ಚುನಾವಣೆ ವೇಳೆ ಪ್ರಚಾರ ಮಾಡಿದ ಪಂಚ ಗ್ಯಾರಂಟಿಗಳ ಜಾರಿಗೆ ಕಸರತ್ತು ಎನ್ನುವಂತೆ ಬಜೆಟ್‌ನ ಬಹುಪಾಲು ಹಣ ಪಂಚ ಗ್ಯಾರಂಟಿಗಳು ನುಂಗಿದೆ. ಗ್ಯಾರಂಟಿಗಳ ಭಾರವನ್ನು ಇಳಿಸುವ ಸಲುವಾಗಿ ಜನರ ಮೇಲೆ ತೆರಿಗೆಯ ಭಾರವನ್ನು ಹಾಕಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಾಗಿಯೇ ಅಂದಾಜು 58 ಸಾವಿರ ಹಣ ಮೀಸಲಿಡಲಾಗಿದೆ ಈ ಹಿಂದೆ 2 ಗಂಟೆ 42 ನಿಮಿಷಗಳ ಕಾಲ ಬಜೆಟ್ ಮಂಡಿಸಿದ್ದ ಕೇಂದ್ರೀಯ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ದಾಖಲೆ ಮುರಿದಿರುವ ಸಿದ್ದರಾಮಯ್ಯ ಮೂರು ಗಂಟೆಗೂ ಹೆಚ್ಚು ಕಾಲ ಯಾವುದೇ ಬ್ರೇಕ್ ತೆಗದೆುಕೊಳ್ಳದೇ ಬಜೆಟ್ ಮಂಡಿಸಿ, ಹೊಸ ದಾಖಲೆ ನಿರ್ಮಿಸಿದ್ದಾರೆ. ಎಂದಿನಂತೆ ಪ್ರತಿಪಕ್ಷಗಳು ಇದು ಅಭಿವೃದ್ಧಿಯ ಬದಲು ರಾಜಕೀಯದ ಬಜೆಟ್ ಎಂದು ಟೀಕಿಸಿದ್ದಾರೆ.

02:18 PM (IST) Jul 07
ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿರುವ ಗಿಗ್ ವರ್ಕರ್ಸ್‌ಗಳಾದ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಮುಂತಾದ ಇ-ಕಾಮರ್ಸ್ ಸಂಸ್ಥೆಗಳ ನೌಕರರಿಗೆ (ಡೆಲಿವರಿ ಬಾಯ್‌ಗಳಿಗೆ) 2 ಲಕ್ಷ ರೂ.ಗಳ ಜೀವವಿಮಾ ಹಾಗೂ 2 ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿ ಒಟ್ಟು 4 ಲಕ್ಷ ರೂ.ಗಳ ವಿಮಾ ಸೌಲಭ್ಯ ಕಲ್ಪಿಸಲಾಗುವುದು. ಸಂಪೂರ್ಣ ವಿಮಾ ಕಂತನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
02:00 PM (IST) Jul 07
01:57 PM (IST) Jul 07
ವಿದ್ಯಾನಿಧಿ, ಜಿಲ್ಲೆಗೊಂದು ಗೋಶಾಲೆ, ಎಪಿಎಂಸಿ ಕಾಯ್ದೆ ರದ್ದು....
ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದು..
ವಿವೇಕ ಶಾಲೆ ಅಭಿವೃದ್ಧಿ ಯೋಜನೆ..
ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ...
ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ. - ಮಹಿಳೆಯರ ಸ್ವಸಹಾಯ ಸಂಘಗಳಿಗೆ ೫ ಲಕ್ಷ ರೂ ಸಹಾಯಧನ ನೀಡುವುದು..
ಭೂಸಿರಿ ಯೋಜನೆ - ರೈತರಿಗೆ ೧೦ ಸಾವಿರ ರೂ ಕೊಡೋದು..
ಶ್ರಮಶಕ್ತಿ ಯೋಜನೆ - ಕೃಷಿ ಮಹಿಳೆಯರಿಗೆ ೫೦೦ ರೂ ಪ್ರತಿ ತಿಂಗಳು ನೀಡುವುದು..
ಅಗ್ನಿ ವೀರ ಯೋಜನೆಗೆ ಸೇರುವ ಎಸ್ ಸಿ ಎಸ್ ಟಿ ಯುವಕರಿಗೆ ತರಬೇತಿ ನೀಡುವ ಯೋಜನೆ ಕೋಕ್..
ಮಕ್ಕಳ ಬಸ್ - ಉಚಿತ ಬಸ್ ಯೋಜನೆ
01:54 PM (IST) Jul 07
01:34 PM (IST) Jul 07
ಐದು ಗ್ಯಾರಂಟಿಗಳನ್ನು ಈಡೇರುಸಲು ಆದಾಯ ಹೆಚ್ಚು ತೋರಿಸಿದ್ದಾರೆ. ಅದರ ಮುಖಾಂತರ ನಮ್ಮ ಗ್ಯಾರಂಟಿ ಈಡೇರಿಸುತ್ತೇವೆ ಅಂತಾ ಹೇಳ್ತಿದಾರೆ. ಇವರ ಗ್ಯಾರಂಟಿಗಳನ್ನು ಇನ್ನೂ ಲೇಟ್ ಮಾಡ್ತಾರೆ. ಇದು ನಾಲಾಯಕ್ ಬಜೆಟ್, ಎಂದ ಮಾಜಿ ಸಚಿವ ಆರ್.ಅಶೋಕ್.
01:31 PM (IST) Jul 07
ಗೋ ಸಂರಕ್ಷಣೆ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದ ಬಿಜೆಪಿ ಸರಕಾರದ ಗೋ ಶಾಲೆ ಯೋಜನಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕೊಕ್ ನೀಡಲು ನಿರ್ಧರಿಸಿದ್ದು, ಯಾವುದೋ ಅನುದಾನ ಮೀಸಲಿಟ್ಟಿಲ್ಲ.
01:23 PM (IST) Jul 07
ನಕಲಿ ಅಂಕಪಟ್ಟಿ ಹಾವಳಿ ತಡೆಗೆ ಕ್ರಮ, ಅಕಾಡೆಮಿಕ್ ನೋಂದಣಿ ಕಡ್ಡಾಯ
ನೇಮಕಾತಿಯಲ್ಲಿ ಎನ್ಎಡಿ/ಡಿಜಿ ಲಾಕರ್ ಅಂಕಪಟ್ಟಿ ಕಡ್ಡಾಯ
ಡಯಾಲಿಸಿಸ್ ಕೇಂದ್ರಗಳ ಹೆಚ್ಚಳ, 219ಕ್ಕೆ ಏರಿಕೆ
ಗ್ರಾಮೀಣ ಪ್ರದೇಶಗಳ ಆರೋಗ್ಯ ಕೇಂದ್ರ 23 ಕೇಂದ್ರ ಮೇಲ್ದರ್ಜೆಗೆ
ಪುನಿತ್ ಸ್ಮರಣಾರ್ಥ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ತಪಾಸಣೆ ಕೇಂದ್ರಕ್ಕೆ 6 ಕೋಟಿ
ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 5 ಲಕ್ಷವರೆಗೆ ಶೂನ್ಯ ಬಡ್ಡಿ ಸಾಲ
ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ
4 ಸಾವಿರ ವಿಶೇಷಚೇತನರಿಗೆ ದ್ವಿಚಕ್ರ ವಾಹನ, 30 ಕೋಟಿ
ಮಹಿಳಾ ಉದ್ಯಮಿಗಳ ಸಾಲದ ಮಿತಿ 2ರಿಂದ 5 ಕೋಟಿ ಹೆಚ್ಚಳ
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ 60 ಕೋಟಿ ಅನುದಾನ
172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ
19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲು
ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್,
ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ
ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ
ವೃತ್ತಿಪರ ಶಿಕ್ಷಣ ಸಾಲಕ್ಕೆ 75 ಕೋಟಿ ಅನುದಾನ, 1 ಲಕ್ಷವರೆಗೆ ಸಾಲ
ಅಬಕಾರಿ ತೆರಿಗೆ ಶೇ. 20ರಷ್ಟು ಹೆಚ್ಚಳ - ಎಲ್ಲಾ ರೀತಿಯ ಮದ್ಯದ ಬೆಲೆ ಏರಿಕೆ
ಬಿಯರ್ ಮೇಲಿನ ಅಬಕಾರಿ ಸುಂಕ ಶೇ. 10ರಷ್ಟು ಹೆಚ್ಚಳ - ಬಿಯರ್ ದರ ಏರಿಕೆ
ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ತಸ್ತಿಕ್, 48 ಸಾವಿರದಿಂದ 60 ಸಾವಿರಕ್ಕೆ ಏರಿಕೆ
ಜೈನರ ಪುಣ್ಯಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ಅನುದಾನ
ಕ್ರಿಶ್ಚಿಯನ್ ಅಭಿವೃದ್ಧಿ ನಿಗಮಕ್ಕೆ 100 ಕೋಟಿ
ಮೈಸೂರು, ಕಲಬುರಗಿ, ಹುಬ್ಬಳ್ಳಿ ಗುರುದ್ವಾರಕ್ಕೆ 5 ಕೋಟಿ, ಗ್ರಂಥಿಗಳಿಗೆ ಮಾಸಿಕ ಗೌರವ ಧನ
ಹಲಸೂರಿಗೆ ಗುರುದ್ವಾರಕ್ಕೆ 25 ಕೋಟಿ
ನೇಕಾರರಿಗೆ ಮಾಸಿಕ 250 ಯೂನಿಟ್ ವಿದ್ಯುತ್ ಉಚಿತ
01:21 PM (IST) Jul 07
ವಧು ವರರ ಮದುವೆ ನೋಂದಣಿ ಸರಳೀಕರಣ, ಆನ್‌ಲೈನ್‌ನಲ್ಲಿ ನೋಂದಣಿ.
ಪುನೀತ್ ರಾಜಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆಗೆ 6 ಕೋಟಿ ಮೀಸಲು
ಡೆಲಿವರಿ ಬಾಯ್ಸ್ಗೆ ಜೀವವಿಮೆ, 2 ಲಕ್ಷ ರೂ. ಅಪಘಾತ ವಿಮೆ
ಪ್ರತಿ ತಾಲೂಕಿನ ಒಬ್ಬ ಯುವ ಪದವೀಧರರಿಗೆ ಮುಖ್ಯಮಂತ್ರಿ ಫೆಲೋಶಿಪ್
ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ
ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ
ಜಾನುವಾರು ಆಕಸ್ಮಿಕ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು
ರೈತರ ಗೋದಾಮು ನಿರ್ಮಾಣಕ್ಕೆ ಸಹಾಯಧನ
ಚಿಕ್ಕಬಳ್ಳಾಪುರ, ಕೋಲಾರದ 296 ಕೆರೆಗಳಿಗೆ ನಿರು ತುಂಬುವ ಯೋಜನೆ
ಚಿಕ್ಕಬಳ್ಳಾಪುರ, ಕೋಲಾರದ 296 ಕೆರೆಗಳಿಗೆ 529 ಕೋಟಿ ಅನುದಾನ
ಶಾಲಾ ಕಾಲೇಜು ಕೊಠಡಿ ನಿರ್ಮಾಣಕ್ಕೆ 550 ಕೋಟಿ ಅನುದಾನ
ಶಾಲಾ ಕಾಲೇಜು ಶೌಚಾಲಯ ನಿರ್ಮಾಣಕ್ಕೆ 200 ಕೋಟಿ ಅನುದಾನ
ಶಾಲಾ ಕಾಲೇಜು ಕೊಠಡಿ ದುರಸ್ಥಿಗೆ 100 ಕೋಟಿ ಅನುದಾನ
ಪಿಯು ಕಾಲೇಜುಗಳ ನಿರ್ವಹಣೆಗೆ 150 ಕೋಟಿ ಅನುದಾನ
ಶಾಲೆ ಕಾಲೇಜುಗಳ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ವಾರಕ್ಕೆ 1 ಬಾರಿ
9 ಹಾಗೂ 10ನೇ ತರಗತಿಗೂ ವಿಸ್ತರಣೆ
ಗ್ರಂಥಾಲಯಗಳ ಪುಸ್ತಕ ಖರೀದಿಗೆ 10 ಕೋಟಿ
01:19 PM (IST) Jul 07
ಗ್ರಾಮೀಣ ಪ್ರದೇಶಗಳ ಆರೋಗ್ಯ ಕೇಂದ್ರ 23 ಕೇಂದ್ರ ಮೇಲ್ದರ್ಜೆಗೆ
ಪುನಿತ್ ಸ್ಮರಣಾರ್ಥ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ತಪಾಸಣೆ ಕೇಂದ್ರಕ್ಕೆ 6 ಕೋಟಿ
ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 5 ಲಕ್ಷವರೆಗೆ ಶೂನ್ಯ ಬಡ್ಡಿ ಸಾಲ
ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ
4 ಸಾವಿರ ವಿಶೇಷಚೇತನರಿಗೆ ದ್ವಿಚಕ್ರ ವಾಹನ, 30 ಕೋಟಿ
ಮಹಿಳಾ ಉದ್ಯಮಿಗಳ ಸಾಲದ ಮಿತಿ 2ರಿಂದ 5 ಕೋಟಿ ಹೆಚ್ಚಳ
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ 60 ಕೋಟಿ ಅನುದಾನ
172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ
19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲು
01:17 PM (IST) Jul 07
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಜಲಸಂಪನ್ಮೂಲ, ನಗರಾಭಿವೃದ್ಧಿ ಹಾಗೂ ಲೋಕೋಪಯೋಗಿ ಸೇರಿದಂತೆ ಹಲವು ಇಲಾಖೆಗಳ ಕಾಮಗಾರಿ
94,933 ಸಾವಿರ ಕೋಟಿ ರೂ. ಕಾಮಗಾರಿಗಳಿಗೆ ವಿತ್ತೀಯ ನೀತಿ ಮೀರಿ ಅನುಮೋದನೆ
2023-24 ರ ಅಂತ್ಯಕ್ಕೆ 2,55,102 ಕೋಟಿ ರೂ ಬಾಕಿ ಕಾಮಗಾರಿ
ಇದನ್ನ ಪೂರ್ಣಗೊಳಿಸಲು ಆರು ವರ್ಷಗಳ ಕಾಲ ಬೇಕು
ಹಾಗಾಗಿ ಈ ಸರ್ಕಾರಕ್ಕೆ ಹೊಸ ಯೋಜನೆಗಳನ್ನ ಹಮ್ಮಿಕೊಳ್ಳುವುದು ಸವಾಲು
ಪರೋಕ್ಷವಾಗಿ ಹೊಸ ನೀರಾವರಿ, ರಸ್ತೆ ಯೋಜನೆಗಳಿಲ್ಲ ಎಂದ ಬಜೆಟ್...
01:15 PM (IST) Jul 07
ರಾಮನಗರ,ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ,ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು 4 ಕೋಟಿ ವೆಚ್ಚದಲ್ಲಿ ಪ್ರಾರಂಭ
ಸ್ವಾವಲಂಬಿ ಸಾರಥಿ ಯೋಜನೆ ಅಡಿ ಅಲ್ಪಸಂಖ್ಯಾತ ನಿರುದ್ಯೋಗಿ ಯುವಕರಿಗೆ 4 ಚಕ್ರ ವಾಹನ ಪಡೆಯಲಿ 3ಲಕ್ಷ ಸಹಾಯಧನ..
ರಾಜ್ಯದಲ್ಲಿ 40 ಸಾವಿರಕ್ಕಿಂತ ವಕ್ಫ ಆಸ್ತಿಗಳಿದ್ದು ಸಂರಕ್ಷಣೆ ಮತ್ತು ಅಭಿವೃದ್ಧಿ ಗಾಗಿ 50. ಕೋಟಿ ಅನುದಾನ.
ಜೈನರ ಪ್ರಮುಖ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ಅನುದಾನ.
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಗೆ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ 100ಕೋಟಿ ಅನುದಾನ
ಹಜ್ ಭವನದಲ್ಲಿ ಅಲ್ಪಸಂಖ್ಯಾತ ಯುವಕರಿಗೆ 10 ತಿಂಗಳ ಕಾಲ ವಸತಿ ಸಹಿತ ಐ ಎ ಎಸ್,ಕೆ ಎ ಎಸ್ ತರಬೇತಿಗಳನ್ನ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಪ್ರಾರಂಭ.
ಹಲಸೂರಿನಲ್ಲಿರುವ ಗುರುದ್ವಾರ ದ ಅಭಿವೃದ್ಧಿ ಗೆ 25 ಕೋಟಿ ಅನುದಾನ
01:14 PM (IST) Jul 07
ಸಾಮರಸ್ಯ ಮತ್ತು ಸಹಬಾಳ್ವೆಯ ಮನೋಭಾವ ಮೂಡಿಸುವಂತಿರಬೇಕು ಶಿಕ್ಷಣದ ವ್ಯವಸ್ಥೆ. ಈ ಆಶಯಕ್ಕೆ ವಿರುದ್ಧವಾದ ಪಠ್ಯಗಳನ್ನು ಹಿಂದಿನ ಸರ್ಕಾರವು ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸಿದ್ದು, ಅವುಗಳನ್ನು ಪ್ರಸಕ್ತ ಸಾಲಿನಿಂದಲೇ ಕೈಬಿಡಲು ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಲು ಶಾಲಾ ಕೊಠಡಿಗಳಿಗೆ 310 ಕೋಟಿ ರೂ.ಗಳು ಹಾಗೂ ಪದವಿ ಪೂರ್ವ ಕಾಲೇಜು ಕೊಠಡಿಗಳಿಗೆ 240 ಕೋಟಿ ರೂ. ಸೇರಿದಂತೆ ಒಟ್ಟು 550 ಕೋಟಿ ರೂ.ಗಳ ವೆಚ್ಚದಲ್ಲಿ 8,311 ಕೊಠಡಿಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು.
ವಿದ್ಯಾರ್ಥಿಗಳ ಶಿಕ್ಷಣ ಮತ್ತು ಆರೋಗ್ಯದ ದೃಷ್ಟಿಯಿಂದ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ, ಕಡಿಮೆ ಶೌಚಾಲಯಗಳಿರುವ 5,775 ಶಾಲೆಗಳಲ್ಲಿ ಹಾಗೂ 150 ಕಾಲೇಜುಗಳಲ್ಲಿ ಶೌಚಾಲಯ ಘಟಕಗಳನ್ನು ನರೇಗಾ ಯೋಜನೆಯ ಸಂಯೋಜನೆಯೊಂದಿಗೆ 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಹಳೆಯ ಶಾಲಾ ಕಾಲೇಜು ಕಟ್ಟಡಗಳು ಹಾಗೂ ಮಳೆಯಿಂದಾಗಿ ಶಿಥಿಲಗೊಂಡಿರುವ 3,833 ಶಾಲೆಗಳು ಹಾಗೂ 724 ಪದವಿ ಪೂರ್ವ ಕಾಲೇಜು ಕೊಠಡಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ದುರಸ್ತಿಗೊಳಿಸುವ ಮೂಲಕ ಬಳಕೆಗೆ ಯೋಗ್ಯಗೊಳಿಸಲಾಗುವುದು.
01:09 PM (IST) Jul 07
ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ತಡೆಯಲು ನಿರ್ದಾಕ್ಷಿಣ್ಯ ಕ್ರಮ...
2125 ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ 450 ಕೋಟಿ.
ಪೊಲೀಸರ ಹಳೆಯ ವಾಹನ ಬದಲಾವಣೆಗಾಗಿ 100 ಕೋಟಿ..
ಪೊಲೀಸ್ ಇಲಾಖೆ ಮೂಲಭೂತ ಸೌಕರ್ಯಗಳ ಉನ್ನತೀಕರಣಕ್ಕೆ ಕ್ರಮ.
ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಒದಗಿಸಲಾಗಿದೆ..
ಬೆಂಗಳೂರಿನಲ್ಲಿ 5 ಟ್ರಾಫಿಕ್ ಸ್ಟೇಷನ್, 6 ಮಹಿಳಾ ಸ್ಟೇಷನ್ ನಿರ್ಮಿಸಲಾಗುವುದು.
ಬೆಂಗಳೂರಿನಲ್ಲಿ ಪೊಲೀಸ್ ಕಟ್ಟಡಗಳ ಬಲಪಡಿಸಲು 2454 ಕೋಟಿ ಅನುದಾನ
01:08 PM (IST) Jul 07
CCD, CID, CEN ಠಾಣೆಗಳ ಉನ್ನತಿಕರಣಕ್ಕೆ 10 ಕೋಟಿ ರೂ ಮೀಸಲು
ದಿನ ನಿತ್ಯದ ಸವಾಲು ಎದುರಿಸಲು ಅಗತ್ಯ ತರಬೇತಿಗಾಗಿ 20 ಕೋಟಿ ರೂ.
ಡ್ರೋಣ್ ಕ್ಯಾಮರಾ, ಕಣ್ಗಾವಲು, ಬಾಡಿ ವೋರ್ನ್ ಕ್ಯಾಮರಾ ಒದಗಿಸಲು ಕ್ರಮ.
ಕೇಂದ್ರ ಕಾರಾಗೃಹಗಳಲ್ಲಿ 10 ಕೋಟಿ. ರೂ ವೆಚ್ಚSTP ನಿರ್ಮಾಣ.
5 ಕೇಂದ್ರ ಕಾರಾಗೃಹಗಳಲ್ಲಿ 5 ಕೋಟಿ ವೆಚ್ಚದಲ್ಲಿ ವಾಚ್ ಟವರ್ ನಿರ್ಮಾಣ
ಖೈದಿಗಳಿಗೆ ಕೈಶಲ್ಯ ತರಬೇತಿಗಾಗಿ ಕಾರ್ಯಾಗಾರಕ್ಕೆ ಕ್ರಮ
ಆರೋಪಿಗಳನ್ನ ವಿಡಿಯೋ ಕಾರ್ಫರೆನ್ಸ್ ಮೂಲಕ ಕೋರ್ಟಿಗೆ ಹಾಜರು ಪಡಿಸುವ ವ್ಯವಸ್ಥೆಗಾಗಿ 3 ಕೋಟಿ ಅನುದಾನ
01:06 PM (IST) Jul 07
ಜನಜೀವನ್ ಮಿಷನ್ ಯೋಜನೆಯ ಲೋಪ ಪತ್ತೆ ಹಚ್ಚಲು ತನಿಖೆ
ಬಾಹ್ಯ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ
ಯೋಜನೆ ಜಾರಿಯಲ್ಲಿ ತಪ್ಪುಗಳು, ಲೋಪದೋಷಗಳ ಬಗ್ಗೆ ತನಿಖೆ
ಲೋಪ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಎಂದು ಬಜೆಟ್ ನಲ್ಲೇ ಘೋಷಣೆ
01:01 PM (IST) Jul 07
ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಘೋಷಣೆ ಮಾಡುತ್ತಲೇ ಹೊಸ ಸರ್ಕಾರದ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಸಿದ್ಧರಾಮಯ್ಯ, ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ದೊಡ್ಡ ಪಾಲನ್ನು ಮೀಸಲಿಟ್ಟಿದ್ದಾರೆ. ಐದು ಗ್ಯಾರಂಟಿ ಯೋಜನೆಗಾಗಿ ಸರ್ಕಾರ 52 ಸಾವಿರ ಕೋಟಿ ಮೀಸಲಿಟ್ಟರುವುದಾಗಿ ಸಿದ್ಧರಾಮಯ್ಯ ಘೋಷಣೆ ಮಾಡಿದೆ. 'ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವುದರಿಂದ ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ (Universal basic income) ಮೂಲ ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ, ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ' ಎಂದು ಬಜೆಟ್ ಭಾಷಣದಲ್ಲಿ ಸಿದ್ಧರಾಮಯ್ಯ ಹೇಳಿದ್ದಾರೆ.
ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ
12:59 PM (IST) Jul 07
ರಾಜ್ಯದ ವಿವಿಧ ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿ ಈ ಜಿಲ್ಲೆಗಳ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಂಡು ರೈತರು ಸಂತಸಗೊಂಡಿದ್ದಾರೆ. ಪ್ರಸ್ತುತ ಎರಡನೇ ಹಂತದಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯ ಯೋಜನೆಯನ್ನು 529 ಅನುಷ್ಠಾನಗೊಳಿಸಲಾಗುವುದು. 296 ಕೆರೆಗಳನ್ನು ಮತ್ತು ತುಂಬಿಸಲು ಸರಕಾರ ಉತ್ಸುಕವಾಗಿದೆ.
ಕೆರೆಗಳ ಸುತ್ತ ಜೀವಪರಿಸರವನ್ನು ಉಳಿಸಿಕೊಂಡು, ಅವುಗಳ ಪುನರುಜ್ಜಿವನಗೊಳಿಸುವುದಕ್ಕಾಗಿ ಕೆರೆಗಳ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸಿ ಕೆರೆ ಅಭಿವೃದ್ಧಿಗೆ ಪಾಲುದಾರರನ್ನಾಗಿ ಮಾಡಲು ಅರ್ಥಪೂರ್ಣ ಕ್ರಿಯಾಯೋಜನೆ ಸಿದ್ಧಪಡಿಸಲಾಗುವುದು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ 'ಶಿಕ್ಷಣವು ವಿಮೋಚನಾ ಶಕ್ತಿಯಾಗಿದೆ. ಮತ್ತು ನಮ್ಮ ಕಾಲದಲ್ಲಿ ಜನತಂತ್ರವನ್ನು ಸ್ಥಾಪಿಸುವ ಶಕ್ತಿಯೂ ಆಗಿದೆ; ಶಿಕ್ಷಣವು ಜಾತಿ ಮತ್ತು ವರ್ಗದ ನಿರ್ಬಂಧಗಳನ್ನು ತೊಲಗಿಸಿ, ಹುಟ್ಟಿನಿಂದ ಅಥವಾ ಇನ್ನಾವುದೇ ಪರಿಸ್ಥಿತಿಯಿಂದ ಉದ್ಭವಿಸಿದ ಅಸಮಾನತೆಗಳನ್ನು ನಿವಾರಿಸುತ್ತದೆ'.
ಶ್ರೀಮತಿ ಇಂದಿರಾ ಗಾಂಧಿ 86. ಶಾಲಾ ಶಿಕ್ಷಣ ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಮಕ್ಕಳ ಶಾರೀರಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ, ಜ್ಞಾನ ಮತ್ತು ಮನೋವಿಕಾಸಕ್ಕೆ ಪೂರಕವಾಗಿರುವಂತೆ ಯೋಜನೆ ರೂಪಿಸಲು ಚಿಂತನೆ.
12:57 PM (IST) Jul 07
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನಲ್ಲಿ 3,24,478 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ, ಗ್ಯಾರಂಟಿ ಯೋಜನೆಗಳ ಜಾರಿಗೆ ಹೆಚ್ಚಿನ ಅನುದಾನ ಬೇಕಿದ್ದರಿಂದ ಅಬಕಾರಿ ಸುಂಕವನ್ನು ಶೇ.20 ಹೆಚ್ಚಳ ಮಾಡುವ ಮೂಲಕ ಮದ್ಯದ ದರವನ್ನು ಹೆಚ್ಚಳ ಮಾಡಿದ್ದಾರೆ.
ಎಷ್ಟು ಹೆಚ್ಚಳ?
12:55 PM (IST) Jul 07
ಹಿಂದಿನ ಸರ್ಕಾರದ ಹಲವು ಯೋಜನೆಗಳಿಗೆ ಕೋಕ್. ವಿದ್ಯಾಸಿರಿ, ವಿವೇಕ ಯೋಜನೆ ಪ್ರಸ್ತಾಪ ಇಲ್ಲ.
12:53 PM (IST) Jul 07
ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧ ಸಾವುಗಳನ್ನು ತಡೆಗಟ್ಟಲು ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್ ಅಥವಾ Automated External Defibrillator ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು ಎಂದು ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಏನಿದು ಯೋಜನೆ?
12:51 PM (IST) Jul 07
ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳನ್ನು ನಿರ್ಮಿಸಲು ಸರಕಾರ ಚಿಂತಿಸಿದೆ,
ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್ ಮಾಡಲು ಕ್ರಮ ವಹಿಸಲಾಗುವುದು.
ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು.
ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು.
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು “ವಿದ್ಯಾರ್ಥಿಗಳಿಗಾಗಿ ತೋಟಗಾರಿಕೆ ಯೋಜನೆಯನ್ನು ಜಾರಿಗೊಳಿಸಲಾಗುವುದು.
12:46 PM (IST) Jul 07
ಬೆಂಗಳೂರಿಗರಿಗೆ ಟೈಮಿಗೆ ಸರಿಯಾಗಿ ಆಹಾರ ಒದಗಿಸುವಲ್ಲಿ ಶ್ರಮಿಸುತ್ತಿರುವ ಸ್ವಿಗ್ಗಿ ಹಾಗೂ ಜೊಮ್ಯಾಟೋ ಡೆಲಿವರಿ ಹುಡುಗರು ತಮ್ಮ ಜೀವ ಕೈಯಲ್ಲಿ ಹಿಡಿದುಕೊಂಡು ಗಾಡಿ ಓಡಿಸುತ್ತಾರೆ. ಇವರ ಸುರಕ್ಷತಯೆನ್ನು ಗಮನದಲ್ಲಿಟ್ಟುಕೊಂಡು, ಇವರಿಗೆ 2 ಲಕ್ಷ ರೂ ಅಪಘಾತ ವಿಮಾ ಸೌಲಭ್ಯ ಒದಗಿಸಲು ಸಿದ್ದರಾಮಯ್ಯ ಸರಕಾರ ನಿರ್ಧರಿಸಿದೆ.
12:45 PM (IST) Jul 07
ಬಜೆಟ್‌ನಲ್ಲಿ ಕೇಂದ್ರದ ಮೇಲೆ ಬೇಸರ ಹೊರಹಾಕಿದ ಸಿದ್ದರಾಮಯ್ಯ. 15ನೇ ಹಣಕಾಸು ಆಯೋಗದ ಶಿಫಾರಸುಇದ್ದರೂ ಹೆಚ್ಚು ಅನುದಾನ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ 2022 ಜುಲೈ ನಿಂದ ಸ್ಥಗಿತವಾಗಿದೆ. ಇದರಿಂದ 2023-24ನೇ ಸಾಲಿನಲ್ಲಿ 26954 ಕೋಟಿ ರೂ ರಾಜ್ಯಕ್ಕೆ ನಷ್ಟವಾಗಿದೆ, ಎಂಬ ಮಾಹಿತಿ ನೀಡಿದ್ದಾರೆ.
12:37 PM (IST) Jul 07
ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಸರಕಾರ, ಇದಕ್ಕೆ ಪೂರಕವಾಗಿ ಕೃಷಿ, ಗ್ರಾಮೀಣಾಭಿವೃದ್ಧಿ, ನೀರಾವರಿಗೆ ಬಜೆಟ್ ನ ಶೇ.15ರಷ್ಟು ಮೀಸಲಿಟ್ಟಿದೆ. ದಲಿತ ಮತಗಳ ಮೇಲೆ ಕಣ್ಣಿಟ್ಟಿರುವ ಸರ್ಕಾರ ಸಮಾಜ ಕಲ್ಯಾಣಕ್ಕೆ ಶೇ.13ರಷ್ಟು ಅನುದಾನ ಮೀಸಲಿಟ್ಟಿದೆ. ಆರ್ಥಿಕ ಶಿಸ್ತು ತರಲು ಕೊಂಚ ಪ್ರಯತ್ನಿಸಲಾಗುತ್ತಿದ್ದು, ಸಾಲ ಮರುಪಾವತಿಗಾಗಿ ಶೇ.18ರಷ್ಟು ಅನುದಾನ ಮೀಸಲಿಡಲಾಗಿದೆ.
12:31 PM (IST) Jul 07
ವಿದ್ಯಾಸಿರಿ ಯೋಜನೆ - ಹಾಸ್ಟೆಲ್ ದೊರೆಯದ ವಿದ್ಯಾರ್ಥಿಗಳಿಗೆ ವಾರ್ಷಿಕ 15 ಸಾವಿರ ಕೊಡುವ ಯೋಜನೆ ಮುಂದುವರಿಕೆ -3.6 ಲಕ್ಷ ವಿದ್ಯಾರ್ಥಿಗಳಿಗೆ 4.32 ಕೋಟಿ ನೆರವು.
ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಕರಿಗೆ ಶೇ.50ರಷ್ಟು ಸಾಲ. ಗರಿಷ್ಠ ಮೂರು ಲಕ್ಷದವರೆಗೂ ಸಹಾಯಧನ ನೀಡುವ ಸ್ವಾವಲಂಬಿ ಸಾರಥಿ ಯೋಜನೆ ಜಾರಿ.
ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕದ ದರಗಳನ್ನು ಹಾಲಿ ಇರುವ ದರಗಳ ಮೇಲೆ ಶೇ.20ರಷ್ಟು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ...
ಹಾಗೆಯೇ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175 ರಿಂದ ಶೇ.185ಕ್ಕೆ ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ.
ಅಬಕಾರಿ ಸುಂಕದ ದರಗಳ ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರವು ನೆರೆ ರಾಜ್ಯಗಳಿಗಿಂತ ಕಡಿಮೆ ಇರುತ್ತದೆ....
12:27 PM (IST) Jul 07
ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೇಂದ್ರ ಸಾಂಖ್ಯಿಕ ಕಛೇರಿಯು ಬಿಡುಗಡೆ ಮಾಡಿರುವ ಮುಂಗಡ ಅಂದಾಜುಗಳ ಪ್ರಕಾರ ರಾಜ್ಯದ ಜಿ.ಎಸ್.ಡಿ.ಪಿ ಯು 2022-23ರಲ್ಲಿ ಶೇ. 7.9 ರಷ್ಟು ಬೆಳವಣಿಗೆ ದಾಖಲಿಸಿದೆ. 2021-22 ರಲ್ಲಿ ರಾಜ್ಯದ GSDP. ದಾಖಲಾಗಿತ್ತು. 2022-23ರ ಬೆಳವಣಿಗೆಯು ಶೇ.11 ರಷ್ಟು ವಲಯವಾರು ಬೆಳವಣಿಗೆಯನ್ನು ಗಮನಿಸಿದರೆ, ಕೃಷಿ, ಕೈಗಾರಿಕೆ ಮತ್ತು ಸೇವಾ ವಲಯಗಳಲ್ಲಿನ ಬೆಳವಣಿಗೆಯು ಶೇ. 5.5, 5.1 ಮತ್ತು 9.2 ರಷ್ಟು ಬೆಳವಣಿಗೆ ದಾಖಲಿಸಿರುತ್ತದೆ.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅಂದರೆ, 2013-14 ರಿಂದ 2017-18ರವರೆಗೆ ಕೈಗಾರಿಕಾ ವಲಯದಲ್ಲಿ ಶೇ. 8.70 ರಷ್ಟು ಬೆಳವಣಿಗೆ (CAGR) ಹಾಗೂ ಸೇವಾ ವಲಯದಲ್ಲಿ ಶೇ. 9.69 ರಷ್ಟು ಬೆಳವಣಿಗೆ (CAGR) ದಾಖಲಾಗಿರುತ್ತದೆ.
12:25 PM (IST) Jul 07
ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯದ ಜನತೆ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದೆ. ಕೋವಿಡ್ 19 ರಿಂದಾಗಿ ಹಾಗೂ ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಸಂವೇದನಾರಹಿತ ಕಾರ್ಯನಿರ್ವಹಣೆಯ ಪರಿಣಾಮ, ಒಪ್ಪತ್ತಿನ ಊಟಕ್ಕೂ ಸಂಚಕಾರ ಒದಗಿದ್ದು ಸುಳ್ಳಲ್ಲ. ದುಡಿಯುವ ಕೈಗಳಿಗೆ ಕೆಲಸ ತಪ್ಪಿದ್ದೂ ನೋಡಿದ್ದೇವೆ. ಉದ್ಯಮಗಳು ಮುಚ್ಚಿದ್ದರಿಂದ ಸಾವಿರಾರು ಕಾರ್ಮಿಕರು ನೌಕರಿ ಕಳೆದುಕೊಂಡು ಬೀದಿ ಪಾಲಾಗಬೇಕಾಯಿತು. ತಮ್ಮ ಅರ್ಹತೆಗಿಂತ ಕಡಿಮೆ ಮಟ್ಟದ ನೌಕರಿ ನೆಚ್ಚಿಕೊಂಡವರು ಅದೆಷ್ಟೋ? ಒಂದೆಡೆ ಸಾಂಕ್ರಾಮಿಕದ ಭೀತಿ; ಮತ್ತೊಂದೆಡೆ ಹೊಟ್ಟೆಪಾಡಿನ ಚಿಂತೆ, ಸಂಕಷ್ಟಗಳ ಸರಮಾಲೆಗೆ ಬೆಲೆ ಏರಿಕೆಯ ಸೇರ್ಪಡೆಯಿಂದ, ಬಡಜನರ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಸಾಮಾನ್ಯ ಮೂರಾಬಟ್ಟೆಯಾಗಿ ಸಂಕಟ ಕಂಡಿದ್ದೇವೆ.
ನಮ್ಮ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲವನ್ನು ನಮ್ಮ ಸರ್ಕಾರವು ಜನರಿಗೆ ಹೆಚ್ಚಿನ ಹೊರೆಯಾಗದಂತೆ ಹೊಂದಿಸಲಿದೆ. ಈ ನಿಟ್ಟಿನಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟುವುದರ ಜೊತೆಗೆ ಸರ್ಕಾರದ ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ ವಹಿಸಲಾಗುವುದು.
12:22 PM (IST) Jul 07
ಗ್ಯಾರಂಟಿ ಯೋಜನೆಗಾಗಿ ಸರಕಾರ ರಾಜಸ್ವ ಹೆಚ್ಚಿಸುವ ದಾರಿ ಹುಡುಕುವುದು ಅನಿವಾರ್ಯವಾಗಿದ್ದು, ನಿರೀಕ್ಷೆಯಂತೆ ಅಬಕಾರಿ ಶುಲ್ಕ ಹೆಚ್ಚಿಸಲು ನಿರ್ಧರಿಸಲಾಗಿದೆ. ಇದರಿಂದ ಆದಾಯ ಹೆಚ್ಚಿಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ.
12:21 PM (IST) Jul 07
ಮೂರು ಪ್ರಮುಖ ಇಲಾಖೆಯಿಂದ ರಾಜಸ್ವ ಗುರಿ
ವಾಣಿಜ್ಯ ತೆರಿಗೆ ಇಲಾಖೆ - 1,01,000 ಲಕ್ಷ ಕೋಟಿ
ಅಬಕಾರಿ ರಾಜಸ್ವ - 36000 ಕೋಟಿ
ನೋಂದಣಿ ಮತ್ತು ಮುದ್ರಾಂಕ - 25,000 ಕೋಟಿ
ಒಟ್ಟು - 1.,62,000 ಕೋಟಿ ರಾಜಸ್ವ ಗುರಿ ಹೊಂದಿರುವ ಸರ್ಕಾರ
12:18 PM (IST) Jul 07
ನಾನು ನನ್ನ ಆಯವ್ಯಯ ಪ್ರಸ್ತಾವನೆ ಪ್ರಾರಂಭಿಸುವ ಮೊದಲು ನಮ್ಮ ಐದು ಗ್ಯಾರಂಟಿಗಳ ಬಗ್ಗೆ ಟೀಕೆ ಟಿಪ್ಪಣಿ ಮಾಡುವುದು, ಇಲ್ಲ ಸಲ್ಲದ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು. ಜನರಲ್ಲಿ ಗೊಂದಲ ಮೂಡಿಸುವುದು, ಇಂತಹ ಕೆಲಸ ಮಾಡುತ್ತಿರುವ ವಿರೋಧ ಪಕ್ಷದವರಿಗೆ ಒಂದೇ ಬಯಸುತ್ತೇನೆ. ಗ್ಯಾರಂಟಿ ಒಂದು ಮಾತು ಹೇಳಲು ಯೋಜನೆಗಳನ್ನು ಕೇವಲ ಬಿಟ್ಟಿ ಕೊಡುಗೆಗಳೆಂದು ಆಡಿಕೊಳ್ಳುವವರು ಒಮ್ಮೆ ನಮ್ಮ ಬಡವರ, ಶ್ರಮಿಕರ ಬದುಕನ್ನು ಗಮನಿಸಬೇಕಾಗಿದೆ. ತಾವು ವಿರೋಧ ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸಿ; ಆದರೆ ಶ್ರೀಸಾಮಾನ್ಯರ ವಿವೇಚನೆಗೆ ಅಪಮಾನ ಮಾಡಬೇಡಿ ಎಂದು ವಿನಂತಿ ಮಾಡಿಕೊಳ್ಳುತ್ತೇನೆ. ಜನರು ಬುದ್ಧಿವಂತರು; ಜನರು ಪ್ರಜ್ಞಾವಂತರು. ಇಂತಹ ತರ್ಕ ರಹಿತ ಆಲೋಚನೆಗಳನ್ನು ನಂಬುವುದಿಲ್ಲ. ವಾಸ್ತವವೆಂದರೆ, ಜನ ನಿಮ್ಮಿಂದ ಬೇಸತ್ತು ಇಷ್ಟೊಂದು ಭಾರಿ ಬಹುಮತದಿಂದ ನಮ್ಮನ್ನು ಆರಿಸಿ ವಿಧಾನ ಸೌಧಕ್ಕೆ ಕಳುಹಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನತೆಗೆ 5 ಗ್ಯಾರಂಟಿಗಳ ಭರವಸೆ ನೀಡಿದೆ. ಅಧಿಕಾರಕ್ಕೆ ಬಂದ ಕೂಡಲೇ ನಮ್ಮ ಸರ್ಕಾರ ಈ ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿತು. ಈಗಾಗಲೇ ನಾವು ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಮೂಲಕ ಅವರ ಕನಸುಗಳಿಗೆ ರೆಕ್ಕೆ ಮೂಡಿಸುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಈಗಾಗಲೇ ಗೃಹಜ್ಯೋತಿ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ.
12:15 PM (IST) Jul 07
ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಶೀಘ್ರವೇ ಪ್ರಾರಂಭಿಸಲಾಗುವುದು. ಗೃಹ ಜ್ಯೋತಿ ಯೋಜನೆಯನ್ನು ಜುಲೈ ತಿಂಗಳಿನಿಂದ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ ತಿಂಗಳಿನಲ್ಲಿ ಜಾರಿಗೆ ತರುತ್ತೇವೆ. ಯುವನಿಧಿ ಯೋಜನೆಯು 2023ರಲ್ಲಿ ಪದವಿ ಪಡೆದ ಯುವಜನರಿಗಾಗಿ ಜಾರಿಗೆ ಬರಲಿದೆ. ಅನ್ನಭಾಗ್ಯದಡಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರದಿಂದ ಒದಗಿಸುತ್ತಿರುವ ಐದು ಕೆ.ಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರದಿಂದ ಒದಗಿಸುವ ಹೆಚ್ಚುವರಿ ಐದು ಕೆ.ಜಿ. ಸೇರಿದಂತೆ ಒಟ್ಟಾರೆ 10 ಕೆ.ಜಿ ಆಹಾರ ಧಾನ್ಯವನ್ನು ಪ್ರತಿ ತಿಂಗಳು ವಿತರಿಸಲು ನಾವು ಬದ್ಧರಾಗಿದ್ದೇವೆ.
- ನಾವು ಗ್ಯಾರಂಟಿ ಯೋಜನೆಗಳನ್ನು ಯಾಕೆ ಘೋಷಿಸಿದ್ದೇವೆ? ಹಾಗೂ ಯಾಕೆ ಜಾರಿಗೊಳಿಸುತ್ತಿದ್ದೇವೆ? ಅವು ಬಿಟ್ಟಿ ಕೊಡುಗೆಗಳಲ್ಲ. ಈ ಸಂದರ್ಭದಲ್ಲಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆಯನ್ನು ಸ್ಮರಿಸುತ್ತೇನೆ.
- 'ಭದ್ರತೆಯ ಖಾತರಿ ಕೊಡದ ಆರ್ಥಿಕ ಯೋಜನೆಯಿಂದ ಯಾವ ಉಪಯೋಗವೂ ಇಲ್ಲ. ಯೋಜನೆ ಒಪ್ಪಿತವಾಗಬೇಕಾದರೆ, ಅದು ಮಿತವ್ಯಯದ್ದು ಮತ್ತು ಸುಭದ್ರವು ಆಗಿರಬೇಕು. ಮಿತವ್ಯಯದ್ದು ಆಗಿರದಿದ್ದರೆ, ಬಹುಶ: ನಡೆದೀತು, ಆದರೆ, ಸುಭದ್ರವಾಗಿಲ್ಲದಿದ್ದರೆ, ಖಂಡಿತ ನಡೆಯುವುದಿಲ್ಲ .
ಮುಕ್ತ ಮಾರುಕಟ್ಟೆಯ ಈ ಯುಗದಲ್ಲಿ ಬಂಡವಾಳ ಹೂಡಿಕೆಯನ್ನು ವ್ಯಾಪಕವಾಗಿ ಆಕರ್ಷಿಸುವುದು, ಉದ್ಯೋಗಸಹಿತ ಬೆಳವಣಿಗೆಯನ್ನು ಸಾಕಾರಗೊಳಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದದ್ದು
11:47 AM (IST) Jul 07
ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ, ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ವರ್ಷವೇ ಐದು ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಪ್ರತಿಪಕ್ಷಗಳು ಗ್ಯಾರಂಟಿ ಯೋಜನೆ ಪ್ರಚಾರ ಮಾಡುತ್ತಿದ್ದಾರೆ. ನಮ್ ಕೈಯಲ್ಲಂತೂ ಮಾಡೋಕೆ ಆಗಲಿಲ್ಲ. ಇವರಾದ್ರೂ ಮಾಡ್ತಿದ್ದಾರೆ ಅಂತ ಖುಷಿಯಾಗಿದಾರೆ ಎಂದ ಡಿಕೆಶಿ. ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣದ ಶಕ್ತಿ, ಗರಿಷ್ಠ 200 ಯೂನಿಟ್ ವಿದ್ಯುತ್ ಉಚಿತ ವಿದ್ಯುತ್ ಯೋಜನೆಯಾದ ಗೃಹ ಜ್ಯೋತಿ, ಮನೆಯೊಡತಿಗೆ ಪ್ರತಿ ತಿಂಗಳು 2000 ರೂ. ನೆರವು ನೀಡುವ ಗೃಹಲಕ್ಷ್ಮಿ ಮತ್ತು ಪ್ರತಿ ತಿಂಗಳು ಡಿಪ್ರೋಮಾ ಹಾಗೂ ಪದವಿ ಪಡೆದ ವಿದ್ಯಾರ್ಥಿಗಳಿಗೆ 1500 ರೂ. ನೀಡುವ ಯುವನಿಧಿ ಯೋಜನೆ ಘೋಷಿಸಿದ್ದು, ಇವುಗಲಲ್ಲಿ ಗೃಹಲಕ್ಷ್ಮಿ ಮತ್ತು ಯುವನಿಧಿಯನ್ನು ಜಾರಿಗೊಳಿಸಬೇಕಾಗಿದೆ.
11:22 AM (IST) Jul 07
ಇನ್ನೇನು ಕೆಲವೇ ನಿಮಿಷಗಳಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಸರಕಾರದ ಬಜೆಟ್ ಮಂಡಿಸಲಿದ್ದು, ಈಗಾಗಲೇ ಕ್ಯಾಬಿನೆಟ್ ಅಪ್ರೂವಲ್ ಸಿಕ್ಕಿದೆ. ಅಧಿಕಾರಗಳು ಬಜೆಟ್ ಪ್ರತಿಗಳನ್ನು ಮುಖ್ಯಮಂತ್ರಿಗೆ ಹಸ್ತಾಂತರಿಸಿದ್ದು, ತುಸು ವಿಭಿನ್ನವಾದ ಸೂಟ್‌ಕೇಸಿನಲ್ಲಿ ಬಜೆಟ್ ಪ್ರತಿಗಳು ಭದ್ರವಾಗಿವೆ.
11:13 AM (IST) Jul 07
ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ,
ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ. ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ.
10:46 AM (IST) Jul 07
ಹೊಸ ಸರ್ಕಾರದ ಬಗ್ಗೆ ಜನರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇದ್ದು, ಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿ ದಾಟುವ ನಿರೀಕ್ಷೆ ಇದೆ. ಮಧ್ಯಾಹ್ನ 12 ಗಂಟೆಗೆ ಸಿಎಂ ಬಜೆಟ್ ಮಂಡಿಸಲಿದ್ದಾರೆ. ಸಿಎಂ ಕೆಲವು ತೆರಿಗೆಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ. ಜೊತೆಗೆ ಹಲವು ಇಲಾಖೆಗಳ ಅನುದಾನವನ್ನು ಕಡಿತ ಮಾಡಬಹುದು. ಶಾಸಕರ ಅಭಿವೃದ್ಧಿಗೆ ಹೆಚ್ಚಿನ ನೆರವು ಸಿಗುವುದು ಡೌಟು. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲು ಸಿಎಂ ಮುಂದಾಗಲಿದ್ದಾರೆ. ಒಟ್ಟಿನಲ್ಲಿ ಸಿಎಂ ಈ ಬಾರಿ ದಾಖಲೆಯ ಬಜೆಟ್ ಮಂಡಿಸಲಿದ್ದಾರೆ.
10:32 AM (IST) Jul 07
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಜೆಟ್‌ಗೂ ಮೊದಲು ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯುತ್ತಿದೆ.
10:10 AM (IST) Jul 07
ರಾಜ್ಯ ಸರ್ಕಾರದ ಬಜೆಟ್ ಮಂಡಿಸುತ್ತಿದ್ದು, ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗಿ 7ನೇ ಬಾರಿಗೆ ಬಜೆಟ್ (Budget) ಮಂಡನೆ ಮಾಡುತ್ತಿದ್ದಾರೆ. ಇದರ ನಡುವೆ ಬಿಜೆಪಿ (BJP) ಹೈಕಮಾಂಡ್‌ನ ನಿರ್ಧಾರ ಸದನದ ಗೌರವಕ್ಕೆ ಧಕ್ಕೆ ತರುವಂತಾಗಿದ್ದು, ಇದೇ ಮೊದಲ ಬಾರಿಗೆ ವಿಪಕ್ಷ ನಾಯಕ ಇಲ್ಲದೇ ಬಜೆಟ್ ಮಂಡನೆಯಾಗಲಿದೆ. ಎರಡು ದಿನಗಳ ಹಿಂದೆಯೇ ವೀಕ್ಷಕರು ರಾಜ್ಯಕ್ಕೆ ಬಂದು ಹೋದರೂ, ಇನ್ನೂ ಪ್ರತಿಪಕ್ಷ ನಾಯಕನ (Opposition Leader) ಆಯ್ಕೆ ಮಾತ್ರ ಆಗಿಲ್ಲ. ಯಡಿಯೂರಪ್ಪ ಅವರು ಸಹ ಈ ವಿಷಯವಾಗಿ ದೆಹಲಿಗೆ ಹೋಗಿದ್ದರು. ಒಟ್ಟಿನಲ್ಲಿ ಈ ರೇಸ್‌ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಇದ್ದಾರೆ.
10:03 AM (IST) Jul 07
ವಿಧಾನಸೌಧಕ್ಕೆ ಬಜೆಟ್ ಪ್ರತಿಗಳ ಆಗಮನವಾಗಿದ್ದು, ವಿಧಾನಸೌಧದ ಸಿಬ್ಬಂದಿ ಬಕೆಟ್ ಬಂಡಲ್‌ಗಳನ್ನು ಹೊತ್ತು ತಂದಿದ್ದಾರೆ. ಈ ವೇಳೆ ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ, ವಿಪಕ್ಷಗಳ ಸಲಹೆ ಸ್ವೀಕರಿಸುತ್ತೇವೆ ಎಂದು ಕಾಂಗ್ರೆಸ್ ಟ್ರಬಲ್ ಶೂಟರ್ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
09:49 AM (IST) Jul 07
ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಗ್ಯಾರಂಟಿ ಜಾರಿಗೆ ಮುಂದಾಗಿದ್ದು, ಇದಕ್ಕೆ ಎಲ್ಲಿಂದ ಅನುದಾನ ಸರಿದೂಗಿಸುತ್ತಾರೆಂಬುವುದೇ ಸಿಎಂ ಮುಂದಿರುವ ದೊಡ್ಡ ಸವಾಲು.
09:30 AM (IST) Jul 07
ಫೆಬ್ರವರಿಯಲ್ಲಿ ಬಜೆಟ್ ಮಂಡಿಸಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜುಲೈ ಅಂತ್ಯದವರಿಗೆ ಅಗತ್ಯವಾದ ವೆಚ್ಚಕ್ಕೆ ಲೇಖಾನುದಾನ ಒಪ್ಪಿಗೆ ಪಡೆದಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಆರ್ಥಿಕ ವರ್ಷದ ಉಳಿದ ಎಂಟು ತಿಂಗಳಿಗೆ ಅಗತ್ಯವಿರುವಂತೆ ಬಜೆಟ್ ಮಂಡಿಸಲಿದ್ದಾರೆ. ಸುಮಾರ್ 3.30 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಸಲಿರುವ ಸಿದ್ದರಾಮಯ್ಯ ಅವರು ತಮ್ಮದೇ ದಾಖಲೆ ಮುರಿಯಲಿದ್ದು, 14ನೇ ಬಜೆಟ್ ಮಂಡಿಸುತ್ತಿದ್ದಾರೆ. ಉಳ್ಳವರು ಮತ್ತು ಇಲ್ಲದವರ ನಡುವೆ ಅಂತರ ಕಡಮೆ ಮಾಡುವ ಉದ್ದೇಶದಿಂದ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು, ಅದರ ಜಾರಿಗೆ ಯತ್ನಿಸುತ್ತಿದ್ದಾರೆ. ಇದ ಸಂದರ್ಭದಲ್ಲಿ ಈ ಬಜೆಟ್ ಇಡೀ ದೇಶಕ್ಕೆ ಮಾದರಿಯಾಗಲಿದೆ ಎಂದು ಕಾಂಗ್ರೆಸ್ ಹೇಳಿ ಕೊಳ್ಳುತ್ತಿದೆ. ಸಿದ್ದರಾಮಯ್ಯ ಅವರು ಬಜೆಟ್ ಹೇಗಿರಲಿದೆ ಎಂಬ ಕುತೂಹಲ ಎಲ್ಲರಿಗೂ ಇದೆ.