Karnataka Budget 2023 ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಆದ್ಯತೆ;ತಿಪಟೂರಿನಲ್ಲಿ ತೋಟಗಾರಿಕಾ ಮಹಾವಿದ್ಯಾಲಯ

By Suvarna News  |  First Published Feb 17, 2023, 2:42 PM IST

ತೋಟಗಾರಿಕ ಬೆಳೆಗಳ ಉತ್ಪಾದನೆ ಹೆಚ್ಚಳಕ್ಕೆ ರಾಜ್ಯ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ಇದಕ್ಕಾಗಿ ಹಲವು ಮಹತ್ವದ ಘೋಷಣೆಗಳನ್ನು ಕೂಡ ಮಾಡಲಾಗಿದೆ. ತಿಪಟೂರಿನಲ್ಲಿ ತೋಟಗಾರಿಕೆ ಮಹಾವಿದ್ಯಾಲಯ ಸ್ಥಾಪನೆ, ತೀರ್ಥಹಳ್ಳಿಯ ಕೃಷಿ ಮತ್ತು ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂ. ನೆರವು ಬಜೆಟ್ ನಲ್ಲಿ ತೋಟಗಾರಿಕ ಕ್ಷೇತ್ರಕ್ಕೆ ಮಾಡಿದ ಪ್ರಮುಖ ಘೋಷಣೆಗಳಾಗಿವೆ. 
 


ಬೆಂಗಳೂರು (ಫೆ.17): ತೋಟಗಾರಿಕ ಬೆಳೆಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಈ ಬಾರಿಯ ಬಜೆಟ್ ನಲ್ಲಿ ಹಲವು ಉಪಕ್ರಮಗಳನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ತೋಟಗಾರಿಕೆ ಮಹಾವಿದ್ಯಾಲಯ ಸ್ಥಾಪನೆ ಮಾಡೋದಾಗಿಯೂ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ರಾಜ್ಯದ 26.21 ಲಕ್ಷ ಹೆಕ್ಟೇರ್ ವಿಸ್ತೀರ್ಣದ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ. ಇದರಿಂದ 66, 263 ಕೋಟಿ ರೂ. ಮೌಲ್ಯದ 242 ಲಕ್ಷ ಮೆಟ್ರಿಕ್ ಟನ್ ವಾರ್ಷಿಕ ಉತ್ಪನ್ನ ದೊರೆಯುತ್ತದೆ. ಇದು ರಾಜ್ಯದ ಕೃಷಿ ವಲಯದ ಒಟ್ಟು ಆದಾಯ ಶೇ.30ರಷ್ಟಾಗಿದೆ. ಇನ್ನು ತೋಟಗಾರಿಕೆ ಬೆಳೆಗಳ ಮೌಲ್ಯವರ್ಧನೆ ಮೂಲಕ ರೈತರ ಆದಾಯ ಹೆಚ್ಚಿಸಲು ಕೂಡ ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಸಿಎಂ ತಿಳಿಸಿದ್ದಾರೆ. ಅಡಿಕೆ ಬೆಳೆಗೆ ಬಾಧಿಸುವ ರೋಗಗಳ ನಿರ್ವಹಣೆಗೆ ಕೂಡ ನೂತನ ತಂತ್ರಜ್ಞಾನ ಅಭಿವೃದ್ಧಿಗೆ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ಇದಕ್ಕಾಗಿ ಹಾಗೂ ಉತ್ಪಾದಕತೆ ಹೆಚ್ಚಿಸುವ ಉದ್ದೇಶದಿಂದ ತೀರ್ಥಹಳ್ಳಿಯ ಕೃಷಿ ಮತ್ತು ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂ. ನೆರವು ನೀಡೋದಾಗಿ ಬಜೆಟ್ ನಲ್ಲಿ ಸಿಎಂ ಘೋಷಿಸಿದ್ದಾರೆ. 

ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತು ಮತ್ತು ಸಂಸ್ಕರಣೆ ಉತ್ತೇಜನಕ್ಕೆ ರೈತ ಸಂಪದ ಯೋಜನೆಯಡಿ ಕೆಪೆಕ್ ಸಂಸ್ಥೆ ಮೂಲಕ 100 ಕೋಟಿ ರೂ. ಮೊತ್ತದಲ್ಲಿ ಯೋಜನೆ ರೂಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ತೋಟಗಾರಿಕೆ ಇಲಾಖೆ ಅಡಿಯಲ್ಲಿರುವ 12 ತೋಟಗಳಲ್ಲಿ ಉತ್ಪಾದಕತೆ ಹೆಚ್ಚಿಸಲು 'ಒಂದು ತೋಟ, ಒಂದು ಬೆಳೆ' ಯೋಜನೆಯಡಿ 10 ಕೋಟಿ ರೂ.ಗಳ ಒಂದು ಬಾರಿಯ ವಿಶೇಷ ಅನುದಾನ ನೀಡೋದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. 

Latest Videos

undefined

ಕರ್ನಾಟಕ  ರಾಜ್ಯ ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕಿಸಿ

ಪ್ರಮುಖ ಘೋಷಣೆಗಳು:
*ರಾಜ್ಯದಲ್ಲಿ ಆಲೂಗಡ್ಡೆ ಬಿತ್ತನೆಯಲ್ಲಿ ಸ್ವಾವಲಂಬನೆ ಸಾಧಿಸಲು ಮೊದಲ ಬಾರಿಗೆ ಎಪಿಕಲ್ ರೂಟ್ ಕಲ್ಚರ್ ತಂತ್ರಜ್ಞಾನವನ್ನು ಯೋಗ್ಯದರದಲ್ಲಿ ಬೆಳೆಗಾರರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ.
*ತೋಟಗಾರಿಕಾ ಇಲಾಖೆಯ ಕ್ಷೇತ್ರಗಳಲ್ಲಿ ಸುಧಾರಿತ ಶ್ರೀಗಂಧಗಳನ್ನು ಉತ್ಪಾದಿಸಿ ರೈತರಿಗೆ ವಿತರಿಸಲಾಗುವುದು.
*ದ್ರಾಕ್ಷಿ ಬೆಳೆಗಾರರಿಗೆ ನೆರವಾಗಲು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿ ಮುಖಾಂತರ 100 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಕಾರ್ಯಕ್ರಮ.
*ರೇಷ್ಮೆ ಬೆಳೆಗಾರರಿಗೆ ವೈಜ್ಞಾನಿಕ ದರ ಒದಗಿಸಲು ಹಾಗೂ ಮಾರುಕಟ್ಟೆಯಲ್ಲಿ ಪಾರದರ್ಶಕತೆ ತರಲು ಇ-ಹರಾಜು ಮತ್ತು ಇ-ನಗದು ವ್ಯವಸ್ಥೆ ಅಳವಡಿಸಲಾಗಿದೆ. ಜೊತೆಗೆ ಹೊಸದಾಗಿ ಆರು ಗೂಡು ಪರೀಕ್ಷಾ ಕೇಂದ್ರಗಳು, ಆಧುನಿಕ ರೇಷ್ಮೆಗೂಡು ಮಾರುಕಟ್ಟೆ ಹಾಗೂ ಶೈತ್ಯಾಗಾರ ನಿರ್ಮಾಣ ಮಾಡಲಾಗಿದೆ. ರೇಷ್ಮೆ ಬೆಳೆಯನ್ನು 10 ಸಾವಿರ ಎಕರೆ ಪ್ರದೇಶಕ್ಕೆ ವಿಸ್ತರಣೆ.
*ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಸುತ್ತಮುತ್ತಿನ ಜಿಲ್ಲೆಗಳ ರೇಷ್ಮೆ ಬೆಳೆಗಾರರಿಗೆ ಅನುಕೂಲ ಒದಗಿಸಲು ಶಿಡ್ಲಘಟ್ಟದಲ್ಲಿ ನಬಾರ್ಡ್ ಯೋಜನೆಯಡಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಿಸಲಾಗುವುದು.
*ರೇಷ್ಮೆ ಬೆಳೆಗಾರರು ಆಧುನಿಕ ವಿಧಾನಗಳನ್ನು ಬಳಿಕೊಂಡು ಗುಣಮಟ್ಟದ ಕಚ್ಚಾ ರೇಷ್ಮೆ ಉತ್ಪಾದಿಸಲು ನೆರವಾಗಲು 32 ಸ್ವಯಂಚಾಲಿತ ರೀಲಿಂಗ್ ಘಟಕಗಳ ಸ್ಥಾಪನೆಗೆ 10 ಕೋಟಿ ರೂ. ಹಾಗೆಯೇ 100 ರೇಷ್ಮೆ ಬೆಳೆಗಾರರಿಗೆ ಶ್ರೆಡ್ಡರ್ಸ್ ಒದಗಿಸಲು 12 ಕೋಟಿ ರೂ. ನೆರವು.

Karnataka Budget 2023-24: ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಒತ್ತು; ಭೂ ಸಿರಿ ನೂತನ ಯೋಜನೆ ಘೋಷಣೆ

*ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಸೌಕರ್ಯ ಬಲಪಡಿಸಲು 8 ಕೋಟಿ ರೂ. ಅನುದಾನ.
*ರೇಷ್ಮೆ ಗೂಡುಗಳನ್ನು ದೀರ್ಘಾವಧಿಗೆ ಸಂರಕ್ಷಿಸಿಡಲು ಹಾಗೂ ಆ ಮೂಲಕ ರೇಷ್ಮೆಗೆ ಉತ್ತಮ ಬೆಲೆ ಒದಗಿಸುವಂತೆ ಮಾಡಲು ರಾಜ್ಯದ 10 ಪ್ರಮುಖ ರೇಷ್ಮೆ ಬೆಳೆಯುವ ಪ್ರದೇಶಗಳಲ್ಲಿ Hot Air Conveyor Dryer ಅಳವಡಿಸಲು 5 ಕೋಟಿ ರೂ. ಅನುದಾನ.

click me!