ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Oct 22, 2024, 10:53 AM IST

ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ. ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕವು ದೇಶದ ಸರಾಸರಿಗಿಂತ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 


ಬೆಂಗಳೂರು(ಅ.22): ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಇದು ದೇಶದ ಸರಾಸರಿಗಿಂತ (ಶೇ.8.2) ಶೇ.2 ರಷ್ಟು ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ. ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕವು ದೇಶದ ಸರಾಸರಿಗಿಂತ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

Latest Videos

undefined

ಭಾರತ ಮತ್ತು ನೆರೆಯ ದೇಶಗಳ ತಲಾ ಆದಾಯ ಎಷ್ಟಿದೆ?

ಎನ್‌ಎಸ್ಸಿ ಅಂದಾಜು ತಪ್ಪು ಎಂಬುದು ಸಾಬೀತು: ನ್ಯಾಷನಲ್ ಸ್ಟಾಟಿಸ್ಟಿಕಲ್ ಎಸ್ಟಿಮೇಟ್ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ಧಿ ದರ ಶೇ.13.1 ರಷ್ಟಾಗಿದ್ದು, ಎನ್‌ಎಸ್‌ ಕರ್ನಾ ಟಕದ ಪ್ರಗತಿಯನ್ನು ತಪ್ಪಾಗಿ ಅಂದಾಜಿಸಿ ರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ಧಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ. ಕರ್ನಾಟಕದ ಜಿಎಸ್‌ವಿಎ (ಗ್ರಾಸ್ ಸ್ಟೇಟ್ ವ್ಯಾಲ್ಯೂ ಆ್ಯಡೆಡ್) ಅಂದರೆ ಒಟ್ಟು ಆರ್ಥಿಕತೆಯಲ್ಲಿ ಐಟಿ ಮತ್ತು ಹಾರ್ಡ್‌ವೇರ್ ವಲಯದ ಪಾಲು ಶೇ.28ರಷ್ಟಿದ್ದು, ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಈ ವಲಯ ಜಾಗತಿಕವಾಗಿ ಹಿನ್ನಡೆ ಅನುಭವಿಸಿದೆ. ಭಾರತದ ಐಟಿ ವಲಯ 2022ರಹಣಕಾಸು ಸಾಲಿನಲ್ಲಿ ಶೇ.15.5 ರಷ್ಟು ಪ್ರಗತಿ ಕಂಡಿದ್ದು, 2023ರ ಅವಧಿಯಲ್ಲಿ ಶೇ.8ಕ್ಕೆ ಕುಸಿತ ಅನುಭವಿಸಿದೆ. ಆದರೆ ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ರಾಜ್ಯದ 'ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ. 

ಮೋದಿ 10 ವರ್ಷದ ಅವಧಿಯಲ್ಲಿ ತೆರಿಗೆ ಸಂಗ್ರಹ ಶೇ.182 ಏರಿಕೆ

2024-25ನೇ ಹಣಕಾಸು ಸಾಲಿಗೆ ಎನ್‌ಎಸ್ಸಿ ಕರ್ನಾಟಕ ರಾಜ್ಯಕ್ಕೆ ಶೇ.9.4 ಜಿಎಸ್‌ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇ.10.5ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಯಾಗಿದೆ. ಆದರೆ ಹಣಕಾಸು ಸಚಿವಾಲಯ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಗಮನದಲ್ಲಿರಿಸಿ ಈ ಅವಧಿಯಲ್ಲಿ ಕರ್ನಾಟಕದ ಜಿಎಸ್‌ಡಿಪಿ ದರವನ್ನು ಶೇ.14ರಷ್ಟು ಅಂದಾಜಿಸಿದೆ. 2024ರ ಸೆಪ್ಟೆಂಬರ್ ಅವಧಿಯಲ್ಲಿ ಕರ್ನಾಟಕ ವರ್ಷದಿಂದ ವರ್ಷಕ್ಕೆ ಜಿಎಸ್‌ಟಿ ಸಂಗ್ರಹದಲ್ಲಿ ಶೇ.10ರಷ್ಟು ಹಾಗೂ ಮುದ್ರಾಂಕ ಶುಲ್ಕ ಸಂಗ್ರಹದಲ್ಲಿ ಶೇ.24ರಷ್ಟು ಹೆಚ್ಚಳ ದಾಖಲಿಸಿದ್ದು, ಉತ್ತಮ ಆರ್ಥಿಕತೆಯನ್ನು ತೋರಿಸುತ್ತಿದೆ.

ತಲಾ ಜಿಎಸ್ಡಿಪಿ ದೇಶದಲ್ಲೇ ಅಧಿಕ 

ಕರ್ನಾಟಕದ್ದು ಯಶಸ್ವಿ ಮಾಡಲ್ ಎಂಬುದು ಸಾಬೀತು ಕರ್ನಾಟಕದ ತಲಾ ಜಿಎಸ್‌ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ. ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿ ಪಡಿಸಿವೆ. ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಪ್ರಗತಿಯನ್ನು ಒಂದುಗೂಡಿಸುವ ಕರ್ನಾಟಕದ ಆರ್ಥಿಕ ಮಾದರಿಯ ಯಶಸ್ಸನ್ನು ಇದು ತೋರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

click me!