ಕರ್ನಾಟಕ ಬಜೆಟ್‌ನಲ್ಲಿ ಬೆಂಗಳೂರು ಸುರಂಗ ಮಾರ್ಗ, ಮೆಟ್ರೋ ಸೇವೆ, ಬಿಎಂಟಿಸಿ ಬಸ್ ಸೇರಿ ಹತ್ತು ಹಲವು ಕೊಡುಗೆಗಳನ್ನು ಬೆಂಗಳೂರಿನ ಅಭಿವೃದ್ಧಿಗಾಗಿ ಘೋಷಣೆ ಮಾಡಲಾಗಿದೆ. ಪ್ರಮುಖ ಯೋಜನೆಗಳ ಪಟ್ಟಿ ಇಲ್ಲಿದೆ .
ಬೆಂಗಳೂರು (ಫೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಬೆಂಗಳೂರಿಗೆ ಭರ್ಜರಿ ಕೊಡಗೆಗಳನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರು ಸುರಂಗ ಮಾರ್ಗ, ಮೆಟ್ರೋ ಸೇವೆ, ಬಿಎಂಟಿಸಿ ಬಸ್ ಸೇರಿ ಹತ್ತು ಹಲವು ಕೊಡುಗೆಗಳನ್ನು ಬೆಂಗಳೂರಿನ ಅಭಿವೃದ್ಧಿಗಾಗಿ ಘೋಷಣೆ ಮಾಡಲಾಗಿದೆ. ಪ್ರಮುಖ ಯೋಜನೆಗಳ ಪಟ್ಟಿ ಇಲ್ಲಿದೆ .
ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣ
2024 - 25 ನೇ ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳು ಲಭ್ಯ
ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿ
1,700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಗಳು ಡಿಸೆಂಬರ್ 2025 ರೊಳಗೆ ಪೂರ್ಣ
ಬೆಂಗಳೂರಿನಲ್ಲಿ ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧಾರ
ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ನಿರ್ಮಾಣ
ರಾಜಕಾಲುವೆ ನಾಲೆಗಳ ಬಫರ್ ವಲಯದೊಳಗೆ ನಾಲಾ ಬಫರ್ ಅನ್ನು ನಿರ್ಮಾಣ ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಾಣ
200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ಬಫರ್ ರಸ್ತೆ
ಪ್ರಸಕ್ತ ಸಾಲಿನಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿ
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ಪೆರಿಫೆರಲ್ ರಿಂಗ್ ರೋಡ್
ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ 73 ಕಿ.ಮೀ. ಉದ್ದದ ರಸ್ತೆ
27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ
ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸೈ-ಡೆಕ್ (Sky-Deck) ನಿರ್ಮಾಣ
BBMP. BMRCL BWSSB, BDA ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್ ನಿರ್ಮಾಣ
ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್-ಅರ್ಬನ್ ರೈಲು ಯೋಜನೆಗಳು ಸೇರಿ ಬಹುವಿಧ ಸಾರಿಗೆ ವ್ಯವಸ್ಥೆಗಳ ಒಗ್ಗೂಡಿಸುವಿಕೆ
ನಮ್ಮ ಮೆಟ್ರೋಗೆ 2025 ರ ವೇಳೆಗೆ 44 ಕಿಲೋಮೀಟರ್ ಅಧಿಕ ಮಾರ್ಗ ಸೇರ್ಪಡೆ. ಸರ್ಕಾಪುರ ಅಗ್ರಹಾರ ಕೋರಮಂಗಳ ಡೈರಿ ವೃತ್ತ, ಮೇಖ್ರಿ ವೃತ್ತ ಹೆಬ್ಬಾಳ ಸಂಪರ್ಕಿಸುವ ಮಾರ್ಗ
ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣವರ, ಹೀಲಲಿಗೆಯಿಂದ ರಾಜಾನಕುಂಟೆ ವರೆಗೆ 42.2 ಕಿಲೋ ಮೀಟರ್
ನಮ್ಮ ಮೆಟ್ರೋ ಹಂತ-3 ರಡಿ ಅಂದಾಜು 15,611 ಕೋಟಿ ರೂ. ವೆಚ್ಚ. ಇದಕ್ಕೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು. ಉಳಿದಿದ್ದನ್ನು ಕೇಂದ್ರ ಸರ್ಕಾರದ ಅನುಮೋದನೆ ನಿರೀಕ್ಷೆಯಲ್ಲಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.