ಕಳೆದ ಒಂದು ವರ್ಷದಲ್ಲಿ ಗಣನೀಯ ಪ್ರಗತಿ ಸಾಧಿಸಿದ ಪ್ರಮುಖ (ಹೆಚ್ಚಿನ ಆರ್ಥಿಕತೆ) ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನ ಪಡೆದಿದೆ. 2023ರ ಮಾರ್ಚ್‌ನಲ್ಲಿ ಕರ್ನಾಟಕ 10360 ಕೋಟಿ ರು. ಜಿಎಸ್ಟಿ ಸಂಗ್ರಹಿಸಿದ್ದರೆ ಕಳೆದ ತಿಂಗಳು 13014 ಕೋಟಿ ರು. ಸಂಗ್ರಹಿಸಿದೆ. ಅಂದರೆ ಶೇ.26ರಷ್ಟು ಹೆಚ್ಚಳವಾಗಿದೆ. ಇದು ದೇಶದಲ್ಲೇ ಅತ್ಯಧಿಕ ಎಂಬುದು ವಿಶೇಷ
ನವದೆಹಲಿ(ಏ.02): 2024ರ ಮಾರ್ಚ್ ತಿಂಗಳಲ್ಲಿ ಕರ್ನಾಟಕದಲ್ಲಿ ಒಟ್ಟಾರೆ 11392 ಕೋಟಿ ಜಿಎಸ್ಟಿ ಸಂಗ್ರಹವಾಗಿದೆ. ಈ ಮೂಲಕ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿ ಮುಂದುವರೆದಿದೆ. ಮೊದಲ ಸ್ಥಾನದಲ್ಲಿ ಎಂದಿನಂತೆ ಮಹಾರಾಷ್ಟ್ರ 27688 ಕೋಟಿ ರು.ನೊಂದಿಗೆ ಮೊದಲ ಸ್ಥಾನದಲ್ಲಿದೆ.
ಆದರೆ ಕಳೆದ ಒಂದು ವರ್ಷದಲ್ಲಿ ಗಣನೀಯ ಪ್ರಗತಿ ಸಾಧಿಸಿದ ಪ್ರಮುಖ (ಹೆಚ್ಚಿನ ಆರ್ಥಿಕತೆ) ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನ ಪಡೆದಿದೆ. 2023ರ ಮಾರ್ಚ್‌ನಲ್ಲಿ ಕರ್ನಾಟಕ 10360 ಕೋಟಿ ರು. ಜಿಎಸ್ಟಿ ಸಂಗ್ರಹಿಸಿದ್ದರೆ ಕಳೆದ ತಿಂಗಳು 13014 ಕೋಟಿ ರು. ಸಂಗ್ರಹಿಸಿದೆ. ಅಂದರೆ ಶೇ.26ರಷ್ಟು ಹೆಚ್ಚಳವಾಗಿದೆ. ಇದು ದೇಶದಲ್ಲೇ ಅತ್ಯಧಿಕ ಎಂಬುದು ವಿಶೇಷ.
ಬೆಂಗ್ಳೂರಲ್ಲಿ ನಕಲಿ ಜಿಎಸ್‌ಟಿ ಬಿಲ್ ದಂಧೆ ಅವ್ಯಾಹತ..!
ಮಾರ್ಚ್‌ನಲ್ಲಿ 1.78 ಲಕ್ಷ ಕೋಟಿ ಜಿಎಸ್ಟಿ: 2ನೇ ಗರಿಷ್ಠದ ದಾಖಲೆ
ನವದೆಹಲಿ: ಮಾರ್ಚ್ ತಿಂಗಳಲ್ಲಿ ಸೇವಾ ಮತ್ತು ಸೇವಾ ತೆರಿಗೆ ಸಂಗ್ರಹ ಪ್ರಮಾಣ 1.78 ಲಕ್ಷ ಕೋಟಿ ರು. ತಲುಪಿದೆ. ಇದು 2ನೇ ಸಾರ್ವಕಾಲಿಕ ಗರಿಷ್ಠ ಜಿಎಸ್ಟಿ ಸಂಗ್ರಹ ಪ್ರಮಾಣವಾಗಿದೆ.
ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಚಿನ್ನ ಕದ್ದು ಪರಾರಿಯಾಗಲು ಯತ್ನ: ಸಿನಿಮಾ ಶೈಲಿಯಲ್ಲಿ ದರೋಡೆಕೋರರು ಅರೆಸ್ಟ್!
ಈ ಕುರಿತು ಮಾಹಿತಿ ನೀಡಿರುವ ಹಣಕಾಸು ಸಚಿವಾಲಯ ಮಾರ್ಚ್ ತಿಂಗಳಲ್ಲಿ 1.78 ಲಕ್ಷ ಕೋಟಿ ರು. ಜಿಸ್ಟಿ ಸಂಗ್ರಹವಾಗಿದೆ. ಇದು ಕಳೆದ ವರ್ಷ ಇದೇ ಅವಧಿಗಿಂತ ಶೇ.11.5ರಷ್ಟು ಅಧಿಕ. ಜೊತೆಗೆ 2023ರ ಏಪ್ರಿಲ್‌ನಲ್ಲಿ ದಾಖಲಾಗಿದ್ದ ಸಾರ್ವಕಾಲಿಕ ಗರಿಷ್ಠವಾದ 1.87 ಲಕ್ಷ ಕೋಟಿ ರು.ನ ನಂತರದ ಸ್ಥಾನದಲ್ಲಿದೆ ಎಂದು ಹೇಳಿದೆ.
ಇನ್ನು ಕಳೆದ ಹಣಕಾಸು ವರ್ಷದಲ್ಲಿ ಒಟ್ಟಾರೆ 20.18 ಲಕ್ಷ ಕೋಟಿ ರು. ಜಿಎಸ್ಟಿ ಸಂಗ್ರಹವಾಗಿದೆ. ಇದು 2022-23ರ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ.11.7ರಷ್ಟು ಹೆಚ್ಚಳವಾಗಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಸರಾಸರಿ ಜಿಎಸ್ಟಿ ಸಂಗ್ರಹ 1.5 ಲಕ್ಷ ಕೋಟಿ ರು. ಇದ್ದರೆ, ಪ್ರಸಕ್ತ ಅದು 1.68 ಲಕ್ಷ ಕೋಟಿ ರು.ಗೆ ತಲುಪಿದೆ ಎಂದು ಹೇಳಿದೆ.