ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್; ವಕ್ಫ್‌ಗೆ 100 ಕೋಟಿ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ!

By Suvarna News  |  First Published Feb 16, 2024, 11:23 AM IST

ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಈ ಪೈಕಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ವಕ್ಫ್ ಮಂಡಳಿಗೆ 100 ಕೋಟಿ ರೂಪಾಯಿ ಅನುದಾನ ನೀಡಿದ್ದರೆ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂಪಾಯಿ ನೀಡಲಾಗಿದೆ.
 


ಬೆಂಗಳೂರು(ಫೆ.16) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ವರ್ಷದ ಆಯವ್ಯಯ ಮಂಡನೆ ಮಾಡುತ್ತಿದೆ. ಕರ್ನಾಟಕ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳ ವ್ಯಕ್ತವಾಗಿದೆ. ಉಚಿತ ಗ್ಯಾರೆಂಟಿ ಜೊತೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿ, ಲೋಕಸಭಾ ಚುನಾವಣೆ ಸವಾಲಿನ ನಡುವೆ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್‌ನಲ್ಲಿ ನಿರೀಕ್ಷೆಯಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಲಾಗಿದ.ರಾಜ್ಯದಲ್ಲಿ ವಕ್ಫ್ ಆಸ್ತಿಗಳ ರಕ್ಷಣೆಗೆ 100 ಕೋಟಿ ಅನುದಾನ ನೀಡಿದ್ದರೆ, ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಸಿದ್ದರಾಮಯ್ಯ ಮಂಡಿಸುತ್ತಿರುವ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕೋಟಿ ಕೋಟಿ ರೂಪಾಯಿ ಅನುದಾನಗಳ ಜೊತೆಗೆ ವಸತಿ ಸಾಲೆ, ಕಡ್ಡಿಮೆ ಬಡ್ಡಿ ಸಾಲ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಈ ಬಾರಿಯ ಬಜೆಟ್‌ನಲ್ಲಿ 393 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

Tap to resize

Latest Videos

undefined

3 ಲಕ್ಷ 71 ಸಾವಿರ ಕೋಟಿ ಗಾತ್ರದ ಬಜೆಟ್‌ ಮಂಡನೆ, ಸಾಲ ಎಷ್ಟು? ಸ್ವೀಕೃತಿಗಳೆಷ್ಟು?

ಕರ್ನಾಟಕದಲ್ಲಿನ  ವಕ್ಫ್ ಆಸ್ತಿಗಳ ರಕ್ಷಣೆಗೆ 100 ಕೋಟಿ ಅನುದಾನದ ಜೊತಗೆ ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಅನುದಾನ ನೀಡಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇನ್ನು ಜೈನ ಸಮುದಾಯ ಅಭಿವೃದ್ಧಿ ಹಾಗೂ ಸಮುದಾಯದ ಬೇಡಿಕೆಗೆ 50 ಕೋಟಿ ರೂಪಾಯಿ ಮೀಸಲಿಡಲಾಗಿದೆ.

50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ರಾಜ್ಯದಲ್ಲಿ ಆರಂಭಿಸಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇನ್ನು 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭಿಸಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇದರ ಜೊತೆಗೆ ನರ್ಸಿಂಗ್ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಆರಂಭಿಸಲಾಗಿದೆ. ಈ ವಿದ್ಯಾರ್ಥಿಗಳ ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭಿಸಲು ಚಾಲನೆ ನೀಡಲಾಗಿದೆ. 

ಕೃಷಿಗಾಗಿ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ; ಮಂಡ್ಯದಲ್ಲಿ ವಿಸಿ ಫಾರಂ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ

ಕೈಗಾರಿಕೆ ಸ್ಥಾಪನೆಗೆ 10 ಕೋಟಿವರೆಗೂ ಸಾಲ ನೀಡಲಾಗುತ್ತದೆ. ಶೇಕಡಾ 6 ರಷ್ಟು ಬಡ್ಡಿ ಸಹಾಯಧನದ ಮೂಲಕ ಈ ಸಾಲ ಸೌಲಭ್ಯ ನೀಡಲಾಗುತ್ತದೆ. ಇನ್ನು ಅಲ್ಪ ಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ 10 ಕೋಟಿ ರೂಪಾಯಿ ಅನುದಾನ ನೀಡಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ.  

click me!