ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಿಎಂ ಭರ್ಜರಿ ಕೊಡುಗೆ: ಶಿಕ್ಷಣಕ್ಕೆ ಬಂಪರ್, ಹಜ್ ಯಾತ್ರೆಗೆ ಆಫರ್!

Published : Mar 07, 2025, 11:15 AM ISTUpdated : Mar 07, 2025, 11:30 AM IST
ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಿಎಂ ಭರ್ಜರಿ ಕೊಡುಗೆ: ಶಿಕ್ಷಣಕ್ಕೆ ಬಂಪರ್, ಹಜ್ ಯಾತ್ರೆಗೆ ಆಫರ್!

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಮೌಲಾನಾ ಆಜಾದ್ ಶಾಲೆಗಳ ಉನ್ನತೀಕರಣಕ್ಕೆ 500 ಕೋಟಿ ರೂ., ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ರೂ., ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗ ಆರಂಭ, ಕಾಲೋನಿ ಅಭಿವೃದ್ಧಿಗೆ 1000 ಕೋಟಿ ರೂ., ಮದರಸಾಗಳಲ್ಲಿ ಔಪಚಾರಿಕ ಶಿಕ್ಷಣ, ವಕ್ಸ್ ಸಂಸ್ಥೆಗಳ ದುರಸ್ತಿಗಾಗಿ 150 ಕೋಟಿ ರೂ. ಅನುದಾನ ನೀಡಲಾಗಿದೆ.

ಖ್ಯಾತ ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ನಿತ್ಯೋತ್ಸವ ಹಾಡಿನ ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ, ಸದ್ವಿಕಾಸಶೀಲ ನುಡಿಯ ಲೋಕಾವೃತ ಸೀಮೆಯೆ, ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ ಹಾಡನ್ನು ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಭರ್ಜರಿ ಕೊಡುಗೆ ನೀಡಿದ್ದಾರೆ.

ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿ.ಯು ವರೆಗೂ ತರಗತಿಗಳನ್ನು ಪ್ರಾರಂಭಿಸಲು  ಒಟ್ಟಾರೆ 500 ಕೋಟಿ ರೂ. ವೆಚ್ಚದ ಯೋಜನೆ. ಈ ವರ್ಷ ಇದಕ್ಕಾಗಿ 100 ಕೋಟಿ ರೂ. ಅನುದಾನ ನೀಡಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

Karnataka Budget 2025: ರಾಜ್ಯಕ್ಕೆ 500 ಹೊಸ ಪಬ್ಲಿಕ್ ಶಾಲೆ; ಅತಿಥಿ ಶಿಕ್ಷಕರಿಗೆ 2 ಸಾವಿರ, ಬಿಸಿಯೂಟ ತಯಾರಕರಿಗೆ 1000 ಹೆಚ್ಚಳ

ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿ ಇರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕಣ. ಒಟ್ಟಾರೆ 400 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನ. ಈ ವರ್ಷ 100 ಕೋಟಿ ರೂ. ಈಗಾಗಲೇ ಒದಗಿಸಲಾಗಿದೆ.

2023-24ನೇ ಸಾಲಿನಲ್ಲಿ ಪದವಿ ಪೂರ್ವ ತರಗತಿಗಳನ್ನು ಪ್ರಾರಂಭಿಸಲಾಗಿರುವ 62 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭ

ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯಡಿ 1,000 ಕೋಟಿ ರೂ. ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಕಾಮಗಾರಿಗಳನ್ನು 2025-26ನೇ ಸಾಲಿನಲ್ಲಿ ಅನುಷ್ಠಾನ ಮಾಡಲಾವುದು.

Karnataka Budget 2025 live: ಬಜೆಟ್ ಮಂಡನೆ ಶುರು ಮಾಡಿದ ಸಿಎಂ ಸಿದ್ದರಾಮಯ್ಯ

ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣವನ್ನು ನೀಡಲು ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಇತ್ಯಾದಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಈ ವಿದ್ಯಾರ್ಥಿಗಳು NIOS ಮೂಲಕ SSLC ಪರೀಕ್ಷೆ ಬರೆಯಲು ಅವಕಾಶವಾಗುವಂತೆ ಸಜ್ಜುಗೊಳಿಸಲಾಗುವುದು.

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ಯುವಕ/ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡಲಾಗುವುದು. 

ವಕ್ಸ್ ಸಂಸ್ಥೆಗಳ ದುರಸ್ತಿ. ಜೀರ್ಣೋದ್ದಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯಕ್ಕಾಗಿ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ. ಒದಗಿಸಿರುವ ಬಗ್ಗೆ ಘೋಷಣೆ.

ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೃತ್ತಿ ಮಾರ್ಗದರ್ಶನಕ್ಕೆ (career guidance) ತರಬೇತಿ.

ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಕೇಂದ್ರ ತೆರೆದು, ವಿವಿಧ ಪದವಿ/ಸ್ನಾತಕೋತ್ತರ ಪದವಿ ಶಿಕ್ಷಣ.

ಅಲ್ಪಸಂಖ್ಯಾತರ 169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25,000 ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ.

ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ. ನೀಡಲಾಗುವುದು. 

ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡ  ನಿರ್ಮಾಣ

ಅಲ್ಪಸಂಖ್ಯಾತ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೂರಕವಾಗಿ 2024-25ನೇ ಸಾಲಿನಲ್ಲಿ ವಕ್ಸ್ ಸಂಸ್ಥೆಗಳ ಖಾಲಿ ನಿವೇಶನಗಳಲ್ಲಿ 15 ಮಹಿಳಾ ಕಾಲೇಜುಗಳ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಮುಂದುವರೆದು, 2025-26ನೇ ಸಾಲಿನಲ್ಲಿ 16 ಹೊಸ ಮಹಿಳಾ ಕಾಲೇಜುಗಳ  ಸ್ಥಾಪನೆ.

ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 2 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಹಾಗೂ ಮಹಾಭೋಧಿ ಅಧ್ಯಯನ ಕೇಂದ್ರದ 100 ವರ್ಷಗಳ ಹಳೆಯ ಗ್ರಂಥಾಲಯವನ್ನು 1 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಿ ಉನ್ನತೀಕರಿಸಲಾಗುವುದು.

ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ, ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು.

ಜೈನ ಅರ್ಚಕರು, ಸಿಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್ ಗಳಿಗೆ ನೀಡುತ್ತಿರುವ ಮಾಸಿಕ ಗೌರವಧನ  6,000 ರೂ. ಗಳಿಗೆ ಹೆಚ್ಚಳ. ಸಿಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳಿಗೆ ನೀಡುವ ಮಾಸಿಕ ಗೌರವಧನ  5,000  ಹೆಚ್ಚಳ.

ಪ್ರಾಚೀನ ಬೌದ್ಧ ಕೇಂದ್ರವಾಗಿರುವ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆ.

ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಹೋಬಳಿ ಮತ್ತು ತಾಲೂಕು ಮಟ್ಟದಲ್ಲಿ 50 ಲಕ್ಷ ರೂ. ಹಾಗೂ ಜಿಲ್ಲಾ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಬಹುಪಯೋಗಿ ಭವನ ನಿರ್ಮಾಣ

ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶಗಳಲ್ಲಿರುವ ಐ.ಟಿ.ಐ ಗಳಲ್ಲಿ ಹೊಸ ಕೋರ್ಸ್‌ಗಳನ್ನು ಹಾಗೂ ಹೆಚ್ಚುವರಿ ತರಗತಿ ಪ್ರಾರಂಭ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

Explainer: ವಿಶ್ವದ ಅತಿದೊಡ್ಡ ಏರ್‌ಲೈನ್ಸ್‌ ಸ್ಮಶಾನವಾದ ಭಾರತ, ದೇಶದಲ್ಲಿ ವಿಮಾನ ಕಂಪನಿ ಬದುಕೋದು ಯಾಕೆ ಕಷ್ಟ?
ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!