Karnataka Budget 2023-24: ಬೆಂಗಳೂರಲ್ಲಿ ಸಿಗ್ನಲ್‌ ಫ್ರೀ- ಟ್ರಾಫಿಕ್‌ ಮುಕ್ತ ಸಂಚಾರಕ್ಕೆ ಒತ್ತು: ಕಸದ ವೈಜ್ಞಾನಿಕ ವಿಲೇವಾರಿ

By Sathish Kumar KH  |  First Published Feb 17, 2023, 12:53 PM IST

ಬೆಂಗಳೂರು ನಗರದಲ್ಲಿ ಫೆರಿಫೆರಲ್‌ ರಿಂಗ್‌ ರಸ್ತೆ, ಸಿಗ್ನಲ್‌ ಫ್ರೀ ಕಾರಿಡಾರ್, ಎಲಿವೇಟೆಡ್‌ ಕಾರಿಡಾರ್‌, ಮೆಟ್ರೋ ಮಾರ್ಗದ ವಿಸ್ತರಣೆ, ತ್ಯಾಜ್ಯ ನೀರು ಸಂಸ್ಕರಣೆ, ಘನತಯಾಜ್ಯ ನಿರ್ವಹಣೆ, ಉಪನಗರ ರೈಲು ಯೋಜನೆಗೆ ನೆರವು ಸೇರಿದಂತೆ ಸುಮಾರು 3 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. 


ಬೆಂಗಳೂರು (ಫೆ.17): ಬೆಂಗಳೂರು ನಗರದ ಸಾರಿಗೆ ವ್ಯವಸ್ಥೆಗೆ ಸಂಪೂರ್ಣ ಚೇತರಿಕೆ ಒದಗಿಸಲು ಸಿಎಂ ಬಸವರಾಜ ಬೊಮ್ಮಾಯಿ ಪ್ರಯತ್ನಿಸಿದ್ದಾರೆ. ಫೆರಿಫೆರಲ್‌ ರಿಂಗ್‌ ರಸ್ತೆ, ಸಿಗ್ನಲ್‌ ಫ್ರೀ ಕಾರಿಡಾರ್, ಎಲಿವೇಟೆಡ್‌ ಕಾರಿಡಾರ್‌, ಮೆಟ್ರೋ ಮಾರ್ಗದ ವಿಸ್ತರಣೆ, ತ್ಯಾಜ್ಯ ನೀರು ಸಂಸ್ಕರಣೆ, ಘನತಯಾಜ್ಯ ನಿರ್ವಹಣೆ, ಉಪನಗರ ರೈಲು ಯೋಜನೆಗೆ ನೆರವು ಸೇರಿದಂತೆ ಸುಮಾರು 3 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. 

ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್ (Artificial Intelligence)ನ ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್‌ಗಳ ನಿರ್ವಹಣೆ ಮಾಡುವ ಮೂಲಕ ಸೀಮ್‌ಲೆಸ್‌ ಸಿಗ್ನಲಿಂಗ್ (Seamless Signalling) ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.

Tap to resize

Latest Videos

undefined

ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿ ವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿ.ಇ.ಎಲ್ ರಸ್ತೆಯ ವರೆಗೆ Integrated ಮೇಲೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದು. 1,000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿ.ಮೀ. ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. 

Karnataka Budget 2023-24: ಬೆಂಗಳೂರಿಗೆ 9,698 ಕೋಟಿ ರೂ. ಬಂಪರ್- 110 ಹಳ್ಳಿಗಳಿಗೆ ಕಾವೇರಿ ನೀರು ಲಭ್ಯ

ಕಳೆದ 2007ನೇ ಇಸವಿಯಲ್ಲಿ ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಲ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ 300ಕೋಟಿ ರೂಪಾಯಿ  ಒದಗಿಸಲಾಗುವುದು. ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಸಂಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು 300 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.

40.15 ಕಿ.ಮೀ. ಮೆಟ್ರೋ ಮಾರ್ಗ ಕಾರ್ಯಗತ ಗುರಿ: ಬೆಂಗಳೂರು ಮೆಟ್ರೋ ರೈಲು ಯೋಜನೆಯ ಒಟ್ಟು 56 ಕಿ.ಮೀ.ಗಳ ಜಾಲವು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 30 ನಿಲ್ದಾಣಗಳೊಂದಿಗೆ, 58.19 ಕಿ.ಮೀ.ಗಳ ಮೆಟ್ರೋ ರೈಲು ಯೋಜನೆಯ ಕಾಮಗಾರಿಗಳು ವೇಗದಲ್ಲಿ ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ 40.15 ಕಿ.ಮೀ. ಉದ್ದದ ಮೆಟ್ರೋ ಮಾರ್ಗಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿದೆ. ಹಿಂದಿನ ಆಯವ್ಯಯದಲ್ಲಿ ಮೆಟ್ರೋ ಜಾಲದ 3ನೇ ಹಂತದ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. 44.65 ಕಿ.ಮೀ. ಉದ್ದದ 31 ನಿಲ್ದಾಣಗಳನ್ನು ಒಳಗೊಂಡಂತೆ 2 ಮಾರ್ಗಗಳ ವಿಸ್ತತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಇದಕ್ಕೆ 16,328 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮತಿ ದೊರಕಿದ ನಂತರ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.

ಸ್ಯಾಟಲೈಟ್‌ ಟೌನ್‌ ರಿಂಗ್‌ ರೋಡ್‌:  ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿತಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ. ಉದ್ದದ Satellite Town Ring Road ಅನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ. ಭೂಸ್ವಾಧೀನದ ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ. 

ಉಪನಗರ ರೈಲು ಯೋಜನೆ 1ನೇ ಹಂತ ಪೂರ್ಣ: ಬೆಂಗಳೂರು ನಿವಾಸಿಗಳ ಬಹುದಿನಗಳ ಬೇಡಿಕೆಯಾದ ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ (BSRP) ರಾಜ್ಯ ಸರ್ಕಾರ ಮತ್ತು ರೈಲ್ವೆ ಮಂತ್ರಾಲಯವು 15,767 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಹಸಿರು ನಿಶಾನೆ ನೀಡಿವೆ. ಈಗಾಗಲೇ ಮೊದಲನೇ ಹಂತದ ಕಾಮಗಾರಿಗಳು ಪ್ರಗತಿಯಲ್ಲಿದ್ದು, 2024-253 ವರ್ಷದಲ್ಲಿ ಯೋಜನೆಯ ಹಂತ-1ನ್ನು ಪೂರ್ಣಗೊಳಿಸಲಾಗುವುದು. ಈ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ  1,350 ಕೋಟಿ ರೂ. ಗಳು ಹಾಗೂ ರಾಜ್ಯ ಸರ್ಕಾರದಿಂದ 1,000 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು. ಬೆಂಗಳೂರು ಉಪನಗರ ರೈಲು ಯೋಜನೆಯ ಚಿಕ್ಕಬಾಣಾವರ ಮತ್ತು ಬೈಯಪ್ಪನಹಳ್ಳಿ ನಡುವಿನ ಕಾರಿಡಾರ್-2ರ ವಯಾ ಡಕ್ಟ್ ಕಾಮಗಾರಿಗಳಿಗೆ 860 ಕೋಟಿ ರೂ. ಮೊತ್ತಕ್ಕೆ ಕಾರ್ಯಾದೇಶ ನೀಡಿದ್ದು, ಕಾಮಗಾರಿಗಳು ಪ್ರಾರಂಭವಾಗಿವೆ. 

Women in Karnataka Budget 2023-24 : ಮಹಿಳೆಯರಿಗೆ ಬಂಪರ್‌ ಗಿಫ್ಟ್: ಮಹಿಳೆ- ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ಪಾಸ್

ತ್ಯಾಜ್ಯ ನೀರು ಸಂಸ್ಕರಣೆಗೆ ಆದ್ಯತೆ: ಪ್ರಸ್ತುತ ಬೆಂಗಳೂರು ನಗರದಲ್ಲಿ 1,850 ಎಂ.ಎಲ್.ಡಿ. ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದ್ದು, ಇದರಲ್ಲಿ 1,500 ಎಂ.ಎಲ್.ಡಿ. ತ್ಯಾಜ್ಯ ನೀರಿನ ಸಂಸ್ಕರಣಾ ಸಾಮರ್ಥ್ಯವನ್ನು ಸೃಜಿಸಲಾಗಿದೆ. ಹೆಚ್ಚುವರಿಯಾಗಿ 350 ಎಂ.ಎಲ್‌.ಡಿ. ಸಾಮರ್ಥ್ಯವನ್ನು ಒದಗಿಸುವುದರೊಂದಿಗೆ ಸಂಪೂರ್ಣ ತ್ಯಾಜ್ಯ ನೀರನ್ನು ಸಂಸ್ಕರಿಸಲಾಗುವುದು. ಮೆಗಾಸಿಟಿ ರಿವಾಲ್ವಿಂಗ್ ನಿಧಿಯಡಿ ದಿನಂಪ್ರತಿ ಒಟ್ಟು 440 ದಶಲಕ್ಷ ಲೀಟರ್ ತ್ಯಾಜ್ಯನೀರಿನ ಸಂಸ್ಕರಣಾ ಸಾಮರ್ಥ್ಯದ ನಾಲ್ಕು ಹೊಸ ಘಟಕಗಳ ಕಾಮಗಾರಿಗಳನ್ನು 1,200 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗಿದೆ.

ಘನತ್ಯಾಜ್ಯ ವೈಜ್ಞಾನಿಕ ವಿಲೇವಾರಿಗೆ ಕ್ರಮ: ಬೆಂಗಳೂರು ವೈಜ್ಞಾನಿಕವಾಗಿ ಸಂಸ್ಕರಿಸಲು ವಿವಿಧ ಕ್ರಮಗಳನ್ನು ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ತೆಗೆದುಕೊಳ್ಳಲಾಗುವುದು. ಒಂದೇ ವಾಹನದಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹಿಸುವ ವಿನ್ಯಾಸದ ಆಟೋ ಟಿಪ್ಪರುಗಳು ಹಾಗೂ ಕಾಂಪಾಕ್ಟರುಗಳು ಕಾರ್ಯಾಚರಣೆ ಮಾಡಲಿವೆ. ಆಯಾ ವಾರ್ಡ್ ಗಳಲ್ಲಿಯೇ ತ್ಯಾಜ್ಯ ಸಂಸ್ಕರಣೆ ಮಾಡಲು ಪ್ರತಿ ವಾರ್ಡ್‌ಗೆ ಒಂದರಂತೆ ಆಧುನಿಕ ತಂತ್ರಜ್ಞಾನ ಆಧಾರಿತ ವಾಸನೆರಹಿತ ತ್ಯಾಜ್ಯ ಸಂಸ್ಕರಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ವಾಣಿಜ್ಯ ಮಳಿಗೆಗಳು, ಆಸ್ಪತ್ರೆಗಳು, ಸೇರಿದಂತೆ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮ ಹಂತದಲ್ಲಿಯೇ ತ್ಯಾಜ್ಯವನ್ನು ಸಂಸ್ಕರಿಸುವುದನ್ನು ಕಡ್ಡಾಯಗೊಳಿಸುವ ಮೂಲಕ ಸ್ಥಳೀಯವಾಗಿಯೇ ತ್ಯಾಜ್ಯ ಸಂಸ್ಕರಣೆಗೆ ಒತ್ತು ನೀಡಲಾಗುವುದು.

ಆಸ್ತಿಗಳ ಸಂರಕ್ಷಣೆ 35 ಕೋಟಿ ರೂ. ವೆಚ್ಚ:  ಬೆಂಗಳೂರಿನ ವ್ಯಾಪ್ತಿಯಲ್ಲಿರುವ ಆಸ್ತಿಗಳ ಒತ್ತುವರಿಯನ್ನು ತಡೆಗಟ್ಟುವ ಮೂಲಕ ಎಲ್ಲ ಆಸ್ತಿಗಳ ಸಂರಕ್ಷಣೆ ಮಾಡಲು 35 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ , ಬೋರ್ಡ್‌ ಗಳ ಅಳವಡಿಕೆ ಮತ್ತು ಜಿಪಿಎಸ್‌ ತಂತ್ರಾಂಶದ ಮುಖಾಂತರ ಕಣ್ಗಾವಲು ಇಡಲಾಗುವುದು. 

click me!