45 ಲಕ್ಷದ ಫ್ಲ್ಯಾಟ್‌ ಖರೀದಿಗೆ ಮುದ್ರಾಂಕ ಶುಲ್ಕ ಶೇ.3ಕ್ಕೆ ಇಳಿಕೆ

Kannadaprabha News   | Asianet News
Published : Sep 21, 2021, 08:11 AM IST
45 ಲಕ್ಷದ ಫ್ಲ್ಯಾಟ್‌ ಖರೀದಿಗೆ ಮುದ್ರಾಂಕ ಶುಲ್ಕ ಶೇ.3ಕ್ಕೆ ಇಳಿಕೆ

ಸಾರಾಂಶ

ರಾಜ್ಯ ಸರ್ಕಾರ ಕೆಳ ಮಧ್ಯಮ ವರ್ಗ ಹಾಗೂ ಬಡವರು ಫ್ಲ್ಯಾಟ್‌ ಖರೀದಿಸುವುದಕ್ಕೆ ಉತ್ತೇಜನ  ರಾಜ್ಯದಲ್ಲಿ 35ರಿಂದ 45 ಲಕ್ಷ ರು. ಮೌಲ್ಯದ ಫ್ಲ್ಯಾಟ್‌ಗಳ ಖರೀದಿಗೆ ನಿಗದಿ ಮಾಡಿದ್ದ ಶೇ.5ರಷ್ಟುಮುದ್ರಾಂಕ ಶುಲ್ಕ ಇಳಿಕೆ

ಬೆಂಗಳೂರು (ಸೆ.21): ರಾಜ್ಯ ಸರ್ಕಾರ ಕೆಳ ಮಧ್ಯಮ ವರ್ಗ ಹಾಗೂ ಬಡವರು ಫ್ಲ್ಯಾಟ್‌ ಖರೀದಿಸುವುದನ್ನು ಉತ್ತೇಜಿಸಲು ರಾಜ್ಯದಲ್ಲಿ 35ರಿಂದ 45 ಲಕ್ಷ ರು. ಮೌಲ್ಯದ ಫ್ಲ್ಯಾಟ್‌ಗಳ ಖರೀದಿಗೆ ನಿಗದಿ ಮಾಡಿದ್ದ ಶೇ.5ರಷ್ಟುಮುದ್ರಾಂಕ ಶುಲ್ಕವನ್ನು ಶೇ.3ಕ್ಕೆ ಇಳಿಕೆ ಮಾಡಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

 ಕಳೆದ ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡು 20 ಲಕ್ಷ ರು.ವರೆಗಿನ ಮೌಲ್ಯದ ಫ್ಲ್ಯಾಟ್‌ಗಳ ಮೊದಲನೇ ನೋಂದಣಿ ವೇಳೆ ಶೇ.5ರಷ್ಟಿರುವ ಮುದ್ರಾಂಕ ಶುಲ್ಕವನ್ನು ಶೇ.2ಕ್ಕೆ ಹಾಗೂ 20ರಿಂದ 35 ಲಕ್ಷ ರು. ಮೌಲ್ಯದ ಫ್ಲ್ಯಾಟ್‌ಗಳ ಮುದ್ರಾಂಕ ಶುಲ್ಕವನ್ನು ಶೇ.5ರಿಂದ 3ಕ್ಕೆ ಇಳಿಕೆ ಮಾಡಿತ್ತು.

ಸಾಮಾನ್ಯ ಜನರು ಫ್ಲ್ಯಾಟ್ ಖರೀದಿಸಲು ಸರ್ಕಾರದಿಂದ ಆಫರ್

ಕಳೆದ ಮಾರ್ಚ್ನಲ್ಲಿ ಮಂಡಿಸಿದ 2021-22ನೇ ಸಾಲಿನ ಬಜೆಟ್‌ ವೇಳೆ 35ರಿಂದ 45 ಲಕ್ಷ ರು. ಮೌಲ್ಯದ ಫ್ಲ್ಯಾಟ್‌ಗಳ ನೋಂದಣಿ ವೇಳೆಯೂ ಮುದ್ರಾಂಕ ಶುಲ್ಕವನ್ನು 5ರಿಂದ ಶೇ.3ಕ್ಕೆ ಇಳಿಕೆ ಮಾಡುವುದಾಗಿ ಘೋಷಿಸಿತ್ತು. 

ಇದೀಗ ಅನುಷ್ಠಾನಕ್ಕೆ ತಂದಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!