
ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆಗೂ ಸಿದ್ದರಾಮಯ್ಯ ಬಜೆಟ್ ನಲ್ಲಿ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ.
ವಿಜಯಪುರದಲ್ಲಿ 348 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು 2025-26ನೇ ಸಾಲಿನಲ್ಲಿ ಪ್ರಾರಂಭ.
219 ಕೋಟಿ ರೂ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ-ಪಡಿಸಲಾಗುತ್ತಿರುವ ರಾಯಚೂರು ವಿಮಾನ ನಿಲ್ದಾಣದ ಕಾಮಗಾರಿಗಳಿಗೆ ಇಲ್ಲಿಯವರೆಗೆ 53 ಕೋಟಿ ರೂ. ಅನುದಾನ ಬಿಡುಗಡೆ.
ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಅಗತ್ಯ ಅನುದಾನ ಒದಗಿಸಿ ಕಾಮಗಾರಿಗಳ ಪ್ರಾರಂಭ.
ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಯ ಭೂಸ್ವಾಧೀನಕ್ಕಾಗಿ 319 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. ಇದಕ್ಕೆ ಅನುವಾಗುವಂತೆ utility shiftingಗೆ ಅಗತ್ಯ ಕ್ರಮ.
ರಾಜಧಾನಿ ಅಭಿವೃದ್ಧಿಗೆ 7,000 ಕೋಟಿ ರೂ, ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬಂಪರ್ ಕೊಡುಗೆ!
ರಾಜ್ಯ ಸರ್ಕಾರವು ರೈಲ್ವೆಯೊಂದಿಗೆ 50:50 ರ ಅನುಪಾತದಲ್ಲಿ ಒಂಭತ್ತು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಏಳು ಯೋಜನೆಗಳ ಭೂಸ್ವಾಧೀನದ ಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಒಟ್ಟಾರೆ 16,235 ಕೋಟಿ ರೂ. ವೆಚ್ಚದ ಈ ಯೋಜನೆಗಳಿಗೆ ರಾಜ್ಯ ಸರ್ಕಾರದ ವತಿಯಿಂದ 9,847 ಕೋಟಿ ರೂ.ಗಳನ್ನು ಆಯವ್ಯಯದಲ್ಲಿ ವೆಚ್ಚಗೊಳಿಸಲಾಗುವುದು. 600 ಕೋಟಿ 2025-26 ರೂ. ಒದಗಿಸಲಾಗಿದೆ.
ವಾಹನ ದಟ್ಟಣೆ ಇರುವ ರೈಲ್ವೇ ಲೆವೆಲ್ ಕ್ರಾಸಿಂಗ್ ಗೇಟ್‌ಗಳ ಬದಲಿಗೆ ರಸ್ತೆ ಮೇಲ್ಲೇತುವೆ/ಕೆಳಸೇತುವೆ ನಿರ್ಮಿಸಲು ಈಗಾಗಲೇ ಅನುಮೋದನೆ ನೀಡಿರುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು 50 ಕೋಟಿ ರೂ. ಒದಗಿಸಲಾಗಿದೆ.
ಬೈಯ್ಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ದ್ವಿಪಥೀಕರಣ ಯೋಜನೆಗಳಡಿಯಲ್ಲಿ 70 ಕಿ.ಮೀ ರೈಲ್ವೆ ಲೈನ್ ಗಳನ್ನು ದ್ವಿಪಥೀಕರಣಗೊಳಿಸಲು ಒಟ್ಟಾರೆ 812 ಕೋಟಿ ರೂ. ಅಂದಾಜಿಸಲಾಗಿದೆ. ಇದಕ್ಕೆ ರಾಜ್ಯ ಸರ್ಕಾರದ ವತಿಯಿಂದ 406 ಕೋಟಿ ರೂ. ಒದಗಿಸಲಾಗುತ್ತಿದೆ. ಸದರಿ ಎರಡು ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ.
ಸಿದ್ದರಾಮಯ್ಯ ಬಜೆಟ್ : ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಬಲ: ಸರ್ಕಾರದ ಹೊಸ ಯೋಜನೆಗಳು!
ಬೆಂಗಳೂರು ಉಪನಗರ ರೈಲ್ವೇ ಯೋಜನೆಯನ್ನು 15,767 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯು 58 ರೈಲ್ವೇ ನಿಲ್ದಾಣಗಳು ಹಾಗೂ 148 ಕಿ.ಮೀ ಉದ್ದದ ರೈಲ್ವೇ ಜಾಲವನ್ನು ಹೊಂದಿರುತ್ತದೆ. ನಾಲ್ಕು ಕಾರಿಡಾರ್ಗಗಳನ್ನೊಳಗೊಂಡ ಈ ಯೋಜನೆಯ ಎರಡು ಕಾರಿಡಾರ್‌ಗಳ ಕಾಮಗಾರಿಗಳು ಪ್ರಗತಿಯಲ್ಲಿದೆ. ಇನ್ನುಳಿದ ಎರಡು ಕಾರಿಡಾರ್‌ಗಳ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲಾಗುವುದು.
ಕರ್ನಾಟಕ ರಾಜ್ಯದಲ್ಲಿ ಜಲಸಾರಿಗೆ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಅಪಾರ ಸಾಧ್ಯತೆಗಳಿವೆ. ಅಭಿವೃದ್ಧಿ ಯೋಜನೆಗಳಿಗೆ ಪೂರಕವಾಗಿ ಈಗಾಗಲೇ ಕರ್ನಾಟಕ ಜಲಸಾರಿಗೆ ನೀತಿಗೆ ಮಂಜೂರಾತಿ ನೀಡಲಾಗಿದೆ. ಕರಾವಳಿಯಲ್ಲಿ ವ್ಯವಸ್ಥಿತ ಮೂಲಸೌಲಭ್ಯ ಒದಗಿಸಲು ಹಾಗೂ ನೌಕಾ ಚಟುವಟಿಕೆಗಳ ನಿರ್ವಹಣೆಯಲ್ಲಿ ದಕ್ಷತೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ. ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಕ್ರೂಸ್, ವಾಟರ್ ಮೆಟ್ರೋ, ಕೋಸ್ಟಲ್ ಬರ್ತ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಕಿ ಬಂದರು, ಹೊನ್ನಾವರದಲ್ಲಿ ಹಡಗು ನಿರ್ಮಾಣ ಕ್ಷೇತ್ರ ಹಾಗೂ ನದಿ ಕ್ರೂಸ್ ಪ್ರವಾಸೋದ್ಯಮ ಯೋಜನೆಗಳಿಗೆ ವಿಸ್ತ್ರತ ಯೋಜನೆ ಸಿದ್ದಪಡಿಸಲಾಗುವುದು.
ಪ್ರತಿ ವರ್ಷವೂ ಮುಂಗಾರು ಮಳೆಯ ಸಮಯದಲ್ಲಿ ಕರಾವಳಿ ತೀರದಲ್ಲಿ ಕಡಲು ಕೊರೆತದ ಘಟನೆಗಳು ಸಂಭವಿಸುವುದನ್ನು ತಡೆಗಟ್ಟಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು:
i. ಕಡಲು ಕೊರೆತದ ಪರಿಣಾಮಗಳನ್ನು ಸಮಗ್ರವಾಗಿ ಎದುರಿಸಲು ಶೋರ್‌ಲೈನ್ ಮ್ಯಾನೇಜ್‌ಮೆಂಟ್ ಪ್ಲಾನ್ (Shoreline Management Plan) .. ವತಿಯಿಂದ ತಯಾರಿಸಲಾಗಿದೆ.
ii. ಶೋರ್‌ಲೈನ್ ಮ್ಯಾನೇಜ್‌ಮೆಂಟ್ ಪ್ಲಾನ್ (Shoreline Management Plan) ಅನ್ನು ಜಾರಿಗೊಳಿಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕವಾಗಿ ವಿಸ್ತ್ರತ ಯೋಜನಾ ವರದಿಗಳನ್ನು ಸಿದ್ಧಪಡಿಸಲಾಗುವುದು.
iii. ವರದಿಯಲ್ಲಿನ ಕಡಲು ಕೊರೆತದ ತಡೆಗಟ್ಟುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು.
iv. ರಾಷ್ಟ್ರೀಯ ವಿಪತ್ತು ಉಪಶಮನ ನಿಧಿಯಡಿ 200 ಕೋಟಿ ರೂ. ಖರ್ಚು ಮಾಡಲಾಗುವುದು.
ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುವುದು.
ದೇವನಹಳ್ಳಿಯಲ್ಲಿ 407 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಬೆಂಗಳೂರು ಸಿಗ್ನೆಚರ್ ಬಿಸಿನೆಸ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಸಂಪರ್ಕ ಕಲ್ಪಿಸಲು ಮೇಲ್ಲೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನದಲ್ಲಿ 50 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.