ರಾಜ್ಯದಲ್ಲಿ ರಸ್ತೆ ಹಾಗೂ ಹೆದ್ದಾರಿ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಆದ್ಯತೆ ನೀಡಿದ್ದಾರೆ. 1700 ಕಿಲೋಮೀಟರ್ ಉದ್ದದ ರಾಜ್ಯ ಹೆದ್ದಾರಿ ಜಾಲದ ಅಭಿವೃದ್ಧಿಗಾಗಿ ಬರೋಬ್ಬರಿ 2 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಟ್ಟಿದ್ದಾರೆ.
ಬೆಂಗಳೂರು (ಫೆ.17): ರಾಜ್ಯದಲ್ಲಿ ರಸ್ತೆ ಹಾಗೂ ಹೆದ್ದಾರಿ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದ್ಯತೆ ನೀಡಿದ್ದಾರೆ. ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಸರ್ಕಾರ ಹೆಚ್ಚಿನ ಮಹತ್ವ ನೀಡಿದ್ದು, ಹಾಲಿ ವರ್ಷ 2070 ಕೋಟಿ ರೂಪಾಯಿಗಳ ವೆಚ್ಚದಲ್ಲಿ 4504 ಕಿಲೋಮೀಟರ್ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿದೆ. ಗ್ರಾಮೀಣ ಭಾಗದ ರಸ್ತೆಗಳ ಮತ್ತು ಕೃಷಿ ಭೂಮಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗಾಗಿ ನರೇಗಾ ಜೊತೆಗೆ ಸಂಯೋಜಿಸಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 25 ಕಿಲೋಮೀಟರ್‌ನಂತೆಒಟ್ಟಾರೆಯಾಗಿ 5 ಸಾವಿರ ಕಿಲೋಮೀಟರ್ ರಸ್ತೆಯನ್ನು ಅಭಿವೃದ್ಧಿಪಡಿಸಲು 300 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತದೆ. 2023ರ ಮಾರ್ಚ್ ಅಂತ್ಯದ ಒಳಗೆ 3720 ಕೋಟಿ ರೂಪಾಯಿ ವೆಚ್ಚದಲ್ಲಿ 948 ಕಿಲೋಮೀಟರ್ ಉದ್ದದ ರಾಜ್ಯ ಹೆದ್ದಾರಿ ಹಾಗೂ 1364 ಕಿಲೋಮೀಟರ್ ಉದ್ದದ ಜಿಲ್ಲಾ ಮತ್ತು ಇತರ ರಸ್ತೆಯನ್ನು ಅಭಿವೃದ್ಧಿ ಮಾಡಲಾಗುತ್ತದೆ.
ರಾಜ್ಯದ ಕೋರ್ ನೆಟ್‌ವರ್ಕ್ ಜಾಲದಲ್ಲಿ 1700ಕಿಲೋಮೀಟರ್ ಉದ್ದದ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 2 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಅದರೊಂದಿಗೆ ಕೆ-ಶಿಪ್-4ರ ಅಡಿಯಲ್ಲಿ2943 ಕಿಲೋಮೀಟರ್ ಉದ್ದದ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧತೆ ಮಾಡಲಾಗಿದೆ. ಜಿಲ್ಲಾ ಕೇಂದ್ರ ಸಂಪರ್ಕ ಹಾಗೂ ಗ್ರಾಮೀಣ ರಸ್ತೆಗಳಿಗೆ ಸಂಪರ್ಕ ಕಲ್ಪಿಸಲು 1500 ಕೋಟಿ ವೆಚ್ಚದಲ್ಲಿ 5 ಸಾವಿರ ಕಿಲೋಮೀಟರ್ ಉದ್ದದ ರಸ್ತೆ ಅಭಿವೃದ್ಧಿ. ಒಟ್ಟು 7650 ಕೋಟಿ ರೂಪಾಯಿ ವೆಚ್ಚದಲ್ಲಿ ಬೀದರ್-ಕಲಬುರಗಿ-ಬಳ್ಳಾರಿ ರಸ್ತೆಯನ್ನುಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಬಜೆಟ್‌ನಲ್ಲಿ ಘೋಷಣೆಯಾಗಿದೆ.
ಮೆಗಾ ಜವಳಿ ಪಾರ್ಕ್, ಹೊಸ ವಿವಿ ಸೇರಿ ಹಲವು ಯೋಜನೆ, ಬಜೆಟ್ ಬಗ್ಗೆ ಚಿಕ್ಕಮಗಳೂರು ಜನರಿಂದ ಮಿಶ್ರ ಪ್ರತಿಕ್ರಿಯೆ
undefined
ಇತರ ಹೈಲೈಟ್ಸ್‌ಗಳು
- 1490 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಡಬ್ಲಿಂಗ್ ಯೋಜನೆಗಳ ಅನುಷ್ಠಾನ.
- ಸಾಗರಮಾಲಾ ಯೋಜನೆಯಡಿ 767 ಕೋಟಿ ರೂ. ವೆಚ್ಚದಲ್ಲಿ 12 ಹೊಸ ಯೋಜನೆಗಳ ಪ್ರಾರಂಭ.
- ಕೇಣಿ ಮತ್ತು ಪಾವಿನಕುರ್ವೆಯಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ All weather greenfield ಬಂದರು ನಿರ್ಮಾಣ.
- ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ 4332 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಸಮಗ್ರ ಗಣಿ ಬಾಧಿತ ಪರಿಸರ ಪುನಶ್ಚೇತನ ಅಭಿವೃದ್ಧಿ ಯೋಜನೆಯಡಿ 151 ಯೋಜನೆಗಳ ಅನುಷ್ಠಾನ.
- ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಸ್ಟಾರ್ಟ್ ಅಪ್ ಪಾರ್ಕ್ ಸ್ಥಾಪನೆ.
Karnataka Budget 2023-24: ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಒತ್ತು; ಭೂ ಸಿರಿ ನೂತನ ಯೋಜನೆ ಘೋಷಣೆ