ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಅಲ್ಪಸಂಖ್ಯಾತ ಸಮುದಾಯಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.
ಬೆಂಗಳೂರು (ಫೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಅಲ್ಪಸಂಖ್ಯಾತ ಸಮುದಾಯಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯ ಅಭಿವೃದ್ಧಿಗಾಗಿ ಘೋಷಣೆ ಮಾಡಿರುವ ಪ್ರಮುಖ ಹೈಲೈಟ್ಸ್ ಇಲ್ಲಿದೆ.
ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ 393 ಕೋಟಿ ರೂ ಅನುದಾನ ಮೀಸಲು
50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭ
100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭ
100 ಮೌಲಾನಾ ಆಜಾದ್ ಶಾಲೆ ಆರಂಭ
ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭ
ಅಲ್ಪಸಂಖ್ಯಾತ ಉದ್ಯಮಶೀಲರು ಕೈಗಾರಿಕೆ ಸ್ಥಾಪನೆಗೆ 10 ಕೋಟಿವರೆಗೂ ಸಾಲ (ಶೇ.6ರಷ್ಟು ಬಡ್ಡಿ ಸಹಾಯಧನ)
ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ ಅನುದಾನ ಮೀಸಲು
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.