Latest Videos

ರಾಜ್ಯ ಸರ್ಕಾರಿ ನೌಕರರಿಗೆ ಶುಭಸುದ್ದಿ; ನವೆಂಬರ್ ನಲ್ಲಿ ಏಳನೇ ವೇತನ ಆಯೋಗದ ಶಿಫಾರಸ್ಸು ಜಾರಿ ಸಾಧ್ಯತೆ

By Suvarna NewsFirst Published Oct 30, 2023, 6:46 PM IST
Highlights

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಗೊಂಡ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ಶುಭಸುದ್ದಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ನವೆಂಬರ್ ನಲ್ಲಿ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸಿದ್ಧತೆ ನಡೆಸಿದೆ. 
 

ಬೆಂಗಳೂರು (ಅ.30): ಕೇಂದ್ರ ಹಾಗೂ ಇತರ ರಾಜ್ಯ ಸರ್ಕಾರಗಳು ಉದ್ಯೋಗಿಗಳಿಗೆ ಶೇ.4ರಷ್ಟು ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ತನ್ನ ಉದ್ಯೋಗಿಗಳಿಗೆ  ನವೆಂಬರ್ ನಿಂದಲೇ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸುತ್ತಿದೆ. ಈ ಬಗ್ಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಮಾಹಿತಿ ನೀಡಿದ್ದು, 2022ರ ನವೆಂಬರ್ ನಲ್ಲಿ ರಚನೆಗೊಂಡ ಏಳನೇ ವೇತನ ಆಯೋಗ ತನ್ನ ಶಿಫಾರಸ್ಸುಗಳನ್ನು ಮುಂದಿನ ತಿಂಗಳೊಳಗೆ ಸಲ್ಲಿಕೆ ಮಾಡುವ ನಿರೀಕ್ಷೆಯಿದೆ. ಅದರ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಇನ್ನು ಏಳನೇ ವೇತನ ಆಯೋಗಕ್ಕೆ ಅದರ ಶಿಫಾರಸ್ಸುಗಳನ್ನು ನವೆಂಬರ್ ನಲ್ಲಿ ಸಲ್ಲಿಕೆ ಮಾಡುವಂತೆ ತಿಳಿಸಲಾಗಿದೆ ಎಂಬ ಮಾಹಿತಿಯನ್ನು ಕೂಡ ಪರಮೇಶ್ವರ್ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂಬ ಮಾಹಿತಿಯನ್ನು ಕೂಡ ನೀಡಿದ್ದಾರೆ. ಅಲ್ಲದೆ, ಸರ್ಕಾರಿ ಉದ್ಯೋಗಿಗಳು ಭಯಪಡುವ ಅಗತ್ಯವಿಲ್ಲ. ತಕ್ಷಣವೇ ಇದನ್ನು ಅನುಷ್ಠಾನಗೊಳಿಸುವ ಭರವಸೆ ನೀಡಿದ್ದಾರೆ.

ಈ ನಡುವೆ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಆದಷ್ಟು ಬೇಗ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸಚಿವರನ್ನು ಒತ್ತಾಯಿಸಿದ್ದಾರೆ. ಅಲ್ಲದೆ ತುಟ್ಟಿ ಭತ್ಯೆಯನ್ನು ಶೇ.23ಷ್ಟು ಏರಿಕೆ ಮಾಡುವಂತೆ ಸರ್ಕಾರಿ ನೌಕರರ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಭರವಸೆ ನೀಡಿರುವಂತೆ ರಾಜ್ಯ ಸರ್ಕಾರ ಹೊಸ ಪಿಂಚಣಿ ವ್ಯವಸ್ಥೆಯನ್ನು (ಎನ್ ಪಿಎಸ್) ಸ್ಥಗಿತಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆ (ಒಪಿಎಸ್) ಅನುಷ್ಠಾನಕ್ಕೆ ಬದ್ಧವಾಗಿದೆ. ಈ ಸಂಬಂಧ ಸಮಿತಿಯೊಂದನ್ನು ರಚಿಸಿ, ಅದರ ವರದಿ ಆಧಾರದಲ್ಲಿ ಅಗತ್ಯ ನಿರ್ಧಾರಗಳನ್ನು ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. 

ಹೊಸ ಪಿಂಚಣಿ ಯೋಜನೆ ಬೇಡ, ಹಳೇ ಪಿಂಚಣಿ ಜಾರಿ ಮಾಡಿ; 7ನೇ ವೇತನ ಆಯೋಗಕ್ಕೆ ನೌಕರರ ಸಂಘದಿಂದ ವರದಿ

ರಾಜ್ಯದಲ್ಲಿ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿ ಮಾತನಾಡಿರುವ ಸಚಿವರು, ರಾಜ್ಯ ಸರ್ಕಾರ ಶೀಘ್ರದಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಪ್ರಾರಂಭಿಸೋದಾಗಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಭರವಸೆ ನೀಡಿದ್ದಾರೆ. ಇನ್ನು ಖಾಲಿಯಿರುವ 2.5 ಲಕ್ಷ ಖಾಲಿ ಸರ್ಕಾರಿ ಹುದ್ದೆಗಳನ್ನು ಮುಂದಿನ ಐದು ವರ್ಷಗಳಲ್ಲಿ ಭರ್ತಿ ಮಾಡೋದಾಗಿಯೂ ಸಚಿವರು ತಿಳಿಸಿದ್ದಾರೆ. 

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ
ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಅಕ್ಟೋಬರ್ 18ರಂದು ಶೇ.4ರಷ್ಟು ಹೆಚ್ಚಳ ಮಾಡಲು  ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.  ಈ ಮೂಲಕ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡಾ 42ರಿಂದ ಶೇಕಡಾ 46ಕ್ಕೆ ಏರಿಕೆಯಾಗಿದೆ. ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಈ ನಿರ್ಧಾರ ನೆರವಾಗಲಿದೆ. ಕೇಂದ್ರ ಸರ್ಕಾರದ ಅನುಮೋದನೆಯಿಂದ 47 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 68 ಲಕ್ಷ ಪಿಂಚಣಿದಾರರಿಗೆ ನೆರವಾಗಲಿದೆ. 
ಶೇಕಡಾ 4 ರಷ್ಟು ತುಟ್ಟಿ ಭತ್ಯೆ ಹೆಚ್ಚಳದಿಂದ ನೌಕರರು ನವೆಂಬರ್ ತಿಂಗಳಿನಿಂದ ಸ್ಯಾಲರಿ ಹೆಚ್ಚಾಗಲಿದೆ. ಉದಾಹರಣೆಗೆ ಕನಿಷ್ಠ ಮೂಲ ವೇತನ 18,000 ರೂಪಾಯಿ ನಿಗದಿಪಡಿಸಿದ್ದರೆ, ಸದ್ಯ ಇರುವ ಶೇಕಡಾ 42 ರಷ್ಟು ತುಟ್ಟಿಭತ್ಯೆ ಅಡಿಯಲ್ಲಿ ತಿಂಗಳಿೆ 7,500 ರೂಪಾಯಿ ಪಡೆಯುತ್ತಾರೆ. ಇದೀಗ ಶೇಕಡಾ 4 ರಷ್ಟು ಹೆಚ್ಚಳದಿಂದ ತುಟ್ಟಿಭತ್ಯೆ ಶೇಕಡಾ 46ಕ್ಕೆ ಏರಿಕೆಯಾಗಿದೆ. ಇದರಿಂದ ಮಾಸಿಕ ವೇತನವೂ 8,280 ರೂಪಾಯಿಗೆ ಏರಿಕೆಯಾಗಲಿದೆ.

Karnataka 7th pay commission:ನಿವೃತ್ತಿ, ಪಿಂಚಣಿಗೆ ಸಂಬಂಧಿಸಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳೇನು?

ವರ್ಷದಲ್ಲಿ ಎರಡು ಬಾರಿ ಹೆಚ್ಚಳ
ನಿಯಮದ ಪ್ರಕಾರ ಕೇಂದ್ರ ಸರ್ಕಾರ ಕನಿಷ್ಠ 6 ತಿಂಗಳಿಗೊಮ್ಮೆ ಸರ್ಕಾರಿ ನೌಕರರ ಡಿಎ ಹಾಗೂ ಡಿಆರ್ ಪರಿಷ್ಕರಣೆ ಮಾಡಲಿದೆ. ಆದರೆ ಹಲವು ಭಾರಿ ಆರ್ಥಿಕ ಸ್ಥಿತಿಗತಿ, ಆದಾಯ, ಆರ್ಥಿಕತೆ ಸೇರಿದಂತೆ ಹಲವು ಕಾರಣಗಳಿಂದ ಪರಿಷ್ಕರಣೆ ವೇಳೆ ಯಥಾ ಸ್ಥಿತಿ ಕಾಪಾಡಿಕೊಳ್ಳಲಾಗುತ್ತದೆ. 
 

click me!