ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವರ್ಷದ ಬಜೆಟ್‌ನಲ್ಲಿ ವಿಧ ಜಾತಿ ಸಮುದಾಯಗಳಿಗೆ, ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ ಘೋಷಿಸಿದ್ದಾರೆ
ಬೆಂಗಳೂರು, (ಮಾ.08): 2021ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವರ್ಷವೂ ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ ಘೋಷಿಸಿದ್ದಾರೆ.
ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದು, ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಸಮುದಾಯಗಳಿಗೆ ಮಣೆ ಹಾಕಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು 1,500 ಕೋಟಿ ಮೊತ್ತವನ್ನು ಈ ಬಾರಿಯ ಬಜೆಟ್‌ನಲ್ಲಿ ಮೀಸಲಿಟ್ಟಿದ್ದಾರೆ.
Live| Karnataka Budget 2021: ಕ್ಷಣ-ಕ್ಷಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿವಿಧ ಜಾತಿ ಸಮುದಾಯಗಳಿಗೆ ಅನುದಾನ
* ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ ಇಡಲಾಗಿದೆ.
* ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ ರೂ ಅನುದಾನ ಘೋಷಿಸಲಾಗಿದೆ.
* ಒಕ್ಕಲಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು, ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ 500 ಕೋಟಿ ರೂ ಅನುದಾನ.
* ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ, ಆದಿಚುಂಚನಗಿರಿ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ ಪ್ರಕಟಿಸಲಾಗಿದೆ.
* ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ.
* ಅಲ್ಪಸಂಖ್ಯಾತ ಸಮುದಾಯಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು 1,500 ಕೋಟಿ ಮೊತ್ತವನ್ನು ಈ ಬಾರಿಯ ಬಜೆಟ್‌ನಲ್ಲಿ ಮೀಸಲಿಡಲಾಗಿದೆ.
ಧಾರ್ಮಿಕ ಹಾಗೂ ಮಠಗಳಿಗೂ ಅನುದಾನ
* ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.
* ವಿಜಯಪುರ ಜಿಲ್ಲೆ ಬಸನವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿರುವ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗೆ 5 ಕೋಟಿ,
* ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ ಘೋಷಿಸಲಾಗಿದೆ.
* ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗೂ ಕರ್ನಾಟಕ ಸರ್ಕಾರ 10 ಕೋಟಿ ಅನುದಾನ ಘೋಷಿಸಿದೆ ಎಂದು ಯಡಿಯೂರಪ್ಪ ತಿಳಿಸಿದರು.
* ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್.ಬೈರಪ್ಪ ಅವರ ಪರ್ವ ನಾಟಕ ಪ್ರದರ್ಶನಕ್ಕೆ 1 ಕೋಟಿ ರೂ. ಅನುದಾನ ಘೋಷಿಸಲಾಗಿದೆ. * ರಾಜ್ಯಾದ್ಯಂತ ರಂಗಾಯಣಗಳ ಮೂಲಕ ಪರ್ವ ನಾಟಕವನ್ನು ಪ್ರದರ್ಶಿಸಲಾಗುವುದು.