Karnataka Budget 2023 ಚಿಕ್ಕಮಗಳೂರಿನಲ್ಲಿ ಹೊಸ ವಿವಿ, ತುಮಕೂರಿನಲ್ಲಿ ಹೊಸ ಪಾಲಿಟೆಕ್ನಿಕ್‌ ಕಾಲೇಜು!

By Santosh Naik  |  First Published Feb 17, 2023, 1:29 PM IST

ಚಿಕ್ಕಮಗಳೂರು ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬಂಪರ್‌ ಘೋಷಣೆ ಮಾಡಿದ್ದಾರೆ. ಹೊಸ ವಿಶ್ವವಿದ್ಯಾಲಯವನ್ನು ಜಿಲ್ಲೆಯಲ್ಲಿ ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದ್ದರೆ, ತುಮಕೂರಿನಲ್ಲಿ ಹೊಸ ಪಾಲಿಟೆಕ್ನಿಕ್‌ ಕಾಲೇಜು ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.
 


ಬೆಂಗಳೂರು (ಫೆ.17): ರಾಜ್ಯದಲ್ಲಿ ಈಗಾಗಲೇ 7 ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗಿದೆ. ಮುಂಬರುವ ಬಜೆಟ್‌ನಲ್ಲಿ ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಮತ್ತು ಕಡಿಮೆ ಮಾನವ ಸಂಪನ್ಮೂಲಗಳನ್ನು ಒಳಗೊಂಡಂತೆ ಸ್ಥಾಪನೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ. ಅದರೊಂದಿಗೆ ಶಿಗ್ಗಾಂವ್‌ ತಾಲೂಕಿನ ಬಂಕಾಪುರದಲ್ಲಿರುವ ಪಾಲಿಟೆಕ್ನಿಕ್‌ ಕಾಲೇಜನ್ನು ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಘೋಷಿಸಿದ್ದಾರೆ.  ಅದರೊಂದಿಗೆ ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್‌ ಕಾಲೇಜು ಸ್ಥಾಪನೆ ಮಾಡುವ ಘೋಷಣೆ ಮಾಡಲಾಗಿದೆ.

ಬೀದರ್‌, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ ಮತ್ತು ಹಾಸನ ಜಿಲ್ಲೆಗಳಲ್ಲಿ ಈಗಾಗಲೇ 7 ಹೊಸ ವಿವಿಗಳನ್ನು ಸ್ಥಾಪನೆ ಮಾಡಲಾಗಿದೆ ಮತ್ತು ಮಂಡ್ಯ ವಿಶ್ವವಿದ್ಯಾಲಯವನ್ನು ಸಂಯೋಜಿತ ವಿವಿಯನ್ನಾಗಿ ಪರಿವರ್ತನೆ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು. ಕಳೆದ ವರ್ಷದ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಮುಂದಿನ 5 ವರ್ಷಗಳಲ್ಲಿ ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಕೆಐಟಿ) ಆಗಿ ಉನ್ನತೀಕರಿಸಲು ಬೆಂಗಳೂರು, ಹಾವೇರಿ, ಹಾಸನ, ಕೆಆರ್‌ಪೇಟೆ, ತಳ್ಕಲ್‌, ರಾಮನಗರ ಮತ್ತು ಕಾರವಾರ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳನ್ನು ಗುರುತಿಸಲಾಗಿದೆ. ಪ್ರೊ ಸಡಗೋಪನ್‌ ನೇತೃತ್ವದ ತಜ್ಞರ ಸಮಿತಿಯು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳು ಕುರಿತು ಈಗಾಗಲೇ ವರದಿ ಸಲ್ಲಿಸಿದೆ. ಈ ಸಮಿತಿಯ ಶಿಫಾರಸಿನ ಅನ್ವಯ ಕಾಮಗಾರಿ ಕೈಗೊಳ್ಳುವ ಉದ್ದೇಶಕ್ಕಾಗಿ 50 ಕೋಟಿ ನೀಡಲಾಗಿದೆ ಎಂದರು.

Tap to resize

Latest Videos

undefined

ರಾಜ್ಯದ ಎಲ್ಲಾ ವಿವಿಗಳಲ್ಲಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್‌ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗಿತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಮತ್ತೆ ಬೊಮ್ಮಾಯಿ ನೀಡಿದ್ದೇನು?

- ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದ 100 ಆಯ್ದ ಪದವಿ ಕಾಲೇಜುಗಳಲ್ಲಿ ಪ್ರೊ.ಸಿಎನ್‌ಅರ್‌ ರಾವ್‌ ವಿಜ್ಞಾನ ಕಾರ್ಯಕ್ರಮದ ಅಡಿಯಲ್ಲಿ ವಿಜ್ಞಾನ ವಿಭಾಗದ ಪ್ರಾರಂಭ.

- ಹಳ್ಳಿ ಮುತ್ತು ಯೋಜನೆಯ ಅಡಿಯಲ್ಲಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುತ್ತದೆ.

- ಸಾರ್ವಜನಿಕ ವಿವಿಗಳ ಆಡಳಿತ ವ್ಯವಸ್ಥೆ ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕ ರಚಿಸಲಾಗಿದೆ. ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿವಿಗಳಿಗೆ ತಲಾ 50 ಲಕ್ಷ ರೂಪಾಯಿಯಂತೆ ಪ್ರೋತ್ಸಾಹಧನ ನೀಡಲಾಗುತ್ತದೆ.

-- ಬೆಂಗಳೂರು ನಗರದ ಕೇಂದ್ರ ಭಾಗದ 5 ಕಿಮೀ ವ್ಯಾಪ್ತಿಯ ಪಾರಂಪರಿಕ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಪ್ರದೇಶವನ್ನು ಪಾರಂಪರಿಕ ಮತ್ತು ಶೈಕ್ಷಣಿಕ ಜಿಲ್ಲೆಯಾಗುವ ಘೋಷಿಸುವ ನಿಟ್ಟಿನಲ್ಲಿ ಕಾರ್ಯಸಾಧ್ಯತೆ ಅಧ್ಯಯನ ಮಾಡಲಾಗುವುದು.

-ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಕಾಡೆಮಿಕ್‌ ಬ್ಯಾಂಕ್‌ ಆಫ್‌ ಕ್ರೆಡಿಟ್ಸ್‌ ಮತ್ತು ಡಿಜಿಲಾಕ್‌ ವ್ಯವಸ್ಥೆ ಅಳವಡಿಸಿಕೊಳ್ಳಲು ಕ್ರಮ. ಪಿಎಚ್‌ಡಿ ವಿದ್ಯಾರ್ಥಿಗಳಿಗೆ ವಿವಿಗಳಲ್ಲಿ ಸರಳ ಹಾಗೂ ಪಾರದರ್ಶಕ ಪ್ರವೇಶಾವಕಾಶಕ್ಕೆ ಏಕರೂಪದ ವ್ಯವಸ್ಥೆ.

-ಪ್ರತಿ ಜಿಲ್ಲೆಗೆ ಒಂದರಂತೆ ಅತಿ ಹೆಚ್ಚು ದಾಖಲಾತಿ ಹೊಂದಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್‌ಗಳಿಗೆ ವೃದ್ಧಿ ಯೋಜನೆಯ ಅಡಿ 2 ಕೋಟಿ ರೂಪಾಯಿಯಂತೆ 124 ಕೋಟಿ ರೂಪಾಯಿ ವೆಚ್ಚದ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಅವುಗಳನ್ನು ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳಾಗಿ ರೂಪುಗೊಳಿಸಲಾಗುತ್ತದೆ.

Karnataka Budget 2023: ಬಜೆಟ್ ಮಂಡನೆ ಮುಗಿಸಿದ ಸಿಎಂ, ಸೋಮವಾರಕ್ಕೆ ಕಲಾಪ ಮುಂದೂಡಿಕೆ

- ರಾಜ್ಯದಲ್ಲಿ ಈ ವರ್ಷ ಎರಡು ಹೊಸ ಎನ್‌ಸಿಸಿ ಘಟಕಗಳ ಸ್ಥಾಪನೆ

Karnataka budget 2023-24: ನೀರಾವರಿಗೆ 11,236 ಕೋಟಿ ಕೊಡುಗೆ: 38 ಯೋಜನೆಗಳಿಗೆ ಅನುಮೋದನೆ

- ವಿದ್ಯಾವರ್ಧಿನಿ ಯೋಜನೆಯಡಿ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್‌ಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಹಾಗೂ ಶೈಕ್ಷಣಿಕ ಉಪಕರಣ ಒದಗಿಸಲಾಗುತ್ತದೆ.

-ವಿದ್ಯಾರ್ಥಿನಿಯರ ದೈಹಿಕ ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಯೋಗ ತರಬೇತಿ ನೀಡಲಾಗುವುವುದ.

 

 

click me!