ಕೃಷಿಗಾಗಿ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ; ಮಂಡ್ಯದಲ್ಲಿ ವಿಸಿ ಫಾರಂ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ

By Sathish Kumar KHFirst Published Feb 16, 2024, 10:46 AM IST
Highlights

ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಬೆಂಗಳೂರು (ಫೆ.16): ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕರ್ನಾಟಕ ಬಜೆಟ್ 2024ರ ಬಜೆಟ್ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಭರಪೂರ ಕೊಡುಗೆಯನ್ನು ನೀಡಿದ್ದಾರೆ. ವಿವಿಧ ಕೃಷಿ ಯೋಜನೆಗಳನ್ನು ಒಗ್ಗೂಡಿಸಿ ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸಿವ ನಿಟ್ಟಿನಲ್ಲಿ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ (Karnataka Raitha Samriddhi Yojana) ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗಿದೆ. 

ಕರ್ನಾಟಕ ಬಜೆಟ್ 2024 ಲೈವ್ ಅಪ್‌ಡೇಟ್ಸ್‌ : ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ 

  • ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು.
  • ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು.
  • ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.
  •  ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು.
  • ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.
  • ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು.

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ತೋ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು.

3 ಲಕ್ಷ 71 ಸಾವಿರ ಕೋಟಿ ಗಾತ್ರದ ಬಜೆಟ್‌ ಮಂಡನೆ, ಸಾಲ ಎಷ್ಟು? ಸ್ವೀಕೃತಿಗಳೆಷ್ಟು?

ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ: ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುತ್ತಿದ್ದ ಮಂಡ್ಯದ ವಿ.ಸಿ. ಫಾರಂ ಕೃಷಿ ಕಾಲೇಜನ್ನು (ಪ್ರಾದೇಶಿಕ ವಿಭಾಗ) ಕೃಷಿ ವಿಶ್ವವಿದ್ಯಾಲಯವಾಗಿ ಮೇಲದರ್ಜೆಗೇರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ  ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

click me!