ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಬರೋಬ್ಬರಿ 44,422 ಕೋಟಿ ರೂ ಅನುದಾನ ಮೀಸಲಿಡಲಾಗಿದೆ.
ಬೆಂಗಳೂರು (ಫೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಬರೋಬ್ಬರಿ 44,422 ಕೋಟಿ ರೂ ಅನುದಾನ ಮೀಸಲಿಡಲಾಗಿದೆ. ಪ್ರಮುಖ ಹೈಲೈಟ್ಸ್ ಗಳ ಪಟ್ಟಿ ಇಲ್ಲಿದೆ.
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಆಯುಕ್ತಾಲಯವಾಗಿ ಉನ್ನತೀಕರಿಣ
2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನ
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನ
ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಣ
ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ
ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದಲ್ಲಿ ನಿರ್ಮಾಣವಾಗಿರುವ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ. ಮೀಸಲು
ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆ ನೀಡಲು ಕ್ರಮ
ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 Modular OT ಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
10 ಕೋಟಿ ರೂ. ವೆಚ್ಚದಲ್ಲಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಪ್ರಾರಂಭ.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ Cardiac Unit ಪ್ರಾರಂಭ
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಸಂಸ್ಥೆಗಳಲ್ಲಿ 64 Anaesthesia Workstation ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಕೆ
ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ Human Milk Bank ಘಟಕ ಇದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು, ಮೈಸೂರು ಮತ್ತು ಬಳ್ಳಾರಿಯಲ್ಲಿ ಹೊಸ ಘಟಕಗಳನ್ನು ಸ್ಥಾಪನೆ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆ ಹಚ್ಚಲು Viral Research & Diagnostic Laboratory (VRDL ಸ್ಥಾಪನೆ
ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.