ಕರ್ನಾಟಕ ಬಜೆಟ್ 2024: ಶಾಲಾ- ಪಿಯು ಕಾಲೇಜುಗಳಿಗೆ 850 ಕೋಟಿ ರೂ.; 2000 ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಆರಂಭ

By Sathish Kumar KH  |  First Published Feb 16, 2024, 12:11 PM IST

ರಾಜ್ಯದಲ್ಲಿನ ಸರ್ಕಾರಿ ಶಾಲೆಗಳು ಹಾಗೂ ಪಿಯು ಕಾಲೇಜು ಅಭಿವೃದ್ಧಿಗೆ 850 ಕೋಟಿ ರೂ. ಮೀಸಲಿಡಲಾಗಿದೆ. ಜೊತೆಗೆ, 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಲಾಗುವುದು.


ಬೆಂಗಳೂರು (ಫೆ.16): ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳು, ಪದವಿ ಪೂರ್ವ ಕಾಲೇಜುಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ 850 ಕೋಟಿ ರೂ. ಅನುದಾನ ನೀಡಲಾಗಿದೆ. ಜೊತೆಗೆ, 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಲು ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳನ್ನು 850 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ. 

Tap to resize

Latest Videos

undefined

ಕೃಷಿಗಾಗಿ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ; ಮಂಡ್ಯದಲ್ಲಿ ವಿಸಿ ಫಾರಂ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ

ಸರ್ಕಾರಿ ಶಾಲೆಯ ಮಕ್ಕಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ಸರ್ಕಾರ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ: 

  • ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
  • 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು J-PAL ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
  • ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುವುದು. 
  • ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್‌ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು.
  • 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು.

ಕರ್ನಾಟಕ ಬಜೆಟ್ 2024 ಲೈವ್ ಅಪ್‌ಡೇಟ್ಸ್‌ : ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ 

ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು ನಾವು ಮನುಜರು ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.

click me!