Karnataka Budget 2023: ವಸತಿ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ಬೊಮ್ಮಾಯಿ ಬಜೆಟ್

By Gowthami K  |  First Published Feb 17, 2023, 9:45 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್  ಮಂಡಿಸಿದ್ದು, ಈ ಬಾರಿಯ ಬಜೆಟ್ ನಲ್ಲಿ ವಸತಿ ಕ್ಷೇತ್ರಕ್ಕೆ ಕೂಡ ವಿಶೇಷ ಸವಲತ್ತು ನೀಡಲಾಗಿದೆ. ಬಡವರಿಗೆ ಸೂರು ಕಟ್ಟಿ ಕೊಡುವ ನಿಟ್ಟಿನಲ್ಲಿ  ಪ್ರಸಕ್ತ ವರ್ಷದಲ್ಲಿ 5 ಲಕ್ಷ ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ.


ಬೆಂಗಳೂರು (ಫೆ.17): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್  ಮಂಡಿಸಿದ್ದು, ಈ ಬಾರಿಯ ಬಜೆಟ್ ನಲ್ಲಿ ವಸತಿ ಕ್ಷೇತ್ರಕ್ಕೆ ಕೂಡ ವಿಶೇಷ ಸವಲತ್ತು ನೀಡಲಾಗಿದೆ. ಬಡವರಿಗೆ ಸೂರು ಕಟ್ಟಿ ಕೊಡುವ ನಿಟ್ಟಿನಲ್ಲಿ  ಪ್ರಸಕ್ತ ವರ್ಷದಲ್ಲಿ 5 ಲಕ್ಷ ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ 5,000 ಕೋಟಿ ರೂಗಳನ್ನು ಮೀಸಲಿಡಲಾಗಿದೆ. ಬೆಂಗಳೂರಿನಲ್ಲಿ ಪ್ರಸಕ್ತ ವರ್ಷದಲ್ಲಿ 20,000 ಮನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಫಲಾನುಭವಿಗಳಿಗೆ ಹಸ್ತಾಂತರಿಸುವ ಗುರಿ ಹೊಂದಲಾಗಿದೆ. ಫಲಾನುಭವಿಗಳು ಆನ್‌ಲೈನ್ ಮೂಲಕ ತಮ್ಮ ಮನೆಯನ್ನು ಆಯ್ಕೆ ಮಾಡಿಕೊಳ್ಳುವ ಆಯ್ಕೆಯನ್ನು ನೀಡಲಾಗಿದೆ. 

ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಎಲ್ಲಾ ವಸತಿ ರಹಿತರಿಗೆ ವಸತಿ ಸೌಲಭ್ಯವನ್ನು ಕಲ್ಪಿಸುವುವ ಗುರಿಯನ್ನು ಈ ಸರಕಾರ ಇಟ್ಟುಕೊಂಡಿದೆ. ಇದಕ್ಕಾಗಿ 500 ಕೋಟಿ ರೂಗಳನ್ನು ಮೀಸಲಿಡಲಾಗಿದೆ. 

Latest Videos

undefined

ಅತಿವೃಷ್ಠಿಯಿಂದ ಸಂಪೂರ್ಣ ಹಾಳಾಗಿರುವ ಮನೆಗಳ ಪುನರ್ ನಿರ್ಮಾಣಕ್ಕೆ ನೀಡುತ್ತಿರುವ ಸೌಲಭ್ಯವನ್ನು 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಕಳೆದ 4 ವರ್ಷಗಳಲ್ಲಿ 3,01,884 ಮನೆಗಳ ಪುನರ್ ನಿರ್ಮಾಣಕ್ಕೆ 2,627 ಕೋಟಿ ರೂ ಗಳನ್ನು ಬಿಡುಗಡೆ ಮಾಡಲಾಗಿದೆ.

ಸರಕಾರದ ಅಧೀನದಲ್ಲಿರುವ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ 1.14 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗಿದ್ದು, ವರ್ಷಾಂತ್ಯದಲ್ಲಿ ಎಲ್ಲಾ 3.36 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಗುರಿ ಹೊಂದಲಾಗಿದೆ.

ಮೆಗಾ ಜವಳಿ ಪಾರ್ಕ್, ಹೊಸ ವಿವಿ ಸೇರಿ ಹಲವು ಯೋಜನೆ, ಬಜೆಟ್ ಬಗ್ಗೆ ಚಿಕ್ಕಮಗಳೂರು ಜನರಿಂದ

ಗೃಹಮಂಡಳಿ ವತಿಯಿಂದ 30 ಸಾವಿರ ಸ್ವತ್ತುಗಳನ್ನು ಅಭಿವೃದ್ಧಿ ಪಡಿಸಿ, ಹಂಚಿಕೆ ಮಾಡಲು ಕ್ರಮವಹಿಸುವ ಬಗ್ಗೆ ಬಜೆಟ್ ನಲ್ಲಿ ಹೇಳಲಾಗಿದೆ. ನಮ್ಮ ನೆಲೆ ಯೋಜನೆಯಡಿಯಲ್ಲಿ ಗೃಹಮಂಡಳಿಯಿಂದ ಅಭಿವೃದ್ಧಿಪಡಿಸುವ ನಿವೇಶನಗಳ ಪೈಕಿ 10,000 ನಿವೇಶನಗಳನ್ನು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಹಂಚಿಕೆ ಮಾಡಲಾಗುವುದು.

KARNATAKA BUDGET 2023: ತವರು ಜಿಲ್ಲೆ ಹಾವೇರಿಗೆ ಬಂಪರ್ ಕೊಡುಗೆ ಕೊಟ್ಟ ಸಿಎಂ ಬೊಮ್ಮಾಯಿ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 3.8 ಲಕ್ಷ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ 543 ಕೋಟಿ ರೂ. ಸಹಾಯಧನ, 2 ಲಕ್ಷ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ, 16,400 ಮಕ್ಕಳಿಗೆ ಕಲಿಕಾ ಉಪಕರಣಗಳ ವಿತರಣೆ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬೆಳಗಾವಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ತಾತ್ಕಲಿಕ ವಸತಿ ಗೃಹ ಸೇರಿದಂತೆ ವಿವಿಧ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳಡಿ 23 ಲಕ್ಷ ಫಲಾನುಭವಿಗಳು ಮತ್ತು ಅವಲಂಭಿತರಿಗೆ ಒಟ್ಟು 1,785 ಕೋಟಿ ರೂ. ಗಳ ನೆರವನ್ನು ನೀಡಲಾಗಿದೆ.

click me!