ನಂತರ ಪಾಲಿಕೆಗೆ ಹಸ್ತಾಂತರ 

* ಬೆಂಗಳೂರು ನಗರದ NGEF ನ 105 ಎಕರೆ ಪ್ರದೇಶದಲ್ಲಿ ಸಿಂಗಾಪುರ್ ಮಾದರಿಯ ಗ್ರೀನ್ ಎಕ್ಸ್ ಪೋ ನಿರ್ಮಾಣ , ಆರು ಲಕ್ಷ "ಬಿ" ಖಾತಾಗಳನ್ನು ಎ ವಹಿಗೆ  ದಾಖಲೊಸಲು ಭೂಕಂದಾಯ ನಿಯಮದಡಿ ಪರಿಶೀಲಿಸಿ ಕಾನೂನು ಕ್ರಮ

* ಉಪನಗರ ರೈಲ್ವೇ ಯೋಜನೆಯನ್ನು 15,267 ಕೋಟಿ ರೂ ವೆಚ್ಚದಲ್ಕಿ 2026 ರ ವೇಳೆಗೆ ಪೂರ್ಣಗೊಳಿಸಕು ಉದ್ದೇಶ.

 *ನಗರಕ್ಕೆ 775 ದಶಲಕ್ಷ ಲೀಟರ್ ಕಾವೇರಿ ನೀರು ತರಲು 5,550 ಕೋಟಿ ರೂ ವೆಚ್ಚದಲ್ಲಿ ಕಾವೇರಿ 5 ನೇ ಹಂತ ಜಾರಿಯಲ್ಲಿದ್ದು, 2024-25 ರೊಳಗೆ ಪೂರ್ಣಗೊಳಿಸಲಾಗುವುದು. 

* ಹಳೇಯ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಲಕ ಉನ್ನತೀಕರಣಕ್ಕೆ 1500 ಕೋಟಿ ರೂ ವೆಚ್ಚ 

* ಎತ್ತಿನಹೊಳೆಯಿಂದ 1.7 ಟಿ.ಎಂಸಿ ನೀರು ಬಳಸಿಕೊಳ್ಳಲು 312 ಕೋಟಿಯ ಟಿಜಿ ಹಳ್ಳಿ ಕಾಮಗಾರಿ 22-23 ರಲ್ಲಿ ಮುಕ್ತಾಯ

* ನಗರದ ರಾಜಕಾಲುವೆ ಅಭಿವೃದ್ಧಿಪಡಿಸಿ ನಾಗರಿಕರ ವಿಹಾರ ತಾಣವಾಗಿಸಲು 195 ಕೋಟಿ ರೂ ವೆಚ್ಚದಲ್ಲಿ ಕೋರಮಂಗಲ ರಾಜಕಾಲುವೆಯನ್ನು ಅಭಿವೃದ್ಧಿ ಪಡಿಸಲಾಗ್ತಿದೆ

* ನಗರದಲ್ಕಿ ಪ್ರವಾಹ ಪರಿಸ್ಥಿತಿ ತಡೆಯಲು ರಾಜಕಾಲುವೆ ಅಭಿವೃದ್ಧಿಗೆ 1,500 ಕೋಟಿ ರೂ ಮೊತ್ತದಲ್ಲಿ ಯೋಜನೆ

* ನಗರದ 4 ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

*  20 ಶಾಲೆಗಳನ್ನು 'ಬೆಂಗಳೂರು ಪಬ್ಲಿಕ್ ಶಾಲೆ ಅಭಿವೃದ್ಧಿಪಡಿಸಲು 89 ಕೋಟಿ ಮೀಸಲು 

* ಮಡಿವಾಳ ಕೆರೆ- ಎಲೆಮಲ್ಲಪ್ಪಶೆಟ್ಟಿ ಕೆರೆ ಅಭಿವೃದ್ಧಿಗೆ ಪಾಲಿಕೆಯಿಂದ ರೂಪುರೇಷೆ ಸಿದ್ಧತೆ 

* ಒಟ್ಟಾರೆಯಾಗಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ಅನುದಾನ

 

click me!