Karnataka Budget 2024: ಪ್ರತಿಪಕ್ಷಗಳ ಪ್ರತಿಭಟನೆ, ಎಲ್ಲ ಕ್ಷೇತ್ರಗಳ ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ

ಶಿಕ್ಷಣ, ಕೃಷಿ, ವೈದ್ಯಕೀಯ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿ ವಿವಿಧ ಇಲಾಖೆಗಳನ್ನು ಗಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದಾರೆ. ಕೇಂದ್ರ ಸರಕಾರದ ಮಲತಾಯಿ ಧೋರಣೆ ಬಗ್ಗೆ ಸಿಎಂ ಪ್ರಸ್ತಾಪಿಸಿದಾಗ ಬಿಜೆಪಿ ಸದಸ್ಯರು ತುಸು ಕಾಲ ಗಲಾಟೆ ಮಾಡಿದರು. ಮತ್ತೆ ಪ್ರತಿಭಟಿನೆ ಶುರು ಮಾಡಿದ್ದಾರೆ. ಗದ್ದಲದ ನಡುವೆಯೇ ಎಲ್ಲರಿಗೂ ಸಮಾನ ಅವಕಾಶ, ಸಾಮಾಜಿಯ ನ್ಯಾಯ ಒದಿಗಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಘೋಷಿಸುವ ಮೂಲಕ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದಾರೆ. ಕೃಷಿಕರಿಗೆ ಹಾಗೂ ಹಿಂದುಳಿದ ವರ್ಗಕ್ಕೆ ಹಲವು ಯೋಜನೆಗಳು ಘೋಷಿಸುವುದಲ್ಲದೇ, ಹೆಚ್ಚಿನ ಪ್ರಮಾಣದ ಅನುದಾನ ಘೋಷಿಸುವ ಮೂಲಕ ಎಲ್ಲ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅಗತ್ಯ ನೆರವು ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. 

6:39 PM

'ಎಣ್ಣೆ ಪ್ರೀಮಿಯಂ ಬ್ರ್ಯಾಂಡ್‌ಗಳ ರೇಟ್‌ ಕಡಿಮೆ ಮಾಡ್ತಿದ್ದೀವಿ..'

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಮದ್ಯದ ದರವನ್ನು ಪರಿಷ್ಕರಣೆ ಮಾಡುವ ಘೋಷಣೆ ಮಾಡಿದೆ. ಬಿಯರ್‌ ಬೆಲೆಯನ್ನು ಏರಿಕೆ ಮಾಡುವ ಸೂಚನೆ ನೀಡಿರುವ ರಾಜ್ಯ ಸರ್ಕಾರ ಎಷ್ಟು ಮಾಡಲಾಗುತ್ತದೆ ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುವುದಾಗಿ ತಿಳಿಸಿದೆ.

'ಸಾಹುಕಾರರ ಎಣ್ಣೆ-ಬಡವರ ಎಣ್ಣೆ..' ಸುದ್ದಿಗೋಷ್ಠಿಯಲ್ಲಿ ಸಿಎಂ-ಡಿಸಿಎಂ ಸಖತ್‌ ಚರ್ಚೆ!
 
4:54 PM

'ಉತ್ತರ ಪ್ರದೇಶಕ್ಕೆ ಕೊಡಿ, ಆದರೆ ನಮ್ಮನ್ನು ಹಸಿವಿನಲ್ಲಿ ಇಡಬೇಡಿ'

ರಾಜ್ಯ ಬಜೆಟ್ ಮಂಡನೆ ಮಾಡಿದ ಬಳಿಕ ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಉತ್ತರ ಪ್ರದೇಶ ಸೇರಿದಂತೆ ಬೇರೆ ರಾಜ್ಯಗಳಿಗೆ ಹಣ ಕೊಡಬೇಡಿ ಎಂದು ನಾನು ಎಲ್ಲಿಯೂ ಹೇಳಿಲ್ಲ. ಆದರೆ, ನಮ್ಮನ್ನು ಹಸಿದ ಹೊಟ್ಟೆಯಲ್ಲಿ ಇಡಬೇಡಿ ಅಷ್ಟೇ. ಚಿನ್ನದ ಕೋಳಿಯನ್ನು ಕೊಯ್ದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. 

ಬಿಜೆಪಿಗರ ತಲೆಯಲ್ಲಿ ರಾಜಕೀಯ ನಂಜಿದೆ, ನಿಜ ಮಾತನಾಡಿದ್ರೆ ಅವರಿಗೆ ಉರಿ ಎಂದ ಸಿದ್ದರಾಮಯ್ಯ

4:44 PM

ಬಾಕಿ ನೀರಾವರಿ ಯೋಜನೆಗಳ ಪೂರ್ಣಕ್ಕೆ ಆದ್ಯತೆ

ಇಂದು ಮಂಡನೆಯಾದ ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಜಲಸಂಪನ್ಮೂಲ ಹಾಗೂ ನೀರಾವರಿ ಕ್ಷೇತ್ರಗಳಲ್ಲಿ ಬಾಕಿ ಉಳಿದಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಆದ್ಯತೆ ನೀಡಿದ್ದಾರೆ. 

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

3:49 PM

ಸಿದ್ದರಾಮಯ್ಯರಿಗೆ ಡಿಕೆಶಿ ಅಭಿನಂದನೆ

ಡಿಸಿಎಂ ಡಿಕೆಶಿ ಹೇಳಿಕೆ.

ಮೊದಲು ನಾನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸ್ತೇನೆ. 15 ನೇ ಬಜೆಟ್ ದೇಶಕ್ಕೆ ಮಾದರಿ ಬಜೆಟ್. 3 ಲಕ್ಷ ಕೋಟಿ 71 ಸಾವಿರ ಕೋಟಿ. ಈ ಬಜೆಟ್ ಆತ್ಮವಿಶ್ವಾಸ ಎಷ್ಟಿತ್ತು ಅಂದ್ರೆ, ವಿಪಕ್ಷಗಳು ಕೂರಲಿಲ್ಲ.ಇಷ್ಟು ಅಭಿವೃದ್ಧಿ ಮಾಡಿದ್ರಲ್ಲಾ ಅಂತ ಕೈ ಹೊಸಕಿಕೊಂಡು ಹೊರಗೆ ಹೋದ್ರು.81 ರಿಂದ ಅಸೆಂಬ್ಲಿಯಲ್ಲಿ ಇದ್ದೀನಿ‌. ಯಾವುದೇ ವಿಪಕ್ಷಗಳು ಆಡಳಿತ ಮಾಡಿದ್ದಾರೆ.ಯಾರೂ ಕೂಡ ಬಜೆಟ್ ಬಾಯ್ಕಾಟ್ ಮಾಡಿ ಹೊರಗೆ ಬಂದಿಲ್ಲ. ಬಾಯ್ಕಾಟ್ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ. ಬಜೆಟ್ ಪಾಸ್ ಮಾಡಿಲ್ಲ.ಸರ್ಕಾರಿ ನೌಕರರಿಗೆ ಸಂಬಳ ಕೊಡಬೇಕು, ಮಹಿಳೆಯರಿಗೆ 2 ಸಾವಿರ ಕೊಡಬೇಕು.ಮನೆಗೆ ವಿದ್ಯುತ್ ಶಕ್ತಿ ನೀಡಬೇಕು.ಎಲ್ಲೆಡೆ ಉಚಿತವಾಗಿ ಬಸ್ಸಲ್ಲಿ ಓಡಾಡ್ತಿದ್ದಾರೆ ಅವರಿಗೆ ಅವಮಾನ ಮಾಡಿದ್ದಾರೆ.ರಾಜ್ಯದ ಜನತೆಗೆ ಅವಮಾನ ಮಾಡಿದ ವಿಶೇಷ ಒ್ರಕರಣ ನಡೆದಿದೆ.ಎಲ್ಲಾ ಬಿಜೆಪಿ, ಜೆಡಿಎಸ್‌ ಶಾಸಕರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ.

3:22 PM

ಹುಬ್ಬಳ್ಳಿ- ಧಾರವಾಡಕ್ಕೆ ಸಿಕ್ಕಿದ್ದೇನು?

- ಬೆಣ್ಣಿಹಳ್ಳದ ಪ್ರವಾಹ ತಡೆಗೆ ತಡೆಗೋಡೆ ನಿರ್ಮಾಣಕ್ಕೆ ಅಸ್ತು
- ಖಾಸಗಿ ಸಹಭಾಗಿತ್ವದಲ್ಲಿ ಹುಬ್ಬಳ್ಳಿಗೆ bio cng plant ಸ್ಥಾಪನೆ; ಈ ಮೂಲಕ ಶೂನ್ಯ ತ್ಯಾಜ್ಯ ಮಾರುಕಟ್ಟೆಯನ್ನಾಗಿ ಪರಿವರ್ತನೆ
- ಧಾರವಾಡದ ವಾಲ್ಮಿ ಸಂಸ್ಥೆಯ ಉನ್ನತೀಕರಣಕ್ಕೆ ಅಸ್ತು
- ಧಾರವಾಡದಲ್ಲಿ ತೀವ್ರ ಅಸ್ವಸ್ಥೆಯಿಂದ ಬಳಲುವ ರೋಗಿಗಳಿಗಾಗಿ ಕ್ರಿಟಿಕಲ್ ಕೇರ್ ಬ್ಲಾಕ್ ನಿರ್ಮಾ
- ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಜೆ ವ್ಯಾಪ್ತಿಯಲ್ಲಿ ತಡರಾತ್ರಿ 1ರವರೆಗೆ ವ್ಯಾಪಾರ ವಹಿವಾಟುವಿಗೆ ಅಸ್ತು
- ಹುಬ್ಬಳಿ- ಧಾರವಾಡಗಳಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ಅಭಿವೃದ್ಧಿ
- ರೈಲ್ವೆ ಅಭಿವೃದ್ಧಿ ಯೋಜನೆಗಳಿಗೆ 9 ಸಶವಿರ ಕೋಟಿಗೂ ಹೆಚ್ಚು ಅನುದಾನ ನೀಡಲು ಭರವಸೆ
- ಮುಂಬೈ- ಬೆಂಗಳೂರು ಎಕನಾಮಿಕ್ ಕಾರಿಡಾರ್ ವ್ಯಾಪ್ತಿಗೆ ಬರುವ ಧಾರವಾಡ ಜಿಲ್ಲೆಯಲ್ಲಿ 6 ಸಾವಿರ ಎಕರೆ ಪ್ರದೇಶದ ಕೈಗಾರಿಕಾ ನೋಡ್
- ಧಾರವಾಡದಲ್ಲಿ ವಿಜ್ಞಾನ ಕೇಂದ್ರದಲ್ಲಿ ತಾರಾಲಯ ಕಾರ್ಯರಂಭ ಮಾಡಲಿದೆ

3:16 PM

ಸಂಚಾರ ದಟ್ಟಣೆ ನಿರ್ವಹಿಸಲು ಬೆಳಗಾವಿಗೆ ಮೇಲ್ಸುತೆವೆ

ಬೆಳಗಾವಿ:  2024-25ರ ಕರ್ನಾಟಕ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ  ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

3:15 PM

ಬಜೆಟ್ ನಲ್ಲಿ ಕೊಡಗಿಗೆ ಸಿಕ್ಕಿದ್ದು...

*ಜಿಲ್ಲಾಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆಹಚ್ಚಲು ವೈರಲ್ ರೀಸರ್ಚ್ ಮತ್ತು ಡೈಯಾಗನೋಸ್ಟಿಕ್ ಲ್ಯಾಬೋರೇಟರಿ ಸ್ಥಾಪನೆ 
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ ಕಾರ್ಡಿಯಾಕ್ ಯೂನಿಟ್ ಆರಂಭ 
*ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಚಟುವಟಿಕೆ ಆಧಾರಿತ ಪರಿಸರವನ್ನು ಒದಗಿಸಲು ಈಗಾಗಲೇ ಅನುಮೋದನೆಗೊಂಡಿರುವ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳನ್ನು ಮಡಿಕೇರಿಯಲ್ಲಿ ನಿರ್ಮಿಸುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪ 
*ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣ
*ವಿರಾಜಪೇಟೆಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣವನ್ನು ನಿರ್ಮಾಣ 
*ಅಂದಾಜು 36 ಕೊಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ನಿರ್ಮಾಣವಾಗಲಿರುವ ಸ್ಥಳಗಳ ಪಟ್ಟಿಯಲ್ಲಿ ಮಡಿಕೇರಿಗೂ ಸ್ಥಾನ

2:38 PM

ಕರಾವಳಿ ಕಡೆಗೆ ಕಣ್ಣು ಬಿಟ್ಟ ಸಿಎಂ

ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ ನೀಡಲಾಗುವುದು. ಬಂದರು, ರೈಲು ಮತ್ತು ವಿಮಾನ ಸಂಪರ್ಕವನ್ನು ಒದಗಿಸುವ ಮೂಲಕ ಕೆಲವು ವರ್ಷಗಳಲ್ಲಿ ಅಂದಾಜು 20,000 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸುವ ಗುರಿ ಹೊಂದಿದ್ದೇವೆ.
* ಸಾಗರಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ಉದ್ದೇಶದಿಂದ ಅಂದಾಜು 1,017 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 26 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇವುಗಳ ಪೈಕಿ ರಾಜ್ಯದ ಪಾಲು 530 ಕೋಟಿ ರೂ.ಗಳಾಗಿದೆ.  ಮುಂದುವರೆದು, ಇನ್ನೂ 1,145 ಕೋಟಿ ರೂ. ಮೊತ್ತದ 12 ಕಾಮಗಾರಿಗಳ ವಿಸ್ತೃತ ಯೋಜನಾ ವರದಿಗಳನ್ನು ಕೇಂದ್ರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.
• ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸಾಮರ್ಥ್ಯದ ಮತ್ತು ೪,೨೦೦ ಕೋಟಿ ರೂ. ಅಂದಾಜು ಯೋಜನಾ ವೆಚ್ಚದ ಹೊಸ ಆಳಸಮುದ್ರ ಸರ್ವಋತು ಬಂದರನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. 
• ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಅಂದಾಜು ೩೦೪೮ ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಎರಡನೇ ಬೃಹತ್ ಬಂದರಿನ ಅಭಿವೃದ್ಧಿಗೆ ಅಂತರಾಷ್ಟ್ರೀಯ ಟೆಂಡರ್ ಅನ್ನು ಕರೆಯಲಾಗಿದೆ.  
• ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಾಲ್ಕು ಬರ್ತ್ಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.
• ಕಾರವಾರ, ಹಳೆ ಮಂಗಳೂರು ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಸುಗಮ ಸಂಚಾರಕ್ಕಾಗಿ ಹೂಳೆತ್ತುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಗೊಳ್ಳಲಾಗುತ್ತಿದೆ.
• ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುತ್ತಿದೆ.
• ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆ ಕಾಮಗಾರಿಯನ್ನು ಕೈಗೊಳ್ಳಲಾಗುವುದು. 
• ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯ ತೊಡಕುಗಳನ್ನು ನಿವಾರಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. 
*ಮುರ್ಡೇಶ್ವರದಲ್ಲಿ ಮತ್ಸ್ಯ ಸಂಶೋಧನಾ ಸಂಸ್ಥೆ ಹಾಗೂ ಹೊರಬಂದರು.

2:38 PM

ಬಜೆಟ್ ನಲ್ಲಿ ಗದಗ ಜಿಲ್ಲೆಗೆ ಸಿಕ್ಕಿದ್ದೇನು ?

* ಗದಗನಲ್ಲಿ ನೂತನವಾಗಿ ನಿಮಿರ್ಸಿದ 450 ಹಾಸಿಗೆಗಳ ಆಸ್ಪತ್ರೆಗೆ ವೈದ್ಯಕಿಯ ಉಪಕರಣ ಮತ್ತು ಪಿಠೋಪಕರಣ ಖರೀದಿಗೆ ಅನುದಾನ (ಗದಗ, ಕೊಪ್ಪಳ, ಚಾಮರಾಜ ನಗರ ಸೇರಿ 150 ಕೋಟಿ)
* ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ
* ಜಿಲ್ಲೆಯ ರೋಣ ಪಟ್ಟಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ 150 ಕೋಟಿ ವೆಚ್ಚದಲ್ಲಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಸ್ಥಾಪನೆ.
* ಜಿಲ್ಲೆಯ ರೋಣ & ಮಲ್ಲಾಪುರ ರಸ್ತೆ ಅಭಿವೃದ್ಧಿ
* ಗದಗ ಜಿಲ್ಲಾಸ್ಪತ್ರೆಯಲ್ಲಿ 10 ಕೋಟಿ ವೆಚ್ಚದಲ್ಲಿ ಸುಪರ್ ಸ್ಪೆಷಾಲಿಟಿ ಕಾಡಿರ್ಕ್ ಟಕ ಸ್ಥಾಪನೆ ಮತ್ತು ಅನಸ್ತೆಷಿಯಾ ಘಟಕ
* ಗದಗ ಜಿಲ್ಲೆಯ ಜಾಲವಾಡಗಿ ಏತ ನೀರಾವರಿಗೆ ಅನುದಾನ
* ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೀತಲ ಘಟಕ ನಿರ್ಮಾಣ
* ಜವಳಿ ಪಾರ್ಕ್, ಶಿರಹಟ್ಟಿ ಯಲ್ಲಿ 100 ಹಾಸಿಗೆ ಸಾಮರ್ಥ್ಯ ತಾಲೂಕು ಆಸ್ಪತ್ರೆ ನಿರ್ಮಾಣ.

2:37 PM

ಬೆಂಗಳೂರಿನಗೆ ಕೊಡುಗೆ: ಸಿಎಂ ಅಭಿನಂದಿಸಿದಿ ಎಸ್ಟಿ ಸೋಮಶೇಖರ್

ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆ.

ಬೆಂಗಳೂರಿನ ಬಗ್ಗೆ ಮಾತಾಡ್ತೇನೆ. ಸಿಎಂ, ಡಿಸಿಎಂಗೆ ಅಭಿನಂಧನೆ ಹೇಳ್ತೆನೆ. 5 ಕಸದ ಘಟನ ಇದ್ವು, ಅವುಗಳನ್ನ ಹೊರಗೆ ಹಾಕುವ ಬಗ್ಗೆ ಹೇಳಿದ್ದಾರೆ. ಜನರ ಸಂಕಷ್ಟ ನಿವಾರಣೆಗೆ ಸಿಎಂ ಕ್ರಮ ತೆಗೆದುಕೊಂಡಿದ್ದಾರೆ. ನೂರತ್ತಳ್ಳಲಿಗೆ ಕಾವೇರಿ ನೀರಿನ ಸೌಲಭ್ಯ ಮಾಡುವ ಭರವಸೆ ನೀಡಿದ್ದಾರೆ. ಸಂಚಾರ ಸಮಸ್ಯೆ ನಿವಾರಣೆ ಬಗ್ಗೆ ಹೇಳಿದ್ದಾರೆ. ವೈಟ್ ಟ್ಯಾಪಿಂಗ್ ಬಗ್ಗೆ ಕ್ಲಿಯರ್ ಮಾಡುವ ಬಗ್ಗೆ ಹೇಳಿದ್ದಾರೆ...

2:35 PM

ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ.

* ನವಲಿ ಸಮಾನಾಂತರ ಜಲಾಶಯ ಅನುಷ್ಠಾನ ಸಂಬಂಧ ತೆಲಂಗಾಣ, ಆಂದ್ರಪ್ರದೇಶದ ಜತೆ ಸಮಾಲೋಚನೆ ಪ್ರಕ್ರಿಯೆಯಲ್ಲಿದ್ದು, ಯೋಜನೆ ಚಾಲನೆಗೆ ಆದ್ಯತೆ.

* ಕೊಪ್ಪಳದ 450 ಹಾಸಿಗೆ ಆಸ್ಪತ್ರೆಗೆ ಪೀಠೋಪಕರಣ ಖರೀದಿಗೆ ಅನುದಾನ. 

* ಯಲಬುರ್ಗಾ ಹಾಗೂ ಕುಕನೂರು ತಾಲೂಕಿನ 38 ಕೆರೆಗಳನ್ನು ತುಂಬಿಸುವ ಯೋಜನೆ ಮತ್ತು  ಕೆರೆ/ ಬ್ರಿಡಜ್ ಕಂ ಬ್ಯಾರೇಜ್ ಯೋಜನೆ ಕೈಗೆತ್ತಿಕೊಳ್ಳಲಾಗುವುದು. 

* ಯಲಬುರ್ಗಾ ಎಪಿಎಂಸಿಯಲ್ಲಿ ಶೀತಲಗೃಹ ನಿರ್ಮಾಣ.

* ಕೆಕೆಆರ್ ಡಿಬಿಯಿಂದ ವಿವಿ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು. 

* ಆರೋಗ್ಯ ಇಲಾಖೆ : ಪ್ರಸಕ್ತ ಸಾಲಿನಲ್ಲಿ ಕ್ರಿಟಿಕಲ್ ಕೇರ್ ಸ್ಥಾಪಿಸಲಾಗುವುದು. 

* ಕೊಪ್ಪಳದ ತಳಕಲ್ ನಲ್ಲಿ ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ.

2:26 PM

2:25 PM

ಹಾವೇರಿ ಜಿಲ್ಲೆಗೆ ಸಿಕ್ಕಿದ್ದೇನು?

* ರಾಣೆಬೆನ್ನೂರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೀತಲಗೃಹ.
* ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭಿಸಲಾಗುವುದು.
* ಹಾವೇರಿ ವಿಜ್ಞಾನ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಪೂರ್ಣಗೊಳಿಸಲಾಗುವುದು.
* ತ್ರಿಪದಿಗಳ ಮೂಲಕ ಜೀವನಸಾರವನ್ನು ಹೇಳಿದ ವಚನಕಾರ ಸರ್ವಜ್ಞನ ಸ್ಮಾರಕವನ್ನು ಹಿರೇಕೆರೂರ ತಾಲೂಕಿನಲ್ಲಿ ಅಭಿವೃದ್ಧಿಪಡಿಸಲಾಗುವುದು.

1:58 PM

ಈಗ ಕರಾವಳಿಯ ನೇತ್ರಾವತಿ, ಗುರುಪುರ ನದಿಗಳಲ್ಲಿ ಜಲಮೆಟ್ರೋ ಸೇವೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಲವು ಕೊಡುಗೆಗಳನ್ನು  ಘೋಷಣೆ ಮಾಡಿದ್ದಾರೆ.    ಪ್ರಮುಖ  ಹೈಲೈಟ್ಸ್ ಗಳ ಪಟ್ಟಿ ಇಲ್ಲಿದೆ.

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

1:27 PM

ದೇವಸ್ಥಾನದ 500 ಕೋಟಿಯಲ್ಲಿ 330 ಕೋಟಿ ರೂ ವಕ್ಫ್, ಕ್ರಿಶ್ಚಿಯನ್‌ಗೆ ದಾನ, ಬಜೆಟ್ ವಿರುದ್ಡ ಆಕ್ರೋಶ!

ಕರ್ನಾಟಕದ ದೇವಸ್ಥಾನಗಳಿಂದ ಸರಿಸುಮಾರು 500 ಕೋಟಿ ರೂ ಆದಾಯ ಸಂಗ್ರಹವಾಗುತ್ತಿದೆ. ಈ ಪೈಕಿ 330 ಕೋಟಿ ರೂಪಾಯಿ ಹಣವನ್ನು ಹಜ್ ಭವನ ನಿರ್ಮಾಣ, ವಕ್ಫ್ ಬೋರ್ಡ್ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ ನೀಡಲಾಗಿದೆ. ಇದು ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಸರ್ಕಾರದಿಂದ ದೇವಸ್ಥಾನಗಳನ್ನು ಮುಕ್ತಿಗೊಳಿಸಿ ಹೋರಾಟ ಮತ್ತೆ ಶುರುವಾಗಿದೆ.

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

1:21 PM

ಕೌಶಲ್ಯಾಭಿವೃದ್ಧಿಗೆ ಆದ್ಯತೆ

211. ನಿರುದ್ಯೋಗಿ ಯುವಜನರಲ್ಲಿ ಭರವಸೆ ತುಂಬಿ, ಉದ್ಯೋಗ ಪಡೆದುಕೊಳ್ಳುವತ್ತ ಬೆಂಬಲ ನೀಡುವ ಯೋಜನೆ ಯುವನಿಧಿ. ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಡಿಬಿಟಿ ಮೂಲಕ ನೆರವು ವರ್ಗಾಯಿಸಲಾಗುತ್ತಿದೆ.
 
212. ರಾಜ್ಯದ ಮಾನವ ಸಂಪನ್ಮೂಲದ ಸಮರ್ಪಕ ಬಳಕೆ ಮಾಡಲು ಮತ್ತು ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶಗಳನ್ನು ಒದಗಿಸಲು ರಾಜ್ಯ ಕೌಶಲ್ಯ ನೀತಿಯನ್ನು ಸಿದ್ಧಪಡಿಸಲಾಗುವುದು.

213. ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ನೀಡುತ್ತಿರುವ ಕೋರ್ಸುಗಳಲ್ಲಿ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು 25,000 ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು. ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗಾಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಯುವಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುವುದು. 

214. ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿಯನ್ನು ಸ್ಥಾಪಿಸಲಾಗುವುದು 

215. ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ ಒಟ್ಟು 350 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಮೊದಲನೇ ಹಂತದ ಯೋಜನೆಯನ್ನು ಮೂರು ವರ್ಷಗಳ ಅವಧಿಯಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.  

216. ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕ ಹಾಗೂ ಗದಗ ಜಿಲ್ಲೆಯ ರೋಣದಲ್ಲಿ NABARD ಸಹಯೋಗದೊಂದಿಗೆ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿ ಗಳನ್ನು ಪ್ರಾರಂಭಿಸಲಾಗುವುದು. 

217. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಮೆಕ್ಯಾಟ್ರಾನಿಕ್ಸ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ರೊಬೊಟಿಕ್ಸ್ ಇತ್ಯಾದಿ ಹೆಚ್ಚುವರಿ ಡಿಪ್ಲೊಮ ಕೋರ್ಸ್ಗಳನ್ನು ವಿವಿಧ ಜಿ.ಟಿ.ಟಿ.ಸಿ ಗಳಲ್ಲಿ 
ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ 15,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.  

218. ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ ಸಿ.ಎನ್.ಸಿ (Computer Numerical Control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಠತಾ ಕೇಂದ್ರವನ್ನು 16 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.   

219. ಐ.ಟಿ.ಐ. ಮತ್ತು ಜಿ.ಟಿ.ಟಿ.ಸಿ. ವಿದ್ಯಾರ್ಥಿಗಳಿಗೆ ಉದ್ಯೋಗ ನಿಯುಕ್ತಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂವಹನ ಕೌಶಲ್ಯ ತರಬೇತಿಯನ್ನು 5 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು.  ಇದರಿಂದ ಸುಮಾರು 40,000ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳಿಗೆ ಪ್ರಯೋಜನವಾಗಲಿದೆ. 

220. ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ಮತ್ತು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರಶಿಕ್ಷಣಾರ್ಥಿಗಳನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್ ಅನ್ನು ಆಯೋಜಿಸಲಾಗುವುದು. 

221. ಉದ್ಯೋಗಶೀಲತೆಯನ್ನು ಹೆಚ್ಚಿಸಲು Dual System of Training (DST) ಅನ್ನು ರಾಜ್ಯದ ಎಲ್ಲಾ ಐ.ಟಿ.ಐ ಗಳಲ್ಲಿ ಸ್ಥಳೀಯ ಕೈಗಾರಿಕೆಗಳು ಹಾಗೂ ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿ ವಿಸ್ತರಿಸಲಾಗುವುದು.  

222. ರಾಜ್ಯದಲ್ಲಿ ಉದ್ಯಮಗಳ ಬೇಡಿಕೆಗೆ ಪೂರಕವಾದ ಉತ್ತಮ ಗುಣಮಟ್ಟದ ಕೌಶಲ್ಯ ಪರಿಸರ ವ್ಯವಸ್ಥೆಯನ್ನು ರಚಿಸುವತ್ತ ಗಮನಹರಿಸಲು ಸ್ಕಿಲ್ ಕನೆಕ್ಟ್ ಸಮಿಟ್ ಅನ್ನು (Skill Connect Summit) ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಆಯೋಜಿಸಲಾಗುವುದು.  

223. ಕೆ.ಎಸ್.ಡಿ.ಸಿ ಅಡಿಯಲ್ಲಿ ಸ್ಥಾಪಿಸಲಾಗಿರುವ ಅಂತಾರಾಷ್ಟ್ರೀಯ ವಲಸೆ ಕೋಶದ ಮೂಲಕ ವಿದೇಶಿ ಉದ್ಯೋಗದಾತರೊಂದಿಗೆ ಸಂವಾದಗಳನ್ನು ನಡೆಸಲಾಗುತ್ತಿದೆ. ಸದರಿ ಕೋಶವನ್ನು ಬಲಪಡಿಸಿ ಉದ್ಯೋಗಾಕಾಂಕ್ಷಿಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಅಗತ್ಯ ಸಮನ್ವಯ ಕಾರ್ಯಗಳನ್ನು ಕೈಗೊಳ್ಳಲಾಗುವುದು.
 
224. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಸಂಸ್ಥೆಗಳಲ್ಲಿ ನೇಮಕಾತಿಗಾಗಿ ಹೊರಡಿಸಲಾಗುವ ಅಧಿಸೂಚನೆಗಳನ್ನು ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಒಂದೇ ಜಾಲತಾಣದಲ್ಲಿ ಪ್ರಕಟಿಸಲಾಗುವುದು. 

225. ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣವನ್ನು ಸಕ್ರಿಯಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ 50,000 ಎಸ್.ಹೆಚ್.ಜಿ. ಮಹಿಳಾ ಸ್ವಾಮ್ಯದ ಸೂಕ್ಷ್ಮ ಉದ್ಯಮಗಳನ್ನು ಎರಡು ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು.

226. IIM-B ಸಹಯೋಗದೊಂದಿಗೆ ಎಲ್ಲಾ 31 ಜಿಲ್ಲೆಗಳಲ್ಲಿ ಉದ್ಯಮಿಗಳನ್ನು ಉತ್ತೇಜಿಸಲು ಜಿಲ್ಲಾ ಮಟ್ಟದ ಇನ್ಕ್ಯುಬೇಶನ್ ಕೇಂದ್ರಗಳನ್ನು (DLIC) ಹಂತ ಹಂತವಾಗಿ ಸ್ಥಾಪಿಸಲಾಗುವುದು. ಮೊದಲನೇ ಹಂತದಲ್ಲಿ ಆಯ್ದ 10 ಜಿಲ್ಲೆಗಳಲ್ಲಿ ಇನ್ಕ್ಯುಬೇಶನ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
 
227. ಒಂದು ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಕ್ಕುಟ, ಕುರಿ ಮತ್ತು ಮೇಕೆ ಸಾಕಾಣಿಕೆ, ಜೇನು ಸಾಕಾಣಿಕೆ ಸಂಬಂಧಿಸಿದ ಕಿರು ಉದ್ದಿಮೆಗಳನ್ನು ಸ್ಥಾಪಿಸಲು ಮತ್ತು ಅವುಗಳಿಗೆ ಸೂಕ್ತ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲು 100 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.

228. ಕೆಫೆ ಸಂಜೀವಿನಿ ಎಂಬ ಮಹಿಳೆಯರೇ ನಡೆಸುವ ಕ್ಯಾಂಟೀನ್ಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 7.5೦ ಕೋಟಿ ರೂ. ವೆಚ್ಚದಲ್ಲಿ 50 ಕೆಫೆಗಳನ್ನು ಸ್ಥಾಪಿಸಲಾಗುವುದು.

229. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. ಇದರ ಜೊತೆಯಲ್ಲಿ 2500 ಕಾಫಿ ಕಿಯೋಸ್ಕ್ಗಳನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಮತ್ತು ಇದರ ಸಂಪೂರ್ಣ ನಿರ್ವಹಣೆಯನ್ನು ಎಸ್.ಹೆಚ್.ಜಿ. ಮಹಿಳೆಯರ ಮೂಲಕ ಮಾಡಲಾಗುವುದು. 

230. ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು 5 ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವ-ಸಹಾಯ ಗುಂಪುಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಿಸಲಾಗುವುದು.

231. ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ GP-SHG ಒಗ್ಗೂಡಿಸುವಿಕೆಯ ನೀತಿಯನ್ನು ಜಾರಿಗೊಳಿಸಲಾಗುವುದು.

1:20 PM

ನೂತನ ಜಿಲ್ಲಾ ರಚನೆಗೆ ಆಸೆ ಇಟ್ಟ ಚಿಕ್ಕೋಡಿ ಜನರಿಗೆ ನಿರಾಸೆ

ಚಿಕ್ಕೋಡಿ: ಸಿದ್ದರಾಮಯ್ಯನ ಬಜೆಟಗೆ ತೀವ್ರ ನಿರಾಸೆ ವ್ಯಕ್ತಪಡಿಸಿದ ಚಿಕ್ಕೋಡಿ ಜನರು.

ನೂತನ ಜಿಲ್ಲಾ ರಚನೆಗೆ ಆಸೆ ಇಟ್ಟ ಜನರಿಗೆ ನಿರಾಸೆ.

32ನೇ ಜಿಲ್ಲಾ ರಚನೆಗೆ ಚಿಕ್ಕೋಡಿ ಜನರ ಬಹು ದಿನಗಳ ಬೇಡಿಕೆ

ಈ ಬಜೆಟ್ ನಲ್ಲಿ ಚಿಕ್ಕೋಡಿ ಜಿಲ್ಲಾ ರಚನೆಗೆ ಸರ್ಕಾರ ಮಾನ್ಯತೆ ಬರವಸೆ

ಚಿಕ್ಕೋಡಿ ಜಿಲ್ಲಾ ರಚನೆಗೆ ಮುಂದಾಗದ ಕೈ ಸರ್ಕಾರ

ಕಾಂಗ್ರೆಸ್ ಸರ್ಕಾರ ವಿರುದ್ಧ ಚಿಕ್ಕೋಡಿ ಜನರು ಆಕ್ರೋಶ

ಈ ಭಾಗದ ಕಾಂಗ್ರೆಸ್ ಶಾಸಕರ ವಿರುದ್ಧ ಕೆಂಡ ಕಾರಿದ ಚಿಕ್ಕೋಡಿ ಜನರು

ಕಳೆದ 25 ಒಂದು ವರ್ಷಗಳ ಬೇಡಿಕೆಗೆ ಸ್ಪಂದಿಸದ ಸರ್ಕಾರ.

11:45 AM

ಹಸಿವು ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಆದ್ಯತೆ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು

203. ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಕನಸಿನೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಉಚಿತ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು. ಈ ಬಾರಿ ನಾವು ನೀಡಿದ್ದ ಭರವಸೆಯಂತೆ ಹೆಚ್ಚುವರಿಯಾಗಿ ಐದು ಕೆ.ಜಿ. ಆಹಾರ ಧಾನ್ಯ ನೀಡಲು ತೀರ್ಮಾನಿಸಲಾಗಿದೆ. ಆದರೆ ಕೇಂದ್ರ ಸರ್ಕಾರದ ಅಸಹಕಾರ ಧೋರಣೆಯಿಂದಾಗಿ ಅಕ್ಕಿ ಲಭ್ಯವಾಗದ ಕಾರಣ, ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂ.ನಂತೆ ಪ್ರತಿ ಮಾಹೆ 170 ರೂ. ನೇರ ನಗದು ವರ್ಗಾವಣೆ ಮಾಡುವ ಮೂಲಕ ನಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ. ಜನವರಿ 2024ರ ಅಂತ್ಯದವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.

204. ಡಾ|| ಮನ್ಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು 2013 ರಲ್ಲಿ ಜಾರಿಗೆ ತರಲಾಯಿತು. ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಲಾಗುವುದು. ಇದರಿಂದ ಆಹಾರ ಭದ್ರತಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ, ಹಾಗೂ ಹಸಿವು ಮುಕ್ತ ಕರ್ನಾಟಕದ ನಮ್ಮ ಆಶಯವನ್ನು ಈಡೇರಿಸಲು ನೆರವಾಗಲಿದೆ.

205. ಅನ್ನ–ಸುವಿಧಾ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲಿವೆರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.

11:44 AM

ಸೂರು ಕಲ್ಪಿಸಲು ಸಿದ್ದರಾಮಯ್ಯ ಜೋಯನೆಗಳೇನು?

ವಸತಿ
199.    ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆಯನ್ನು ನಡೆಸಲಾಗುವುದು.  
200.    ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಫಲಾನುಭವಿಗಳು ಬಡ ಕುಟುಂಬದವರಾಗಿದ್ದು, ತಮ್ಮ ಪಾಲಿನ ವಂತಿಗೆಯಾದ ಐದು ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೇ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು 
ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು ತೀರ್ಮಾನಿಸಿದೆ. ಅದರಂತೆ ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸಲಾಗುವುದು.
201.    ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ;
•    Asset Monetisation, ವಸತಿ ಸೆಸ್‌ ಮತ್ತು ವಿವಿಧ ಶಾಸನ ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೊಢೀಕರಿಸಿ Karnataka Affordable Housing Fund ಅನ್ನು (KAHF) ಸ್ಥಾಪಿಸಲಾಗುವುದು. 
•    ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್‌ ದರ ಪರಿಷ್ಕರಣೆ ಮಾಡುವುದು.
•    ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲಾಗುವುದು.
202.    ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರವು ರಿಯಲ್‌ ಎಸ್ಟೇಟ್‌ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. 2023-24 ನೇ ಸಾಲಿನಲ್ಲಿ ಡೆವಲಪರ್‌ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು.

11:44 AM

ಬಜೆಟ್‌ನಲ್ಲಿ ಎನಿಲ್ಲವೆಂಬ ಘೋಷಣೆ ಕೂಗಿ ಪ್ರತಿಪಕ್ಷಗಳ ಪ್ರತಿಭಟನೆ

ಏನಿಲ್ಲ... ಏನಿಲ್ಲ.. ನೀರಿಲ್ಲ.. ನೀರಿಲ್ಲ ಎಂದು ಘೋಷಣೆ. ರೈತ ವಿರೋಧಿ, ಯುವಕರ ವಿರೋಧಿ, ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗುತ್ತಿರುವ ವಿರೋಧ ಪಕ್ಷಗಳು. ಬೊಮ್ಮಾಯಿ, ಆರ್‌,ಅಶೋಕ್, ವಿಜಯೇಂದ್ರ, ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಪ್ರತಿಭಟನೆ. ವಿಧಾನಸೌಧದಲ್ಲಿಯೂ ಜೈ ಶ್ರೀರಾಮ್ ಘೋಷ‌ಣೆ. ಬಿಜೆಪಿ ಶಾಸಕರಿಂದ ಜೈಶ್ರೀರಾಂ ಘೋಷಣೆ. 

ಬಿಜೆಪಿ ವಿಧಾನಸೌಧದ ಕೆಂಗಲ್ ಗೇಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ ಯತ್ನಾಳ್ ಮತ್ತು ಎಸ್ ಟಿ ಸೋಮಶೇಖರ್ ಪ್ರತಿಭಟನೆಗೆ ತೆರಳದೇ ಸದನದ ಲಾಂಜ್ ನಲ್ಲೇ ಆಸಿನರಾಗಿರುವ ಇಬ್ಬರು ನಾಯಕರು..

11:42 AM

ನಿರೀಕ್ಷೆ ಸುಳ್ಳು ಮಾಡಿದ ಬಜೆಟ್: ಕೋಟಾ ಶ್ರೀನಿವಾಸ ಪೂಜಾರಿ

ಸಿದ್ದರಾಮ್ಮಯ ಮಂಡಿಸಿರುವ ಬಜೆಟ್ ಅತಿಯಾದ ನಿರಿಕ್ಷೆಯಿತ್ತು

ಆದರೆ ಇದರಲ್ಲಿ ಹಿಂದುಳಿದ ಪರಿಶಿಷ್ಟ ಜಾತಿ,ಪಂಗಡದವರನ್ನ ಕಡೆಗಣಿಸಲಾಗಿದೆ

ಸಿದ್ದರಾಮಯ್ಯ ಬಜೆಟ್ ನಲ್ಲಿ ರೈತರಿಂದ ಕಿತ್ತುಕೊಂಡ ಕಿಸಾನ್ ಸಮ್ಮಾನ್ ಯೋಜನೆ ವಾಪಸ್ ಕೊಡುವ ಪ್ರಯತ್ನ ಕೂಡಾ ಮಾಡಿಲ್ಲ

ಇನ್ನೂ ಹಿಂದುಳಿದ ವರ್ಗದ ವಿಧ್ಯಾರ್ಥಿಗಳಿಗೆ ನಮ್ಮ ಸರ್ಕಾರವಿದ್ದಾಗ ಒಂದು ದಿವಸಕ್ಕೆ 36000 ಹಾಸ್ಟೆಲ್ ಕೊಟ್ಟಿದ್ದೇವೆ ಆದರೆ ಸಿದ್ದರಾಮಯ್ಯರ ಬಜೆಟ್ ನಲ್ಲಿ ಹಾಸ್ಟೆಲ್ ಕೊಡುವ ಪ್ರಯತ್ನ ಮಾಡಿಲ್ಲ

ಬಜೆಟ್ ಅಂಕಿ ಅಂಶ ಪ್ರಕಾರ ಎಲ್ಲಾ ವಲಯಗಳಲ್ಲಿ ಕಡಿಮೆ ಮಾಡಿದೆ

ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಟೀಕಿಸುವುದು ಬಿಟ್ಟರೆ ಇನ್ನೇನೂ ಇಲ್ಲ

ಯಾವುದೇ ಬಡವರ ಪರವಾಗಿ ಈ ಬಜೆಟ್ ಇಲ್ಲ

ನಾಳೆ ಸರ್ಕಾರಕ್ಕೆ ಬಜೆಟ್ ನ ವರದಿ ಪಡೆದು ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ

ಕೇಂದ್ರ ಸರ್ಕಾರವನ್ನ ನ್ಯಾಯ ಬದ್ದವಾಗಿ ಟೀಕಿಸಿದ್ರೆ ಅರ್ಥವಿದೆ

ಈ ರಾಷ್ಟ್ರದಲ್ಲಿರುವ ರಾಜ್ಯ ಕ್ಕಿರುವ ಎಷ್ಟು ಪರ್ಸೆಂಟೆಜ್ ಇದೆಯೋ ಅದಕ್ಕಿಂತ ಹೆಚ್ಚಿನದಾಗಿ ಕೊಟ್ಟಿದೆ

ಆದರೆ ರಾಜ್ಯದ ಜನತೆಯ ದಿಕ್ಕನ್ನ ತಪ್ಪಿಸುವ ಕೆಲಸವನ್ನ ಸರ್ಕಾರ ಮಾಡ್ತಿದೆ

11:41 AM

ಡೇರ್ ಡೇವಿಲ್ ಮುಸ್ತಫಾ ಹೆಸರಿಸಿ, ಸಮಾಜ ಕಲ್ಯಾಣಕ್ಕೆ ವಿಶೇಷ ಅನುದಾನ

ಸಮಾಜ ಕಲ್ಯಾಣ 
    ಒಂದು ತೋಟದಲ್ಲಿ ನೂರು ಹೂವು ಅರಳಲಿ
    ಎಲ್ಲಾ ಕೂಡಿ ಆಡುವಂಥ ಗಾಳಿ ಬೀಸಲಿ
- ಡೇರ್‌ ಡೆವಿಲ್‌ ಮುಸ್ತಫಾ ಚಿತ್ರದಿಂದ
159.    ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,44೭ ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,12೧ ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ. 
160.    ವೈಜ್ಞಾನಿಕವಾಗಿ ಹಾಗೂ ಸಂವಿಧಾನಬದ್ಧವಾಗಿ ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ. ಈ ಕುರಿತು ಭಾರತದ ಸಂವಿಧಾನದ ಅನುಚ್ಛೇದ 341ಕ್ಕೆ ಅಗತ್ಯ ತಿದ್ದುಪಡಿ ತಂದು, ಹೊಸದಾಗಿ Clause-3 ಅನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ.  
161.    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
162.    ಕ್ರೈಸ್‌ ಅಡಿಯಲ್ಲಿ 2023-24ನೇ ಸಾಲಿನಲ್ಲಿ 23 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು.
163.    ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್‌ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದು. 
164.    2023-24ನೇ ಸಾಲಿನಲ್ಲಿ 23 ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಮುಖಾಂತರ ನಿರ್ಮಾಣ ಮಾಡಲಾಗುವುದು. 
165.    ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಮಂಜೂರು ಮಾಡಲಾಗುವುದು. 
166.    ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ಪ್ರತಿ ಮಾಹೆಗೆ 100 ರೂ. ನಂತೆ ಹೆಚ್ಚಿಸಲಾಗುವುದು.  
167.    ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿರುವುದರಿಂದ ಬೆಂಗಳೂರು ಪೂರ್ವ ಭಾಗದಲ್ಲಿ 500 ಸಂಖ್ಯೆಯ ಒಂದು ನಿರಾಶ್ರಿತರ ಪರಿಹಾರ ಕೇಂದ್ರವನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
168.    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 
35 ಕೋಟಿ ರೂ.ಗಳ Corpus Fund ಅನ್ನು ಸ್ಥಾಪಿಸಲಾಗುವುದು. ಈ ನಿಧಿಯ ಬಡ್ಡಿ ಆಕರಣೆಯನ್ನು ರೋಗಿಗಳ ಚಿಕಿತ್ಸೆಯ ಅಗತ್ಯಕ್ಕನುಗುಣವಾಗಿ ನೀಡಲಾಗುವುದು. 
169.    ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠವನ್ನು ಸ್ಥಾಪಿಸಲಾಗುವುದು.
170.    ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,750 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.      
ಪರಿಶಿಷ್ಟ ಪಂಗಡಗಳ ಕಲ್ಯಾಣ
171.    ಪರಿಶಿಷ್ಟ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಈ ಸಚಿವಾಲಯಕ್ಕೆ ಅಗತ್ಯ ಹುದ್ದೆಗಳನ್ನು ಸೃಜಿಸಿ 2023-24ನೇ ಸಾಲಿನಿಂದ ಕಾರ್ಯಾರಂಭ ಮಾಡಲಾಗಿದೆ. 
172.    ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು ಎಂದು ಮರು ನಾಮಕರಣ ಮಾಡಲಾಗುವುದು. ಈ ಶಾಲೆಗಳ ಉನ್ನತೀಕರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು;
•    1 ರಿಂದ 5ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲೆಗಳಲ್ಲಿ 6ನೇ ತರಗತಿ ಪ್ರಾರಂಭಿಸಲಾಗುವುದು. 
•    1 ರಿಂದ 7ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲೆಗಳಲ್ಲಿ 8ನೇ ತರಗತಿಯನ್ನು ಪ್ರಾರಂಭಿಸಲಾಗುವುದು.  
•    ಪ್ರತಿ ತರಗತಿಯ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 25 ರಿಂದ 40ಕ್ಕೆ ಹೆಚ್ಚಿಸಲಾಗುವುದು. 
173.    ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳು ಇಲ್ಲದಿರುವ 7 ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡರಂತೆ 100 ಸಂಖ್ಯಾಬಲದ ಬಾಲಕ/ಬಾಲಕಿಯರ 14 ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. 
174.    IISc, IIT ಮತ್ತು NIT ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ 
೬ ರಿಂದ 12 ತಿಂಗಳ ಅವಧಿಯ ವೃತ್ತಿಪರ ತರಬೇತಿ ಕೋರ್ಸ್‌ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿಂಗ್‌ ಪದವೀಧರರಿಗೆ 15,000 ರೂ.ಗಳ ಶಿಷ್ಯವೇತನವನ್ನು ನೀಡಲಾಗುವುದು.
175.    ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ/ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು. 
176.    ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್‌ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳಂತೆ ಶಿಷ್ಯವೇತನ ನೀಡಲಾಗುವುದು.  
177.    ಪರಿಶಿಷ್ಟ ಪಂಗಡದ ಕೊರಗ, ಜೇನುಕುರುಬ, ಯರವ, ಕಾಡುಕುರುಬ, ಸೋಲಿಗ, ಗೊಂಡ, ಸಿದ್ದಿ, ಮಲೈಕುಡಿ, ಕುಡಿಯ, ಹಸಲರು, ಗೌಡಲು, ಬೆಟ್ಟಕುರುಬ, ಹಕ್ಕಿ-ಪಿಕ್ಕಿ, ಇರುಳಿಗ, ರಾಜಗೊಂಡ ಹರಿಣಿಶಿಕಾರಿ ಮುಂತಾದ 23 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಈ ಕೆಳಕಂಡ ಎರಡು ಉಪಕ್ರಮಗಳನ್ನು ರೂಪಿಸಲಾಗುವುದು; 
•    ಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟುಗಳನ್ನು ಮೀಸಲಿರಿಸಿ, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರ ಪ್ರವೇಶ ಕಲ್ಪಿಸಲಾಗುವುದು.
•    ಪಡಿತರ ಚೀಟಿ ಮುಂತಾದ ಸರ್ಕಾರಿ ದಾಖಲೆಗಳನ್ನು ಒದಗಿಸಲು ವಿಶೇಷ ಕೋಶವನ್ನು 3 ಕೋಟಿ ರೂ.ಗಳ ಅನುದಾನದಲ್ಲಿ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಸ್ಥಾಪಿಸಲಾಗುವುದು

11:35 AM

ಇದು ಸಿದ್ದರಾಮಯ್ಯ ಬಜೆಟ್ ಅಲ್ಲ, ಇದು ಕಾಂಗ್ರೆಸ್ ಬಜೆಟ್

ಜಿ.ಟಿ.ದೇವೇಗೌಡ ಹೇಳಿಕೆ.. 

ಈ ರೀತಿ ಬಜೆಟ್ ಮಂಡಿ ವೈಪಲ್ಯ ತೋರಿಸಿದ್ದಿರಿ.. 

ಕೃಷಿಕರಿಗೆ ಏನ್ ಮಾಡಿದ್ದೀರಿ, ರೈತರಿಗೆ 4 ಸಾವಿರ ಕಟ್ ಮಾಡಿದ್ದೀರಿ

ಬರಗಾಲದಲ್ಲಿ ರೈತರಿಗೆ ಏನನ್ನೂ ಕೊಟ್ಟಿಲ್ಲ

ಕೇಂದ್ರ ಸರ್ಕಾರದ ಬಗ್ಗೆ ಸುಳ್ಳು ಹೇಳಿಕೊಳ್ತಾ ಇದ್ದಾರೆ ಸರ್ಕಾರ

ರಾಜ್ಯದ ಜನರಿಗೆ ಸುಳ್ಳು ಹೇಳುವ ಕೆಲಸ ಆಗಿದೆ

ಜಬೆಟ್ ನಲ್ಲಿ 70% ಸುಳ್ಳಿನಿಂದ ಕೂಡಿದೆ...

11:34 AM

ಆರೋಗ್ಯ ಮಾಹಿತಿ ಡಿಜಿಟಲೀಕರಣ

ವೈದ್ಯಕೀಯ ಶಿಕ್ಷಣ

132.    ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯದಲ್ಲಿಯೂ ವ್ಯಾಪಕ ಬೆಳವಣಿಗೆ ಹೊಂದಿರುವುದರಿಂದ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು. 

133.    2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

134.    ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು.

135.    ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ತಾಂತ್ರಿಕ ನೆರವಿನೊಂದಿಗೆ ಸ್ಥಾಪಿಸಲಾಗುವುದು. 

136.    ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಈ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗುವುದು.

137.    ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆಯನ್ನು ನೀಡಲು ಕ್ರಮವಹಿಸಲಾಗುವುದು.

138.    ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 Modular OT ಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

139.    ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಅನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ Cardiac Unit ಪ್ರಾರಂಭಿಸಲಾಗುವುದು.

140.    ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಸಂಸ್ಥೆಗಳಲ್ಲಿ 64 Anaesthesia Workstation ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಸಲಾಗುವುದು.  

141.    ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ Human Milk Bank ಘಟಕಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲಾಗುವುದು.  

142.    ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆ ಹಚ್ಚಲು Viral Research & Diagnostic Laboratory (VRDL) ಅನ್ನು ಸ್ಥಾಪಿಸಲಾಗುವುದು.

143.    ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದರಡಿಯಲ್ಲಿ ಒಂದು Health Repository ಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿಯು ಒಂದೇ ಮೂಲದಿಂದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು. 

144.    ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭಿಸಲಾಗಿರುತ್ತದೆ.  ವೈದ್ಯಕೀಯ ಕಾಲೇಜಿನ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. 

145.    ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡವನ್ನು ನಿರ್ಮಿಸಲಾಗುವುದು.

11:32 AM

25 ಹೊಸ ಪದವಿ ಕಾಲೇಜು ನಿರ್ಮಾಣ

11:31 AM

ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ

 ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ ೯ ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು. 
114.    ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. 
115.    ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.
116.    ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. 
117.    ಗ್ರಾಮೀಣ ಪ್ರದೇಶದ ಜನರಿಗೆ 24x7 ತುರ್ತು ಆರೋಗ್ಯ ಸೇವೆಯನ್ನು ನೀಡಲು ಮುಂದಿನ ೨ ವರ್ಷಗಳಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 
15 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾನವ ಸಂಪನ್ಮೂಲದೊಂದಿಗೆ ಕಾರ್ಯಗತಗೊಳಿಸಲಾಗುವುದು.
118.    ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಮೂಲಕ ಸ್ಥಾಪಿಸಲಾಗುವುದು.
119.    ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6,493 ಆರೋಗ್ಯ ಕ್ಷೇಮ 
ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ 
130 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.
120.    ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿರುವ ಮಕ್ಕಳ ತಜ್ಞರು, ಮತ್ತು ಕ್ರಿಟಿಕಲ್ ಕೇರ್ ಮೆಡಿಸಿನ್ ತಜ್ಞ ಮತ್ತಿತರ ತಜ್ಞ ವೈದ್ಯರುಗಳ ಸೇವೆಯನ್ನು ಟೆಲಿ-ಐಸಿಯು ವ್ಯವಸ್ಥೆಯ ಮೂಲಕ ತಾಲ್ಲೂಕು ಆಸ್ಪತ್ರೆಗಳಿಗೆ ಒದಗಿಸಲಾಗುವುದು.
121.    ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ Chemotherapy ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು.  
122.    ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ 
21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
123.    ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ Hub and Spoke ಮಾದರಿಯಲ್ಲಿ ವಿಸ್ತರಿಸುವ ಮೂಲಕ STEMI (ತೀವ್ರ ಹೃದ್ರೋಗ) ಚಿಕಿತ್ಸೆಯನ್ನು ಬಲಪಡಿಸಲಾಗುವುದು. ಇದಲ್ಲದೇ STEMI and Stroke ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ (Thrombolytic Drugs) ಸಂಗ್ರಹಣೆಗಾಗಿ 32 ಕೋಟಿ ರೂ.ಗಳನ್ನು ಒದಗಿಸಲಾಗುವುದು.
124.    ರಾಜ್ಯದ ಜಿಲ್ಲಾ ಆಸ್ಪತ್ರೆಗಳನ್ನು ಅಗ್ನಿ ಅವಘಡಗಳಿಂದ ರಕ್ಷಿಸಲು 
13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು 
6 ಕೋಟಿ ರೂ.ಗಳ ವೆಚ್ಚದಲ್ಲಿ ಅಳವಡಿಸಲಾಗುವುದು.  
125.    2025 ರೊಳಗೆ ಕ್ಷಯರೋಗ ನಿರ್ಮೂಲನೆಗೊಳಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗಾಗಿ 
87 True-Nat Machines ಗಳನ್ನು ಖರೀದಿಸಲು 
6 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.
126.    ಕಲ್ಯಾಣ ಕರ್ನಾಟಕದಲ್ಲಿ Haemophilia ಮತ್ತು Thalassemia ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ICDT ಕೇಂದ್ರಗಳ ಬಲವರ್ಧನೆಗೆ 
7 ಕೋಟಿ ರೂ.ಗಳನ್ನು ಒದಗಿಸಲಾಗುವುದು. 
127.    ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ First Referral Unit (FRU) ಗಳಲ್ಲಿ ರಕ್ತ ಸಂಗ್ರಹ ಘಟಕಗಳಿಲ್ಲದ ಕಾರಣ, ರೋಗಿಗಳಿಗೆ ತುರ್ತು ಸಮಯದಲ್ಲಿ ರಕ್ತ ಪೂರೈಸಲು ತೊಂದರೆ ಉಂಟಾಗುತ್ತಿದೆ. ಇದನ್ನು ನೀಗಿಸಲು ೫೦ ಹೊಸ ರಕ್ತ ಶೇಖರಣಾ ಘಟಕಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಸ್ಥಾಪಿಸಲಾಗುವುದು.
128.    ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು. ಇದಲ್ಲದೇ ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ  ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು  ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆಯಾಗಿ 11 ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು. 
129.    ಬೆಂಗಳೂರಿನಲ್ಲಿ ಬಡಜನತೆಗೆ ಉಚಿತ ಪ್ರಯೋಗಾಲಯ ಸೇವೆಯನ್ನು ಒದಗಿಸಲು Hub and Spoke ಮಾದರಿಯಲ್ಲಿ 
430 ಪ್ರಯೋಗಾಲಯಗಳ ಸ್ಥಾಪನೆಗೆ ಮುಂದಿನ ಎರಡು ವರ್ಷಗಳಲ್ಲಿ 20 ಕೋಟಿ ರೂ. ಗಳ ಅನುದಾನವನ್ನು ನೀಡಲಾಗುವುದು.
130.    ಮಧುಮೇಹ ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಆಯುಷ್ ಚಿಕಿತ್ಸೆ ನೀಡಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಆಯುರ್ವೇದ ಮಧುಮೇಹ ಘಟಕವನ್ನು ಸ್ಥಾಪಿಸಲಾಗುವುದು.   
131.    ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ 2021ರಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ನೇಮಿಸಿದೆ. ಆಯೋಗವು ನೀಡುವ ವರದಿಯನ್ನಾಧರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

11:29 AM

ಜಲಸಂಪನ್ಮೂಲಕ್ಕೆ ನಿರೀಕ್ಷೆಯಂತೆ ಸಿಕ್ಕಿದ್ಯಾ ಅನುದಾನ

ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕಾಗಿ ಒಂದು ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ 2 ಉಪ ವಿಭಾಗಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಈ ಯೋಜನೆಯಡಿ ಮುಳುಗಡೆಯಾಗುವ ಭೂಮಿಯನ್ನು ಗುರುತಿಸುವ ಸರ್ವೆ ಹಾಗೂ ಮರಗಳ ಎಣಿಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಿದ್ದು ಉಳಿದ ಅಗತ್ಯ ತೀರುವಳಿಗಳನ್ನು ಸಕ್ಷಮ ಪ್ರಾಧಿಕಾರಗಳಿಂದ ಪಡೆದು ಶೀಘ್ರವಾಗಿ ಪ್ರಾರಂಭಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು.
75.    ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥವಾಗಿ (Pre-Commissioning Test) ನೀರು ಹರಿಸಿ ಚಾಲನೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಯೋಜನೆಯ ಎಲ್ಲಾ ಲಿಫ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲಾಗುವುದರ ಜೊತೆ ಸಮತೋಲನಾ ಜಲಾಶಯದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. 
76.    ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಯೋಜನೆಯಡಿಯ 
ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ ಮತ್ತು ಪುನರ್ ವಸತಿ ಹಾಗೂ ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಕೃಷ್ಣಾ ನ್ಯಾಯಾಧಿಕರಣ-2ರ ಅಂತಿಮ ತೀರ್ಪಿನ ಬಾಕಿಯಿರುವ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದರೊಂದಿಗೆ ಅಗತ್ಯವಿರುವ ಕಾನೂನಾತ್ಮಕ ಕ್ರಮಗಳನ್ನು ಮುಂದುವರೆಸಲಾಗುವುದು. 
77.    ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ತನ್ನ 2023-24ನೇ ಸಾಲಿನ ಆಯವ್ಯಯದಲ್ಲಿ 5,300 ಕೋಟಿ ರೂ. ಅನುದಾನ ಘೋಷಿಸಿಲಾಗಿತ್ತು. ಆದರೆ ಈವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿರುವುದಿಲ್ಲ. ಹಾಗೆಯೇ ಹಿಂದಿನ ರಾಜ್ಯ ಸರ್ಕಾರ ತನ್ನ ಆಯವ್ಯಯ ಘೋಷಣೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾನ್ಯತೆ ನೀಡಲಾಗುತ್ತಿರುವುದರಿಂದ ಮಾನ್ಯ ಪ್ರಧಾನಮಂತ್ರಿಗಳಿಗೆ ಅಭಿನಂದನೆಗಳನ್ನು ತಿಳಿಸಲಾಗಿತ್ತು, ಆದರೆ ಈವರೆಗೆ ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರವು ಘೋಷಿಸದೆ ಇರುವುದರಿಂದ ಇದು ಹುಸಿಯಾದ ಘೋಷಣೆಯಾಗಿದೆ. ಪ್ರಸಕ್ತ ಸಾಲಿನಲ್ಲಿ 
ಈ ಯೋಜನೆಯಡಿ ರಾಜ್ಯ ಸರ್ಕಾರವು ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸಲು ಯೋಜಿಸಿದ್ದು, ಆಯವ್ಯಯದಲ್ಲಿ ಘೋಷಿಸಿದಂತೆ ಅನುದಾನವನ್ನು ಬಿಡುಗಡೆ ಮಾಡಿ ಯೋಜನೆಯನ್ನು ರೈತರಿಗೆ ತಲುಪಿಸಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
78.    ಕಳಸಾ ಮತ್ತು ಬಂಡೂರಾ ನಾಲಾ ತಿರುವು ಯೋಜನೆಗಳಡಿ 
3.9 TMC ನೀರಿನ ಬಳಕೆಗಾಗಿ ವಿವರವಾದ ಯೋಜನಾ ವರದಿಗಳಿಗೆ ಕೇಂದ್ರ ಜಲ ಆಯೋಗದ ತೀರುವಳಿ ದೊರಕಿದ್ದು, ಪ್ರಸ್ತುತ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅರಣ್ಯ ತೀರುವಳಿ ನಿರೀಕ್ಷಿಸಿ 
ರಾಜ್ಯ ಸರ್ಕಾರವು ಟೆಂಡರ್ ಪ್ರಕ್ರಿಯೆಯನ್ನು ಚಾಲನೆಗೊಳಿಸಲಾಗಿರುತ್ತದೆ. ಆದರೆ ಈ ನಡುವೆ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಅರಣ್ಯ ತೀರುವಳಿಯನ್ನು ಅನುಮೋದಿಸದೇ ಮುಂದೂಡಲಾಗಿರುತ್ತದೆ. 
79.    ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಜಲಾಶಯ ವ್ಯಾಪ್ತಿಯಲ್ಲಿನ ರೈತರ ಬಹುದಿನದ ಬೇಡಿಕೆಯಾದ ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧವಾಗಿದ್ದು, ಸದರಿ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಕ್ರಿಯೆ ಚಾಲನೆಗೊಳಿಸಿದ್ದು, ಯೋಜನೆ ಕಾರ್ಯಗತಗೊಳಿಸಲು ಆದ್ಯತೆ ನೀಡಲಾಗುವುದು. 
80.    ಪ್ರತಿಷ್ಠಿತ ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಿಸುವ ಯೋಜನೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು. 
81.    ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯನ್ನು (ವಾಲ್ಮಿ) ಪ್ರಸಕ್ತ ಸಾಲಿನಲ್ಲಿ Centre of Excellence in Water Management ಆಗಿ ಉನ್ನತೀಕರಿಸಲಾಗುವುದು.   
82.    ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಮಾಲೀಕತ್ವವಿರುವ ಜಮೀನಿನಲ್ಲಿ ಮತ್ತು ಜಲಾಶಯಗಳ ಹಿನ್ನೀರಿನಲ್ಲಿ ಸೂಕ್ತ ಮಾದರಿಯ ಸೋಲಾರ್ ಪಾರ್ಕ್ಗಳನ್ನು ಸ್ಥಾಪಿಸುವ ಯೋಜನೆಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು. 
83.    ಪ್ರಗತಿಯಲ್ಲಿರುವ ಏತ ನೀರಾವರಿ ಯೋಜನೆಗಳಾದ 
ಬೂದಿಹಾಳ್-ಪೀರಾಪುರ ಹಂತ-1, ಶ್ರೀ ವೆಂಕಟೇಶ್ವರ ಹಾಗೂ ಕೆಂಪವಾಡ ಬಸವೇಶ್ವರ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡ, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಮತ್ತು ಗುರುಮಿಠಕಲ್ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. 
84.    ಪ್ರಗತಿಯಲ್ಲಿರುವ ಹೇಮಾವತಿ ಯೋಜನೆ ವೈನಾಲೆಯಡಿ 5.45 ಕಿ.ಮೀ ಉದ್ದದ ಹಾಗೂ ತುಮಕೂರು ಶಾಖಾ ನಾಲೆಯಡಿ 166.90 ಕಿ.ಮೀ. ಉದ್ದದ ನಾಲೆಯ ಆಧುನೀಕರಣ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ ನೀರಿನ ಬಳಕೆಯ ದಕ್ಷತೆಯು ವೃದ್ಧಿಸಲಿದೆ.  
85.    ಕರ್ನಾಟಕ ನೀರಾವರಿ ನಿಗಮದಡಿ ಏತ ನೀರಾವರಿ ಯೋಜನೆಗಳಾದ ಕಲಬುರಗಿಯ ಯಡಳ್ಳಿ ಹಾಗೂ ತೆರ್ನಳ್ಳಿ, ಉಡುಪಿ ಜಿಲ್ಲೆಯ ಸ್ವರ್ಣ ಹಾಗೂ ಸಿದ್ದಾಪುರ, ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ-ಹಲಗಲಿ, ಸಸಾಲಟ್ಟಿ-ಶಿವಲಿಂಗೇಶ್ವರ, ಶಿರೂರು, ಹನವಾಳ, ಬೆಳಗಾವಿಯ ಜಿಲ್ಲೆಯ ಅಥಣಿ-ಕೊಟ್ಟಲಗಿ-ಅಮ್ಮಾಜೇಶ್ವರಿ, ಶ್ರೀ ಚನ್ನವೃಷಭೇಂದ್ರ, ಮಹಾಲಕ್ಷ್ಮಿ, ಸತ್ತಿಗೇರಿ, ಮಾರ್ಕಂಡೇಯ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಹಳೆಯ ಏತ ನೀರಾವರಿ ಯೋಜನೆಗಳ ಪುನಶ್ಚೇತನ  ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ರಾಯಚೂರು ಜಿಲ್ಲೆಯ ಗುಂಜಳ್ಳಿ, ಕಲಬುರಗಿ ಜಿಲ್ಲೆಯ ಆಳಂದ, ಬೀದರ್ ಜಿಲ್ಲೆಯ ಔರಾದ್, ಬೆಳಗಾವಿ ಜಿಲ್ಲೆಯ ಅರಬಾವಿ, ಹಿರೆಬಾಗೇವಾಡಿ, ಸಂತಿ ಬಸ್ತವಾಡ, ಕಾಗವಾಡ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಿರವತ್ತಿ, ಗದಗ ಜಿಲ್ಲೆಯ ಜಾಲವಾಡಗಿ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ 7,280 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು. ಪ್ರಸ್ತಾಪಿತ ಯೋಜನೆಗಳಿಂದ ಬಾಧಿತ ಅಚ್ಚುಕಟ್ಟು ಪ್ರದೇಶವೂ ಒಳಗೊಂಡಂತೆ 97,698 ಹೆಕ್ಟರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ.
86.    ಕೃಷ್ಣಾ ಭಾಗ್ಯ ಜಲ ನಿಗಮದಡಿ ಏತ ನೀರಾವರಿ ಯೋಜನೆಗಳಾದ ಬಾಗಲಕೋಟೆ ಜಿಲ್ಲೆಯ ಕೆರೂರು, ವಿಜಯಪುರ ಜಿಲ್ಲೆಯ ಹೊರ್ತಿ-ರೇವಣಸಿದ್ದೇಶ್ವರ, ಚಿಮ್ಮಲಗಿ, ಮುಳವಾಡ, ಯಾದಗಿರಿ ಜಿಲ್ಲೆಯ ಭೀಮಾ ಪ್ಲಾಂಕ್, ಪ್ರಸಕ್ತ ಸಾಲಿನಲ್ಲಿ 3,779 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಗಳಿಂದ ಬಾಧಿತ ಅಚ್ಚುಕಟ್ಟು ಪ್ರದೇಶವೂ ಒಳಗೊಂಡಂತೆ 1,09,350 ಹೆಕ್ಟರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ.
87.    ಕೊಪ್ಪಳ ಜಿಲ್ಲೆಯ ಯಲಬುರ್ಗಾ-ಕುಕನೂರು ತಾಲ್ಲೂಕಿನ 38 ಕೆರೆಗಳನ್ನು ಕುಡಿಯುವ ನೀರು ಹಾಗೂ ಅಂತರ ಜಲ ಅಭಿವೃದ್ಧಿಗಾಗಿ ಕೆರೆ ತುಂಬಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ 970 ಕೋಟಿ ರೂ. ಅಂದಾಜು ಮೊತ್ತದಲ್ಲಿ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು.
88.    ಕಾವೇರಿ ನೀರಾವರಿ ನಿಗಮದಡಿ ವಿಶ್ವೇಶ್ವರಯ್ಯ ನಾಲಾ ಜಾಲದ ಹೆಬ್ಬಕವಾಡಿ, ನಿಡಘಟ್ಟ, ತುರುಗನೂರು, ಮಳವಳ್ಳಿ ತಾಲ್ಲೂಕಿನ ಮಾದವಮಂತ್ರಿ ನಾಲೆಗಳ ಹಾಗೂ ಮದ್ದೂರು ತಾಲ್ಲೂಕು ಕೆಮ್ಮಣ್ಣುನಾಲಾ ಆಧುನೀಕರಣ, ಹುಣಸೂರು ತಾಲ್ಲೂಕಿನ ಮರದೂರು, ಕನಕಪುರದ ಹೆಗ್ಗನೂರು ಕೆರೆ ತುಂಬಿಸುವ ಯೋಜನೆಗಳು, ಶ್ರೀರಂಗ ಕುಡಿಯುವ ನೀರು ಯೋಜನೆಗೆ ಪೈಪ್ಲೈನ್ ಮೂಲಕ ನೀರು ಒದಗಿಸುವ ಯೋಜನೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿ, ಗುಬ್ಬಿಯ ಮಠದಹಳ್ಳಿ ಕುಡಿಯುವ ನೀರು ಯೋಜನೆ, ರಾಮನಗರದ ಬಳಿ ಅರ್ಕಾವತಿ River Front Development ಯೋಜನೆಗಳನ್ನು ಅಂದಾಜು 2,000 ಕೋಟಿ ರೂ. ಮೊತ್ತದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು. 
89.    ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟಿ ರೂ. ಮೊತ್ತದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.
90.    ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ (SDMF) ಯೋಜನೆ ರೂಪಿಸಲಾಗುವುದು.

11:28 AM

ಸಹಕಾರ ವಲಯ ಬಲಪಡಿಸಲು ವಿಶೇಷ ಕ್ರಮ, ಕೃಷಿಕರಿಗೆ ನೆರವು

ಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯವನ್ನು ಬಲಪಡಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದೆ.  ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 
27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. 
65.    ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು 
ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
•    ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 50,000 ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 
7,631 ಕೋಟಿ ರೂ. ಬೆಳೆ ಸಾಲ ಮನ್ನಾ ಮಾಡಲಾಗಿತ್ತು. 
ಈ ಯೋಜನೆಯಡಿಯಲ್ಲಿ ಡಿಸಿಸಿ ಬ್ಯಾಂಕುಗಳಿಗೆ ಸುಮಾರು 
132 ಕೋಟಿ ರೂ. ಬಿಡುಗಡೆಯಾಗದ ಪರಿಣಾಮವಾಗಿ ಬ್ಯಾಂಕುಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬೇಕಾಯಿತು. ಆದ್ದರಿಂದ, ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
•    ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಸುಮಾರು 
57,000 ರೈತರಿಗೆ ಅನುಕೂಲವಾಗಲಿದೆ. ಇದರಿಂದ ಡಿಸಿಸಿ/ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂ.ಗಳಷ್ಟು ಸಾಲ ಮರುಪಾವತಿಯಾಗುವ ನಿರೀಕ್ಷೆಯಿರುವುದರಿಂದ ಬ್ಯಾಂಕುಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ. 
ಈ ಉದ್ದೇಶಕ್ಕಾಗಿ 450 ಕೋಟಿ ರೂ. ಅನುದಾನ ಒದಗಿಸಲಾಗುವುದು. 
66.    ಕರ್ನಾಟಕ ಕೃಷಿ ಬೆಲೆ ಆಯೋಗವು ತನ್ನ ವರದಿಯಲ್ಲಿ 26 ಬೆಳೆಗಳನ್ನು ಕರ್ನಾಟಕದಲ್ಲಿ ಪ್ರಮುಖವಾದವು ಎಂದು ಗುರುತಿಸಿದ್ದು, ಇವುಗಳಲ್ಲಿ 1೬ಕ್ಕೆ ಮಾತ್ರ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಿದೆ. ಆದ್ದರಿಂದ ಕರ್ನಾಟಕ ರಾಜ್ಯದ ಇತರ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು.
67.    ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್‌ ಅವರಿಗೆ ಭಾರತ ರತ್ನ ನೀಡಿರುವುದು ಸಂತೋಷದ ವಿಷಯ. ಅವರ ಅಧ್ಯಕ್ಷತೆಯ ಸಮಿತಿ ವರದಿ ಶಿಫಾರಸು ಮಾಡಿದಂತೆ ಕನಿಷ್ಠ ಬೆಂಬಲ ಬೆಲೆಯನ್ನು ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇ.50 ರಷ್ಟು ಲಾಭಾಂಶ ಆಧಾರದಡಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
68.    ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿ ತರಲಾಗುವುದು. 
69.    ಕೃಷಿ ಉತ್ಪನ್ನ ಸಂಸ್ಕರಣೆ, ಮಾರುಕಟ್ಟೆ ಸಂಪರ್ಕ ಮತ್ತು ಮೌಲ್ಯವರ್ಧನೆಯಲ್ಲಿಯೂ ಸಹಕಾರ ವಲಯವು ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷಿ ಮಾರಾಟ ಇಲಾಖೆಯ ಮೂಲಕ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
•    ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಹಾಗೂ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ 
ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹಗಳನ್ನು ನಿರ್ಮಿಸಲಾಗುವುದು.
•    ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಮತ್ತು ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುವುದು. 
•    ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ 
35 ಕೋಟಿ ರೂ.  ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣವನ್ನು ಸ್ಥಾಪಿಸಲಾಗುವುದು. 
•    ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲಾ ಕಾರ್ಯ ಚಟುವಟಿಕೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟೈಜ಼್ ಮಾಡಲಾಗುವುದು.
•    ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ 
Bio CNG Plant ಸ್ಥಾಪಿಸುವ ಮೂಲಕ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು.
•    ಎ.ಪಿ.ಎಂ.ಸಿ ಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ Charging ಕೇಂದ್ರಗಳನ್ನು ಹಾಗೂ ಪೆಟ್ರೋಲ್ ಬಂಕ್ಗಳನ್ನು 
PPP ಮಾದರಿಯಲ್ಲಿ ಸ್ಥಾಪಿಸಲು ಒತ್ತು ನೀಡಲಾಗುವುದು.
70.    ಎ.ಪಿ.ಎಂ.ಸಿ ಗಳನ್ನು ಬಲಪಡಿಸುವ ಮೂಲಕ ರೈತರಿಗೆ ತಮ್ಮ ಬೆಳೆಗಳಿಗೆ ಉತ್ತಮ ಆದಾಯ ಗಳಿಸಲು ನೆರವಾಗಲು ಈ ಕೆಳಕಂಡ ಕ್ರಮಗಳನ್ನು ಪ್ರಸ್ತಾಪಿಸಿದೆ;  
•    ರೈತ ವಿರೋಧಿ ಎ.ಪಿ.ಎಂ.ಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ವಿಧೇಯಕಕ್ಕೆ ವಿಧಾನ ಸಭೆಯ ಅಂಗೀಕಾರ ಪಡೆಯಲಾಗಿದ್ದು, ವಿಧಾನ ಪರಿಷತ್ತಿನಲ್ಲಿ ಸದನ ಸಮಿತಿಯ ಪರಿಶೀಲನೆಗೆ ಒಪ್ಪಿಸಲಾಗಿದೆ. ಸದರಿ ವಿಧೇಯಕಕ್ಕೆ ಶೀಘ್ರದಲ್ಲಿಯೇ ಅಂಗೀಕಾರ ಪಡೆಯಲು ಕ್ರಮವಹಿಸಲಾಗುವುದು.
•    ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಮಾರುಕಟ್ಟೆ ಸಮಿತಿಗಳಿಗೆ ಅನುದಾನ ಒದಗಿಸಲು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಗೆಯನ್ನು ಪಡೆಯುವ ಮೂಲಕ ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪಿಸಲು ಕಾನೂನು ರಚಿಸಲಾಗುವುದು. 
•    ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆಂಬಲ ನೀಡಲು ಕ್ರಮವಹಿಸಲಾಗುವುದು.  
71.    ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತ ಕಾಯಲು ಮತ್ತು ತೂಕದಲ್ಲಾಗುವ ಮೋಸ ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳ ಬಳಿ Weigh Bridge ಗಳನ್ನು ಎ.ಪಿ.ಎಂ.ಸಿ. ಗಳ ಮೂಲಕ ಸ್ಥಾಪಿಸಲಾಗುವುದು.
72.    ಕರ್ನಾಟಕ ಉಗ್ರಾಣ ನಿಗಮವು ತೀವ್ರ ಹಣಕಾಸು ಹಾಗೂ ಆಡಳಿತಾತ್ಮಕ ಬಿಕ್ಕಟ್ಟು ಎದುರಿಸುತ್ತಿದ್ದು, ನಾವು ಅಧಿಕಾರಕ್ಕೆ ಬಂದ ನಂತರ 4.54 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ 76 ಗೋದಾಮುಗಳ ನಿರ್ಮಾಣ ಪೂರ್ಣಗೊಳಿಸಲು 376 ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗಿದೆ.
73.    ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಬಳಕೆಯಾಗದೇ ಇರುವ ಉಗ್ರಾಣಗಳ ಸಾಮರ್ಥ್ಯ ಬಳಸಿ ಪಿಪಿಪಿ ಮಾದರಿಯಲ್ಲಿ ಶೀತಲಗೃಹಗಳನ್ನು ಸ್ಥಾಪಿಸಲಾಗುವುದು.

11:27 AM

ಅಪಘಾತವಾದರೆ ಮೀನುಗಾರರಿಗೆ ನೆರವಾಗಲು ವಿಶೇಷ ಅ್ಯಂಬುಲೆನ್ಸ್ ಸ್ಫಾಪನೆ

ಈ ಆಯವ್ಯಯದಲ್ಲಿ ಘೋಷಿಸಲಾದ ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಈ ಕೆಳಕಂಡ ಯೋಜನೆಗಳನ್ನು ಜಾರಿಗೊಳಿಸಲಾಗುವುದು;
•    ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ 10,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು. 
•    ಅಮೃತ ಮಹಲ್/ ಹಳ್ಳಿಕಾರ್/ ಖಿಲಾರಿ ರಾಸುಗಳನ್ನು ಸಂವರ್ಧನೆ ಮಾಡಿ ಉತ್ಕೃಷ್ಟ ಕರುಗಳನ್ನು ಒದಗಿಸಲಾಗುವುದು.  
•    ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ.6ರ ಬಡ್ಡಿ ಸಹಾಯಧನ ನೀಡಲಾಗುವುದು.
•    ಹಂದಿ ಮತ್ತು ಕೋಳಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಸಕ್ತ ರೈತರಿಗೆ ತರಬೇತಿ ನೀಡುವ ಮೂಲಕ ರೈತರ ಆದಾಯ ಹೆಚ್ಚಿಸಲಾಗುವುದು.
54.    ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ಪಾಲಿಕ್ಲಿನಿಕ್ಗಳನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು ಕ್ರಮವಹಿಸಲಾಗುವುದು. ಪ್ರಥಮ ಹಂತದಲ್ಲಿ ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಒದಗಿಸಲಾಗುವುದು. 
55.    ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ 
100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು. 
56.    ರಾಜ್ಯದಲ್ಲಿ ಪರಂಪರಾಗತವಾಗಿ ಕುರಿ/ ಮೇಕೆ ಸಾಕಾಣಿಕೆಯನ್ನು ವಲಸೆ ಮುಖಾಂತರ ಕೈಗೊಳ್ಳುತ್ತಿರುವ ಕುರಿಗಾರರ ಹಿತರಕ್ಷಣೆಗಾಗಿ 
ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು:
•    ವಲಸೆ ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಲಾಗುವುದು.
•    ಸಂಚಾರಿ ಕುರಿಗಾಹಿಗಳು ಇರುವ ಜಾಗದಲ್ಲೇ ಅವರ ಕುರಿ, ಮೇಕೆಗಳಿಗೆ ಸರ್ಕಾರಿ ವೈದ್ಯರಿಂದ ಲಸಿಕೆ ಹಾಕಲಾಗುವುದು.
•    ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.
•    ಸಂಚಾರಿ ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿ ವೇತನ ನೀಡಲಾಗುವುದು.
57.    ಪುತ್ತೂರು ಪಶುವೈದ್ಯಕೀಯ ಕಾಲೇಜಿನ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಕಾಲೇಜನ್ನು ಕಾರ್ಯಾರಂಭ ಮಾಡಲಾಗುವುದು.

11:27 AM

ಪಶುಸಂಗೋಪನೆ ಗೆ ಕಂಡರಿಯದ ಅನುದಾನ ನೀಡಿದ ಸಿಎಂ

11:26 AM

ರೇಷ್ಮೆ ಬೆಳೆಗಾರರಿಗೂ ವಿಶೇಷ ಆದ್ಯತೆ

50.    ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ 
ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
51.    ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹಧನವನ್ನು ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ವಾರ್ಷಿಕ 12 ಕೋಟಿ ರೂ. ಒದಗಿಸಲಾಗುವುದು.
52.    ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಕಿಲೋಗೆ 10 ರೂ.ನಿಂದ 30 ರೂ.ಗೆ ಹೆಚ್ಚಿಸಲಾಗುವುದು.

11:26 AM

ತೋಟಗಾರಿಕೆ ಕ್ಷೇತ್ರ ಅಭಿವೃದ್ಧಿಗೆ ಒತ್ತು

43.    ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ಗಳನ್ನು ಸ್ಥಾಪಿಸಲಾಗುವುದು. 
44.    ರಾಜ್ಯದಲ್ಲಿ 40,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
45.    ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಕೊಯ್ಲೋತರ ನಿರ್ವಹಣಾ ಕೇಂದ್ರ (Packhouse) ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
46.    ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು. 
47.    ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಇಂಗಾಲವನ್ನು ಹಿಡಿದಿಟ್ಟುಕೊಳ್ಳುವ ಬೆಳೆಗಳನ್ನು ಗುರುತಿಸಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 
Carbon Credit ರೂಪದಲ್ಲಿ ಮಾರಾಟ ಮಾಡುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಲು ಅನುಕೂಲವಾಗುವಂತೆ ಉತ್ತೇಜನ ನೀಡಲಾಗುವುದು.
48.    ರಾಜ್ಯದಲ್ಲಿ ಸಾಂಬಾರು ಪದಾರ್ಥ ಬೆಳೆಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕ್ನ್ನು (Spice Park) ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. 
49.    ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು.

11:25 AM

ಸಿದ್ದರಾಮಯ್ಯ ಅನ್ನದಾತರಿಗೆ ನೀಡಿದ್ದೇನು?

        ಹೊಲವನುತ್ತು ಬಿತ್ತೋರು 
        ಬೆಳೆಯ ಕುಯ್ದು ಬೆವರೋರು
        ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು
-    ಪದ್ಮಶ್ರೀ ಡಾ|| ಸಿದ್ದಲಿಂಗಯ್ಯ

29.    ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು; 
•    ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು.
•    ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು.
•    ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.
•    ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು. 
•    ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.
•    ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು. 
30.    ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು. 
31.    ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು.   
32.    ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಅನ್ನು ಸ್ಥಾಪಿಸಲಾಗುವುದು. 
33.    ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಸ್ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು. 
34.    ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ 
1,000 ದಂತೆ ಒಟ್ಟು 5,೦೦೦ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು. 
35.    ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
36.    ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ 
ಸಲಹೆ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ e-SAP ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲು ಕ್ರಮ ವಹಿಸಲಾಗುವುದು.  
37.    ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು. 
38.    ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮವಹಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕಾಗಿ PMFME ಯೋಜನೆಯಡಿಯಲ್ಲಿ 80 ಕೋಟಿ ರೂ.ಗಳನ್ನು ಒದಗಿಸಲಾಗುವುದು. 
39.    ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು. 
40.    ಕೃಷಿ ನಾವೀನ್ಯತೆಯ ಯುಗದಲ್ಲಿ ಪಾರಂಪರಿಕ ಕೃಷಿ ಪದ್ಧತಿಯಲ್ಲಿ ಗಣನೀಯ ಬದಲಾವಣೆಗಳಾಗಿದ್ದು, ಉಪಗ್ರಹ ಚಿತ್ರ, ಸೆನ್ಸರ್ಗಳ ಬಳಕೆ ಮತ್ತು ಮಷಿನ್ ಲರ್ನಿಂಗ್ ನಂತಹ (Machine Learning) ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ಒಂದು ದತ್ತಾಂಶವನ್ನು ಅಭಿವೃದ್ಧಿಪಡಿಸಲಾಗುವುದು. 
41.    ರೈತ ಉತ್ಪಾದಕ ಸಂಸ್ಥೆಗಳನ್ನು (FPO) ಇನ್ನಷ್ಟು ಸದೃಢ 
ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ಪೂರಕವಾದ 
ತರಬೇತಿ, ಮಾರ್ಗದರ್ಶನ ಹಾಗೂ ಬೆಂಬಲ ನೀಡುವ 
Agri Accelerator Platform ಮೂಲಕ ಕೃಷಿ ವಲಯದ Start-up ಗಳನ್ನು ಉತ್ತೇಜಿಸಲಾಗುವುದು.
42.    ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು.

11:21 AM

ಆಗದು ಎಂದು ಕೈ ಕಟ್ಟಿ ಕುಳಿದರೆ..ಹಾಡು ಸ್ಮರಿಸಿದ ಸಿದ್ದರಾಮಯ್ಯ

ವರನಟ ಡಾ|| ರಾಜ್‌ಕುಮಾರ್‌ ಅಭಿನಯದ ಹಾಗೂ ಆರ್.ಎನ್.ಜಯಗೋಪಾಲ್‌ ರಚಿಸಿದ ಬಂಗಾರದ ಮನುಷ್ಯ ಚಿತ್ರದ ಈ ಹಾಡಿನಂತೆ ದೇಶದ ಯಾವುದೇ ಸರ್ಕಾರ ಜಾರಿಗೊಳಿಸದ ಅತ್ಯಂತ ಬೃಹತ್‌ ಪ್ರಮಾಣದ ನೇರ ನೆರವು ನೀಡುವ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಶ್ರೇಯ ನಮ್ಮದಾಗಿದೆ. ನಮ್ಮ ಮಹತ್ವಾಕಾಂಕ್ಷೆಯ ಗ್ಯಾರಂಟಿಗಳು ಜನರ ಆಶೋತ್ತರಗಳನ್ನು ಆಧರಿಸಿವೆ.

11:20 AM

ಬೆಂಗಳೂರಲ್ಲಿ ರಾತ್ರಿ 1 ವರೆಗೂ ಹೊಟೇಲ್ ಓಪನ್

ಬೆಂಗಳೂರಲ್ಲಿ ಲೇಟ್ ನೈಟ್ ಕೆಲಸ ಮಾಡುವವರಿಗೆ ಅನುಕೂಲವಾಗುವಂತೆ ರಾತ್ರ 1ರವರೆಗೂ ಹೊಟೇಲ್ ಓಪನ್ ಮಾಡಲಾಗುವುದು. 

11:19 AM

ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗೆ ನಿರ್ಧಾರ

ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ..
ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ
ಜಾನಪದ ಕಲೆಗಳ ಪುನರುಜ್ಜೀವನಕ್ಕೆ ಅನುದಾನ..
ಕೀರ್ತನೆಗಳ ಪ್ರಚಾರಕ್ಕೆ ೧ ಕೋಟಿ ಮೀಸಲು..
ಕಲಬುರಗಿ ವಿವಿಯಲ್ಲಿ ತತ್ವಪದ,ಸೂಫಿ ಅಧ್ಯಯನ ಪೀಠ
ಕಲಬುರಗಿ,ರಾಯಚೂರು,ಮೈಸೂರಿನಲ್ಲಿ ಜವಳಿ ಪಾರ್ಕ್..
10 ಸಾವಿರ ಉದ್ಯೋಗ ಸೃಷ್ಟಿಗೆ ನಿರೀಕ್ಷೆ..
ಬಳ್ಳಾರಿಯಲ್ಲಿ ಜೀನ್ಸ್ ಅಪಾರೆಲ್ಸ್ ಪಾರ್ಕ್ ಅಭಿವೃದ್ಧಿ..
ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ‌ ಜವಳಿ ಪಾರ್ಕ್ ಸ್ಥಾಪನೆ

11:18 AM

ಬರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ

ರಾಜ್ಯದ 223 ತಾಲ್ಲೂಕುಗಳಲ್ಲಿ ಬರ ಇದೆ

ಕೇಂದ್ರದಿಂದ 18,171 ಕೋಟಿ ರೂ ಬರ ಪರಿಹಾರ ಕೋರಲಾಗಿದೆ

ಬರ ಪರಿಹಾರ ಆಗ್ರಹಿಸಿ ಕೇಂದ್ರಕ್ಕೆ ಮೂರು ಮೆಮೊರಾಂಡಮ್ ಸಲ್ಲಿಕೆ, ಆದ್ರೆ ಕೇಂದ್ರ ಇದುವರೆಗೆ ಸ್ಪಂದಿಸಿಲ್ಲ

ಕೇಂದ್ರದ ವಿರುದ್ಧ ಬಜೆಟ್ ನಲ್ಲಿ ಆಕ್ರೋಶ

ರಾಜ್ಯದಿಂದ ಬರ ಪರಿಸ್ಥಿತಿ ನಿರ್ಬಹಣೆಗೆ ಹೊಸ ಘೋಷಣೆ

ವಿವಿಧ ಬರ ಪರಿಹಾರ ಕ್ರಮಕ್ಕೆ ಬಜೆಟ್ ನಲ್ಲಿ 500 ಕೋಟಿ ಘೋಷಣೆ

ರಾಜ್ಯ ವಿಪತ್ತು ಉಪಶಮನ ನಿಧಿಯಿಂದ 500 ಕೋಟಿ ಕೊಡುವ ಘೋಷಣೆ

11:13 AM

ಮಂಡ್ಯದಲ್ಲಿ ವಿಸಿ ಫಾರಂ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ

ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

11:12 AM

ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡಲು ನಿರ್ಧಾರ

ಸ್ವಾಮೀನಾಥನ್ ಶಿಫಾರಸ್ಸಿನಂತೆ ಕನಿಷ್ಟ ಬೆಂಬಲ ಬೆಲೆ ನಿಗದಿಗೆ ತಿರ್ಮಾನ..
ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇಕಡಾ ೫೦ ರಷ್ಟು ಲಾಭಾಂಶ ಆಧಾರದಲ್ಲಿ ನಿಗದಿಗೆ ಒತ್ತಾಯ..
ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡಲು ಬಜೆಟ್ ಪ್ರಸ್ತಾಪ...

ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ೧೦೦ ಕೋಟಿ ರೂ..

ನಾರಾಯಣಗುರು, ಲೋಹಿಯಾ, ಬಾಬುಜೀವನರಾಮ್ ಬರಹ ಕನ್ನಡಕ್ಕೆ ಭಾಷಾಂತರ..

ಕನಕದಾಸ ಅಧ್ಯಯನ ಕೇಂದ್ರದ ಮೂಲಕ  ಸಾಹಿತ್ಯ ಸಮೀಕ್ಷೆಗಾಗಿ ೧ ಕೋಟಿ ರೂ..

ಸೂಫಿಗಳ ಬದುಕು ಮತ್ತು ಸಂದೇಶಗಳ ಅಧ್ಯಯನಕ್ಕಾಗಿ ಕಲಬುರಗಿ ವಿವಿ ಯಲ್ಲಿ ಅಧ್ಯಯನ ಪೀಠ..
ಶಿವಯೋಗಿ ಸಿದ್ಧರಾಮೇಶ್ವರವರ ಬದುಕು - ಬರಹ ಅಧ್ಯಯನಕ್ಕಾಗಿ ಮಹಿಳಾ ವಿವಿ ಯಲ್ಲಿ ಅಧ್ಯಯನ ಪೀಠ..

ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ನಿರ್ಧಾರ...

ನೀರಾವರಿ ಯೋಜನೆಗೆ ಹೊದ ವರ್ಷಕ್ಕಿಂತ ಕಡಿಮೆ ಅನುದಾನ..
ಕೃಷ್ಣ ಭದ್ರಾ, ಮಹಾದಾಯಿಗೆ ಕೇಂದ್ರದ ಅನುದಾನಕ್ಕೆ ಕಾಯಲು ತಿರ್ಮಾನ...

ಶಿಕ್ಷಣ ಸಂಸ್ಥೆಗಳಲ್ಲಿ ಸಾಮರಸ್ಯ ಮೂಡಿಸಲು ನಾವು ಮನುಜರು ಕರ‍್ಯಕ್ರಮ..
ವಾರದಲ್ಲಿ ಎರಡು ಗಂಟೆ ವಿಚಾರ ವಿಮರ್ಶೆ ಮಾಡಲು ಬಜೆಟ್ ನಲ್ಲಿ ಪ್ರಸ್ತಾಪ..

2000 ಶಾಲೆಗಳು ಕನ್ನಡ ಮತ್ತು ಇಂಗ್ಲೀಷ್ ದ್ವಿಭಾಷಾ ಶಾಲೆಯಾಗಿ ಘೋಷಣೆ..

ಗ್ಯಾರಂಟಿ ಜಾರಿಯಾಗುವ ಇಲಾಖೆಗಳಿಗೆ ಹೆಚ್ಚುವರಿ ಅನುದಾನ..
ಉಳಿದ ಇಲಾಖೆಗಳಿಗೆ ಕಡಿಮೆ ಅನುದಾನ ನೀಡಿರುವ ರಾಜ್ಯ ಬಜೆಟ್..

ಬೆಂಗಳೂರು ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ೫೦೦ ಕೋಟಿ ರೂ ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಮೇಲ್ದರ್ಜೇಗೆ..

11:10 AM

ದ್ವಿ ಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ

ಸಿಎಸ್ ಆರ್ ಅಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆ, ಕಲಿಕಾ ಸಾಮರ್ಥ್ಯ ಸುಧಾರಿಸಲು ಮರು ಸಿಂಚನ ಕಾರ್ಯಕ್ರಮ. ನಾವು ಮನುಜರು ಎಂಬ ಹೆಸರಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿಚಾರ ವಿಮರ್ಶೆ ಕಾರ್ಯಕ್ರಮ. ಪದವಿ ಪೂರ್ವ ಕಾಲೇಜುಗಳು ನಿರ್ಮಾಣಕ್ಕೆ ಒತ್ತು. ವಿದ್ಯಾರ್ಥಿಗಳ ಸಂಖ್ಯಾ ಬಲ ಹೆಚ್ಚಿರುವ ಕಾಲೇಜುಗಳಲ್ಲಿ ಗಣಕ ಸಂಯೋಜನೆ ಆರಂಭ. 400 ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕಾಲೇಜುಗಳು ಪ್ರಯೋಗಾಲಯ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸಲಾಗುವುದು. 

11:08 AM

ಕಸ ಸಂಸ್ಕಾರಕ್ಕೆ ವಿಶೇಷ ಕಸ ಸಂಸ್ಕರಣೆಆದ್ಯತೆ

ಬೆಂಗಳೂರು ನಗರ - ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡನೆ

ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ 50 ರಿಂದ 100 ಎಕರೆ ಜಮೀನಿನಲ್ಲಿ ತ್ಯಾಜ್ಯ ಸಂಸ್ಕರಣೆ 

30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಘಟಕ‌ ನಿರ್ಮಾಣ

ಬಿಬಿಎಂಪಿ ಕೆರೆ ಮತ್ತು ಉದ್ಯಾನವನ

ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ

 ನಗರದಲ್ಲಿ ವಾತಾವರಣದ ಸ್ವಚ್ಛತೆಗಾಗಿ ಮರಗಳ - ಗಣತಿ, 

ಕೆರೆ ಮತ್ತು ಉದ್ಯಾನವನಗಳ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ 

 ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಯಲ್ಲಿ

ಬಿಬಿಎಂಪಿ ಸಹಯೋಗದೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞ ಉದ್ಯಾನನ ಅಭಿವೃದ್ಧಿ

11:07 AM

ನೀರು ಪೂರೈಕೆ ಮತ್ತು ಸ್ವಚ್ಛತೆಯ ನಿರ್ವಹಣೆಗೆ ಒತ್ತು

5,550 ಕೋಟಿ ರೂ. ಅಂದಾಜ ವೆಚ್ಚದಲ್ಲಿ 775 ಎಂ.ಎಲ್.ಡಿ ಸಾಮರ್ಥ್ಯದ ಕಾವೇರಿ ಹಂತ- ಯೋಜನೆಯನ್ನು

12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್ ಶುದ್ಧ  ಕುಡಿಯುವ ನೀರು

 ಕಾವೇರಿ ಹಂತ-5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು

 13 ಎಸ್.ಟಿ.ಪಿ ಘಟಕಗಳಿಂದ 100 ಎಂ.ಎಲ್.ಡಿ ರಷ್ಟು ಒಳಚರಂಡಿ ನೀರನ್ನು ಸಂಸ್ಕರಿಸುವ ಘಟಕ

ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (ಎಸ್.ಟಿ.ಪಿ) 441 ಕೋಟಿ ರೂ.ಗಳ ಮೊತ್ತದಲ್ಲಿ ಉನ್ನತೀಕರಣ

 ಆ‌ಮೂಲಕ‌ 268 ಎಂ.ಎಲ್.ಡಿ ತ್ಯಾಜ್ಯ ನೀರನ್ನು ಪ್ರತಿನಿತ್ಯ ಸಂಸ್ಕರಿಸಿ ಮರುಬಳಕೆ

ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ

 200 ಕೋಟಿ ರೂ.ಗಳ ಮೊತ್ತದಲ್ಲಿ 110 ಹಳ್ಳಿಗಳಿಗೆ ಕುಡಿಯುವ ನೀರು ಸೌಲೇ 

11:06 AM

ಬೆಂಗಳೂರು ಮೆಟ್ರೊ ಬಿಎಂಟಿಸಿ ಉಪರೈಲು-

ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್-ಅರ್ಬನ್ ರೈಲು ಯೋಜನೆಗಳು ಸೇರಿ ಬಹುವಿಧ ಸಾರಿಗೆ ವ್ಯವಸ್ಥೆಗಳ ಒಗ್ಗೂಡಿಸುವಿಕೆ

 ನಮ್ಮ ಮೆಟ್ರೋಗೆ 2025 ರ ವೇಳೆಗೆ 44 ಕಿಲೋಮೀಟರ್ ಅಧಿಕ ಮಾರ್ಗ ಸೇರ್ಪಡೆ

15,611 ಕೋಟಿ ವೆಚ್ಚದಲ್ಲಿ ಅನುಮೊಧನೆ 

ಸರ್ಕಾಪುರ ಅಗ್ರಹಾರ ಕೋರ ಮಂಗಳ ಡೈರಿ ವೃತ್ತ, ಮೇಖ್ರಿ ವೃತ್ತ ಹೆಬ್ಬಾಳ ಸಂಪರ್ಕಿಸುವ ಮಾರ್ಗ 

ಬೆಂಗಳೂರು ಉಪ ರೈಲು ಯೋಜನೆ ಚುರುಕು

ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣವರ, ಹೀಲಲಿಗೆಯಿಂದ ರಾಜಾನಕುಂಟೆ ವರೆಗೆ 42.2 ಕಿಲೋ ಮೀಟರ್

ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ನಿಕ್ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆ

ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು Area Traffic Signal Control System & ថ 28 ಜಂಕ್ಷನ್‌ಗಳಲ್ಲಿ ಅಳವಡಿಕೆ

ಈ ಟ್ರಾಫಿಕ್ ಸಿಗ್ನಲ್ ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆ

11:06 AM

ಸಂಚಾರ ತಡೆಗೆ ಸುರಂಗ ಮಾರ್ಗ ನಿರ್ಮಾಣ

2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ 

• ಪ್ರಸಕ್ತ ಸಾಲಿನಿಂದ ಪರಿಷ್ಕೃತ ಜಾಹೀರಾತು ನೀತಿ ಮತ್ತು Premium FAR 3 30 35 ಹೆಚ್ಚುವರಿಯಾಗಿ 2,000 ಕೋಟಿ ರೂ.ಗಳಷ್ಟು ತೆರಿಗೆಯೇತರ ಸಂಪನ್ಮೂಲ ಸಂಗ್ರಹಿಸುವ ಗುರಿ ಹೊಂದಲಾಗಿದೆ.

• ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣ

2024 - 25 ನೇ  ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳು ಲಭ್ಯ

ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿ

 1,700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಗಳು ಡಿಸೆಂಬರ್ 2025 ರೊಳಗೆ ಪೂರ್ಣ

 ಬೆಂಗಳೂರಿನಲ್ಲಿ ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧಾರ

ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ನಿರ್ಮಾಣ

ರಾಜಕಾಲೂವೆ ನಾಲೆಗಳ ಬಫರ್ ವಲಯದೊಳಗೆ ನಾಲಾ ಬಫರ್ ಅನ್ನು ನಿರ್ಮಾಣ ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಾಣ
 
200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ಬಫರ್ ರಸ್ತೆ

ಪ್ರಸಕ್ತ ಸಾಲಿನಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿ

ಬೆಂಗಳೂರು

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ಪೆರಿಫೆರಲ್ ರಿಂಗ್ ರೋಡ್

 ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ 73 ಕಿ.ಮೀ. ಉದ್ದದ ರಸ್ತೆ

27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ

 ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸೈ-ಡೆಕ್ (Sky-Deck) ನಿರ್ಮಾಣ

BBMP. BMRCL BWSSB, BDA ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ ನಿರ್ಮಾಣ 

 ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ  ಬೆಳಗಿನ ಜಾವ ಒಂದು ಗಂಟೆಯವರೆಗೆ (1:00 am) ವ್ಯಾಪಾರ ವಹಿವಾಟಿಗೆ ಅವಕಾಶ

11:05 AM

ಬೆಂಗಳೂರಿಗೆ ಸಿಕ್ಕಿದ್ದೇನು?

ಬಿಬಿಎಂಪಿ ವ್ಯಾಪ್ತಿಯ 20 ಲಕ್ಷ ಆಸ್ತಿ ತೆರಿಗೆ ಡಿಜಿಟಲೀಕರಣ
ನಗರದ ಪ್ರಮುಖ ರಸ್ತೆಗಳಿಗೆ ವೈಟ್ ಟಾಪಿಂಗ್ ಮುಂದುವರಿಕೆ
147 ಕಿ.ಮೀ ಉದ್ದದ ರಸ್ತೆ 1700 ಕೋಟಿ  ವೆಚ್ಚದಲ್ಲಿ ವೈಟ್ಟಾಪಿಂಗ್
ಹೆಬ್ಬಾಳ ಜಂಕ್ಷನ್ನಲ್ಲಿ ಪ್ರಾಯೋಗಿಕವಾಗಿ ಟನೆಲ್ ನಿರ್ಮಿಸಲು ನಿರ್ಧಾರ
ಸುಗಮ ಸಂಚಾರ ಯೋಜನೆಗೆ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆ ನೇಮಕ
73ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ
ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈ ಡೆಕ್ ನಿರ್ಮಾಣ
7 ತ್ಯಾಜ್ಯ  ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ 441 ಕೋಟಿ ರೂ
ಬಿಬಿಎಂಪಿಗೆ ಸೇರ್ಪಡೆಯಾದ 11 ಹೊಸ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು
200 ಕೋಟಿ ರೂ. ಮೊತ್ತದಲ್ಲಿ ಎರಡನೇ ಹಂತದ ಕುಡಿಯುವ ನೀರಿನ ಯೋಜನೆ
ಬೆಂಗಳೂರಿನ ಹೊರವಲಯದಲ್ಲಿ 4 ಕಡೆ ಕಸ ತ್ಯಾಜ್ಯ ವಿಲೇವಾರಿಗೆ ಅವಕಾಶ
50ರಿಂದ 100 ಎಕರೆ ಜಮೀನು ಗುರುತಿಸಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ
2024ರಲ್ಲಿ ಈಗಿರುವ 74 ಕಿ.ಮೀ ಜೊತೆ ಇನ್ನೂ 44 ಕಿ.ಮೀ ಸಿದ್ಧವಾಗಲಿದೆ
ಮೆಟ್ರೋ ಯೋಜನೆ ಹಂತ 2 ಮತ್ತು ಹಂತ 2ಎ ಮಾರ್ಗ ಪೂರ್ಣ ಗುರಿ
ನಮ್ಮ ಮೆಟ್ರೋ ಹಂತ 3ಕ್ಕೆ ಅಂದಾಜು 15.61 ಕೋಟಿ ರೂ ಅನುಮೋದನೆ
ಮೆಟ್ರೋ ಹಂತ 3ಕ್ಕೆ ಕೇಂದ್ರ ಸರ್ಕಾರದ ಅನುಮೋದನೆಯ ನಿರೀಕ್ಷೆ ಇದೆ
ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಗೆ ಚುರುಕು
1334 ಹೊಸ ಎಲೆಕ್ಷ್ಟ್ರಿಕ್ ಬಸ್ಗಳು, 820 ಡೀಸೆಲ್ ಬಸ್ ಸೇರ್ಪಡೆ
ಟ್ರಾಫಿಕ್ ಸಿಗ್ನಲ್ ನಿರ್ವಣೆಗೆ ಜಪಾನ್ ತಂತ್ರಜ್ಞಾನದ ನೆರವು
ಪ್ರಮುಖ 28 ಜಂಕ್ಷನ್ಗಳಲ್ಲಿ ನೂತನ ಟ್ರಾಫಿಕ್ ಸಿಗ್ನಲ್ ಅಳವಡಿಕೆ
ಬೆಂಗಳೂರು ಜಲಮಂಡಳಿಗೆ 5,550 ಕೋಟಿ ಅನುದಾನ
13 ಎಸ್ಟಿಪಿ ಒಳಚರಂಡಿ ನೀರು ಸಂಸ್ಕರಣಾ ಘಟಕ ಸ್ಥಾಪನೆ

11:04 AM

ಅಲ್ಪಸಂಖ್ಯಾತರಿಗೆ ಬಂಪರ್

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ 393 ಕೋಟಿ ಅನುದಾನ
50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭ
100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭ
ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್
ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭ
ಕೈಗಾರಿಕೆ ಸ್ಥಾಪನೆಗೆ ೧೦ ಕೋಟಿವರೆಗೂ ಸಾಲ (ಶೇ.೬ರಷ್ಟು ಬಡಿ ಸಹಾಯಧನ)
ಅಲ್ಪಸಂಖ್ಯಾತ ಮಹಿಳಾ ಸ್ವ- ಸಹಾಯ ಗುಂಪುಗಳಿಗೆ 10 ಕೋಟಿ ಅನುದಾನ
ರಾಜ್ಯದಲ್ಲಿ ವಕ್ಫ್ ಆಸ್ತಿಗಳ ರಕ್ಷಣೆಗೆ 100 ಕೋಟಿ ಅನುದಾನ
ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ

11:04 AM

ನಗರಾಭಿವೃದ್ಧಿ: ಬ್ರ್ಯಾಂಡ್ ಬೆಂಗಳೂರಿಗೆ ಆದ್ಯತೆ

ಬೆಂಗಳೂರು ನಗರ ವಿಶ್ವದರ್ಜೆಗೇರಿಸಲು ಬ್ರ್ಯಾಂಡ್​ ಬೆಂಗಳೂರು
ಬೆಂಗಳೂರಿನಲ್ಲಿ 2024-25ಕ್ಕೆ 6 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ನಿರೀಕ್ಷೆ
ಬಿಬಿಎಂಪಿ ವ್ಯಾಪ್ತಿಯ 20 ಲಕ್ಷ ಆಸ್ತಿ ತೆರಿಗೆ ಡಿಜಿಟಲೀಕರಣ

ನಗರದ ಪ್ರಮುಖ ರಸ್ತೆಗಳಿಗೆ ವೈಟ್​ ಟಾಪಿಂಗ್​​​ ಮುಂದುವರಿಕೆ
 147 ಕಿ.ಮೀ ಉದ್ದದ ರಸ್ತೆ 1700 ಕೋಟಿ  ವೆಚ್ಚದಲ್ಲಿ ವೈಟ್​ಟಾಪಿಂಗ್​

ಬೆಂಗಳೂರು ಟ್ರಾಫಿಕ್​ ಜಾಮ್​​ ಗೆ ಸುರಂಗ ಮಾರ್ಗದ ಪರಿಹಾರ
ಹೆಬ್ಬಾಳ ಜಂಕ್ಷನ್​​ನಲ್ಲಿ ಪ್ರಾಯೋಗಿಕವಾಗಿ ಟನೆಲ್​​ ನಿರ್ಮಿಸಲು ನಿರ್ಧಾರ

ಸುಗಮ ಸಂಚಾರ ಯೋಜನೆಗೆ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆ ನೇಮಕ

 ಪೆರಿಫೆರಲ್​​ ರಿಂಗ್​ರೋಡ್​​ಅನ್ನು ಬೆಂಗಳೂರು ಬಿಸಿನೆಸ್​ ಕಾರಿಡಾರ್​​ ಎಂದು ಘೋಷಣೆ
73ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ

ಬೆಂಗಳೂರಿನಲ್ಲಿ 250 ಮೀಟರ್​ ಎತ್ತರದ ಸ್ಕೈ ಡೆಕ್​ ನಿರ್ಮಾಣ
ಅಂತಾರಾಷ್ಟ್ರೀಯ ವಾಸ್ತುಶಿಲ್ಪಿಗಳಿಂದ ಪ್ರವಾಸ ತಾಣವಾಗಿ ಅಭಿವೃದ್ಧಿ

ಬಿಬಿಎಂಪಿ, ಬಿಎಂಆರ್​ಸಿಎಲ್​​, ಜಲಮಂಡಳಿ, ಬಿಡಿಎಗೆ ಸೋಲಾರ್​ ಪಾರ್ಕ್​​
ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ಲಾನ್​​

ಬೆಂಗಳೂರು ಮೆಟ್ರೋ ಮಾರ್ಗ ಇನ್ನಷ್ಟು ವಿಸ್ತರಣೆ
2024ರಲ್ಲಿ ಈಗಿರುವ 74 ಕಿ.ಮೀ ಜೊತೆ ಇನ್ನೂ 44 ಕಿ.ಮೀ ಸಿದ್ಧವಾಗಲಿದೆ
ಮೆಟ್ರೋ ಯೋಜನೆ ಹಂತ 2 ಮತ್ತು ಹಂತ 2ಎ ಮಾರ್ಗ ಪೂರ್ಣ ಗುರಿ
ಔಟರ್​ ರಿಂರ್​ರೋಡ್​ನಿಂದ ವಿಮಾನ ನಿಲ್ದಾಣದ ಮಾರ್ಗ 2016ಕ್ಕೆ ಪೂರ್ಣ

ನಮ್ಮ ಮೆಟ್ರೋ ಹಂತ 3ಕ್ಕೆ ಅಂದಾಜು 15.61 ಕೋಟಿ ರೂ ಅನುಮೋದನೆ
ಮೆಟ್ರೋ ಹಂತ 3ಕ್ಕೆ ಕೇಂದ್ರ ಸರ್ಕಾರದ ಅನುಮೋದನೆಯ ನಿರೀಕ್ಷೆ ಇದೆ

ನಮ್ಮ ಮೆಟ್ರೋ ಹಂತ -3ಎ ಅಡಿ ಹೊಸ ಮಾರ್ಗದ ಡಿಪಿಆರ್​​ ಸಿದ್ಧ
ಸರ್ಜಾಪುರ-ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ  ಮೂಲಕ ಹೆಬ್ಬಾಳ

ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಗೆ ಚುರುಕು
ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ಸಿವಿಲ್​ ಕಾಮಗಾರಿಗೆ ಚುರುಕು
ಹೀಲಲಿಗೆಯಿಂದ ರಾಜಾನುಕುಂಟೆವರೆಗಿನ 46 ಕಿ.ಮೀ ಮಾರ್ಗಕ್ಕೆ ಆದೇಶ

ಬಿಎಂಟಿಸಿಗೆ ಇನ್ನಷ್ಟು ಎಲೆಕ್ಷ್ಟ್ರಿಕ್​ ್ಬಸ್​ಗಳ ಸೇವೆ ಸೌಲಭ್ಯ
1334 ಹೊಸ ಎಲೆಕ್ಷ್ಟ್ರಿಕ್​​ ಬಸ್​ಗಳು, 820 ಡೀಸೆಲ್​​ ಬಸ್​ ಸೇರ್ಪಡೆ

ಟ್ರಾಫಿಕ್​​ ಸಿಗ್ನಲ್​ ನಿರ್ವಣೆಗೆ ಜಪಾನ್​ ತಂತ್ರಜ್ಞಾನದ ನೆರವು
ಏರಿಯಾ ಟ್ರಾಫಿಕ್​ ಸಿಗ್ನಲ್​​ ಕಂಟ್ರೋಲ್​ ಸಿಸ್ಟಮ್​​ ಅಳವಡಿಕೆ
ಪ್ರಮುಖ 28 ಜಂಕ್ಷನ್​​ಗಳಲ್ಲಿ ನೂತನ ಟ್ರಾಫಿಕ್​ ಸಿಗ್ನಲ್​​ ಅಳವಡಿಕೆ

ಬೆಂಗಳೂರು ಜಲಮಂಡಳಿಗೆ 5,550 ಕೋಟಿ ಅನುದಾನ
ಮೇ 2024ಕ್ಕೆ ಕಾವೇರಿ 5ನೇ ಹಂತ ಕಾರ್ಯಾರಂಭಕ್ಕೆ ಸಿದ್ಧತೆ
12 ಲಕ್ಷ ಜನರಿಗೆ 110 ಲೀಟರ್​ ಶುದ್ಧ ಕುಡಿಯುವ ನೀರು ಸಪ್ಲೈ

ಕಾವೇರಿ 5ನೇ ಹಂತದ ಒಳಚರಂಡಿ ಕಾಮಗಾರಿಗಳನ್ನು 2024 ಡೆಡ್​ಲೈನ್​
ನಗರದಲ್ಲಿ 228 ಕಿ.ಮೀ ಒಳಚರಂಡಿ ಕೊಳವೆ ಅಳವಡಿಕೆ
13 ಎಸ್​ಟಿಪಿ ಒಳಚರಂಡಿ ನೀರು ಸಂಸ್ಕರಣಾ ಘಟಕ ಸ್ಥಾಪನೆ

7 ತ್ಯಾಜ್ಯ  ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ 441 ಕೋಟಿ ರೂ

ಬಿಬಿಎಂಪಿಗೆ ಸೇರ್ಪಡೆಯಾದ 11 ಹೊಸ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು
200 ಕೋಟಿ ರೂ. ಮೊತ್ತದಲ್ಲಿ ಎರಡನೇ ಹಂತದ ಕುಡಿಯುವ ನೀರಿನ ಯೋಜನೆ

ಬೆಂಗಳೂರಿನ ಹೊರವಲಯದಲ್ಲಿ 4 ಕಡೆ ಕಸ ತ್ಯಾಜ್ಯ ವಿಲೇವಾರಿಗೆ ಅವಕಾಶ
50ರಿಂದ 100 ಎಕರೆ ಜಮೀನು ಗುರುತಿಸಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ
30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಘಟಕ‌ ನಿರ್ಮಾಣ

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞ ಉದ್ಯಾನವನ ನಿರ್ಮಾಣ

ರಾತ್ರಿ ವ್ಯಾಪಾರ ವಹಿವಾಟು ಮೇಲಿನ ನಿರ್ಬಂಧದ ಸಮಯ ವಿಸ್ತರಣೆ
ಬೆಂಗಳೂರು ಹಾಗು 10 ಮಹಾನಗರದಲ್ಲಿ ರಾತ್ರಿ 1 ಗಂಟೆವರೆಗೆ ವಹಿವಾಟು
ಹೋಟೆಲ್​​​, ಅಂಗಡಿಗಳು ರಾತ್ರಿ 1 ಗಂಟೆವರೆಗೆ ತೆರೆದಿರಲು ಒಪ್ಪಿಗೆ

11:03 AM

ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಾಣ

ಡುಪಿ, ಚಿಕ್ಕಬಳ್ಳಾಪುರ, ನೆಲಮಂಗಲ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರಿನಲ್ಲಿ ಅಂದಾಜು 36 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು 

ಹಾಗೂ ದೇವನಹಳ್ಳಿ ಮತ್ತು ತುಮಕೂರಿನಲ್ಲಿ ಒಟ್ಟು 10 ಕೋಟಿ ರೂ.ಗಳ ವೆಚ್ಚದಲ್ಲಿ ಸೀಜಿಂಗ್‌ ಯಾರ್ಡ್‌ಗಳನ್ನು ನಿರ್ಮಾಣ

ಅರ್ಹತಾ ಪತ್ರ ನವೀಕರಣಕ್ಕೆ ಬರುವಂತಹ ಎಲ್ಲಾ ಸಾರಿಗೆ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು 32 ಸ್ಥಳಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ವಯಂಚಾಲಿತ ಪರೀಕ್ಷಾ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗುವುದು.

ಸಾರಿಗೆ ಇಲಾಖೆಯಲ್ಲಿ ನೋಂದಣಿಯಾಗಿರುವ ಎಲ್ಲಾ ವಾಹನಗಳ ದಾಖಲಾತಿಗಳ ಡಿಜಿಟಲೀಕರಣಕ್ಕಾಗಿ ಒಂದು ಯೋಜನೆಯನ್ನು ಜಾರಿಗೊಳಿಸಲಾಗುವುದು. 2024-25 ಸಾಲಿನಲ್ಲಿ ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ, ಬೆಳಗಾವಿ, ಮಂಗಳೂರು ಹಾಗೂ ಭಾಲ್ಕಿಯ ಕಛೇರಿಗಳಲ್ಲಿ ಜಾರಿಗೊಳಿಸಲಾಗುವುದು. ಈ ಯೋಜನೆಯನ್ನು

11:02 AM

ಕ್ರೀಡಾಪಟುಗಳಿಗೆ ಬಂಫರ್ ಆಫರ್

ಪ್ಯಾರಿಸ್ ಓಲಂಪಿಕ್ ನಲ್ಲಿ ಪದಕ ಗೆದ್ದವರಿಗೆ ಬಹುಮಾನ..
ಚಿನ್ನದ ಪದಕ ಗೆದ್ದವರಿಗೆ 6 ಕೋಟಿ..
ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ..
ಕಂಚಿನ ಪದಕ ಗೆದ್ದವರಿಗೆ 3 ಕೋಟಿ ಪ್ರೋತ್ಸಾಹ ಧನ
ಕಾಮನ್ ವೆಲ್ತ್ ಗೇಮ್ ನಲ್ಲಿ ಪದಕ ಗೆದ್ದವರಿಗೂ ಬಹುಮಾನ
ಚಿನ್ನದ ಪದಕ ಗೆದ್ದವರಿಗೆ 35 ಲಕ್ಷ..
ಬೆಳ್ಳಿ ಪದಕ ಗೆದ್ದವರಿಗೆ 25 ಲಕ್ಷ
ಕಂಚಿನ ಪದಕ ಗೆದ್ದವರಿಗೆ 15 ಲಕ್ಷ ಬಹುಮಾನ

11:00 AM

ಕೃಷಿಗಾಗಿ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ

ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

10:58 AM

ಸಿಎಂ ಬಜೆಟ್ ಹೈಲೈಟ್ಸ್ ಹೀಗಿದೆ

10:56 AM

ಎಂಪಿಎಂಸಿ ಮೂಲಕ ಆಧುನಿಕ ವೇ ಬ್ರಿಡ್ಜ್

ಯಲಬುರ್ಗಾ, ಬಸವನ ಬಾಗೇವಾಡಿ, ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಶೀತಲ ಗೃಹಗಳನ್ನು ನಿರ್ಮಿಸಿ, ಕೃಷಿಕರಿಗೆ ಅನುವು ಮಾಡಿಕೊಳ್ಳಲಾಗುವುದು. ಒಣ ಮೆಣಸಿನಕಾಯಿ ಮಾರಕಟ್ಟೆ ನಿರ್ಮಾಣ. ಮಂಗಳೂರಲ್ಲಿ ಅತ್ಯಾಧುನಿಕ ಕೃಷಿ ಮಾರುಕಟ್ಟೆ ನಿರ್ಮಾಣ. ಎಪಿಎಂಪಿ ಬಲ ಪಡಿಸುವ ಮೂಲಕ ರೈತರಿಗೆ ಅನುವು. 
ಬೆಳೆಗೆ ಅಗತ್ಯ ಬೆಂಬಲ ಬೆಲೆ ನೀಡಲು, ತೂಕದ ಮೋಸ ತಡೆಗಟ್ಟಲು ಎಂಪಿಎಂಸಿ ಮೂಲಕ ಆಧುನಿಕ ವೇ ಬ್ರಿಡ್ಜ್ ಸ್ಥಾಪಿಸಲಾಗುವುದು.

ಪಿಪಿಪಿ ಮಾದರಿಯಲ್ಲಿ ಶೀತಲ ಗೃಹಗಳನ್ನು ಸ್ಥಾಪಿಸಲಾಗುವುದು. 
 
10:52 AM

ಎಲ್ಲರಿಗೂ ಸೂರು ಕಲ್ಪಿಸಲು ಅಗತ್ಯ ಕ್ರಮ

 ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ;

• Asset Monetisation, ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೋಢೀಕರಿಸಿ Karnataka Affordable Housing Fund ভ (KAHF) ಸ್ಥಾಪಿಸಲಾಗುವುದು.

• ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್ ದರ ಪರಿಷ್ಕರಣೆ ಮಾಡುವುದು.

• ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲಾಗುವುದು.

202. ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು ರಿಯಲ್ ಎಸ್ಟೇಟ್ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. 2023-24 ನೇ ಸಾಲಿನಲ್ಲಿ ಡೆವಲಪರ್‌ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು.

10:52 AM

ರಾಜ್ಯ ಬಜೆಟ್... ಒಟ್ಟು ತೆರಿಗೆ ಸಂಗ್ರಹ

ವಾಣಿಜ್ಯ ತೆರಿಗೆ - ೧೧೦೦೦೦ ಕೋಟಿ ರೂ.

ಅಬಕಾರಿ ತೆರಿಗೆ - ೩೮೫೨೫ ಕೋಟಿ ರೂ.

ನೊಂದಣಿ ಮುದ್ರಾಂಕ - ೨೬೦೦೦ ಕೋಟಿ ರೂ.

ಮೋಟಾರು ವಾಹನ ತೆರಿಗೆ - ೧೩೦೦೦ ಕೋಟಿ ರೂ.

ಇತರ ಮೂಲ ತೆರಿಗೆ - ೨೩೬೮ ಕೋಟಿ ರೂ.

ಇಲಾಖಾವಾರು ಹಂಚಿಕೆ.

ಶಿಕ್ಷಣ - ೪೪೪೨೨ ಕೋಟಿ ರೂ.

ಮಹಿಳಾ ಮಕ್ಕಳ - ೩೪೪೦೬ ಕೋಟಿ ರೂ.

ಇಂಧನ ಇಲಾಖೆ - ೨೩೧೫೯ ಕೋಟಿ ರೂ.

ಗ್ರಾಮೀಣಾಭಿವೃದ್ಧಿ - ೨೧೧೬೦ ಕೋಟಿ ರೂ.

ಗೃಹ ಮತ್ತು ಸಾರಿಗೆ - ೧೯೭೭೭ ಕೋಟಿ ರೂ.

ನೀರಾವರಿ -  ೧೯೧೭೯ ಕೋಟಿ ರೂ.

ನಗರಾಭಿವೃದ್ಧಿ - ೧೮೧೫೫ ಕೋಟಿ ರೂ.

ಕಂದಾಯ - ೧೬೧೭೦ ಕೋಟಿ ರೂ.

ಆರೋಗ್ಯ - ೧೫೧೪೫ ಕೋಟಿ ರೂ.

ಸಮಾಜಕಲ್ಯಾಣ - ೧೩೩೩೪ ಕೋಟಿ ರೂ.

ಲೋಕೋಪಯೋಗಿ - ೧೦೪೨೪ ಕೋಟಿ ರೂ.

ಆಹಾರ ನಾಗರೀಕ - ೯೯೬೩ ಕೋಟಿ ರೂ.

ಕೃಷಿ ಮತ್ತು ತೋಟಗಾರಿಕೆ - ೬೬೮೮ ಕೋಟಿ ರೂ.

ಮೀನುಗಾರಿಕೆ ಮತ್ತು ಪಶು ಸಂಗೊಪನೆ - ೩೩೦೭ ಕೋಟಿ ರೂ.

ಇತರ ಇಲಾಖೆಗಳಿಗೆ - ೧೨೪೫೯೩ ಕೋಟಿ ರೂ ಹಂಚಿಕೆ..

10:51 AM

ಹಂದಿ, ಕೋಳಿ ಸಾಗಣೆಗೂ ಪ್ರೋತ್ಸಾಹ

ಜಿಲ್ಲಾ ಹಂತದಲ್ಲಿರುವ ತಜ್ಞ ಪಶು ವೈದ್ಯಕೀಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು 10 ಕೋಟಿ ರೂ ಅನುದಾನ ನೀಡಲಾಗುವುದು. 100 ಕೋಟಿ ವೆಚ್ಚದಲ್ಲಿ ಅಗತ್ಯವಿದ್ದಲ್ಲಿ ನೂತನ ಕಟ್ಟಡ ನಿರ್ಮಿಸಲಾಗುವುದು. ವಲಸೆ ಕುರಿಗಾಯಿಗಳು ಹಾಗೂ ಸ್ವತ್ತುಗಳ ಮೇಲೆ ದೌರ್ಜನ್ಯ ಕಾಯ್ದೆ ಜಾರಿಗೊಳಿಸಲಾಗುವುದು. ಸರಕಾರದಿಂದ ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ಹಾಗೂ ಮಕ್ಕಳಿಗೆ ಸೂಕ್ತ ಶಿಕ್ಷಣಕ್ಕಾಗಿ ನೆರವು. 

ಮೀನುಗಾರಿಗೆ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ. ಹೊನ್ನಾವರ, ಭದ್ರಾವತಿ, ಭಟ್ಕಳದಲ್ಲಿ ಮೀನುಗಾರಿಕಾ ಅಭಿವೃದ್ಧಿಗೆ ಅಗತ್ಯ ಅಭಿವೃದ್ಧಿ ಯೋಜನೆಗಳು ನೆರವು. ಅನುದಾನ ಹೆಚ್ಚಳಕ್ಕೆ ಒತ್ತು. ಅಪಘಾತಕ್ಕೊಳಗಾಗುವ ಮೀನುಗಾರರನ್ನು ತ್ವರಿತವಾಗಿ ಕರೆ ತರಲು ನೆರವಾಗುವಂತೆ ಸಮುದ್ರ ಆ್ಯಂಬುಲೆನ್ಸ್ ಗೆ ಅಗತ್ಯ ನೆರವು. ನಬಾರ್ಡ್ ಸಹಯೋಗದಲ್ಲಿ ವಿವಿಧ ಅಭಿೃವದ್ಧಿ ಯೋಜನೆಗಳಿಗೆ ಒತ್ತು. 

ಸಹಕಾರ ವಲಯವನ್ನು ಬಲ ಬಡಿಸುವುದು ಸರಕಾರದ ಒತ್ತು. ಬಡ್ಡಿ ರಹಿತ ಸಾಲವನ್ನು 3 ರಿಂತ 5 ಲಕ್ಷ ರೂ.ವರೆಗೆ ಏರಿಸಲು ಮಹತ್ತರ ಕ್ರಮ ಕೈಗೊಳ್ಳಲಾಗಿದೆ. ಪ್ರಸಕ್ತ ಸಾಲಿನಲ್ಲಿ 36 ಲಕ್ಷಕ್ಕಿಂತಲೂ ಹೆಚ್ಚಿನ ರೈತರಿಗೆ 27 ಕೋಟಿ ರೂ. ದಾಖಲೆ ಸಾಲ ನೀಡಲು ಚಿಂತನೆ. 

10:47 AM

ಅಡಕೆ ರೋಗಕ್ಕೆ ಪೂರಕ ಸಂಶೋಧನೆ

ಅಡಕೆಗೆ ಕಾಡುತ್ತಿರುವ ರೋಗಗಳನ್ನು ತಡೆಯಲು ಸೂಕ್ತ ಸಂಶೋಧನೆ ನಡೆಸಲಾಗುವುದು. ರಾಜ್ಯದಲ್ಲಿ ಸಾಂಬಾರು ಪದಾರ್ಥಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಚಿಕ್ಕಮಗಳೂರಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಪೈಸ್ ಪಾರ್ಕ್ ಸ್ಥಾಪನೆಗೆ ಒತ್ತು. ವಿಜಯಪುರ ಜಿಲ್ಲೆಯ ಆಲುಮೇಲದಲ್ಲಿ ತೋಟಗಾರಿಕಾ ಕಾಲೇಜು ಸ್ಫಾಪಿಸಲು ಒತ್ತು. ರೇಷ್ಮೆ ಮಾರುಕಟ್ಟೆ ಅಭಿವೃದ್ಧಿ ಪಡಿಸಲು ಶೂಕ್ತ ಕ್ರಮ ಕೈಗೊಳ್ಳಲಾಗುವುದು. ರೇಷ್ಣೆಗೆ ತಕ್ಕು ಪ್ರೋತ್ಸಾಹ ನೀಡಲು ವಾರ್ಷಿಕ 12 ಕೋಟಿ ರೂ. ನೀಡಲಾಗುವುದು. ರೇಷ್ಮೆಗೆ ನೀಡುವ ಪ್ರೋತ್ಸಾಹ ದನವನ್ನು ಹೆಚ್ಚಿಸಲಾಗುವುದು. ಅಮೃತ ಸ್ವಾಭಿಮಾನಿ  ಎಂಬ  ಕುರಿಗಾಯಿ ಯೋಜನೆಯಡಿಯಲ್ಲಿ 10 ಸಾವಿರ ಫಲಾನುಭವಿಗಳಿಗೆ ಅಗತ್ಯ ನೆರವು ನೀಡಲಾಗುವುದು. 

10:44 AM

ನಿಲ್ಲದ ವಿಪಕ್ಷಗಳ ಆಕ್ರೋಶ

ಬಜೆಟ್‌ನಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ. ತೆರಿಗೆ ಹಂಚಿಕೆ ಯಲ್ಲಿ ಅನ್ಯಾಯ ಆಗುತ್ತಿದೆ ಎಂಬ ಅಂಶ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ. ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷವೇ ಹಲವು ರಾಜ್ಯಗಳಲ್ಲಿ ಅಧಿಕಾರದಲ್ಲಿ ಇದೆ. ಈ ಕಾರಣಕ್ಕಾಗಿ ಅವರೂ ದನಿ ಎತ್ತಲು ಆಗುತ್ತಿಲ್ಲ ಎಂದ ಸಿದ್ದರಾಮಯ್ಯ. ಈ ಸಾಲನ್ನು ಓದುವಾಗ ಬಿಜೆಪಿ ಸದಸ್ಯರ ಆಕ್ಷೇಪ. ಬಜೆಟ್ ಓದುವಾಗ ಜೋರು ಗದ್ದಲ ಆರಂಭಿಸಿದ ಆರ್ ಅಶೋಕ್, ಇತರೆ ಬಿಜೆಪಿ ಸದಸ್ಯರು. ಮುಂದುವರಿದೆ ಗಲಾಟೆ.

10:43 AM

ಅಲ್ಪಸಂಖ್ಯಾತರಿಗೆ ಬಂಪರ್

ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ ಒದಗಿಸಲಾಗುವುದು

10:42 AM

ನನಸಾದ ಪತ್ರಕರ್ತರ ಬಸ್ ಪಾಸ್

ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು,  ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3 ಮತ್ತು 4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ.

ಬಜೆಟ್ ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ದವಾಗಿ ಕೂಡಲೇ ಜಾರಿಗೆ ತರಲು ವಾರ್ತಾ ಇಲಾಖೆ ಮುಂದಾಗಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಿನಂತಿಸಿದ್ದಾರೆ.

10:40 AM

ಮಣ್ಣು ಪರೀಕ್ಷೆ ಗುಣಮಟ್ಟಕ್ಕೆ ರೈತರಿಗೆ ಮಾಹಿತಿ

ರೈತರು ಬೆಳೆದ ಬೆಳೆಗೆ ಉತ್ತಮ ಮಾರುಕಟ್ಟೆ ಸೌಲಭ್ಯ ಒದಗಿಸುವ ಜೊತೆಗೆ, ಕೃಷಿ, ತೋಟಗಾರಿಗೆ, ಪಶು ಸಂಗೋಪನೆ ಇಲಾಖೆಗಳ ಸಮನ್ವಯ ಸಾಧಿಸಲು ಸಿಎಂ ನೇತೃತ್ವದಲ್ಲಿ ಪ್ರಾಧಿಕಾರ ಸ್ಥಾಪಿಸಲು ನಿರ್ಧರಿಸಲಾಗಿದೆ. ಸ್ಥಳೀಯ ಬೆಳೆಗಳ ತಳಿಗಳನ್ನು ಸಂರಕ್ಷಿಸಲು, ಬೆಳೆಸಲು ಬೀಜ ಬ್ಯಾಂಕ್ ಆರಂಭ. ಸಿರಿ ಧಾನ್ಯನಗಳು ಹಾಗೂ ಮೌಲ್ವವರ್ಧಿಕ ಉತ್ಪನ್ನಗಳನ್ನು ಕೈ ಗೆಟುಕುವ ದರದಲ್ಲಿ ಒದದಿಸಲು ಅಗತ್ಯ ಕ್ರಮ ಕೈಗೊಳ್ಳಲು ಸರಕಾರ ಕ್ರಮ. 

10:38 AM

ಬೆಂಗಳೂರಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ 150 ಕೋಟಿ ಮೀಸಲು

ಬೆಂಗಳೂರು ಅಭಿವೃದ್ಧಿಗೆ ನಿರೀಕ್ಷೆಯಂತೆ ಸಿದ್ದರಾಮಯ್ಯ ಅವರು ಸಾಕಷ್ಟು ಅನುದಾನ ಮೀಸಲಿಡಲು ನಿರ್ಧರಿಸಿದ್ದು, ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಆಸ್ಪತ್ರೆ ಕಟ್ಟಲು ನಿರ್ಧರಿಸುವುದಾಗಿ ಘೋಷಿಸಿದ್ದಾರೆ. 

10:37 AM

ಜಿಎಸ್‌ಟ್ ಅವೈಜ್ಞಾನಿಕ ಅನುಷ್ಠಾನ

ಕೇಂದ್ರದಲ್ಲಿ ಆಡಳಿತ ಇರುವ ಪಕ್ಷವೇ ರಾಷ್ಟ್ರದ ಹಲವು ರಾಜ್ಯಗಳಲ್ಲಿ ಆಡಳಿದಲ್ಲಿ ಇರುವದರಿಂದ ಕೇಂದ್ರದ ಧೋರಣೆ ಬಗ್ಗೆ ಧ್ವನಿ ಎತ್ತುವಲ್ಲಿ ವಿಫಲವಾಗಿದೆ ಎಂದ ಸಿಎಂ. ಇದಕ್ಕೆ ವಿಪಕ್ಷಗಳ ಆಕ್ರೋಶ. ಸದನದಲ್ಲಿ ತುಸು ಕಾಲ ಗೊಂದಲ.

10:35 AM

ಬೆಂಗಳೂರಲ್ಲಿ ಪುಷ್ಪ ಮಾರಕಟ್ಟೆ ಅಭಿವೃದ್ಧಿ

ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಒತ್ತು ನೀಡಿರುವ ಸಿದ್ದರಾಮಯ್ಯ, ಪುಷ್ಪ ಬೆಳೆಗಾರರಿಗೆ ಅನುಕೂಲವಾಗುಂತೆ ನೆರವ ನೀಡಲು ಮುಂದಾಗಿದ್ದಾರೆ. 15ನೇ ಹಣಕಾಸು ಆಯೋಗದಿಂದ ಶಿಪಾರಸಿನಿಂದ ರಾಜ್ಯಕ್ಕೆ ಕಡಿಮೆ ಅನುದಾನ ಹಂಚಿಕೆ ಆಗುವ ನಿರೀಕ್ಷೆಯಾಗಿದೆ. ರಾಜ್ಯಕ್ಕೆ 92 ಸಾವಿರ ಕೋಟಿ ನಷ್ಟವಾಗಿದೆ. 15ನೇ ಹಣಕಾಸು ಆಯೋಗವು ಮೊದಲನೇ ವರದಿಯಲ್ಲಿ 5 ಸಾವಿರ 445 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಶಿಫಾರಸು ಮಾಡಿತ್ತು. ಆದರೆ, ಇದನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಡಬಲ್ ಎಂಜಿನ್ ಸರಕಾರ ಎಂದು ಹೇಳಿಕೊಂಡರೂ ಹಿಂದಿನ ಸರಕಾರ ರಾಜ್ಯಕ್ಕೆ ಬರಬೇಕಾಗಿದ್ದ ಪಾಲನ್ನು ಪಡೆಯಲು ವಿಫಲವಾಗಿದೆ. ಎಲ್ಲ ರೀತಿಯಲ್ಲಿಯೂ ರಾಜ್ಯಕ್ಕೆ ನ್ಯಾಯಕ್ಕೆ ಸಿಕ್ಕಿರುವುದಿಲ್ಲ. ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಡೆಯಲು ಜ್ಞಾಪನ ಪತ್ರವನ್ನು ತಯಾರಿಸಿ, 16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಲು ಕರ್ನಾಟಕ ಸರಕಾರ ನಿರ್ಧರಿಸಿದೆ.

10:31 AM

ರಾಜ್ಯದ ಆರ್ಥಿಕತೆ ಅಭಿವೃದ್ಧಿ

ದೇಶದ ಆರ್ಥಿಕತೆಯನ್ನು ರೂಪಿಸುವಲ್ಲಿ ಕರ್ನಾಟಕದ ಆರ್ಥಿಕ ಅಭಿವೃದ್ಧಿ ಹೆಚ್ಚಿನ ಪಾಲು ನೀಡಲಿದೆ. ಸೇವಾ ವಲಯವು ಬೆಳವಣಿಗೆ ಸಾಧಿಸಿದೆ. ಪ್ರಸಕ್ತ ವರ್ಷದಲ್ಲಿ ಮುಂಗಾರು ವೈಫಲ್ಯದಿಂದ ರಾಜ್ಯ ಬರ ಎದುರಿಸಬೇಕಾಯಿತು. ಎಲ್ಲದರ ನಡುವೆಯೂ ರಾಜ್ಯದಲ್ಲಿ 2.8 ಶತಕೋಟಿ ಅಮೆರಿಕನ್ ಡಾಲರ್ ವಿದೇಶಿ ಹೂಡಿಕೆಯಾಗಿದ್ದು, ವಿದೇಶಿಗರಿಗೆ ರಾಜ್ಯ ಅವರನ್ನು ಹೇಗೆ ಸ್ವಾಗತಿಸುತ್ತದೆ ಎಂಬುದನ್ನು ತೋರಿಸುತ್ತದೆ. 

ರಾಜ್ಯವು ದೇಶದಲ್ಲಿ ಹೆಚ್ಚು ಜಿಎಸ್ಟಿ ಸಂಗ್ರಹಿಸುತ್ತಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದಲ್ಲಿ ಶೇ.12ರಷ್ಟು ಸಾಧನೆ ತೋರಲಿದೆ. ಜನರ ಆರ್ಥಿಕತೆ ಉತ್ತೇಜಿಸುವಲ್ಲಿ ಇದು ಪೂರಕವಾಗಿದೆ. ರಾಜ್ಯಗಳ ಜೊತೆಗೆ ಸಮಾನತೆಯ ಆಧಾರದಲ್ಲಿ ಸಹಕರಿಸಬೇಕೆೆಂದು ಭಾರತ ರತ್ನಿ ಕರ್ಪೂರಿ ಠಾಕೂರ್ ಹೇಳಿದಂತೆ ಕ್ರಮ ಕೈಗೊಳ್ಳಲಾಗುತ್ತದೆ. 

10:28 AM

ಕೌಶಲ್ಯಕ್ಕೆ ಒತ್ತು ನೀಡಲು ಸರಕಾರ ಬದ್ಧ

ಸಾಂಸ್ಥಿಕ ಸುಧಾರಣೆಗಳು, ವಿಕೇಂದ್ರಿಕರಣ, ಆಡಳಿತ ವ್ಯವಸ್ಥೆ ಕುರಿತು ಜನರಲ್ಲಿ ವಿಶ್ವಾಸ ಮೂಡಿಸುವುದು ಸರಕಾರದ ಆಶಯ. ಅಭಿವೃದ್ಧಿಯ ನಕಾಶೆಯನ್ನು ವಾಸ್ತವಗೊಳಿಸಲು ಮುಂದಿನ ನಾಲ್ಕು ವರ್ಷ ಶ್ರಮಿಸುತ್ತೇವೆ. ಬಸವಣ್ಣ ಮತ್ತು ಡಾ.ಅಂಬೇಡ್ಕರ್ ಹೇಳಿದಂತೆ ಕ್ರಾಂತಿಕಾರಕ ಹೆಜ್ಜೆಗಳನ್ನು ಇಡುತ್ತೇವೆ. ಮುಂದಿನ ಒಂದು ದಶಕದಲ್ಲಿ ಕರ್ನಾಟಕವನ್ನು ಜಾಗತಿಕವಾಗಿ ಗುರುತಿಸಲ್ಪಡುವಂತೆ ಅಭಿವೃದ್ಧಿಗೊಳಿಸಲಾಗುವುದು. ಎಲ್ಲರಿಗೂ ಸಮಾನ ಆದ್ಯತೆ ನೀಡಲಾಗುತ್ತದೆ. 

10:26 AM

ಗ್ಯಾರಂಟಿ ಯೋಜನೆಗಳ ಭವಿಷ್ಯದ ಮುನ್ನೋಟ

ಇಷ್ಟು ದೊಡ್ಡ ಮಟ್ಟದ ಗ್ಯಾರಂಟಿ ಯೋಜನೆಗಳು 21 ಸಾವಿರ ಕೋಟಿ ಮೊತ್ತವನ್ನು ನೀಡಿವೆ. ಗ್ರಾಮೀಣ ರಸ್ತೆಗಳು, ವಿಶ್ವದರ್ಜನೆಯ ವಿಮಾನ ನಿಲ್ದಾಣಗಳು ಹಾಗೂ ಅಗತ್ಯ ಯೋಜನೆಗಳನ್ನು ರೂಪಿಸಲು ಆದ್ಯತೆ ನೀಡಲಾಗುತ್ತಿದೆ. ಇಂಧನ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡಲಾಗುವುದು. ಬೆಂಗಳೂರನ್ನು ಜಾಗತಿಕ ಮಟ್ಟದ ನಗರವನ್ನಾಗಿ ಅಭಿವೃದ್ಧಿಗೊಳಿಸಲಾಗುವುದು. ಪ್ರವರ್ಧಮಾನಕ್ಕೆ ಬರುತ್ತಿರುವ ವಲಯಗಳ ಜಾಗತಿಕ ಪ್ರತಿಭೆಗಳನ್ನು ಗುರುತಿಸಲು ಸರಕಾರ ಕ್ರಮ ಕೈಗೊಳ್ಳಲಿದೆ. ಮಾನವ ಸಂಪನ್ಮೂಲ ಅಭಿವೃದ್ಧಿಗೆ ಆಧ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆರಂಭಿಸಲಾಗುತ್ತದೆ. 

10:24 AM

ಕೇಂದ್ರ ಸರಕಾರ ಮಾಡದ್ದನ್ನುರಾಜ್ಯದಿಂದ ರಾಜ್ಯ

ರಾಜ್ಯ ಸರಕಾರ ಯೋಜಿಸಿದ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ. ನಿಷ್ಪಕ್ಷಪಾತ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸಂಪತ್ತನ್ನು ಎಲ್ಲೆಡೆ ಹಂಚಲು ಕೈ ಕೊಂಡ ಯೋಜನೆಗಳಿವು. ಕೇಂದ್ರ ಸರಕಾರ ಮಾಡದ್ದನ್ನು ಕರ್ನಾಟಕ ಸರಕಾರ ಮಾಡಿ ತೋರಿಸಿದ, ಕೀಳಾದವನೂ ಮೇಲೆ ಬರಲು ಅವಕಾಶ ಮಾಡಿಕೊಡಲು, ಕುವೆಂಪು ಅವರ ಆಧ್ಯಾತ್ಮಿಕ ದೃಷ್ಟಿಯಿಂದ ಮುನ್ನಡೆಸಲು ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೂ ಕನಿಷ್ಠ 50 ಸಾವಿರ ರೂ. ನೀಡಲಾಗುತ್ತಿದೆ. ಇದರ ಜಾರಿಗೆ ಇಡೀ ಭಾರತವೇ ಕರ್ನಾಟಕದ ಮೇಲೆ ಮೆಚ್ಚುಗೆ ಸೂಚಿಸಿದೆ. ಅಂತಾರಾಷ್ಟ್ರೀಯ ಸಂಸ್ಥೆಗಳೂ ನಮ್ಮ ಯೋಜನೆಗಳಿಗೆ ಭೇಷ್ ಹೇಳಿವೆ. ಬಸ್ ಹತ್ತುವ ಮುನ್ನ ನಮಸ್ಕರಿಸಿದ ಮಹಿಳೆ, ಹಾಗೂ ಯುವನಿಧಿ ಯೋಜನೆಯ ಫಲಾನುವಭವಿ ಹಾಕಿದ ಆನಂದ ಭಾಷ್ಪ ನನ್ನ ನಂಬಿಕೆಯೆನ್ನು ಹೆಚ್ಚಿಸಿದೆ. 

ಆದರೆ, ರಾಜ್ಯದಲ್ಲಿ ಬೊಕ್ಕಸದಲ್ಲಿ ಹಣವಿಲ್ಲವೆಂದು ವಿಪಕ್ಷಗಳು ಟೀಕಿಸುತ್ತಿವೆ. ಸುಳ್ಳು ಸುದ್ದಿಗಳನ್ನು ಹರಡಿಸುತ್ತಿವೆ. ಮನ ಶುದ್ಧಿ ಇಲ್ಲದೇ...ಎಂಬ ಶರಣರ ವಚನ ವಿವರಿಸಿ ಬಿಜೆಪಿಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ.

10:20 AM

ಸಾಮಾಜಿಕ ನ್ಯಾಯಕ್ಕೆ ಒತ್ತು

ಬಜೆಟ್ ಭಾಷಣ ಆರಂಭಿಸಿದ ಸಿಎಂ ಸಿದ್ದರಾಮಯ್ಯ. ದುಡಿಮೆಯ ಭಾಗವನ್ನು ದಾಸೋಹಕ್ಕೆ ಬಳಸಬೇಕೆಂಬ ಆಶಯದೊಂದಿಗೆ ಅನ್ನ ಭಾಗ್ಯ ಯೋಜನೆ. ಬಸವ, ಶರಣಾದಿ ಗಳನ್ನು ಭಾಷಣದ ಆರಂಭದಲ್ಲಿಯೇ ನೆನೆದ ಸಿಎಂ. ಡಾ.ರಾಜ್ ಕುಮಾರ್ ಅವರ ಆಗದು ಎಂದು ಕೈ ಕಟ್ಟಿ ಕುಳಿತರೆ ಹಾಡನ್ನು ನೆನಪಿಸಿಕೊಂಡು, ಸರಕಾರದ ಯೋಜನೆಗಳು ಜನರ ಆಶೋತ್ತರಗಳನ್ನು ಪೂರೈಸಲು ರೂಪಿತವಾಗಿವೆ ಎಂದ ಸಿಎಂ. ಬಡ ಜನರಿಗೆ ನ್ಯಾಯ ಒದಗಿಸುವ ಕಾರ್ಯಕ್ಕಾಗಿ ಸರಕಾರದ ಯೋಜನೆಗಳು. ಆರಂಭದಲ್ಲಿಯೇ ಕೇಂದ್ರ ಸರಕಾರದ ಯೋಜನೆಗಳನ್ನು ಟೀಕಿಸಿದ ಸಿದ್ದರಾಮಯ್ಯ.

10:17 AM

ರಾಹುಕಾಲ ಶುರುವಾಗೋ 15 ನಿಮಿಷ ಮೊದಲೇ ಬಜೆಟ್ ಭಾಷಣಕ್ಕೆ ಕ್ಷಣಗಣನೆ

ಶಲ್ಯ ಹಾಕ್ಕೊಂಡು ಬಂದ ಕಾಂಗ್ರೆಸ್ ಸದಸ್ಯರು. ಇನ್ನೇನು ಕೆಲವೇ ಕ್ಷಣಗಳಲ್ಲಿ ಬಜೆಟ್ ಭಾಷಣ ಶುರು. ಸದನಕ್ಕೆ ಆಗಮಿಸಿದ ಸ್ಪೀಕರ್. 

10:11 AM

ಟೋಪಿ ಹಾಕುವ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

ಟೋಪಿ ಹಾಕೋದು ಬೇಡ ಅಂತ ಹಿರಿಯ ಸದಸ್ಯರ ಸಲಹೆ. ಟೋಪಿ ಹಾಕುವ ನಿರ್ಧಾರದಿಂದ ಬಿಜೆಪಿ ವಾಪಸ್. ಸದನದಲ್ಲಿ ಟೋಪಿ ಹಾಕಿಕೊಂಡು ಭಾಗವಹಿಸಲು ಬಿಜೆಪಿ ಸದಸ್ಯರ ನಿರ್ಧಾರ. ಟೋಪಿ ಬದಲು ಪೋಸ್ಟರ್ ಪ್ರದರ್ಶನಕ್ಕೆ ಬಿಜೆಪಿ ಪ್ಲಾನ್. ಏನಿಲ್ಲ - ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಹೇಳುವುದು ನಿಜವಲ್ಲ ಅನ್ನೋ ಪೋಸ್ಟರ್.

9:54 AM

ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಿಎಂ ಸಿದ್ದರಾಮಯ್ಯ!

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಸೂಟ್‌ಕೇಸ್‌ ಬಿಟ್ಟು ಲಿಡ್ಕರ್ ಸಂಸ್ಥೆಯ ಲೆದರ್‌ ಬ್ಯಾಗ್‌ನಲ್ಲಿ ಬಜೆಟ್ ಪ್ರತಿಗಳನ್ನು ಹೊತ್ತು ತರುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

9:03 AM

ಸಿಎಂ ಬಜೆಟ್ ಮಂಡನೆಗೂ ಮುನ್ನವೇ ಬಿಜೆಪಿ ಟಾಂಗ್

ಏನು ಇರೋದಿಲ್ಲಾ, ಏನು ಇರೋದಿಲ್ಲಾ ಬಜೆಟ್ ನಲ್ಲಿ "ಸಾಲ-ಸುಳ್ಳು” ಬಿಟ್ಟರೇ, ಬೇರೆ ಏನು ಇರೋದಿಲ್ಲಾ...!! ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ 15ನೇ ಬಜೆಟ್ ಮಂಡನೆಗೂ ಮುನ್ವವೇ ಬಿಜೆಪಿ ಟ್ವೀಟ್ ಮಾಡಿದೆ.

ಏನು ಇರೋದಿಲ್ಲಾ,
ಏನು ಇರೋದಿಲ್ಲಾ

ಬಜೆಟ್ ನಲ್ಲಿ "ಸಾಲ-ಸುಳ್ಳು” ಬಿಟ್ಟರೇ, ಬೇರೆ ಏನು ಇರೋದಿಲ್ಲಾ...!! pic.twitter.com/x217THCn34

— BJP Karnataka (@BJP4Karnataka)

8:58 AM

ಸಿದ್ದು ಬಜೆಟ್‌ , ಬೆಂಗಳೂರಿನ ವಿವಿಧ ವಲಯಗಳಲ್ಲಿ ಭಾರಿ ನಿರೀಕ್ಷೆ

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16 ರಂದು ರಾಜ್ಯ ಬಜೆಟ್‌ ಮಂಡಿಸಲಿದ್ದು ವಿವಿಧ ವಲಯಗಳಲ್ಲಿ ಬಜೆಟ್‌ ಘೋಷಣೆಗಳ ಬಗ್ಗೆ ಭಾರಿ ನಿರೀಕ್ಷೆ ಮೂಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆದ ಬಳಿಕ ಮಂಡಿಸಲಿರುವ ಎರಡನೇ ಬಜೆಟ್‌ ಇದಾಗಿದ್ದರೂ, ಪೂರ್ಣ ಅವಧಿಗೆ ಮಂಡಿಸಲಿರುವ ಮೊದಲ ಬಜೆಟ್‌ ಆಗಿರುತ್ತದೆ.  

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

8:52 AM

ಸಿದ್ದರಾಮಯ್ಯ 15ನೇ ಬಜೆಟ್..!

1995- ಎಚ್.ಡಿ. ದೇವೇಗೌಡ ಸಿಎಂ -ಸಿದ್ದರಾಮಯ್ಯ ಹಣಕಾಸು ಸಚಿವ -ಬಜೆಟ್ ಮಂಡನೆ
1996 - ಎಚ್.ಡಿ. ದೇವೇಗೌಡ ಸಿಎಂ - ಸಿದ್ದರಾಮಯ್ಯ ಡಿಸಿಎಂ - ಬಜೆಟ್ ಮಂಡನೆ
1997-ಜೆ.ಎಚ್. ಪಟೇಲ್ ಸಿಎಂ - ಸಿದ್ದರಾಮಯ್ಯ ಡಿಸಿಎಂ- ಬಜೆಟ್ ಮಂಡನೆ
1998- ಜೆ.ಎಚ್. ಪಟೇಲ್ ಸಿಎಂ - ಸಿದ್ದರಾಮಯ್ಯ ಡಿಸಿಎಂ- ಬಜೆಟ್ ಮಂಡನೆ
1999- ಜೆ.ಎಚ್. ಪಟೇಲ್ ಸಿಎಂ - ಸಿದ್ದರಾಮಯ್ಯ ಡಿಸಿಎಂ- ಬಜೆಟ್ ಮಂಡನೆ
2005- ಧರಂ ಸಿಂಗ್ ಸಿಎಂ - ಸಿದ್ದರಾಮಯ್ಯ ಡಿಸಿಎಂ - ಬಜೆಟ್ ಮಂಡನೆ 
2006 - ಧರಂ ಸಿಂಗ್ ಸಿಎಂ - ಸಿದ್ದರಾಮಯ್ಯ ಡಿಸಿಎಂ - ಬಜೆಟ್ ಮಂಡನೆ 
2013 ರಿಂದ 2018ರವರೆಗೆ ಸಿಎಂ ಆಗಿ ಸತತ 6 ಬಾರಿ ಬಜೆಟ್‌ ಮಂಡನೆ
2023ರ ಜುಲೈ  7ರಂದು 14ನೇ ಬಾರಿಗೆ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ
2024, ಫೆಬ್ರವರಿ 16ಕ್ಕೆ 15ನೇ ಬಾರಿಗೆ ಸಿದ್ದರಾಮಯ್ಯ ಬಜೆಟ್ ಮಂಡನೆ

8:17 AM

ಸಿದ್ದು ಬಜೆಟ್..ನಿರೀಕ್ಷೆಗಳೇನು..?

ಸಿದ್ದು ಬಜೆಟ್..ನಿರೀಕ್ಷೆಗಳೇನು..?
ಮೇಕೆದಾಟು, ಎತ್ತಿನಹೊಳೆ ಯೋಜನೆಗೆ ಅನುದಾನ ನಿರೀಕ್ಷೆ
ಕೃಷ್ಣ ಮೇಲ್ದಂಡೆ ಯೋಜನೆಗೆ ವಿಶೇಷ ಅನುದಾನ 
ಪೌರ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ
ತಳ ಸಮುದಾಯಗಳ ಅಭಿವೃದ್ಧಿ ಕಲ್ಯಾಣ ಮಂಡಳಿ ರಚನೆ
ಅಲ್ಪಸಂಖ್ಯಾತರ ಅಭಿವೃದ್ಧಿಗೆ 5,000 ಕೋಟಿ ವಿಶೇಷ ನಿಧಿ ಸಾಧ್ಯತೆ
ಸಂತ ಶಿಶುನಾಳ ಷರೀಫ್, ಭಗಿರಥ ಪ್ರತಿಮೆ ನಿರ್ಮಾಣಕ್ಕೆ ಅನುದಾನ
SC/ST ಸಮುದಾಯದ ಯುವತಿಯರ ಉನ್ನತ ಶಿಕ್ಷಣಕ್ಕೆ ಯೋಜನೆ
ಗರ್ಭಕೋಶ ರೋಗದಿಂದ ಬಳಲುವ ಮಹಿಳೆಯರ ಚಿಕಿತ್ಸೆಗೆ ಯೋಜನೆ
ಅನಾಥ ಮಕ್ಕಳ ಶಿಕ್ಷಣಕ್ಕಾಗಿ ವಿಶೇಷ ಶಾಲೆಗಳ ನಿರ್ಮಾಣಕ್ಕೆ ಪ್ಲಾನ್
ಹೈನುಗಾರಿಕೆ ಪ್ರೋತ್ಸಾಹಕ್ಕೆ ಉತ್ತರಕರ್ನಾಟಕದಲ್ಲಿ KMF ತರಬೇತಿ ಘಟಕ

8:03 AM

2024-25ನೇ ಸಾಲಿನ ಬಜೆಟ್ 3.70 ಲಕ್ಷ ಕೋಟಿ ಸಾಧ್ಯತೆ

ಪ್ರಸಕ್ತ ಬಜೆಟ್‌ನಲ್ಲಿ ಸಾಲದ ಪ್ರಮಾಣದಲ್ಲೂ ಹೆಚ್ಚಳ ಸಾಧ್ಯತೆ
ಈ ಬಾರಿ ತುರ್ತು ಪ್ರಸ್ತಾವನೆಗಳನ್ನಷ್ಟೇ ಪರಿಗಣಿಸುವ ಲೆಕ್ಕಾಚಾರ
5 ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ 58,000 ಕೋಟಿ ರೂ
ಬಜೆಟ್‌ ಗಾತ್ರ ಹಿಗ್ಗಿದರೂ ಬಹುಪಾಲು ಮೊತ್ತ ಗ್ಯಾರಂಟಿಗೆ ಮೀಸಲು
ಬೇರೆ ಯೋಜನೆಗಳಿಗೆ ಹಣಕಾಸು ಹೊಂದಿಸುವುದೇ ಸವಾಲು

7:42 AM

15ನೇ ಆಯವ್ಯಯ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

2024-25ರ ಬಜೆಟ್‌ಗೆ ಸಿದ್ದರಾಮಯ್ಯ ತಯಾರಿ
ದಾಖಲೆ ಬಜೆಟ್ ಮಂಡನೆಗೆ ಸಜ್ಜಾದ ಸಿದ್ದರಾಮಯ್ಯ
15ನೇ ಆಯವ್ಯಯ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
ಲೋಕಸಭೆ ಎಲೆಕ್ಷನ್‌..ಕುತೂಹಲ ಮೂಡಿಸಿದ ಬಜೆಟ್
ಕಳೆದ ಬಾರಿ 3.27 ಲಕ್ಷ ಕೋಟಿ ಬಜೆಟ್ ಮಂಡನೆ

6:39 PM IST:

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಮದ್ಯದ ದರವನ್ನು ಪರಿಷ್ಕರಣೆ ಮಾಡುವ ಘೋಷಣೆ ಮಾಡಿದೆ. ಬಿಯರ್‌ ಬೆಲೆಯನ್ನು ಏರಿಕೆ ಮಾಡುವ ಸೂಚನೆ ನೀಡಿರುವ ರಾಜ್ಯ ಸರ್ಕಾರ ಎಷ್ಟು ಮಾಡಲಾಗುತ್ತದೆ ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುವುದಾಗಿ ತಿಳಿಸಿದೆ.

'ಸಾಹುಕಾರರ ಎಣ್ಣೆ-ಬಡವರ ಎಣ್ಣೆ..' ಸುದ್ದಿಗೋಷ್ಠಿಯಲ್ಲಿ ಸಿಎಂ-ಡಿಸಿಎಂ ಸಖತ್‌ ಚರ್ಚೆ!
 
6:32 PM IST:

ರಾಜ್ಯ ಬಜೆಟ್ ಮಂಡನೆ ಮಾಡಿದ ಬಳಿಕ ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಉತ್ತರ ಪ್ರದೇಶ ಸೇರಿದಂತೆ ಬೇರೆ ರಾಜ್ಯಗಳಿಗೆ ಹಣ ಕೊಡಬೇಡಿ ಎಂದು ನಾನು ಎಲ್ಲಿಯೂ ಹೇಳಿಲ್ಲ. ಆದರೆ, ನಮ್ಮನ್ನು ಹಸಿದ ಹೊಟ್ಟೆಯಲ್ಲಿ ಇಡಬೇಡಿ ಅಷ್ಟೇ. ಚಿನ್ನದ ಕೋಳಿಯನ್ನು ಕೊಯ್ದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. 

ಬಿಜೆಪಿಗರ ತಲೆಯಲ್ಲಿ ರಾಜಕೀಯ ನಂಜಿದೆ, ನಿಜ ಮಾತನಾಡಿದ್ರೆ ಅವರಿಗೆ ಉರಿ ಎಂದ ಸಿದ್ದರಾಮಯ್ಯ

4:44 PM IST:

ಇಂದು ಮಂಡನೆಯಾದ ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಜಲಸಂಪನ್ಮೂಲ ಹಾಗೂ ನೀರಾವರಿ ಕ್ಷೇತ್ರಗಳಲ್ಲಿ ಬಾಕಿ ಉಳಿದಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಆದ್ಯತೆ ನೀಡಿದ್ದಾರೆ. 

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

3:49 PM IST:

ಡಿಸಿಎಂ ಡಿಕೆಶಿ ಹೇಳಿಕೆ.

ಮೊದಲು ನಾನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸ್ತೇನೆ. 15 ನೇ ಬಜೆಟ್ ದೇಶಕ್ಕೆ ಮಾದರಿ ಬಜೆಟ್. 3 ಲಕ್ಷ ಕೋಟಿ 71 ಸಾವಿರ ಕೋಟಿ. ಈ ಬಜೆಟ್ ಆತ್ಮವಿಶ್ವಾಸ ಎಷ್ಟಿತ್ತು ಅಂದ್ರೆ, ವಿಪಕ್ಷಗಳು ಕೂರಲಿಲ್ಲ.ಇಷ್ಟು ಅಭಿವೃದ್ಧಿ ಮಾಡಿದ್ರಲ್ಲಾ ಅಂತ ಕೈ ಹೊಸಕಿಕೊಂಡು ಹೊರಗೆ ಹೋದ್ರು.81 ರಿಂದ ಅಸೆಂಬ್ಲಿಯಲ್ಲಿ ಇದ್ದೀನಿ‌. ಯಾವುದೇ ವಿಪಕ್ಷಗಳು ಆಡಳಿತ ಮಾಡಿದ್ದಾರೆ.ಯಾರೂ ಕೂಡ ಬಜೆಟ್ ಬಾಯ್ಕಾಟ್ ಮಾಡಿ ಹೊರಗೆ ಬಂದಿಲ್ಲ. ಬಾಯ್ಕಾಟ್ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ. ಬಜೆಟ್ ಪಾಸ್ ಮಾಡಿಲ್ಲ.ಸರ್ಕಾರಿ ನೌಕರರಿಗೆ ಸಂಬಳ ಕೊಡಬೇಕು, ಮಹಿಳೆಯರಿಗೆ 2 ಸಾವಿರ ಕೊಡಬೇಕು.ಮನೆಗೆ ವಿದ್ಯುತ್ ಶಕ್ತಿ ನೀಡಬೇಕು.ಎಲ್ಲೆಡೆ ಉಚಿತವಾಗಿ ಬಸ್ಸಲ್ಲಿ ಓಡಾಡ್ತಿದ್ದಾರೆ ಅವರಿಗೆ ಅವಮಾನ ಮಾಡಿದ್ದಾರೆ.ರಾಜ್ಯದ ಜನತೆಗೆ ಅವಮಾನ ಮಾಡಿದ ವಿಶೇಷ ಒ್ರಕರಣ ನಡೆದಿದೆ.ಎಲ್ಲಾ ಬಿಜೆಪಿ, ಜೆಡಿಎಸ್‌ ಶಾಸಕರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ.

3:22 PM IST:

- ಬೆಣ್ಣಿಹಳ್ಳದ ಪ್ರವಾಹ ತಡೆಗೆ ತಡೆಗೋಡೆ ನಿರ್ಮಾಣಕ್ಕೆ ಅಸ್ತು
- ಖಾಸಗಿ ಸಹಭಾಗಿತ್ವದಲ್ಲಿ ಹುಬ್ಬಳ್ಳಿಗೆ bio cng plant ಸ್ಥಾಪನೆ; ಈ ಮೂಲಕ ಶೂನ್ಯ ತ್ಯಾಜ್ಯ ಮಾರುಕಟ್ಟೆಯನ್ನಾಗಿ ಪರಿವರ್ತನೆ
- ಧಾರವಾಡದ ವಾಲ್ಮಿ ಸಂಸ್ಥೆಯ ಉನ್ನತೀಕರಣಕ್ಕೆ ಅಸ್ತು
- ಧಾರವಾಡದಲ್ಲಿ ತೀವ್ರ ಅಸ್ವಸ್ಥೆಯಿಂದ ಬಳಲುವ ರೋಗಿಗಳಿಗಾಗಿ ಕ್ರಿಟಿಕಲ್ ಕೇರ್ ಬ್ಲಾಕ್ ನಿರ್ಮಾ
- ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಜೆ ವ್ಯಾಪ್ತಿಯಲ್ಲಿ ತಡರಾತ್ರಿ 1ರವರೆಗೆ ವ್ಯಾಪಾರ ವಹಿವಾಟುವಿಗೆ ಅಸ್ತು
- ಹುಬ್ಬಳಿ- ಧಾರವಾಡಗಳಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ಅಭಿವೃದ್ಧಿ
- ರೈಲ್ವೆ ಅಭಿವೃದ್ಧಿ ಯೋಜನೆಗಳಿಗೆ 9 ಸಶವಿರ ಕೋಟಿಗೂ ಹೆಚ್ಚು ಅನುದಾನ ನೀಡಲು ಭರವಸೆ
- ಮುಂಬೈ- ಬೆಂಗಳೂರು ಎಕನಾಮಿಕ್ ಕಾರಿಡಾರ್ ವ್ಯಾಪ್ತಿಗೆ ಬರುವ ಧಾರವಾಡ ಜಿಲ್ಲೆಯಲ್ಲಿ 6 ಸಾವಿರ ಎಕರೆ ಪ್ರದೇಶದ ಕೈಗಾರಿಕಾ ನೋಡ್
- ಧಾರವಾಡದಲ್ಲಿ ವಿಜ್ಞಾನ ಕೇಂದ್ರದಲ್ಲಿ ತಾರಾಲಯ ಕಾರ್ಯರಂಭ ಮಾಡಲಿದೆ

3:16 PM IST:

ಬೆಳಗಾವಿ:  2024-25ರ ಕರ್ನಾಟಕ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ  ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

3:15 PM IST:

*ಜಿಲ್ಲಾಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆಹಚ್ಚಲು ವೈರಲ್ ರೀಸರ್ಚ್ ಮತ್ತು ಡೈಯಾಗನೋಸ್ಟಿಕ್ ಲ್ಯಾಬೋರೇಟರಿ ಸ್ಥಾಪನೆ 
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ ಕಾರ್ಡಿಯಾಕ್ ಯೂನಿಟ್ ಆರಂಭ 
*ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಚಟುವಟಿಕೆ ಆಧಾರಿತ ಪರಿಸರವನ್ನು ಒದಗಿಸಲು ಈಗಾಗಲೇ ಅನುಮೋದನೆಗೊಂಡಿರುವ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳನ್ನು ಮಡಿಕೇರಿಯಲ್ಲಿ ನಿರ್ಮಿಸುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪ 
*ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣ
*ವಿರಾಜಪೇಟೆಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣವನ್ನು ನಿರ್ಮಾಣ 
*ಅಂದಾಜು 36 ಕೊಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ನಿರ್ಮಾಣವಾಗಲಿರುವ ಸ್ಥಳಗಳ ಪಟ್ಟಿಯಲ್ಲಿ ಮಡಿಕೇರಿಗೂ ಸ್ಥಾನ

2:38 PM IST:

ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ ನೀಡಲಾಗುವುದು. ಬಂದರು, ರೈಲು ಮತ್ತು ವಿಮಾನ ಸಂಪರ್ಕವನ್ನು ಒದಗಿಸುವ ಮೂಲಕ ಕೆಲವು ವರ್ಷಗಳಲ್ಲಿ ಅಂದಾಜು 20,000 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸುವ ಗುರಿ ಹೊಂದಿದ್ದೇವೆ.
* ಸಾಗರಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ಉದ್ದೇಶದಿಂದ ಅಂದಾಜು 1,017 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 26 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇವುಗಳ ಪೈಕಿ ರಾಜ್ಯದ ಪಾಲು 530 ಕೋಟಿ ರೂ.ಗಳಾಗಿದೆ.  ಮುಂದುವರೆದು, ಇನ್ನೂ 1,145 ಕೋಟಿ ರೂ. ಮೊತ್ತದ 12 ಕಾಮಗಾರಿಗಳ ವಿಸ್ತೃತ ಯೋಜನಾ ವರದಿಗಳನ್ನು ಕೇಂದ್ರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.
• ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸಾಮರ್ಥ್ಯದ ಮತ್ತು ೪,೨೦೦ ಕೋಟಿ ರೂ. ಅಂದಾಜು ಯೋಜನಾ ವೆಚ್ಚದ ಹೊಸ ಆಳಸಮುದ್ರ ಸರ್ವಋತು ಬಂದರನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. 
• ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಅಂದಾಜು ೩೦೪೮ ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಎರಡನೇ ಬೃಹತ್ ಬಂದರಿನ ಅಭಿವೃದ್ಧಿಗೆ ಅಂತರಾಷ್ಟ್ರೀಯ ಟೆಂಡರ್ ಅನ್ನು ಕರೆಯಲಾಗಿದೆ.  
• ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಾಲ್ಕು ಬರ್ತ್ಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.
• ಕಾರವಾರ, ಹಳೆ ಮಂಗಳೂರು ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಸುಗಮ ಸಂಚಾರಕ್ಕಾಗಿ ಹೂಳೆತ್ತುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಗೊಳ್ಳಲಾಗುತ್ತಿದೆ.
• ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುತ್ತಿದೆ.
• ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆ ಕಾಮಗಾರಿಯನ್ನು ಕೈಗೊಳ್ಳಲಾಗುವುದು. 
• ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯ ತೊಡಕುಗಳನ್ನು ನಿವಾರಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. 
*ಮುರ್ಡೇಶ್ವರದಲ್ಲಿ ಮತ್ಸ್ಯ ಸಂಶೋಧನಾ ಸಂಸ್ಥೆ ಹಾಗೂ ಹೊರಬಂದರು.

2:38 PM IST:

* ಗದಗನಲ್ಲಿ ನೂತನವಾಗಿ ನಿಮಿರ್ಸಿದ 450 ಹಾಸಿಗೆಗಳ ಆಸ್ಪತ್ರೆಗೆ ವೈದ್ಯಕಿಯ ಉಪಕರಣ ಮತ್ತು ಪಿಠೋಪಕರಣ ಖರೀದಿಗೆ ಅನುದಾನ (ಗದಗ, ಕೊಪ್ಪಳ, ಚಾಮರಾಜ ನಗರ ಸೇರಿ 150 ಕೋಟಿ)
* ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ
* ಜಿಲ್ಲೆಯ ರೋಣ ಪಟ್ಟಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ 150 ಕೋಟಿ ವೆಚ್ಚದಲ್ಲಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಸ್ಥಾಪನೆ.
* ಜಿಲ್ಲೆಯ ರೋಣ & ಮಲ್ಲಾಪುರ ರಸ್ತೆ ಅಭಿವೃದ್ಧಿ
* ಗದಗ ಜಿಲ್ಲಾಸ್ಪತ್ರೆಯಲ್ಲಿ 10 ಕೋಟಿ ವೆಚ್ಚದಲ್ಲಿ ಸುಪರ್ ಸ್ಪೆಷಾಲಿಟಿ ಕಾಡಿರ್ಕ್ ಟಕ ಸ್ಥಾಪನೆ ಮತ್ತು ಅನಸ್ತೆಷಿಯಾ ಘಟಕ
* ಗದಗ ಜಿಲ್ಲೆಯ ಜಾಲವಾಡಗಿ ಏತ ನೀರಾವರಿಗೆ ಅನುದಾನ
* ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೀತಲ ಘಟಕ ನಿರ್ಮಾಣ
* ಜವಳಿ ಪಾರ್ಕ್, ಶಿರಹಟ್ಟಿ ಯಲ್ಲಿ 100 ಹಾಸಿಗೆ ಸಾಮರ್ಥ್ಯ ತಾಲೂಕು ಆಸ್ಪತ್ರೆ ನಿರ್ಮಾಣ.

2:37 PM IST:

ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆ.

ಬೆಂಗಳೂರಿನ ಬಗ್ಗೆ ಮಾತಾಡ್ತೇನೆ. ಸಿಎಂ, ಡಿಸಿಎಂಗೆ ಅಭಿನಂಧನೆ ಹೇಳ್ತೆನೆ. 5 ಕಸದ ಘಟನ ಇದ್ವು, ಅವುಗಳನ್ನ ಹೊರಗೆ ಹಾಕುವ ಬಗ್ಗೆ ಹೇಳಿದ್ದಾರೆ. ಜನರ ಸಂಕಷ್ಟ ನಿವಾರಣೆಗೆ ಸಿಎಂ ಕ್ರಮ ತೆಗೆದುಕೊಂಡಿದ್ದಾರೆ. ನೂರತ್ತಳ್ಳಲಿಗೆ ಕಾವೇರಿ ನೀರಿನ ಸೌಲಭ್ಯ ಮಾಡುವ ಭರವಸೆ ನೀಡಿದ್ದಾರೆ. ಸಂಚಾರ ಸಮಸ್ಯೆ ನಿವಾರಣೆ ಬಗ್ಗೆ ಹೇಳಿದ್ದಾರೆ. ವೈಟ್ ಟ್ಯಾಪಿಂಗ್ ಬಗ್ಗೆ ಕ್ಲಿಯರ್ ಮಾಡುವ ಬಗ್ಗೆ ಹೇಳಿದ್ದಾರೆ...

2:35 PM IST:

* ನವಲಿ ಸಮಾನಾಂತರ ಜಲಾಶಯ ಅನುಷ್ಠಾನ ಸಂಬಂಧ ತೆಲಂಗಾಣ, ಆಂದ್ರಪ್ರದೇಶದ ಜತೆ ಸಮಾಲೋಚನೆ ಪ್ರಕ್ರಿಯೆಯಲ್ಲಿದ್ದು, ಯೋಜನೆ ಚಾಲನೆಗೆ ಆದ್ಯತೆ.

* ಕೊಪ್ಪಳದ 450 ಹಾಸಿಗೆ ಆಸ್ಪತ್ರೆಗೆ ಪೀಠೋಪಕರಣ ಖರೀದಿಗೆ ಅನುದಾನ. 

* ಯಲಬುರ್ಗಾ ಹಾಗೂ ಕುಕನೂರು ತಾಲೂಕಿನ 38 ಕೆರೆಗಳನ್ನು ತುಂಬಿಸುವ ಯೋಜನೆ ಮತ್ತು  ಕೆರೆ/ ಬ್ರಿಡಜ್ ಕಂ ಬ್ಯಾರೇಜ್ ಯೋಜನೆ ಕೈಗೆತ್ತಿಕೊಳ್ಳಲಾಗುವುದು. 

* ಯಲಬುರ್ಗಾ ಎಪಿಎಂಸಿಯಲ್ಲಿ ಶೀತಲಗೃಹ ನಿರ್ಮಾಣ.

* ಕೆಕೆಆರ್ ಡಿಬಿಯಿಂದ ವಿವಿ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು. 

* ಆರೋಗ್ಯ ಇಲಾಖೆ : ಪ್ರಸಕ್ತ ಸಾಲಿನಲ್ಲಿ ಕ್ರಿಟಿಕಲ್ ಕೇರ್ ಸ್ಥಾಪಿಸಲಾಗುವುದು. 

* ಕೊಪ್ಪಳದ ತಳಕಲ್ ನಲ್ಲಿ ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ.

2:26 PM IST:

2:25 PM IST:

* ರಾಣೆಬೆನ್ನೂರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೀತಲಗೃಹ.
* ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭಿಸಲಾಗುವುದು.
* ಹಾವೇರಿ ವಿಜ್ಞಾನ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಪೂರ್ಣಗೊಳಿಸಲಾಗುವುದು.
* ತ್ರಿಪದಿಗಳ ಮೂಲಕ ಜೀವನಸಾರವನ್ನು ಹೇಳಿದ ವಚನಕಾರ ಸರ್ವಜ್ಞನ ಸ್ಮಾರಕವನ್ನು ಹಿರೇಕೆರೂರ ತಾಲೂಕಿನಲ್ಲಿ ಅಭಿವೃದ್ಧಿಪಡಿಸಲಾಗುವುದು.

1:58 PM IST:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಲವು ಕೊಡುಗೆಗಳನ್ನು  ಘೋಷಣೆ ಮಾಡಿದ್ದಾರೆ.    ಪ್ರಮುಖ  ಹೈಲೈಟ್ಸ್ ಗಳ ಪಟ್ಟಿ ಇಲ್ಲಿದೆ.

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

1:27 PM IST:

ಕರ್ನಾಟಕದ ದೇವಸ್ಥಾನಗಳಿಂದ ಸರಿಸುಮಾರು 500 ಕೋಟಿ ರೂ ಆದಾಯ ಸಂಗ್ರಹವಾಗುತ್ತಿದೆ. ಈ ಪೈಕಿ 330 ಕೋಟಿ ರೂಪಾಯಿ ಹಣವನ್ನು ಹಜ್ ಭವನ ನಿರ್ಮಾಣ, ವಕ್ಫ್ ಬೋರ್ಡ್ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ ನೀಡಲಾಗಿದೆ. ಇದು ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಸರ್ಕಾರದಿಂದ ದೇವಸ್ಥಾನಗಳನ್ನು ಮುಕ್ತಿಗೊಳಿಸಿ ಹೋರಾಟ ಮತ್ತೆ ಶುರುವಾಗಿದೆ.

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

1:21 PM IST:

211. ನಿರುದ್ಯೋಗಿ ಯುವಜನರಲ್ಲಿ ಭರವಸೆ ತುಂಬಿ, ಉದ್ಯೋಗ ಪಡೆದುಕೊಳ್ಳುವತ್ತ ಬೆಂಬಲ ನೀಡುವ ಯೋಜನೆ ಯುವನಿಧಿ. ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಡಿಬಿಟಿ ಮೂಲಕ ನೆರವು ವರ್ಗಾಯಿಸಲಾಗುತ್ತಿದೆ.
 
212. ರಾಜ್ಯದ ಮಾನವ ಸಂಪನ್ಮೂಲದ ಸಮರ್ಪಕ ಬಳಕೆ ಮಾಡಲು ಮತ್ತು ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶಗಳನ್ನು ಒದಗಿಸಲು ರಾಜ್ಯ ಕೌಶಲ್ಯ ನೀತಿಯನ್ನು ಸಿದ್ಧಪಡಿಸಲಾಗುವುದು.

213. ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ನೀಡುತ್ತಿರುವ ಕೋರ್ಸುಗಳಲ್ಲಿ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು 25,000 ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು. ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗಾಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಯುವಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುವುದು. 

214. ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿಯನ್ನು ಸ್ಥಾಪಿಸಲಾಗುವುದು 

215. ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ ಒಟ್ಟು 350 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಮೊದಲನೇ ಹಂತದ ಯೋಜನೆಯನ್ನು ಮೂರು ವರ್ಷಗಳ ಅವಧಿಯಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.  

216. ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕ ಹಾಗೂ ಗದಗ ಜಿಲ್ಲೆಯ ರೋಣದಲ್ಲಿ NABARD ಸಹಯೋಗದೊಂದಿಗೆ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿ ಗಳನ್ನು ಪ್ರಾರಂಭಿಸಲಾಗುವುದು. 

217. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಮೆಕ್ಯಾಟ್ರಾನಿಕ್ಸ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ರೊಬೊಟಿಕ್ಸ್ ಇತ್ಯಾದಿ ಹೆಚ್ಚುವರಿ ಡಿಪ್ಲೊಮ ಕೋರ್ಸ್ಗಳನ್ನು ವಿವಿಧ ಜಿ.ಟಿ.ಟಿ.ಸಿ ಗಳಲ್ಲಿ 
ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ 15,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.  

218. ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ ಸಿ.ಎನ್.ಸಿ (Computer Numerical Control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಠತಾ ಕೇಂದ್ರವನ್ನು 16 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.   

219. ಐ.ಟಿ.ಐ. ಮತ್ತು ಜಿ.ಟಿ.ಟಿ.ಸಿ. ವಿದ್ಯಾರ್ಥಿಗಳಿಗೆ ಉದ್ಯೋಗ ನಿಯುಕ್ತಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂವಹನ ಕೌಶಲ್ಯ ತರಬೇತಿಯನ್ನು 5 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು.  ಇದರಿಂದ ಸುಮಾರು 40,000ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳಿಗೆ ಪ್ರಯೋಜನವಾಗಲಿದೆ. 

220. ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ಮತ್ತು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರಶಿಕ್ಷಣಾರ್ಥಿಗಳನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್ ಅನ್ನು ಆಯೋಜಿಸಲಾಗುವುದು. 

221. ಉದ್ಯೋಗಶೀಲತೆಯನ್ನು ಹೆಚ್ಚಿಸಲು Dual System of Training (DST) ಅನ್ನು ರಾಜ್ಯದ ಎಲ್ಲಾ ಐ.ಟಿ.ಐ ಗಳಲ್ಲಿ ಸ್ಥಳೀಯ ಕೈಗಾರಿಕೆಗಳು ಹಾಗೂ ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿ ವಿಸ್ತರಿಸಲಾಗುವುದು.  

222. ರಾಜ್ಯದಲ್ಲಿ ಉದ್ಯಮಗಳ ಬೇಡಿಕೆಗೆ ಪೂರಕವಾದ ಉತ್ತಮ ಗುಣಮಟ್ಟದ ಕೌಶಲ್ಯ ಪರಿಸರ ವ್ಯವಸ್ಥೆಯನ್ನು ರಚಿಸುವತ್ತ ಗಮನಹರಿಸಲು ಸ್ಕಿಲ್ ಕನೆಕ್ಟ್ ಸಮಿಟ್ ಅನ್ನು (Skill Connect Summit) ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಆಯೋಜಿಸಲಾಗುವುದು.  

223. ಕೆ.ಎಸ್.ಡಿ.ಸಿ ಅಡಿಯಲ್ಲಿ ಸ್ಥಾಪಿಸಲಾಗಿರುವ ಅಂತಾರಾಷ್ಟ್ರೀಯ ವಲಸೆ ಕೋಶದ ಮೂಲಕ ವಿದೇಶಿ ಉದ್ಯೋಗದಾತರೊಂದಿಗೆ ಸಂವಾದಗಳನ್ನು ನಡೆಸಲಾಗುತ್ತಿದೆ. ಸದರಿ ಕೋಶವನ್ನು ಬಲಪಡಿಸಿ ಉದ್ಯೋಗಾಕಾಂಕ್ಷಿಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಅಗತ್ಯ ಸಮನ್ವಯ ಕಾರ್ಯಗಳನ್ನು ಕೈಗೊಳ್ಳಲಾಗುವುದು.
 
224. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಸಂಸ್ಥೆಗಳಲ್ಲಿ ನೇಮಕಾತಿಗಾಗಿ ಹೊರಡಿಸಲಾಗುವ ಅಧಿಸೂಚನೆಗಳನ್ನು ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಒಂದೇ ಜಾಲತಾಣದಲ್ಲಿ ಪ್ರಕಟಿಸಲಾಗುವುದು. 

225. ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣವನ್ನು ಸಕ್ರಿಯಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ 50,000 ಎಸ್.ಹೆಚ್.ಜಿ. ಮಹಿಳಾ ಸ್ವಾಮ್ಯದ ಸೂಕ್ಷ್ಮ ಉದ್ಯಮಗಳನ್ನು ಎರಡು ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು.

226. IIM-B ಸಹಯೋಗದೊಂದಿಗೆ ಎಲ್ಲಾ 31 ಜಿಲ್ಲೆಗಳಲ್ಲಿ ಉದ್ಯಮಿಗಳನ್ನು ಉತ್ತೇಜಿಸಲು ಜಿಲ್ಲಾ ಮಟ್ಟದ ಇನ್ಕ್ಯುಬೇಶನ್ ಕೇಂದ್ರಗಳನ್ನು (DLIC) ಹಂತ ಹಂತವಾಗಿ ಸ್ಥಾಪಿಸಲಾಗುವುದು. ಮೊದಲನೇ ಹಂತದಲ್ಲಿ ಆಯ್ದ 10 ಜಿಲ್ಲೆಗಳಲ್ಲಿ ಇನ್ಕ್ಯುಬೇಶನ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
 
227. ಒಂದು ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಕ್ಕುಟ, ಕುರಿ ಮತ್ತು ಮೇಕೆ ಸಾಕಾಣಿಕೆ, ಜೇನು ಸಾಕಾಣಿಕೆ ಸಂಬಂಧಿಸಿದ ಕಿರು ಉದ್ದಿಮೆಗಳನ್ನು ಸ್ಥಾಪಿಸಲು ಮತ್ತು ಅವುಗಳಿಗೆ ಸೂಕ್ತ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲು 100 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.

228. ಕೆಫೆ ಸಂಜೀವಿನಿ ಎಂಬ ಮಹಿಳೆಯರೇ ನಡೆಸುವ ಕ್ಯಾಂಟೀನ್ಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 7.5೦ ಕೋಟಿ ರೂ. ವೆಚ್ಚದಲ್ಲಿ 50 ಕೆಫೆಗಳನ್ನು ಸ್ಥಾಪಿಸಲಾಗುವುದು.

229. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. ಇದರ ಜೊತೆಯಲ್ಲಿ 2500 ಕಾಫಿ ಕಿಯೋಸ್ಕ್ಗಳನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಮತ್ತು ಇದರ ಸಂಪೂರ್ಣ ನಿರ್ವಹಣೆಯನ್ನು ಎಸ್.ಹೆಚ್.ಜಿ. ಮಹಿಳೆಯರ ಮೂಲಕ ಮಾಡಲಾಗುವುದು. 

230. ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು 5 ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವ-ಸಹಾಯ ಗುಂಪುಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಿಸಲಾಗುವುದು.

231. ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ GP-SHG ಒಗ್ಗೂಡಿಸುವಿಕೆಯ ನೀತಿಯನ್ನು ಜಾರಿಗೊಳಿಸಲಾಗುವುದು.

1:20 PM IST:

ಚಿಕ್ಕೋಡಿ: ಸಿದ್ದರಾಮಯ್ಯನ ಬಜೆಟಗೆ ತೀವ್ರ ನಿರಾಸೆ ವ್ಯಕ್ತಪಡಿಸಿದ ಚಿಕ್ಕೋಡಿ ಜನರು.

ನೂತನ ಜಿಲ್ಲಾ ರಚನೆಗೆ ಆಸೆ ಇಟ್ಟ ಜನರಿಗೆ ನಿರಾಸೆ.

32ನೇ ಜಿಲ್ಲಾ ರಚನೆಗೆ ಚಿಕ್ಕೋಡಿ ಜನರ ಬಹು ದಿನಗಳ ಬೇಡಿಕೆ

ಈ ಬಜೆಟ್ ನಲ್ಲಿ ಚಿಕ್ಕೋಡಿ ಜಿಲ್ಲಾ ರಚನೆಗೆ ಸರ್ಕಾರ ಮಾನ್ಯತೆ ಬರವಸೆ

ಚಿಕ್ಕೋಡಿ ಜಿಲ್ಲಾ ರಚನೆಗೆ ಮುಂದಾಗದ ಕೈ ಸರ್ಕಾರ

ಕಾಂಗ್ರೆಸ್ ಸರ್ಕಾರ ವಿರುದ್ಧ ಚಿಕ್ಕೋಡಿ ಜನರು ಆಕ್ರೋಶ

ಈ ಭಾಗದ ಕಾಂಗ್ರೆಸ್ ಶಾಸಕರ ವಿರುದ್ಧ ಕೆಂಡ ಕಾರಿದ ಚಿಕ್ಕೋಡಿ ಜನರು

ಕಳೆದ 25 ಒಂದು ವರ್ಷಗಳ ಬೇಡಿಕೆಗೆ ಸ್ಪಂದಿಸದ ಸರ್ಕಾರ.

11:45 AM IST:

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು

203. ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಕನಸಿನೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಉಚಿತ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು. ಈ ಬಾರಿ ನಾವು ನೀಡಿದ್ದ ಭರವಸೆಯಂತೆ ಹೆಚ್ಚುವರಿಯಾಗಿ ಐದು ಕೆ.ಜಿ. ಆಹಾರ ಧಾನ್ಯ ನೀಡಲು ತೀರ್ಮಾನಿಸಲಾಗಿದೆ. ಆದರೆ ಕೇಂದ್ರ ಸರ್ಕಾರದ ಅಸಹಕಾರ ಧೋರಣೆಯಿಂದಾಗಿ ಅಕ್ಕಿ ಲಭ್ಯವಾಗದ ಕಾರಣ, ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂ.ನಂತೆ ಪ್ರತಿ ಮಾಹೆ 170 ರೂ. ನೇರ ನಗದು ವರ್ಗಾವಣೆ ಮಾಡುವ ಮೂಲಕ ನಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ. ಜನವರಿ 2024ರ ಅಂತ್ಯದವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.

204. ಡಾ|| ಮನ್ಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು 2013 ರಲ್ಲಿ ಜಾರಿಗೆ ತರಲಾಯಿತು. ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಲಾಗುವುದು. ಇದರಿಂದ ಆಹಾರ ಭದ್ರತಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ, ಹಾಗೂ ಹಸಿವು ಮುಕ್ತ ಕರ್ನಾಟಕದ ನಮ್ಮ ಆಶಯವನ್ನು ಈಡೇರಿಸಲು ನೆರವಾಗಲಿದೆ.

205. ಅನ್ನ–ಸುವಿಧಾ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲಿವೆರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.

11:45 AM IST:

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು

203. ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಕನಸಿನೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಉಚಿತ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು. ಈ ಬಾರಿ ನಾವು ನೀಡಿದ್ದ ಭರವಸೆಯಂತೆ ಹೆಚ್ಚುವರಿಯಾಗಿ ಐದು ಕೆ.ಜಿ. ಆಹಾರ ಧಾನ್ಯ ನೀಡಲು ತೀರ್ಮಾನಿಸಲಾಗಿದೆ. ಆದರೆ ಕೇಂದ್ರ ಸರ್ಕಾರದ ಅಸಹಕಾರ ಧೋರಣೆಯಿಂದಾಗಿ ಅಕ್ಕಿ ಲಭ್ಯವಾಗದ ಕಾರಣ, ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂ.ನಂತೆ ಪ್ರತಿ ಮಾಹೆ 170 ರೂ. ನೇರ ನಗದು ವರ್ಗಾವಣೆ ಮಾಡುವ ಮೂಲಕ ನಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ. ಜನವರಿ 2024ರ ಅಂತ್ಯದವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.

204. ಡಾ|| ಮನ್ಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು 2013 ರಲ್ಲಿ ಜಾರಿಗೆ ತರಲಾಯಿತು. ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಲಾಗುವುದು. ಇದರಿಂದ ಆಹಾರ ಭದ್ರತಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ, ಹಾಗೂ ಹಸಿವು ಮುಕ್ತ ಕರ್ನಾಟಕದ ನಮ್ಮ ಆಶಯವನ್ನು ಈಡೇರಿಸಲು ನೆರವಾಗಲಿದೆ.

205. ಅನ್ನ–ಸುವಿಧಾ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲಿವೆರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.

11:44 AM IST:

ವಸತಿ
199.    ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆಯನ್ನು ನಡೆಸಲಾಗುವುದು.  
200.    ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಫಲಾನುಭವಿಗಳು ಬಡ ಕುಟುಂಬದವರಾಗಿದ್ದು, ತಮ್ಮ ಪಾಲಿನ ವಂತಿಗೆಯಾದ ಐದು ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೇ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು 
ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು ತೀರ್ಮಾನಿಸಿದೆ. ಅದರಂತೆ ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸಲಾಗುವುದು.
201.    ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ;
•    Asset Monetisation, ವಸತಿ ಸೆಸ್‌ ಮತ್ತು ವಿವಿಧ ಶಾಸನ ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೊಢೀಕರಿಸಿ Karnataka Affordable Housing Fund ಅನ್ನು (KAHF) ಸ್ಥಾಪಿಸಲಾಗುವುದು. 
•    ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್‌ ದರ ಪರಿಷ್ಕರಣೆ ಮಾಡುವುದು.
•    ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲಾಗುವುದು.
202.    ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರವು ರಿಯಲ್‌ ಎಸ್ಟೇಟ್‌ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. 2023-24 ನೇ ಸಾಲಿನಲ್ಲಿ ಡೆವಲಪರ್‌ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು.

11:44 AM IST:

ಏನಿಲ್ಲ... ಏನಿಲ್ಲ.. ನೀರಿಲ್ಲ.. ನೀರಿಲ್ಲ ಎಂದು ಘೋಷಣೆ. ರೈತ ವಿರೋಧಿ, ಯುವಕರ ವಿರೋಧಿ, ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗುತ್ತಿರುವ ವಿರೋಧ ಪಕ್ಷಗಳು. ಬೊಮ್ಮಾಯಿ, ಆರ್‌,ಅಶೋಕ್, ವಿಜಯೇಂದ್ರ, ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಪ್ರತಿಭಟನೆ. ವಿಧಾನಸೌಧದಲ್ಲಿಯೂ ಜೈ ಶ್ರೀರಾಮ್ ಘೋಷ‌ಣೆ. ಬಿಜೆಪಿ ಶಾಸಕರಿಂದ ಜೈಶ್ರೀರಾಂ ಘೋಷಣೆ. 

ಬಿಜೆಪಿ ವಿಧಾನಸೌಧದ ಕೆಂಗಲ್ ಗೇಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ ಯತ್ನಾಳ್ ಮತ್ತು ಎಸ್ ಟಿ ಸೋಮಶೇಖರ್ ಪ್ರತಿಭಟನೆಗೆ ತೆರಳದೇ ಸದನದ ಲಾಂಜ್ ನಲ್ಲೇ ಆಸಿನರಾಗಿರುವ ಇಬ್ಬರು ನಾಯಕರು..

11:42 AM IST:

ಸಿದ್ದರಾಮ್ಮಯ ಮಂಡಿಸಿರುವ ಬಜೆಟ್ ಅತಿಯಾದ ನಿರಿಕ್ಷೆಯಿತ್ತು

ಆದರೆ ಇದರಲ್ಲಿ ಹಿಂದುಳಿದ ಪರಿಶಿಷ್ಟ ಜಾತಿ,ಪಂಗಡದವರನ್ನ ಕಡೆಗಣಿಸಲಾಗಿದೆ

ಸಿದ್ದರಾಮಯ್ಯ ಬಜೆಟ್ ನಲ್ಲಿ ರೈತರಿಂದ ಕಿತ್ತುಕೊಂಡ ಕಿಸಾನ್ ಸಮ್ಮಾನ್ ಯೋಜನೆ ವಾಪಸ್ ಕೊಡುವ ಪ್ರಯತ್ನ ಕೂಡಾ ಮಾಡಿಲ್ಲ

ಇನ್ನೂ ಹಿಂದುಳಿದ ವರ್ಗದ ವಿಧ್ಯಾರ್ಥಿಗಳಿಗೆ ನಮ್ಮ ಸರ್ಕಾರವಿದ್ದಾಗ ಒಂದು ದಿವಸಕ್ಕೆ 36000 ಹಾಸ್ಟೆಲ್ ಕೊಟ್ಟಿದ್ದೇವೆ ಆದರೆ ಸಿದ್ದರಾಮಯ್ಯರ ಬಜೆಟ್ ನಲ್ಲಿ ಹಾಸ್ಟೆಲ್ ಕೊಡುವ ಪ್ರಯತ್ನ ಮಾಡಿಲ್ಲ

ಬಜೆಟ್ ಅಂಕಿ ಅಂಶ ಪ್ರಕಾರ ಎಲ್ಲಾ ವಲಯಗಳಲ್ಲಿ ಕಡಿಮೆ ಮಾಡಿದೆ

ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಟೀಕಿಸುವುದು ಬಿಟ್ಟರೆ ಇನ್ನೇನೂ ಇಲ್ಲ

ಯಾವುದೇ ಬಡವರ ಪರವಾಗಿ ಈ ಬಜೆಟ್ ಇಲ್ಲ

ನಾಳೆ ಸರ್ಕಾರಕ್ಕೆ ಬಜೆಟ್ ನ ವರದಿ ಪಡೆದು ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ

ಕೇಂದ್ರ ಸರ್ಕಾರವನ್ನ ನ್ಯಾಯ ಬದ್ದವಾಗಿ ಟೀಕಿಸಿದ್ರೆ ಅರ್ಥವಿದೆ

ಈ ರಾಷ್ಟ್ರದಲ್ಲಿರುವ ರಾಜ್ಯ ಕ್ಕಿರುವ ಎಷ್ಟು ಪರ್ಸೆಂಟೆಜ್ ಇದೆಯೋ ಅದಕ್ಕಿಂತ ಹೆಚ್ಚಿನದಾಗಿ ಕೊಟ್ಟಿದೆ

ಆದರೆ ರಾಜ್ಯದ ಜನತೆಯ ದಿಕ್ಕನ್ನ ತಪ್ಪಿಸುವ ಕೆಲಸವನ್ನ ಸರ್ಕಾರ ಮಾಡ್ತಿದೆ

11:41 AM IST:

ಸಮಾಜ ಕಲ್ಯಾಣ 
    ಒಂದು ತೋಟದಲ್ಲಿ ನೂರು ಹೂವು ಅರಳಲಿ
    ಎಲ್ಲಾ ಕೂಡಿ ಆಡುವಂಥ ಗಾಳಿ ಬೀಸಲಿ
- ಡೇರ್‌ ಡೆವಿಲ್‌ ಮುಸ್ತಫಾ ಚಿತ್ರದಿಂದ
159.    ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,44೭ ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,12೧ ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ. 
160.    ವೈಜ್ಞಾನಿಕವಾಗಿ ಹಾಗೂ ಸಂವಿಧಾನಬದ್ಧವಾಗಿ ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ. ಈ ಕುರಿತು ಭಾರತದ ಸಂವಿಧಾನದ ಅನುಚ್ಛೇದ 341ಕ್ಕೆ ಅಗತ್ಯ ತಿದ್ದುಪಡಿ ತಂದು, ಹೊಸದಾಗಿ Clause-3 ಅನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ.  
161.    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
162.    ಕ್ರೈಸ್‌ ಅಡಿಯಲ್ಲಿ 2023-24ನೇ ಸಾಲಿನಲ್ಲಿ 23 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು.
163.    ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್‌ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದು. 
164.    2023-24ನೇ ಸಾಲಿನಲ್ಲಿ 23 ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಮುಖಾಂತರ ನಿರ್ಮಾಣ ಮಾಡಲಾಗುವುದು. 
165.    ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಮಂಜೂರು ಮಾಡಲಾಗುವುದು. 
166.    ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ಪ್ರತಿ ಮಾಹೆಗೆ 100 ರೂ. ನಂತೆ ಹೆಚ್ಚಿಸಲಾಗುವುದು.  
167.    ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿರುವುದರಿಂದ ಬೆಂಗಳೂರು ಪೂರ್ವ ಭಾಗದಲ್ಲಿ 500 ಸಂಖ್ಯೆಯ ಒಂದು ನಿರಾಶ್ರಿತರ ಪರಿಹಾರ ಕೇಂದ್ರವನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
168.    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 
35 ಕೋಟಿ ರೂ.ಗಳ Corpus Fund ಅನ್ನು ಸ್ಥಾಪಿಸಲಾಗುವುದು. ಈ ನಿಧಿಯ ಬಡ್ಡಿ ಆಕರಣೆಯನ್ನು ರೋಗಿಗಳ ಚಿಕಿತ್ಸೆಯ ಅಗತ್ಯಕ್ಕನುಗುಣವಾಗಿ ನೀಡಲಾಗುವುದು. 
169.    ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠವನ್ನು ಸ್ಥಾಪಿಸಲಾಗುವುದು.
170.    ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,750 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.      
ಪರಿಶಿಷ್ಟ ಪಂಗಡಗಳ ಕಲ್ಯಾಣ
171.    ಪರಿಶಿಷ್ಟ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಈ ಸಚಿವಾಲಯಕ್ಕೆ ಅಗತ್ಯ ಹುದ್ದೆಗಳನ್ನು ಸೃಜಿಸಿ 2023-24ನೇ ಸಾಲಿನಿಂದ ಕಾರ್ಯಾರಂಭ ಮಾಡಲಾಗಿದೆ. 
172.    ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು ಎಂದು ಮರು ನಾಮಕರಣ ಮಾಡಲಾಗುವುದು. ಈ ಶಾಲೆಗಳ ಉನ್ನತೀಕರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು;
•    1 ರಿಂದ 5ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲೆಗಳಲ್ಲಿ 6ನೇ ತರಗತಿ ಪ್ರಾರಂಭಿಸಲಾಗುವುದು. 
•    1 ರಿಂದ 7ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲೆಗಳಲ್ಲಿ 8ನೇ ತರಗತಿಯನ್ನು ಪ್ರಾರಂಭಿಸಲಾಗುವುದು.  
•    ಪ್ರತಿ ತರಗತಿಯ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 25 ರಿಂದ 40ಕ್ಕೆ ಹೆಚ್ಚಿಸಲಾಗುವುದು. 
173.    ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳು ಇಲ್ಲದಿರುವ 7 ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡರಂತೆ 100 ಸಂಖ್ಯಾಬಲದ ಬಾಲಕ/ಬಾಲಕಿಯರ 14 ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. 
174.    IISc, IIT ಮತ್ತು NIT ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ 
೬ ರಿಂದ 12 ತಿಂಗಳ ಅವಧಿಯ ವೃತ್ತಿಪರ ತರಬೇತಿ ಕೋರ್ಸ್‌ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿಂಗ್‌ ಪದವೀಧರರಿಗೆ 15,000 ರೂ.ಗಳ ಶಿಷ್ಯವೇತನವನ್ನು ನೀಡಲಾಗುವುದು.
175.    ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ/ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು. 
176.    ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್‌ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳಂತೆ ಶಿಷ್ಯವೇತನ ನೀಡಲಾಗುವುದು.  
177.    ಪರಿಶಿಷ್ಟ ಪಂಗಡದ ಕೊರಗ, ಜೇನುಕುರುಬ, ಯರವ, ಕಾಡುಕುರುಬ, ಸೋಲಿಗ, ಗೊಂಡ, ಸಿದ್ದಿ, ಮಲೈಕುಡಿ, ಕುಡಿಯ, ಹಸಲರು, ಗೌಡಲು, ಬೆಟ್ಟಕುರುಬ, ಹಕ್ಕಿ-ಪಿಕ್ಕಿ, ಇರುಳಿಗ, ರಾಜಗೊಂಡ ಹರಿಣಿಶಿಕಾರಿ ಮುಂತಾದ 23 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಈ ಕೆಳಕಂಡ ಎರಡು ಉಪಕ್ರಮಗಳನ್ನು ರೂಪಿಸಲಾಗುವುದು; 
•    ಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟುಗಳನ್ನು ಮೀಸಲಿರಿಸಿ, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರ ಪ್ರವೇಶ ಕಲ್ಪಿಸಲಾಗುವುದು.
•    ಪಡಿತರ ಚೀಟಿ ಮುಂತಾದ ಸರ್ಕಾರಿ ದಾಖಲೆಗಳನ್ನು ಒದಗಿಸಲು ವಿಶೇಷ ಕೋಶವನ್ನು 3 ಕೋಟಿ ರೂ.ಗಳ ಅನುದಾನದಲ್ಲಿ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಸ್ಥಾಪಿಸಲಾಗುವುದು

11:35 AM IST:

ಜಿ.ಟಿ.ದೇವೇಗೌಡ ಹೇಳಿಕೆ.. 

ಇದು ಸಿದ್ದರಾಮಯ್ಯ ಬಜೆಟ್ ಅಲ್ಲ, ಇದು ಕಾಂಗ್ರೆಸ್ ಬಜೆಟ್

ಈ ರೀತಿ ಬಜೆಟ್ ಮಂಡಿ ವೈಪಲ್ಯ ತೋರಿಸಿದ್ದಿರಿ.. 

ಕೃಷಿಕರಿಗೆ ಏನ್ ಮಾಡಿದ್ದೀರಿ, ರೈತರಿಗೆ 4 ಸಾವಿರ ಕಟ್ ಮಾಡಿದ್ದೀರಿ

ಬರಗಾಲದಲ್ಲಿ ರೈತರಿಗೆ ಏನನ್ನೂ ಕೊಟ್ಟಿಲ್ಲ

ಕೇಂದ್ರ ಸರ್ಕಾರದ ಬಗ್ಗೆ ಸುಳ್ಳು ಹೇಳಿಕೊಳ್ತಾ ಇದ್ದಾರೆ ಸರ್ಕಾರ

ರಾಜ್ಯದ ಜನರಿಗೆ ಸುಳ್ಳು ಹೇಳುವ ಕೆಲಸ ಆಗಿದೆ

ಜಬೆಟ್ ನಲ್ಲಿ 70% ಸುಳ್ಳಿನಿಂದ ಕೂಡಿದೆ...

ಜಿ.ಟಿ.ದೇವೇಗೌಡ ಹೇಳಿಕೆ.. 

ಇದು ಸಿದ್ದರಾಮಯ್ಯ ಬಜೆಟ್ ಅಲ್ಲ, ಇದು ಕಾಂಗ್ರೆಸ್ ಬಜೆಟ್

ಈ ರೀತಿ ಬಜೆಟ್ ಮಂಡಿ ವೈಪಲ್ಯ ತೋರಿಸಿದ್ದಿರಿ.. 

ಕೃಷಿಕರಿಗೆ ಏನ್ ಮಾಡಿದ್ದೀರಿ, ರೈತರಿಗೆ 4 ಸಾವಿರ ಕಟ್ ಮಾಡಿದ್ದೀರಿ

ಬರಗಾಲದಲ್ಲಿ ರೈತರಿಗೆ ಏನನ್ನೂ ಕೊಟ್ಟಿಲ್ಲ

ಕೇಂದ್ರ ಸರ್ಕಾರದ ಬಗ್ಗೆ ಸುಳ್ಳು ಹೇಳಿಕೊಳ್ತಾ ಇದ್ದಾರೆ ಸರ್ಕಾರ

ರಾಜ್ಯದ ಜನರಿಗೆ ಸುಳ್ಳು ಹೇಳುವ ಕೆಲಸ ಆಗಿದೆ

ಜಬೆಟ್ ನಲ್ಲಿ 70% ಸುಳ್ಳಿನಿಂದ ಕೂಡಿದೆ...

11:34 AM IST:

ವೈದ್ಯಕೀಯ ಶಿಕ್ಷಣ

132.    ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯದಲ್ಲಿಯೂ ವ್ಯಾಪಕ ಬೆಳವಣಿಗೆ ಹೊಂದಿರುವುದರಿಂದ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು. 

133.    2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

134.    ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು.

135.    ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ತಾಂತ್ರಿಕ ನೆರವಿನೊಂದಿಗೆ ಸ್ಥಾಪಿಸಲಾಗುವುದು. 

136.    ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಈ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗುವುದು.

137.    ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆಯನ್ನು ನೀಡಲು ಕ್ರಮವಹಿಸಲಾಗುವುದು.

138.    ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 Modular OT ಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

139.    ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಅನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ Cardiac Unit ಪ್ರಾರಂಭಿಸಲಾಗುವುದು.

140.    ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಸಂಸ್ಥೆಗಳಲ್ಲಿ 64 Anaesthesia Workstation ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಸಲಾಗುವುದು.  

141.    ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ Human Milk Bank ಘಟಕಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲಾಗುವುದು.  

142.    ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆ ಹಚ್ಚಲು Viral Research & Diagnostic Laboratory (VRDL) ಅನ್ನು ಸ್ಥಾಪಿಸಲಾಗುವುದು.

143.    ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದರಡಿಯಲ್ಲಿ ಒಂದು Health Repository ಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿಯು ಒಂದೇ ಮೂಲದಿಂದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು. 

144.    ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭಿಸಲಾಗಿರುತ್ತದೆ.  ವೈದ್ಯಕೀಯ ಕಾಲೇಜಿನ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. 

145.    ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡವನ್ನು ನಿರ್ಮಿಸಲಾಗುವುದು.

11:32 AM IST:

2:45 PM IST:

 ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ ೯ ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು. 
114.    ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. 
115.    ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.
116.    ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. 
117.    ಗ್ರಾಮೀಣ ಪ್ರದೇಶದ ಜನರಿಗೆ 24x7 ತುರ್ತು ಆರೋಗ್ಯ ಸೇವೆಯನ್ನು ನೀಡಲು ಮುಂದಿನ ೨ ವರ್ಷಗಳಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 
15 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾನವ ಸಂಪನ್ಮೂಲದೊಂದಿಗೆ ಕಾರ್ಯಗತಗೊಳಿಸಲಾಗುವುದು.
118.    ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಮೂಲಕ ಸ್ಥಾಪಿಸಲಾಗುವುದು.
119.    ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6,493 ಆರೋಗ್ಯ ಕ್ಷೇಮ 
ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ 
130 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.
120.    ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿರುವ ಮಕ್ಕಳ ತಜ್ಞರು, ಮತ್ತು ಕ್ರಿಟಿಕಲ್ ಕೇರ್ ಮೆಡಿಸಿನ್ ತಜ್ಞ ಮತ್ತಿತರ ತಜ್ಞ ವೈದ್ಯರುಗಳ ಸೇವೆಯನ್ನು ಟೆಲಿ-ಐಸಿಯು ವ್ಯವಸ್ಥೆಯ ಮೂಲಕ ತಾಲ್ಲೂಕು ಆಸ್ಪತ್ರೆಗಳಿಗೆ ಒದಗಿಸಲಾಗುವುದು.
121.    ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ Chemotherapy ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು.  
122.    ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ 
21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
123.    ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ Hub and Spoke ಮಾದರಿಯಲ್ಲಿ ವಿಸ್ತರಿಸುವ ಮೂಲಕ STEMI (ತೀವ್ರ ಹೃದ್ರೋಗ) ಚಿಕಿತ್ಸೆಯನ್ನು ಬಲಪಡಿಸಲಾಗುವುದು. ಇದಲ್ಲದೇ STEMI and Stroke ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ (Thrombolytic Drugs) ಸಂಗ್ರಹಣೆಗಾಗಿ 32 ಕೋಟಿ ರೂ.ಗಳನ್ನು ಒದಗಿಸಲಾಗುವುದು.
124.    ರಾಜ್ಯದ ಜಿಲ್ಲಾ ಆಸ್ಪತ್ರೆಗಳನ್ನು ಅಗ್ನಿ ಅವಘಡಗಳಿಂದ ರಕ್ಷಿಸಲು 
13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು 
6 ಕೋಟಿ ರೂ.ಗಳ ವೆಚ್ಚದಲ್ಲಿ ಅಳವಡಿಸಲಾಗುವುದು.  
125.    2025 ರೊಳಗೆ ಕ್ಷಯರೋಗ ನಿರ್ಮೂಲನೆಗೊಳಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗಾಗಿ 
87 True-Nat Machines ಗಳನ್ನು ಖರೀದಿಸಲು 
6 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.
126.    ಕಲ್ಯಾಣ ಕರ್ನಾಟಕದಲ್ಲಿ Haemophilia ಮತ್ತು Thalassemia ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ICDT ಕೇಂದ್ರಗಳ ಬಲವರ್ಧನೆಗೆ 
7 ಕೋಟಿ ರೂ.ಗಳನ್ನು ಒದಗಿಸಲಾಗುವುದು. 
127.    ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ First Referral Unit (FRU) ಗಳಲ್ಲಿ ರಕ್ತ ಸಂಗ್ರಹ ಘಟಕಗಳಿಲ್ಲದ ಕಾರಣ, ರೋಗಿಗಳಿಗೆ ತುರ್ತು ಸಮಯದಲ್ಲಿ ರಕ್ತ ಪೂರೈಸಲು ತೊಂದರೆ ಉಂಟಾಗುತ್ತಿದೆ. ಇದನ್ನು ನೀಗಿಸಲು ೫೦ ಹೊಸ ರಕ್ತ ಶೇಖರಣಾ ಘಟಕಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಸ್ಥಾಪಿಸಲಾಗುವುದು.
128.    ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು. ಇದಲ್ಲದೇ ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ  ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು  ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆಯಾಗಿ 11 ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು. 
129.    ಬೆಂಗಳೂರಿನಲ್ಲಿ ಬಡಜನತೆಗೆ ಉಚಿತ ಪ್ರಯೋಗಾಲಯ ಸೇವೆಯನ್ನು ಒದಗಿಸಲು Hub and Spoke ಮಾದರಿಯಲ್ಲಿ 
430 ಪ್ರಯೋಗಾಲಯಗಳ ಸ್ಥಾಪನೆಗೆ ಮುಂದಿನ ಎರಡು ವರ್ಷಗಳಲ್ಲಿ 20 ಕೋಟಿ ರೂ. ಗಳ ಅನುದಾನವನ್ನು ನೀಡಲಾಗುವುದು.
130.    ಮಧುಮೇಹ ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಆಯುಷ್ ಚಿಕಿತ್ಸೆ ನೀಡಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಆಯುರ್ವೇದ ಮಧುಮೇಹ ಘಟಕವನ್ನು ಸ್ಥಾಪಿಸಲಾಗುವುದು.   
131.    ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ 2021ರಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ನೇಮಿಸಿದೆ. ಆಯೋಗವು ನೀಡುವ ವರದಿಯನ್ನಾಧರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

11:29 AM IST:

ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕಾಗಿ ಒಂದು ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ 2 ಉಪ ವಿಭಾಗಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಈ ಯೋಜನೆಯಡಿ ಮುಳುಗಡೆಯಾಗುವ ಭೂಮಿಯನ್ನು ಗುರುತಿಸುವ ಸರ್ವೆ ಹಾಗೂ ಮರಗಳ ಎಣಿಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಿದ್ದು ಉಳಿದ ಅಗತ್ಯ ತೀರುವಳಿಗಳನ್ನು ಸಕ್ಷಮ ಪ್ರಾಧಿಕಾರಗಳಿಂದ ಪಡೆದು ಶೀಘ್ರವಾಗಿ ಪ್ರಾರಂಭಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು.
75.    ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥವಾಗಿ (Pre-Commissioning Test) ನೀರು ಹರಿಸಿ ಚಾಲನೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಯೋಜನೆಯ ಎಲ್ಲಾ ಲಿಫ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲಾಗುವುದರ ಜೊತೆ ಸಮತೋಲನಾ ಜಲಾಶಯದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. 
76.    ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಯೋಜನೆಯಡಿಯ 
ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ ಮತ್ತು ಪುನರ್ ವಸತಿ ಹಾಗೂ ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಕೃಷ್ಣಾ ನ್ಯಾಯಾಧಿಕರಣ-2ರ ಅಂತಿಮ ತೀರ್ಪಿನ ಬಾಕಿಯಿರುವ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದರೊಂದಿಗೆ ಅಗತ್ಯವಿರುವ ಕಾನೂನಾತ್ಮಕ ಕ್ರಮಗಳನ್ನು ಮುಂದುವರೆಸಲಾಗುವುದು. 
77.    ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ತನ್ನ 2023-24ನೇ ಸಾಲಿನ ಆಯವ್ಯಯದಲ್ಲಿ 5,300 ಕೋಟಿ ರೂ. ಅನುದಾನ ಘೋಷಿಸಿಲಾಗಿತ್ತು. ಆದರೆ ಈವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿರುವುದಿಲ್ಲ. ಹಾಗೆಯೇ ಹಿಂದಿನ ರಾಜ್ಯ ಸರ್ಕಾರ ತನ್ನ ಆಯವ್ಯಯ ಘೋಷಣೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾನ್ಯತೆ ನೀಡಲಾಗುತ್ತಿರುವುದರಿಂದ ಮಾನ್ಯ ಪ್ರಧಾನಮಂತ್ರಿಗಳಿಗೆ ಅಭಿನಂದನೆಗಳನ್ನು ತಿಳಿಸಲಾಗಿತ್ತು, ಆದರೆ ಈವರೆಗೆ ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರವು ಘೋಷಿಸದೆ ಇರುವುದರಿಂದ ಇದು ಹುಸಿಯಾದ ಘೋಷಣೆಯಾಗಿದೆ. ಪ್ರಸಕ್ತ ಸಾಲಿನಲ್ಲಿ 
ಈ ಯೋಜನೆಯಡಿ ರಾಜ್ಯ ಸರ್ಕಾರವು ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸಲು ಯೋಜಿಸಿದ್ದು, ಆಯವ್ಯಯದಲ್ಲಿ ಘೋಷಿಸಿದಂತೆ ಅನುದಾನವನ್ನು ಬಿಡುಗಡೆ ಮಾಡಿ ಯೋಜನೆಯನ್ನು ರೈತರಿಗೆ ತಲುಪಿಸಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
78.    ಕಳಸಾ ಮತ್ತು ಬಂಡೂರಾ ನಾಲಾ ತಿರುವು ಯೋಜನೆಗಳಡಿ 
3.9 TMC ನೀರಿನ ಬಳಕೆಗಾಗಿ ವಿವರವಾದ ಯೋಜನಾ ವರದಿಗಳಿಗೆ ಕೇಂದ್ರ ಜಲ ಆಯೋಗದ ತೀರುವಳಿ ದೊರಕಿದ್ದು, ಪ್ರಸ್ತುತ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅರಣ್ಯ ತೀರುವಳಿ ನಿರೀಕ್ಷಿಸಿ 
ರಾಜ್ಯ ಸರ್ಕಾರವು ಟೆಂಡರ್ ಪ್ರಕ್ರಿಯೆಯನ್ನು ಚಾಲನೆಗೊಳಿಸಲಾಗಿರುತ್ತದೆ. ಆದರೆ ಈ ನಡುವೆ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಅರಣ್ಯ ತೀರುವಳಿಯನ್ನು ಅನುಮೋದಿಸದೇ ಮುಂದೂಡಲಾಗಿರುತ್ತದೆ. 
79.    ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಜಲಾಶಯ ವ್ಯಾಪ್ತಿಯಲ್ಲಿನ ರೈತರ ಬಹುದಿನದ ಬೇಡಿಕೆಯಾದ ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧವಾಗಿದ್ದು, ಸದರಿ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಕ್ರಿಯೆ ಚಾಲನೆಗೊಳಿಸಿದ್ದು, ಯೋಜನೆ ಕಾರ್ಯಗತಗೊಳಿಸಲು ಆದ್ಯತೆ ನೀಡಲಾಗುವುದು. 
80.    ಪ್ರತಿಷ್ಠಿತ ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಿಸುವ ಯೋಜನೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು. 
81.    ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯನ್ನು (ವಾಲ್ಮಿ) ಪ್ರಸಕ್ತ ಸಾಲಿನಲ್ಲಿ Centre of Excellence in Water Management ಆಗಿ ಉನ್ನತೀಕರಿಸಲಾಗುವುದು.   
82.    ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಮಾಲೀಕತ್ವವಿರುವ ಜಮೀನಿನಲ್ಲಿ ಮತ್ತು ಜಲಾಶಯಗಳ ಹಿನ್ನೀರಿನಲ್ಲಿ ಸೂಕ್ತ ಮಾದರಿಯ ಸೋಲಾರ್ ಪಾರ್ಕ್ಗಳನ್ನು ಸ್ಥಾಪಿಸುವ ಯೋಜನೆಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು. 
83.    ಪ್ರಗತಿಯಲ್ಲಿರುವ ಏತ ನೀರಾವರಿ ಯೋಜನೆಗಳಾದ 
ಬೂದಿಹಾಳ್-ಪೀರಾಪುರ ಹಂತ-1, ಶ್ರೀ ವೆಂಕಟೇಶ್ವರ ಹಾಗೂ ಕೆಂಪವಾಡ ಬಸವೇಶ್ವರ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡ, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಮತ್ತು ಗುರುಮಿಠಕಲ್ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. 
84.    ಪ್ರಗತಿಯಲ್ಲಿರುವ ಹೇಮಾವತಿ ಯೋಜನೆ ವೈನಾಲೆಯಡಿ 5.45 ಕಿ.ಮೀ ಉದ್ದದ ಹಾಗೂ ತುಮಕೂರು ಶಾಖಾ ನಾಲೆಯಡಿ 166.90 ಕಿ.ಮೀ. ಉದ್ದದ ನಾಲೆಯ ಆಧುನೀಕರಣ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ ನೀರಿನ ಬಳಕೆಯ ದಕ್ಷತೆಯು ವೃದ್ಧಿಸಲಿದೆ.  
85.    ಕರ್ನಾಟಕ ನೀರಾವರಿ ನಿಗಮದಡಿ ಏತ ನೀರಾವರಿ ಯೋಜನೆಗಳಾದ ಕಲಬುರಗಿಯ ಯಡಳ್ಳಿ ಹಾಗೂ ತೆರ್ನಳ್ಳಿ, ಉಡುಪಿ ಜಿಲ್ಲೆಯ ಸ್ವರ್ಣ ಹಾಗೂ ಸಿದ್ದಾಪುರ, ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ-ಹಲಗಲಿ, ಸಸಾಲಟ್ಟಿ-ಶಿವಲಿಂಗೇಶ್ವರ, ಶಿರೂರು, ಹನವಾಳ, ಬೆಳಗಾವಿಯ ಜಿಲ್ಲೆಯ ಅಥಣಿ-ಕೊಟ್ಟಲಗಿ-ಅಮ್ಮಾಜೇಶ್ವರಿ, ಶ್ರೀ ಚನ್ನವೃಷಭೇಂದ್ರ, ಮಹಾಲಕ್ಷ್ಮಿ, ಸತ್ತಿಗೇರಿ, ಮಾರ್ಕಂಡೇಯ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಹಳೆಯ ಏತ ನೀರಾವರಿ ಯೋಜನೆಗಳ ಪುನಶ್ಚೇತನ  ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ರಾಯಚೂರು ಜಿಲ್ಲೆಯ ಗುಂಜಳ್ಳಿ, ಕಲಬುರಗಿ ಜಿಲ್ಲೆಯ ಆಳಂದ, ಬೀದರ್ ಜಿಲ್ಲೆಯ ಔರಾದ್, ಬೆಳಗಾವಿ ಜಿಲ್ಲೆಯ ಅರಬಾವಿ, ಹಿರೆಬಾಗೇವಾಡಿ, ಸಂತಿ ಬಸ್ತವಾಡ, ಕಾಗವಾಡ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಿರವತ್ತಿ, ಗದಗ ಜಿಲ್ಲೆಯ ಜಾಲವಾಡಗಿ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ 7,280 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು. ಪ್ರಸ್ತಾಪಿತ ಯೋಜನೆಗಳಿಂದ ಬಾಧಿತ ಅಚ್ಚುಕಟ್ಟು ಪ್ರದೇಶವೂ ಒಳಗೊಂಡಂತೆ 97,698 ಹೆಕ್ಟರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ.
86.    ಕೃಷ್ಣಾ ಭಾಗ್ಯ ಜಲ ನಿಗಮದಡಿ ಏತ ನೀರಾವರಿ ಯೋಜನೆಗಳಾದ ಬಾಗಲಕೋಟೆ ಜಿಲ್ಲೆಯ ಕೆರೂರು, ವಿಜಯಪುರ ಜಿಲ್ಲೆಯ ಹೊರ್ತಿ-ರೇವಣಸಿದ್ದೇಶ್ವರ, ಚಿಮ್ಮಲಗಿ, ಮುಳವಾಡ, ಯಾದಗಿರಿ ಜಿಲ್ಲೆಯ ಭೀಮಾ ಪ್ಲಾಂಕ್, ಪ್ರಸಕ್ತ ಸಾಲಿನಲ್ಲಿ 3,779 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಗಳಿಂದ ಬಾಧಿತ ಅಚ್ಚುಕಟ್ಟು ಪ್ರದೇಶವೂ ಒಳಗೊಂಡಂತೆ 1,09,350 ಹೆಕ್ಟರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ.
87.    ಕೊಪ್ಪಳ ಜಿಲ್ಲೆಯ ಯಲಬುರ್ಗಾ-ಕುಕನೂರು ತಾಲ್ಲೂಕಿನ 38 ಕೆರೆಗಳನ್ನು ಕುಡಿಯುವ ನೀರು ಹಾಗೂ ಅಂತರ ಜಲ ಅಭಿವೃದ್ಧಿಗಾಗಿ ಕೆರೆ ತುಂಬಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ 970 ಕೋಟಿ ರೂ. ಅಂದಾಜು ಮೊತ್ತದಲ್ಲಿ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು.
88.    ಕಾವೇರಿ ನೀರಾವರಿ ನಿಗಮದಡಿ ವಿಶ್ವೇಶ್ವರಯ್ಯ ನಾಲಾ ಜಾಲದ ಹೆಬ್ಬಕವಾಡಿ, ನಿಡಘಟ್ಟ, ತುರುಗನೂರು, ಮಳವಳ್ಳಿ ತಾಲ್ಲೂಕಿನ ಮಾದವಮಂತ್ರಿ ನಾಲೆಗಳ ಹಾಗೂ ಮದ್ದೂರು ತಾಲ್ಲೂಕು ಕೆಮ್ಮಣ್ಣುನಾಲಾ ಆಧುನೀಕರಣ, ಹುಣಸೂರು ತಾಲ್ಲೂಕಿನ ಮರದೂರು, ಕನಕಪುರದ ಹೆಗ್ಗನೂರು ಕೆರೆ ತುಂಬಿಸುವ ಯೋಜನೆಗಳು, ಶ್ರೀರಂಗ ಕುಡಿಯುವ ನೀರು ಯೋಜನೆಗೆ ಪೈಪ್ಲೈನ್ ಮೂಲಕ ನೀರು ಒದಗಿಸುವ ಯೋಜನೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿ, ಗುಬ್ಬಿಯ ಮಠದಹಳ್ಳಿ ಕುಡಿಯುವ ನೀರು ಯೋಜನೆ, ರಾಮನಗರದ ಬಳಿ ಅರ್ಕಾವತಿ River Front Development ಯೋಜನೆಗಳನ್ನು ಅಂದಾಜು 2,000 ಕೋಟಿ ರೂ. ಮೊತ್ತದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು. 
89.    ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟಿ ರೂ. ಮೊತ್ತದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.
90.    ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ (SDMF) ಯೋಜನೆ ರೂಪಿಸಲಾಗುವುದು.

11:28 AM IST:

ಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯವನ್ನು ಬಲಪಡಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದೆ.  ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 
27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. 
65.    ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು 
ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
•    ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 50,000 ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 
7,631 ಕೋಟಿ ರೂ. ಬೆಳೆ ಸಾಲ ಮನ್ನಾ ಮಾಡಲಾಗಿತ್ತು. 
ಈ ಯೋಜನೆಯಡಿಯಲ್ಲಿ ಡಿಸಿಸಿ ಬ್ಯಾಂಕುಗಳಿಗೆ ಸುಮಾರು 
132 ಕೋಟಿ ರೂ. ಬಿಡುಗಡೆಯಾಗದ ಪರಿಣಾಮವಾಗಿ ಬ್ಯಾಂಕುಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬೇಕಾಯಿತು. ಆದ್ದರಿಂದ, ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
•    ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಸುಮಾರು 
57,000 ರೈತರಿಗೆ ಅನುಕೂಲವಾಗಲಿದೆ. ಇದರಿಂದ ಡಿಸಿಸಿ/ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂ.ಗಳಷ್ಟು ಸಾಲ ಮರುಪಾವತಿಯಾಗುವ ನಿರೀಕ್ಷೆಯಿರುವುದರಿಂದ ಬ್ಯಾಂಕುಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ. 
ಈ ಉದ್ದೇಶಕ್ಕಾಗಿ 450 ಕೋಟಿ ರೂ. ಅನುದಾನ ಒದಗಿಸಲಾಗುವುದು. 
66.    ಕರ್ನಾಟಕ ಕೃಷಿ ಬೆಲೆ ಆಯೋಗವು ತನ್ನ ವರದಿಯಲ್ಲಿ 26 ಬೆಳೆಗಳನ್ನು ಕರ್ನಾಟಕದಲ್ಲಿ ಪ್ರಮುಖವಾದವು ಎಂದು ಗುರುತಿಸಿದ್ದು, ಇವುಗಳಲ್ಲಿ 1೬ಕ್ಕೆ ಮಾತ್ರ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಿದೆ. ಆದ್ದರಿಂದ ಕರ್ನಾಟಕ ರಾಜ್ಯದ ಇತರ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು.
67.    ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್‌ ಅವರಿಗೆ ಭಾರತ ರತ್ನ ನೀಡಿರುವುದು ಸಂತೋಷದ ವಿಷಯ. ಅವರ ಅಧ್ಯಕ್ಷತೆಯ ಸಮಿತಿ ವರದಿ ಶಿಫಾರಸು ಮಾಡಿದಂತೆ ಕನಿಷ್ಠ ಬೆಂಬಲ ಬೆಲೆಯನ್ನು ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇ.50 ರಷ್ಟು ಲಾಭಾಂಶ ಆಧಾರದಡಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
68.    ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿ ತರಲಾಗುವುದು. 
69.    ಕೃಷಿ ಉತ್ಪನ್ನ ಸಂಸ್ಕರಣೆ, ಮಾರುಕಟ್ಟೆ ಸಂಪರ್ಕ ಮತ್ತು ಮೌಲ್ಯವರ್ಧನೆಯಲ್ಲಿಯೂ ಸಹಕಾರ ವಲಯವು ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷಿ ಮಾರಾಟ ಇಲಾಖೆಯ ಮೂಲಕ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
•    ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಹಾಗೂ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ 
ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹಗಳನ್ನು ನಿರ್ಮಿಸಲಾಗುವುದು.
•    ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಮತ್ತು ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುವುದು. 
•    ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ 
35 ಕೋಟಿ ರೂ.  ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣವನ್ನು ಸ್ಥಾಪಿಸಲಾಗುವುದು. 
•    ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲಾ ಕಾರ್ಯ ಚಟುವಟಿಕೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟೈಜ಼್ ಮಾಡಲಾಗುವುದು.
•    ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ 
Bio CNG Plant ಸ್ಥಾಪಿಸುವ ಮೂಲಕ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು.
•    ಎ.ಪಿ.ಎಂ.ಸಿ ಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ Charging ಕೇಂದ್ರಗಳನ್ನು ಹಾಗೂ ಪೆಟ್ರೋಲ್ ಬಂಕ್ಗಳನ್ನು 
PPP ಮಾದರಿಯಲ್ಲಿ ಸ್ಥಾಪಿಸಲು ಒತ್ತು ನೀಡಲಾಗುವುದು.
70.    ಎ.ಪಿ.ಎಂ.ಸಿ ಗಳನ್ನು ಬಲಪಡಿಸುವ ಮೂಲಕ ರೈತರಿಗೆ ತಮ್ಮ ಬೆಳೆಗಳಿಗೆ ಉತ್ತಮ ಆದಾಯ ಗಳಿಸಲು ನೆರವಾಗಲು ಈ ಕೆಳಕಂಡ ಕ್ರಮಗಳನ್ನು ಪ್ರಸ್ತಾಪಿಸಿದೆ;  
•    ರೈತ ವಿರೋಧಿ ಎ.ಪಿ.ಎಂ.ಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ವಿಧೇಯಕಕ್ಕೆ ವಿಧಾನ ಸಭೆಯ ಅಂಗೀಕಾರ ಪಡೆಯಲಾಗಿದ್ದು, ವಿಧಾನ ಪರಿಷತ್ತಿನಲ್ಲಿ ಸದನ ಸಮಿತಿಯ ಪರಿಶೀಲನೆಗೆ ಒಪ್ಪಿಸಲಾಗಿದೆ. ಸದರಿ ವಿಧೇಯಕಕ್ಕೆ ಶೀಘ್ರದಲ್ಲಿಯೇ ಅಂಗೀಕಾರ ಪಡೆಯಲು ಕ್ರಮವಹಿಸಲಾಗುವುದು.
•    ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಮಾರುಕಟ್ಟೆ ಸಮಿತಿಗಳಿಗೆ ಅನುದಾನ ಒದಗಿಸಲು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಗೆಯನ್ನು ಪಡೆಯುವ ಮೂಲಕ ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪಿಸಲು ಕಾನೂನು ರಚಿಸಲಾಗುವುದು. 
•    ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆಂಬಲ ನೀಡಲು ಕ್ರಮವಹಿಸಲಾಗುವುದು.  
71.    ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತ ಕಾಯಲು ಮತ್ತು ತೂಕದಲ್ಲಾಗುವ ಮೋಸ ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳ ಬಳಿ Weigh Bridge ಗಳನ್ನು ಎ.ಪಿ.ಎಂ.ಸಿ. ಗಳ ಮೂಲಕ ಸ್ಥಾಪಿಸಲಾಗುವುದು.
72.    ಕರ್ನಾಟಕ ಉಗ್ರಾಣ ನಿಗಮವು ತೀವ್ರ ಹಣಕಾಸು ಹಾಗೂ ಆಡಳಿತಾತ್ಮಕ ಬಿಕ್ಕಟ್ಟು ಎದುರಿಸುತ್ತಿದ್ದು, ನಾವು ಅಧಿಕಾರಕ್ಕೆ ಬಂದ ನಂತರ 4.54 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ 76 ಗೋದಾಮುಗಳ ನಿರ್ಮಾಣ ಪೂರ್ಣಗೊಳಿಸಲು 376 ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗಿದೆ.
73.    ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಬಳಕೆಯಾಗದೇ ಇರುವ ಉಗ್ರಾಣಗಳ ಸಾಮರ್ಥ್ಯ ಬಳಸಿ ಪಿಪಿಪಿ ಮಾದರಿಯಲ್ಲಿ ಶೀತಲಗೃಹಗಳನ್ನು ಸ್ಥಾಪಿಸಲಾಗುವುದು.

11:27 AM IST:

ಈ ಆಯವ್ಯಯದಲ್ಲಿ ಘೋಷಿಸಲಾದ ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಈ ಕೆಳಕಂಡ ಯೋಜನೆಗಳನ್ನು ಜಾರಿಗೊಳಿಸಲಾಗುವುದು;
•    ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ 10,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು. 
•    ಅಮೃತ ಮಹಲ್/ ಹಳ್ಳಿಕಾರ್/ ಖಿಲಾರಿ ರಾಸುಗಳನ್ನು ಸಂವರ್ಧನೆ ಮಾಡಿ ಉತ್ಕೃಷ್ಟ ಕರುಗಳನ್ನು ಒದಗಿಸಲಾಗುವುದು.  
•    ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ.6ರ ಬಡ್ಡಿ ಸಹಾಯಧನ ನೀಡಲಾಗುವುದು.
•    ಹಂದಿ ಮತ್ತು ಕೋಳಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಸಕ್ತ ರೈತರಿಗೆ ತರಬೇತಿ ನೀಡುವ ಮೂಲಕ ರೈತರ ಆದಾಯ ಹೆಚ್ಚಿಸಲಾಗುವುದು.
54.    ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ಪಾಲಿಕ್ಲಿನಿಕ್ಗಳನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು ಕ್ರಮವಹಿಸಲಾಗುವುದು. ಪ್ರಥಮ ಹಂತದಲ್ಲಿ ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಒದಗಿಸಲಾಗುವುದು. 
55.    ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ 
100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು. 
56.    ರಾಜ್ಯದಲ್ಲಿ ಪರಂಪರಾಗತವಾಗಿ ಕುರಿ/ ಮೇಕೆ ಸಾಕಾಣಿಕೆಯನ್ನು ವಲಸೆ ಮುಖಾಂತರ ಕೈಗೊಳ್ಳುತ್ತಿರುವ ಕುರಿಗಾರರ ಹಿತರಕ್ಷಣೆಗಾಗಿ 
ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು:
•    ವಲಸೆ ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಲಾಗುವುದು.
•    ಸಂಚಾರಿ ಕುರಿಗಾಹಿಗಳು ಇರುವ ಜಾಗದಲ್ಲೇ ಅವರ ಕುರಿ, ಮೇಕೆಗಳಿಗೆ ಸರ್ಕಾರಿ ವೈದ್ಯರಿಂದ ಲಸಿಕೆ ಹಾಕಲಾಗುವುದು.
•    ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.
•    ಸಂಚಾರಿ ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿ ವೇತನ ನೀಡಲಾಗುವುದು.
57.    ಪುತ್ತೂರು ಪಶುವೈದ್ಯಕೀಯ ಕಾಲೇಜಿನ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಕಾಲೇಜನ್ನು ಕಾರ್ಯಾರಂಭ ಮಾಡಲಾಗುವುದು.

11:27 AM IST:

ಈ ಆಯವ್ಯಯದಲ್ಲಿ ಘೋಷಿಸಲಾದ ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಈ ಕೆಳಕಂಡ ಯೋಜನೆಗಳನ್ನು ಜಾರಿಗೊಳಿಸಲಾಗುವುದು;
•    ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ 10,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು. 
•    ಅಮೃತ ಮಹಲ್/ ಹಳ್ಳಿಕಾರ್/ ಖಿಲಾರಿ ರಾಸುಗಳನ್ನು ಸಂವರ್ಧನೆ ಮಾಡಿ ಉತ್ಕೃಷ್ಟ ಕರುಗಳನ್ನು ಒದಗಿಸಲಾಗುವುದು.  
•    ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ.6ರ ಬಡ್ಡಿ ಸಹಾಯಧನ ನೀಡಲಾಗುವುದು.
•    ಹಂದಿ ಮತ್ತು ಕೋಳಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಸಕ್ತ ರೈತರಿಗೆ ತರಬೇತಿ ನೀಡುವ ಮೂಲಕ ರೈತರ ಆದಾಯ ಹೆಚ್ಚಿಸಲಾಗುವುದು.
54.    ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ಪಾಲಿಕ್ಲಿನಿಕ್ಗಳನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು ಕ್ರಮವಹಿಸಲಾಗುವುದು. ಪ್ರಥಮ ಹಂತದಲ್ಲಿ ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಒದಗಿಸಲಾಗುವುದು. 
55.    ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ 
100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು. 
56.    ರಾಜ್ಯದಲ್ಲಿ ಪರಂಪರಾಗತವಾಗಿ ಕುರಿ/ ಮೇಕೆ ಸಾಕಾಣಿಕೆಯನ್ನು ವಲಸೆ ಮುಖಾಂತರ ಕೈಗೊಳ್ಳುತ್ತಿರುವ ಕುರಿಗಾರರ ಹಿತರಕ್ಷಣೆಗಾಗಿ 
ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು:
•    ವಲಸೆ ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಲಾಗುವುದು.
•    ಸಂಚಾರಿ ಕುರಿಗಾಹಿಗಳು ಇರುವ ಜಾಗದಲ್ಲೇ ಅವರ ಕುರಿ, ಮೇಕೆಗಳಿಗೆ ಸರ್ಕಾರಿ ವೈದ್ಯರಿಂದ ಲಸಿಕೆ ಹಾಕಲಾಗುವುದು.
•    ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.
•    ಸಂಚಾರಿ ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿ ವೇತನ ನೀಡಲಾಗುವುದು.
57.    ಪುತ್ತೂರು ಪಶುವೈದ್ಯಕೀಯ ಕಾಲೇಜಿನ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಕಾಲೇಜನ್ನು ಕಾರ್ಯಾರಂಭ ಮಾಡಲಾಗುವುದು. 

2:44 PM IST:

50.    ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ 
ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
51.    ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹಧನವನ್ನು ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ವಾರ್ಷಿಕ 12 ಕೋಟಿ ರೂ. ಒದಗಿಸಲಾಗುವುದು.
52.    ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಕಿಲೋಗೆ 10 ರೂ.ನಿಂದ 30 ರೂ.ಗೆ ಹೆಚ್ಚಿಸಲಾಗುವುದು.

11:26 AM IST:

43.    ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ಗಳನ್ನು ಸ್ಥಾಪಿಸಲಾಗುವುದು. 
44.    ರಾಜ್ಯದಲ್ಲಿ 40,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
45.    ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಕೊಯ್ಲೋತರ ನಿರ್ವಹಣಾ ಕೇಂದ್ರ (Packhouse) ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
46.    ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು. 
47.    ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಇಂಗಾಲವನ್ನು ಹಿಡಿದಿಟ್ಟುಕೊಳ್ಳುವ ಬೆಳೆಗಳನ್ನು ಗುರುತಿಸಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 
Carbon Credit ರೂಪದಲ್ಲಿ ಮಾರಾಟ ಮಾಡುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಲು ಅನುಕೂಲವಾಗುವಂತೆ ಉತ್ತೇಜನ ನೀಡಲಾಗುವುದು.
48.    ರಾಜ್ಯದಲ್ಲಿ ಸಾಂಬಾರು ಪದಾರ್ಥ ಬೆಳೆಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕ್ನ್ನು (Spice Park) ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. 
49.    ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು.

2:43 PM IST:

        ಹೊಲವನುತ್ತು ಬಿತ್ತೋರು 
        ಬೆಳೆಯ ಕುಯ್ದು ಬೆವರೋರು
        ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು
-    ಪದ್ಮಶ್ರೀ ಡಾ|| ಸಿದ್ದಲಿಂಗಯ್ಯ

29.    ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು; 
•    ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು.
•    ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು.
•    ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.
•    ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು. 
•    ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.
•    ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು. 
30.    ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು. 
31.    ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು.   
32.    ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಅನ್ನು ಸ್ಥಾಪಿಸಲಾಗುವುದು. 
33.    ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಸ್ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು. 
34.    ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ 
1,000 ದಂತೆ ಒಟ್ಟು 5,೦೦೦ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು. 
35.    ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
36.    ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ 
ಸಲಹೆ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ e-SAP ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲು ಕ್ರಮ ವಹಿಸಲಾಗುವುದು.  
37.    ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು. 
38.    ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮವಹಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕಾಗಿ PMFME ಯೋಜನೆಯಡಿಯಲ್ಲಿ 80 ಕೋಟಿ ರೂ.ಗಳನ್ನು ಒದಗಿಸಲಾಗುವುದು. 
39.    ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು. 
40.    ಕೃಷಿ ನಾವೀನ್ಯತೆಯ ಯುಗದಲ್ಲಿ ಪಾರಂಪರಿಕ ಕೃಷಿ ಪದ್ಧತಿಯಲ್ಲಿ ಗಣನೀಯ ಬದಲಾವಣೆಗಳಾಗಿದ್ದು, ಉಪಗ್ರಹ ಚಿತ್ರ, ಸೆನ್ಸರ್ಗಳ ಬಳಕೆ ಮತ್ತು ಮಷಿನ್ ಲರ್ನಿಂಗ್ ನಂತಹ (Machine Learning) ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ಒಂದು ದತ್ತಾಂಶವನ್ನು ಅಭಿವೃದ್ಧಿಪಡಿಸಲಾಗುವುದು. 
41.    ರೈತ ಉತ್ಪಾದಕ ಸಂಸ್ಥೆಗಳನ್ನು (FPO) ಇನ್ನಷ್ಟು ಸದೃಢ 
ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ಪೂರಕವಾದ 
ತರಬೇತಿ, ಮಾರ್ಗದರ್ಶನ ಹಾಗೂ ಬೆಂಬಲ ನೀಡುವ 
Agri Accelerator Platform ಮೂಲಕ ಕೃಷಿ ವಲಯದ Start-up ಗಳನ್ನು ಉತ್ತೇಜಿಸಲಾಗುವುದು.
42.    ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು.

11:21 AM IST:

ವರನಟ ಡಾ|| ರಾಜ್‌ಕುಮಾರ್‌ ಅಭಿನಯದ ಹಾಗೂ ಆರ್.ಎನ್.ಜಯಗೋಪಾಲ್‌ ರಚಿಸಿದ ಬಂಗಾರದ ಮನುಷ್ಯ ಚಿತ್ರದ ಈ ಹಾಡಿನಂತೆ ದೇಶದ ಯಾವುದೇ ಸರ್ಕಾರ ಜಾರಿಗೊಳಿಸದ ಅತ್ಯಂತ ಬೃಹತ್‌ ಪ್ರಮಾಣದ ನೇರ ನೆರವು ನೀಡುವ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಶ್ರೇಯ ನಮ್ಮದಾಗಿದೆ. ನಮ್ಮ ಮಹತ್ವಾಕಾಂಕ್ಷೆಯ ಗ್ಯಾರಂಟಿಗಳು ಜನರ ಆಶೋತ್ತರಗಳನ್ನು ಆಧರಿಸಿವೆ.

11:20 AM IST:

ಬೆಂಗಳೂರಲ್ಲಿ ಲೇಟ್ ನೈಟ್ ಕೆಲಸ ಮಾಡುವವರಿಗೆ ಅನುಕೂಲವಾಗುವಂತೆ ರಾತ್ರ 1ರವರೆಗೂ ಹೊಟೇಲ್ ಓಪನ್ ಮಾಡಲಾಗುವುದು. 

11:19 AM IST:

ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ..
ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ
ಜಾನಪದ ಕಲೆಗಳ ಪುನರುಜ್ಜೀವನಕ್ಕೆ ಅನುದಾನ..
ಕೀರ್ತನೆಗಳ ಪ್ರಚಾರಕ್ಕೆ ೧ ಕೋಟಿ ಮೀಸಲು..
ಕಲಬುರಗಿ ವಿವಿಯಲ್ಲಿ ತತ್ವಪದ,ಸೂಫಿ ಅಧ್ಯಯನ ಪೀಠ
ಕಲಬುರಗಿ,ರಾಯಚೂರು,ಮೈಸೂರಿನಲ್ಲಿ ಜವಳಿ ಪಾರ್ಕ್..
10 ಸಾವಿರ ಉದ್ಯೋಗ ಸೃಷ್ಟಿಗೆ ನಿರೀಕ್ಷೆ..
ಬಳ್ಳಾರಿಯಲ್ಲಿ ಜೀನ್ಸ್ ಅಪಾರೆಲ್ಸ್ ಪಾರ್ಕ್ ಅಭಿವೃದ್ಧಿ..
ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ‌ ಜವಳಿ ಪಾರ್ಕ್ ಸ್ಥಾಪನೆ

11:18 AM IST:

ರಾಜ್ಯದ 223 ತಾಲ್ಲೂಕುಗಳಲ್ಲಿ ಬರ ಇದೆ

ಕೇಂದ್ರದಿಂದ 18,171 ಕೋಟಿ ರೂ ಬರ ಪರಿಹಾರ ಕೋರಲಾಗಿದೆ

ಬರ ಪರಿಹಾರ ಆಗ್ರಹಿಸಿ ಕೇಂದ್ರಕ್ಕೆ ಮೂರು ಮೆಮೊರಾಂಡಮ್ ಸಲ್ಲಿಕೆ, ಆದ್ರೆ ಕೇಂದ್ರ ಇದುವರೆಗೆ ಸ್ಪಂದಿಸಿಲ್ಲ

ಕೇಂದ್ರದ ವಿರುದ್ಧ ಬಜೆಟ್ ನಲ್ಲಿ ಆಕ್ರೋಶ

ರಾಜ್ಯದಿಂದ ಬರ ಪರಿಸ್ಥಿತಿ ನಿರ್ಬಹಣೆಗೆ ಹೊಸ ಘೋಷಣೆ

ವಿವಿಧ ಬರ ಪರಿಹಾರ ಕ್ರಮಕ್ಕೆ ಬಜೆಟ್ ನಲ್ಲಿ 500 ಕೋಟಿ ಘೋಷಣೆ

ರಾಜ್ಯ ವಿಪತ್ತು ಉಪಶಮನ ನಿಧಿಯಿಂದ 500 ಕೋಟಿ ಕೊಡುವ ಘೋಷಣೆ

11:13 AM IST:

ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

11:12 AM IST:

ಸ್ವಾಮೀನಾಥನ್ ಶಿಫಾರಸ್ಸಿನಂತೆ ಕನಿಷ್ಟ ಬೆಂಬಲ ಬೆಲೆ ನಿಗದಿಗೆ ತಿರ್ಮಾನ..
ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇಕಡಾ ೫೦ ರಷ್ಟು ಲಾಭಾಂಶ ಆಧಾರದಲ್ಲಿ ನಿಗದಿಗೆ ಒತ್ತಾಯ..
ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡಲು ಬಜೆಟ್ ಪ್ರಸ್ತಾಪ...

ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ೧೦೦ ಕೋಟಿ ರೂ..

ನಾರಾಯಣಗುರು, ಲೋಹಿಯಾ, ಬಾಬುಜೀವನರಾಮ್ ಬರಹ ಕನ್ನಡಕ್ಕೆ ಭಾಷಾಂತರ..

ಕನಕದಾಸ ಅಧ್ಯಯನ ಕೇಂದ್ರದ ಮೂಲಕ  ಸಾಹಿತ್ಯ ಸಮೀಕ್ಷೆಗಾಗಿ ೧ ಕೋಟಿ ರೂ..

ಸೂಫಿಗಳ ಬದುಕು ಮತ್ತು ಸಂದೇಶಗಳ ಅಧ್ಯಯನಕ್ಕಾಗಿ ಕಲಬುರಗಿ ವಿವಿ ಯಲ್ಲಿ ಅಧ್ಯಯನ ಪೀಠ..
ಶಿವಯೋಗಿ ಸಿದ್ಧರಾಮೇಶ್ವರವರ ಬದುಕು - ಬರಹ ಅಧ್ಯಯನಕ್ಕಾಗಿ ಮಹಿಳಾ ವಿವಿ ಯಲ್ಲಿ ಅಧ್ಯಯನ ಪೀಠ..

ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ನಿರ್ಧಾರ...

ನೀರಾವರಿ ಯೋಜನೆಗೆ ಹೊದ ವರ್ಷಕ್ಕಿಂತ ಕಡಿಮೆ ಅನುದಾನ..
ಕೃಷ್ಣ ಭದ್ರಾ, ಮಹಾದಾಯಿಗೆ ಕೇಂದ್ರದ ಅನುದಾನಕ್ಕೆ ಕಾಯಲು ತಿರ್ಮಾನ...

ಶಿಕ್ಷಣ ಸಂಸ್ಥೆಗಳಲ್ಲಿ ಸಾಮರಸ್ಯ ಮೂಡಿಸಲು ನಾವು ಮನುಜರು ಕರ‍್ಯಕ್ರಮ..
ವಾರದಲ್ಲಿ ಎರಡು ಗಂಟೆ ವಿಚಾರ ವಿಮರ್ಶೆ ಮಾಡಲು ಬಜೆಟ್ ನಲ್ಲಿ ಪ್ರಸ್ತಾಪ..

2000 ಶಾಲೆಗಳು ಕನ್ನಡ ಮತ್ತು ಇಂಗ್ಲೀಷ್ ದ್ವಿಭಾಷಾ ಶಾಲೆಯಾಗಿ ಘೋಷಣೆ..

ಗ್ಯಾರಂಟಿ ಜಾರಿಯಾಗುವ ಇಲಾಖೆಗಳಿಗೆ ಹೆಚ್ಚುವರಿ ಅನುದಾನ..
ಉಳಿದ ಇಲಾಖೆಗಳಿಗೆ ಕಡಿಮೆ ಅನುದಾನ ನೀಡಿರುವ ರಾಜ್ಯ ಬಜೆಟ್..

ಬೆಂಗಳೂರು ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ೫೦೦ ಕೋಟಿ ರೂ ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಮೇಲ್ದರ್ಜೇಗೆ..

11:10 AM IST:

ಸಿಎಸ್ ಆರ್ ಅಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆ, ಕಲಿಕಾ ಸಾಮರ್ಥ್ಯ ಸುಧಾರಿಸಲು ಮರು ಸಿಂಚನ ಕಾರ್ಯಕ್ರಮ. ನಾವು ಮನುಜರು ಎಂಬ ಹೆಸರಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿಚಾರ ವಿಮರ್ಶೆ ಕಾರ್ಯಕ್ರಮ. ಪದವಿ ಪೂರ್ವ ಕಾಲೇಜುಗಳು ನಿರ್ಮಾಣಕ್ಕೆ ಒತ್ತು. ವಿದ್ಯಾರ್ಥಿಗಳ ಸಂಖ್ಯಾ ಬಲ ಹೆಚ್ಚಿರುವ ಕಾಲೇಜುಗಳಲ್ಲಿ ಗಣಕ ಸಂಯೋಜನೆ ಆರಂಭ. 400 ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕಾಲೇಜುಗಳು ಪ್ರಯೋಗಾಲಯ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸಲಾಗುವುದು. 

11:08 AM IST:

ಬೆಂಗಳೂರು ನಗರ - ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡನೆ

ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ 50 ರಿಂದ 100 ಎಕರೆ ಜಮೀನಿನಲ್ಲಿ ತ್ಯಾಜ್ಯ ಸಂಸ್ಕರಣೆ 

30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಘಟಕ‌ ನಿರ್ಮಾಣ

ಬಿಬಿಎಂಪಿ ಕೆರೆ ಮತ್ತು ಉದ್ಯಾನವನ

ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ

 ನಗರದಲ್ಲಿ ವಾತಾವರಣದ ಸ್ವಚ್ಛತೆಗಾಗಿ ಮರಗಳ - ಗಣತಿ, 

ಕೆರೆ ಮತ್ತು ಉದ್ಯಾನವನಗಳ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ 

 ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಯಲ್ಲಿ

ಬಿಬಿಎಂಪಿ ಸಹಯೋಗದೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞ ಉದ್ಯಾನನ ಅಭಿವೃದ್ಧಿ

11:07 AM IST:

ನೀರು ಪೂರೈಕೆ ಮತ್ತು ಸ್ವಚ್ಛತೆಯ ನಿರ್ವಹಣೆಗೆ ಒತ್ತು

5,550 ಕೋಟಿ ರೂ. ಅಂದಾಜ ವೆಚ್ಚದಲ್ಲಿ 775 ಎಂ.ಎಲ್.ಡಿ ಸಾಮರ್ಥ್ಯದ ಕಾವೇರಿ ಹಂತ- ಯೋಜನೆಯನ್ನು

12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್ ಶುದ್ಧ  ಕುಡಿಯುವ ನೀರು

 ಕಾವೇರಿ ಹಂತ-5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು

 13 ಎಸ್.ಟಿ.ಪಿ ಘಟಕಗಳಿಂದ 100 ಎಂ.ಎಲ್.ಡಿ ರಷ್ಟು ಒಳಚರಂಡಿ ನೀರನ್ನು ಸಂಸ್ಕರಿಸುವ ಘಟಕ

ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (ಎಸ್.ಟಿ.ಪಿ) 441 ಕೋಟಿ ರೂ.ಗಳ ಮೊತ್ತದಲ್ಲಿ ಉನ್ನತೀಕರಣ

 ಆ‌ಮೂಲಕ‌ 268 ಎಂ.ಎಲ್.ಡಿ ತ್ಯಾಜ್ಯ ನೀರನ್ನು ಪ್ರತಿನಿತ್ಯ ಸಂಸ್ಕರಿಸಿ ಮರುಬಳಕೆ

ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ

 200 ಕೋಟಿ ರೂ.ಗಳ ಮೊತ್ತದಲ್ಲಿ 110 ಹಳ್ಳಿಗಳಿಗೆ ಕುಡಿಯುವ ನೀರು ಸೌಲೇ 

11:06 AM IST:

ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್-ಅರ್ಬನ್ ರೈಲು ಯೋಜನೆಗಳು ಸೇರಿ ಬಹುವಿಧ ಸಾರಿಗೆ ವ್ಯವಸ್ಥೆಗಳ ಒಗ್ಗೂಡಿಸುವಿಕೆ

 ನಮ್ಮ ಮೆಟ್ರೋಗೆ 2025 ರ ವೇಳೆಗೆ 44 ಕಿಲೋಮೀಟರ್ ಅಧಿಕ ಮಾರ್ಗ ಸೇರ್ಪಡೆ

15,611 ಕೋಟಿ ವೆಚ್ಚದಲ್ಲಿ ಅನುಮೊಧನೆ 

ಸರ್ಕಾಪುರ ಅಗ್ರಹಾರ ಕೋರ ಮಂಗಳ ಡೈರಿ ವೃತ್ತ, ಮೇಖ್ರಿ ವೃತ್ತ ಹೆಬ್ಬಾಳ ಸಂಪರ್ಕಿಸುವ ಮಾರ್ಗ 

ಬೆಂಗಳೂರು ಉಪ ರೈಲು ಯೋಜನೆ ಚುರುಕು

ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣವರ, ಹೀಲಲಿಗೆಯಿಂದ ರಾಜಾನಕುಂಟೆ ವರೆಗೆ 42.2 ಕಿಲೋ ಮೀಟರ್

ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ನಿಕ್ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆ

ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು Area Traffic Signal Control System & ថ 28 ಜಂಕ್ಷನ್‌ಗಳಲ್ಲಿ ಅಳವಡಿಕೆ

ಈ ಟ್ರಾಫಿಕ್ ಸಿಗ್ನಲ್ ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆ

11:06 AM IST:

2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ 

• ಪ್ರಸಕ್ತ ಸಾಲಿನಿಂದ ಪರಿಷ್ಕೃತ ಜಾಹೀರಾತು ನೀತಿ ಮತ್ತು Premium FAR 3 30 35 ಹೆಚ್ಚುವರಿಯಾಗಿ 2,000 ಕೋಟಿ ರೂ.ಗಳಷ್ಟು ತೆರಿಗೆಯೇತರ ಸಂಪನ್ಮೂಲ ಸಂಗ್ರಹಿಸುವ ಗುರಿ ಹೊಂದಲಾಗಿದೆ.

• ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣ

2024 - 25 ನೇ  ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳು ಲಭ್ಯ

ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿ

 1,700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಗಳು ಡಿಸೆಂಬರ್ 2025 ರೊಳಗೆ ಪೂರ್ಣ

 ಬೆಂಗಳೂರಿನಲ್ಲಿ ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧಾರ

ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ನಿರ್ಮಾಣ

ರಾಜಕಾಲೂವೆ ನಾಲೆಗಳ ಬಫರ್ ವಲಯದೊಳಗೆ ನಾಲಾ ಬಫರ್ ಅನ್ನು ನಿರ್ಮಾಣ ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಾಣ
 
200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ಬಫರ್ ರಸ್ತೆ

ಪ್ರಸಕ್ತ ಸಾಲಿನಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿ

ಬೆಂಗಳೂರು

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ಪೆರಿಫೆರಲ್ ರಿಂಗ್ ರೋಡ್

 ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ 73 ಕಿ.ಮೀ. ಉದ್ದದ ರಸ್ತೆ

27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ

 ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸೈ-ಡೆಕ್ (Sky-Deck) ನಿರ್ಮಾಣ

BBMP. BMRCL BWSSB, BDA ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ ನಿರ್ಮಾಣ 

 ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ  ಬೆಳಗಿನ ಜಾವ ಒಂದು ಗಂಟೆಯವರೆಗೆ (1:00 am) ವ್ಯಾಪಾರ ವಹಿವಾಟಿಗೆ ಅವಕಾಶ

11:05 AM IST:

ಬಿಬಿಎಂಪಿ ವ್ಯಾಪ್ತಿಯ 20 ಲಕ್ಷ ಆಸ್ತಿ ತೆರಿಗೆ ಡಿಜಿಟಲೀಕರಣ
ನಗರದ ಪ್ರಮುಖ ರಸ್ತೆಗಳಿಗೆ ವೈಟ್ ಟಾಪಿಂಗ್ ಮುಂದುವರಿಕೆ
147 ಕಿ.ಮೀ ಉದ್ದದ ರಸ್ತೆ 1700 ಕೋಟಿ  ವೆಚ್ಚದಲ್ಲಿ ವೈಟ್ಟಾಪಿಂಗ್
ಹೆಬ್ಬಾಳ ಜಂಕ್ಷನ್ನಲ್ಲಿ ಪ್ರಾಯೋಗಿಕವಾಗಿ ಟನೆಲ್ ನಿರ್ಮಿಸಲು ನಿರ್ಧಾರ
ಸುಗಮ ಸಂಚಾರ ಯೋಜನೆಗೆ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆ ನೇಮಕ
73ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ
ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈ ಡೆಕ್ ನಿರ್ಮಾಣ
7 ತ್ಯಾಜ್ಯ  ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ 441 ಕೋಟಿ ರೂ
ಬಿಬಿಎಂಪಿಗೆ ಸೇರ್ಪಡೆಯಾದ 11 ಹೊಸ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು
200 ಕೋಟಿ ರೂ. ಮೊತ್ತದಲ್ಲಿ ಎರಡನೇ ಹಂತದ ಕುಡಿಯುವ ನೀರಿನ ಯೋಜನೆ
ಬೆಂಗಳೂರಿನ ಹೊರವಲಯದಲ್ಲಿ 4 ಕಡೆ ಕಸ ತ್ಯಾಜ್ಯ ವಿಲೇವಾರಿಗೆ ಅವಕಾಶ
50ರಿಂದ 100 ಎಕರೆ ಜಮೀನು ಗುರುತಿಸಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ
2024ರಲ್ಲಿ ಈಗಿರುವ 74 ಕಿ.ಮೀ ಜೊತೆ ಇನ್ನೂ 44 ಕಿ.ಮೀ ಸಿದ್ಧವಾಗಲಿದೆ
ಮೆಟ್ರೋ ಯೋಜನೆ ಹಂತ 2 ಮತ್ತು ಹಂತ 2ಎ ಮಾರ್ಗ ಪೂರ್ಣ ಗುರಿ
ನಮ್ಮ ಮೆಟ್ರೋ ಹಂತ 3ಕ್ಕೆ ಅಂದಾಜು 15.61 ಕೋಟಿ ರೂ ಅನುಮೋದನೆ
ಮೆಟ್ರೋ ಹಂತ 3ಕ್ಕೆ ಕೇಂದ್ರ ಸರ್ಕಾರದ ಅನುಮೋದನೆಯ ನಿರೀಕ್ಷೆ ಇದೆ
ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಗೆ ಚುರುಕು
1334 ಹೊಸ ಎಲೆಕ್ಷ್ಟ್ರಿಕ್ ಬಸ್ಗಳು, 820 ಡೀಸೆಲ್ ಬಸ್ ಸೇರ್ಪಡೆ
ಟ್ರಾಫಿಕ್ ಸಿಗ್ನಲ್ ನಿರ್ವಣೆಗೆ ಜಪಾನ್ ತಂತ್ರಜ್ಞಾನದ ನೆರವು
ಪ್ರಮುಖ 28 ಜಂಕ್ಷನ್ಗಳಲ್ಲಿ ನೂತನ ಟ್ರಾಫಿಕ್ ಸಿಗ್ನಲ್ ಅಳವಡಿಕೆ
ಬೆಂಗಳೂರು ಜಲಮಂಡಳಿಗೆ 5,550 ಕೋಟಿ ಅನುದಾನ
13 ಎಸ್ಟಿಪಿ ಒಳಚರಂಡಿ ನೀರು ಸಂಸ್ಕರಣಾ ಘಟಕ ಸ್ಥಾಪನೆ

11:04 AM IST:

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ 393 ಕೋಟಿ ಅನುದಾನ
50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭ
100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭ
ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್
ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭ
ಕೈಗಾರಿಕೆ ಸ್ಥಾಪನೆಗೆ ೧೦ ಕೋಟಿವರೆಗೂ ಸಾಲ (ಶೇ.೬ರಷ್ಟು ಬಡಿ ಸಹಾಯಧನ)
ಅಲ್ಪಸಂಖ್ಯಾತ ಮಹಿಳಾ ಸ್ವ- ಸಹಾಯ ಗುಂಪುಗಳಿಗೆ 10 ಕೋಟಿ ಅನುದಾನ
ರಾಜ್ಯದಲ್ಲಿ ವಕ್ಫ್ ಆಸ್ತಿಗಳ ರಕ್ಷಣೆಗೆ 100 ಕೋಟಿ ಅನುದಾನ
ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ

11:04 AM IST:

ಬೆಂಗಳೂರು ನಗರ ವಿಶ್ವದರ್ಜೆಗೇರಿಸಲು ಬ್ರ್ಯಾಂಡ್​ ಬೆಂಗಳೂರು
ಬೆಂಗಳೂರಿನಲ್ಲಿ 2024-25ಕ್ಕೆ 6 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ನಿರೀಕ್ಷೆ
ಬಿಬಿಎಂಪಿ ವ್ಯಾಪ್ತಿಯ 20 ಲಕ್ಷ ಆಸ್ತಿ ತೆರಿಗೆ ಡಿಜಿಟಲೀಕರಣ

ನಗರದ ಪ್ರಮುಖ ರಸ್ತೆಗಳಿಗೆ ವೈಟ್​ ಟಾಪಿಂಗ್​​​ ಮುಂದುವರಿಕೆ
 147 ಕಿ.ಮೀ ಉದ್ದದ ರಸ್ತೆ 1700 ಕೋಟಿ  ವೆಚ್ಚದಲ್ಲಿ ವೈಟ್​ಟಾಪಿಂಗ್​

ಬೆಂಗಳೂರು ಟ್ರಾಫಿಕ್​ ಜಾಮ್​​ ಗೆ ಸುರಂಗ ಮಾರ್ಗದ ಪರಿಹಾರ
ಹೆಬ್ಬಾಳ ಜಂಕ್ಷನ್​​ನಲ್ಲಿ ಪ್ರಾಯೋಗಿಕವಾಗಿ ಟನೆಲ್​​ ನಿರ್ಮಿಸಲು ನಿರ್ಧಾರ

ಸುಗಮ ಸಂಚಾರ ಯೋಜನೆಗೆ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆ ನೇಮಕ

 ಪೆರಿಫೆರಲ್​​ ರಿಂಗ್​ರೋಡ್​​ಅನ್ನು ಬೆಂಗಳೂರು ಬಿಸಿನೆಸ್​ ಕಾರಿಡಾರ್​​ ಎಂದು ಘೋಷಣೆ
73ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ

ಬೆಂಗಳೂರಿನಲ್ಲಿ 250 ಮೀಟರ್​ ಎತ್ತರದ ಸ್ಕೈ ಡೆಕ್​ ನಿರ್ಮಾಣ
ಅಂತಾರಾಷ್ಟ್ರೀಯ ವಾಸ್ತುಶಿಲ್ಪಿಗಳಿಂದ ಪ್ರವಾಸ ತಾಣವಾಗಿ ಅಭಿವೃದ್ಧಿ

ಬಿಬಿಎಂಪಿ, ಬಿಎಂಆರ್​ಸಿಎಲ್​​, ಜಲಮಂಡಳಿ, ಬಿಡಿಎಗೆ ಸೋಲಾರ್​ ಪಾರ್ಕ್​​
ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ಲಾನ್​​

ಬೆಂಗಳೂರು ಮೆಟ್ರೋ ಮಾರ್ಗ ಇನ್ನಷ್ಟು ವಿಸ್ತರಣೆ
2024ರಲ್ಲಿ ಈಗಿರುವ 74 ಕಿ.ಮೀ ಜೊತೆ ಇನ್ನೂ 44 ಕಿ.ಮೀ ಸಿದ್ಧವಾಗಲಿದೆ
ಮೆಟ್ರೋ ಯೋಜನೆ ಹಂತ 2 ಮತ್ತು ಹಂತ 2ಎ ಮಾರ್ಗ ಪೂರ್ಣ ಗುರಿ
ಔಟರ್​ ರಿಂರ್​ರೋಡ್​ನಿಂದ ವಿಮಾನ ನಿಲ್ದಾಣದ ಮಾರ್ಗ 2016ಕ್ಕೆ ಪೂರ್ಣ

ನಮ್ಮ ಮೆಟ್ರೋ ಹಂತ 3ಕ್ಕೆ ಅಂದಾಜು 15.61 ಕೋಟಿ ರೂ ಅನುಮೋದನೆ
ಮೆಟ್ರೋ ಹಂತ 3ಕ್ಕೆ ಕೇಂದ್ರ ಸರ್ಕಾರದ ಅನುಮೋದನೆಯ ನಿರೀಕ್ಷೆ ಇದೆ

ನಮ್ಮ ಮೆಟ್ರೋ ಹಂತ -3ಎ ಅಡಿ ಹೊಸ ಮಾರ್ಗದ ಡಿಪಿಆರ್​​ ಸಿದ್ಧ
ಸರ್ಜಾಪುರ-ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ  ಮೂಲಕ ಹೆಬ್ಬಾಳ

ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಗೆ ಚುರುಕು
ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ಸಿವಿಲ್​ ಕಾಮಗಾರಿಗೆ ಚುರುಕು
ಹೀಲಲಿಗೆಯಿಂದ ರಾಜಾನುಕುಂಟೆವರೆಗಿನ 46 ಕಿ.ಮೀ ಮಾರ್ಗಕ್ಕೆ ಆದೇಶ

ಬಿಎಂಟಿಸಿಗೆ ಇನ್ನಷ್ಟು ಎಲೆಕ್ಷ್ಟ್ರಿಕ್​ ್ಬಸ್​ಗಳ ಸೇವೆ ಸೌಲಭ್ಯ
1334 ಹೊಸ ಎಲೆಕ್ಷ್ಟ್ರಿಕ್​​ ಬಸ್​ಗಳು, 820 ಡೀಸೆಲ್​​ ಬಸ್​ ಸೇರ್ಪಡೆ

ಟ್ರಾಫಿಕ್​​ ಸಿಗ್ನಲ್​ ನಿರ್ವಣೆಗೆ ಜಪಾನ್​ ತಂತ್ರಜ್ಞಾನದ ನೆರವು
ಏರಿಯಾ ಟ್ರಾಫಿಕ್​ ಸಿಗ್ನಲ್​​ ಕಂಟ್ರೋಲ್​ ಸಿಸ್ಟಮ್​​ ಅಳವಡಿಕೆ
ಪ್ರಮುಖ 28 ಜಂಕ್ಷನ್​​ಗಳಲ್ಲಿ ನೂತನ ಟ್ರಾಫಿಕ್​ ಸಿಗ್ನಲ್​​ ಅಳವಡಿಕೆ

ಬೆಂಗಳೂರು ಜಲಮಂಡಳಿಗೆ 5,550 ಕೋಟಿ ಅನುದಾನ
ಮೇ 2024ಕ್ಕೆ ಕಾವೇರಿ 5ನೇ ಹಂತ ಕಾರ್ಯಾರಂಭಕ್ಕೆ ಸಿದ್ಧತೆ
12 ಲಕ್ಷ ಜನರಿಗೆ 110 ಲೀಟರ್​ ಶುದ್ಧ ಕುಡಿಯುವ ನೀರು ಸಪ್ಲೈ

ಕಾವೇರಿ 5ನೇ ಹಂತದ ಒಳಚರಂಡಿ ಕಾಮಗಾರಿಗಳನ್ನು 2024 ಡೆಡ್​ಲೈನ್​
ನಗರದಲ್ಲಿ 228 ಕಿ.ಮೀ ಒಳಚರಂಡಿ ಕೊಳವೆ ಅಳವಡಿಕೆ
13 ಎಸ್​ಟಿಪಿ ಒಳಚರಂಡಿ ನೀರು ಸಂಸ್ಕರಣಾ ಘಟಕ ಸ್ಥಾಪನೆ

7 ತ್ಯಾಜ್ಯ  ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ 441 ಕೋಟಿ ರೂ

ಬಿಬಿಎಂಪಿಗೆ ಸೇರ್ಪಡೆಯಾದ 11 ಹೊಸ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು
200 ಕೋಟಿ ರೂ. ಮೊತ್ತದಲ್ಲಿ ಎರಡನೇ ಹಂತದ ಕುಡಿಯುವ ನೀರಿನ ಯೋಜನೆ

ಬೆಂಗಳೂರಿನ ಹೊರವಲಯದಲ್ಲಿ 4 ಕಡೆ ಕಸ ತ್ಯಾಜ್ಯ ವಿಲೇವಾರಿಗೆ ಅವಕಾಶ
50ರಿಂದ 100 ಎಕರೆ ಜಮೀನು ಗುರುತಿಸಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ
30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಘಟಕ‌ ನಿರ್ಮಾಣ

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞ ಉದ್ಯಾನವನ ನಿರ್ಮಾಣ

ರಾತ್ರಿ ವ್ಯಾಪಾರ ವಹಿವಾಟು ಮೇಲಿನ ನಿರ್ಬಂಧದ ಸಮಯ ವಿಸ್ತರಣೆ
ಬೆಂಗಳೂರು ಹಾಗು 10 ಮಹಾನಗರದಲ್ಲಿ ರಾತ್ರಿ 1 ಗಂಟೆವರೆಗೆ ವಹಿವಾಟು
ಹೋಟೆಲ್​​​, ಅಂಗಡಿಗಳು ರಾತ್ರಿ 1 ಗಂಟೆವರೆಗೆ ತೆರೆದಿರಲು ಒಪ್ಪಿಗೆ

11:03 AM IST:

ಡುಪಿ, ಚಿಕ್ಕಬಳ್ಳಾಪುರ, ನೆಲಮಂಗಲ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರಿನಲ್ಲಿ ಅಂದಾಜು 36 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು 

ಹಾಗೂ ದೇವನಹಳ್ಳಿ ಮತ್ತು ತುಮಕೂರಿನಲ್ಲಿ ಒಟ್ಟು 10 ಕೋಟಿ ರೂ.ಗಳ ವೆಚ್ಚದಲ್ಲಿ ಸೀಜಿಂಗ್‌ ಯಾರ್ಡ್‌ಗಳನ್ನು ನಿರ್ಮಾಣ

ಅರ್ಹತಾ ಪತ್ರ ನವೀಕರಣಕ್ಕೆ ಬರುವಂತಹ ಎಲ್ಲಾ ಸಾರಿಗೆ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು 32 ಸ್ಥಳಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ವಯಂಚಾಲಿತ ಪರೀಕ್ಷಾ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗುವುದು.

ಸಾರಿಗೆ ಇಲಾಖೆಯಲ್ಲಿ ನೋಂದಣಿಯಾಗಿರುವ ಎಲ್ಲಾ ವಾಹನಗಳ ದಾಖಲಾತಿಗಳ ಡಿಜಿಟಲೀಕರಣಕ್ಕಾಗಿ ಒಂದು ಯೋಜನೆಯನ್ನು ಜಾರಿಗೊಳಿಸಲಾಗುವುದು. 2024-25 ಸಾಲಿನಲ್ಲಿ ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ, ಬೆಳಗಾವಿ, ಮಂಗಳೂರು ಹಾಗೂ ಭಾಲ್ಕಿಯ ಕಛೇರಿಗಳಲ್ಲಿ ಜಾರಿಗೊಳಿಸಲಾಗುವುದು. ಈ ಯೋಜನೆಯನ್ನು

2:42 PM IST:

ಪ್ಯಾರಿಸ್ ಓಲಂಪಿಕ್ ನಲ್ಲಿ ಪದಕ ಗೆದ್ದವರಿಗೆ ಬಹುಮಾನ..
ಚಿನ್ನದ ಪದಕ ಗೆದ್ದವರಿಗೆ 6 ಕೋಟಿ..
ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ..
ಕಂಚಿನ ಪದಕ ಗೆದ್ದವರಿಗೆ 3 ಕೋಟಿ ಪ್ರೋತ್ಸಾಹ ಧನ
ಕಾಮನ್ ವೆಲ್ತ್ ಗೇಮ್ ನಲ್ಲಿ ಪದಕ ಗೆದ್ದವರಿಗೂ ಬಹುಮಾನ
ಚಿನ್ನದ ಪದಕ ಗೆದ್ದವರಿಗೆ 35 ಲಕ್ಷ..
ಬೆಳ್ಳಿ ಪದಕ ಗೆದ್ದವರಿಗೆ 25 ಲಕ್ಷ
ಕಂಚಿನ ಪದಕ ಗೆದ್ದವರಿಗೆ 15 ಲಕ್ಷ ಬಹುಮಾನ

2:41 PM IST:

ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

10:58 AM IST:

10:56 AM IST:

ಯಲಬುರ್ಗಾ, ಬಸವನ ಬಾಗೇವಾಡಿ, ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಶೀತಲ ಗೃಹಗಳನ್ನು ನಿರ್ಮಿಸಿ, ಕೃಷಿಕರಿಗೆ ಅನುವು ಮಾಡಿಕೊಳ್ಳಲಾಗುವುದು. ಒಣ ಮೆಣಸಿನಕಾಯಿ ಮಾರಕಟ್ಟೆ ನಿರ್ಮಾಣ. ಮಂಗಳೂರಲ್ಲಿ ಅತ್ಯಾಧುನಿಕ ಕೃಷಿ ಮಾರುಕಟ್ಟೆ ನಿರ್ಮಾಣ. ಎಪಿಎಂಪಿ ಬಲ ಪಡಿಸುವ ಮೂಲಕ ರೈತರಿಗೆ ಅನುವು. 
ಬೆಳೆಗೆ ಅಗತ್ಯ ಬೆಂಬಲ ಬೆಲೆ ನೀಡಲು, ತೂಕದ ಮೋಸ ತಡೆಗಟ್ಟಲು ಎಂಪಿಎಂಸಿ ಮೂಲಕ ಆಧುನಿಕ ವೇ ಬ್ರಿಡ್ಜ್ ಸ್ಥಾಪಿಸಲಾಗುವುದು.

ಪಿಪಿಪಿ ಮಾದರಿಯಲ್ಲಿ ಶೀತಲ ಗೃಹಗಳನ್ನು ಸ್ಥಾಪಿಸಲಾಗುವುದು. 
 
10:53 AM IST:

 ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ;

• Asset Monetisation, ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೋಢೀಕರಿಸಿ Karnataka Affordable Housing Fund ভ (KAHF) ಸ್ಥಾಪಿಸಲಾಗುವುದು.

• ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್ ದರ ಪರಿಷ್ಕರಣೆ ಮಾಡುವುದು.

• ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲಾಗುವುದು.

202. ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು ರಿಯಲ್ ಎಸ್ಟೇಟ್ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. 2023-24 ನೇ ಸಾಲಿನಲ್ಲಿ ಡೆವಲಪರ್‌ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು.

10:52 AM IST:

ವಾಣಿಜ್ಯ ತೆರಿಗೆ - ೧೧೦೦೦೦ ಕೋಟಿ ರೂ.

ಅಬಕಾರಿ ತೆರಿಗೆ - ೩೮೫೨೫ ಕೋಟಿ ರೂ.

ನೊಂದಣಿ ಮುದ್ರಾಂಕ - ೨೬೦೦೦ ಕೋಟಿ ರೂ.

ಮೋಟಾರು ವಾಹನ ತೆರಿಗೆ - ೧೩೦೦೦ ಕೋಟಿ ರೂ.

ಇತರ ಮೂಲ ತೆರಿಗೆ - ೨೩೬೮ ಕೋಟಿ ರೂ.

ಇಲಾಖಾವಾರು ಹಂಚಿಕೆ.

ಶಿಕ್ಷಣ - ೪೪೪೨೨ ಕೋಟಿ ರೂ.

ಮಹಿಳಾ ಮಕ್ಕಳ - ೩೪೪೦೬ ಕೋಟಿ ರೂ.

ಇಂಧನ ಇಲಾಖೆ - ೨೩೧೫೯ ಕೋಟಿ ರೂ.

ಗ್ರಾಮೀಣಾಭಿವೃದ್ಧಿ - ೨೧೧೬೦ ಕೋಟಿ ರೂ.

ಗೃಹ ಮತ್ತು ಸಾರಿಗೆ - ೧೯೭೭೭ ಕೋಟಿ ರೂ.

ನೀರಾವರಿ -  ೧೯೧೭೯ ಕೋಟಿ ರೂ.

ನಗರಾಭಿವೃದ್ಧಿ - ೧೮೧೫೫ ಕೋಟಿ ರೂ.

ಕಂದಾಯ - ೧೬೧೭೦ ಕೋಟಿ ರೂ.

ಆರೋಗ್ಯ - ೧೫೧೪೫ ಕೋಟಿ ರೂ.

ಸಮಾಜಕಲ್ಯಾಣ - ೧೩೩೩೪ ಕೋಟಿ ರೂ.

ಲೋಕೋಪಯೋಗಿ - ೧೦೪೨೪ ಕೋಟಿ ರೂ.

ಆಹಾರ ನಾಗರೀಕ - ೯೯೬೩ ಕೋಟಿ ರೂ.

ಕೃಷಿ ಮತ್ತು ತೋಟಗಾರಿಕೆ - ೬೬೮೮ ಕೋಟಿ ರೂ.

ಮೀನುಗಾರಿಕೆ ಮತ್ತು ಪಶು ಸಂಗೊಪನೆ - ೩೩೦೭ ಕೋಟಿ ರೂ.

ಇತರ ಇಲಾಖೆಗಳಿಗೆ - ೧೨೪೫೯೩ ಕೋಟಿ ರೂ ಹಂಚಿಕೆ..

2:41 PM IST:

ಜಿಲ್ಲಾ ಹಂತದಲ್ಲಿರುವ ತಜ್ಞ ಪಶು ವೈದ್ಯಕೀಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು 10 ಕೋಟಿ ರೂ ಅನುದಾನ ನೀಡಲಾಗುವುದು. 100 ಕೋಟಿ ವೆಚ್ಚದಲ್ಲಿ ಅಗತ್ಯವಿದ್ದಲ್ಲಿ ನೂತನ ಕಟ್ಟಡ ನಿರ್ಮಿಸಲಾಗುವುದು. ವಲಸೆ ಕುರಿಗಾಯಿಗಳು ಹಾಗೂ ಸ್ವತ್ತುಗಳ ಮೇಲೆ ದೌರ್ಜನ್ಯ ಕಾಯ್ದೆ ಜಾರಿಗೊಳಿಸಲಾಗುವುದು. ಸರಕಾರದಿಂದ ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ಹಾಗೂ ಮಕ್ಕಳಿಗೆ ಸೂಕ್ತ ಶಿಕ್ಷಣಕ್ಕಾಗಿ ನೆರವು. 

ಮೀನುಗಾರಿಗೆ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ. ಹೊನ್ನಾವರ, ಭದ್ರಾವತಿ, ಭಟ್ಕಳದಲ್ಲಿ ಮೀನುಗಾರಿಕಾ ಅಭಿವೃದ್ಧಿಗೆ ಅಗತ್ಯ ಅಭಿವೃದ್ಧಿ ಯೋಜನೆಗಳು ನೆರವು. ಅನುದಾನ ಹೆಚ್ಚಳಕ್ಕೆ ಒತ್ತು. ಅಪಘಾತಕ್ಕೊಳಗಾಗುವ ಮೀನುಗಾರರನ್ನು ತ್ವರಿತವಾಗಿ ಕರೆ ತರಲು ನೆರವಾಗುವಂತೆ ಸಮುದ್ರ ಆ್ಯಂಬುಲೆನ್ಸ್ ಗೆ ಅಗತ್ಯ ನೆರವು. ನಬಾರ್ಡ್ ಸಹಯೋಗದಲ್ಲಿ ವಿವಿಧ ಅಭಿೃವದ್ಧಿ ಯೋಜನೆಗಳಿಗೆ ಒತ್ತು. 

ಸಹಕಾರ ವಲಯವನ್ನು ಬಲ ಬಡಿಸುವುದು ಸರಕಾರದ ಒತ್ತು. ಬಡ್ಡಿ ರಹಿತ ಸಾಲವನ್ನು 3 ರಿಂತ 5 ಲಕ್ಷ ರೂ.ವರೆಗೆ ಏರಿಸಲು ಮಹತ್ತರ ಕ್ರಮ ಕೈಗೊಳ್ಳಲಾಗಿದೆ. ಪ್ರಸಕ್ತ ಸಾಲಿನಲ್ಲಿ 36 ಲಕ್ಷಕ್ಕಿಂತಲೂ ಹೆಚ್ಚಿನ ರೈತರಿಗೆ 27 ಕೋಟಿ ರೂ. ದಾಖಲೆ ಸಾಲ ನೀಡಲು ಚಿಂತನೆ. 

2:40 PM IST:

ಅಡಕೆಗೆ ಕಾಡುತ್ತಿರುವ ರೋಗಗಳನ್ನು ತಡೆಯಲು ಸೂಕ್ತ ಸಂಶೋಧನೆ ನಡೆಸಲಾಗುವುದು. ರಾಜ್ಯದಲ್ಲಿ ಸಾಂಬಾರು ಪದಾರ್ಥಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಚಿಕ್ಕಮಗಳೂರಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಪೈಸ್ ಪಾರ್ಕ್ ಸ್ಥಾಪನೆಗೆ ಒತ್ತು. ವಿಜಯಪುರ ಜಿಲ್ಲೆಯ ಆಲುಮೇಲದಲ್ಲಿ ತೋಟಗಾರಿಕಾ ಕಾಲೇಜು ಸ್ಫಾಪಿಸಲು ಒತ್ತು. ರೇಷ್ಮೆ ಮಾರುಕಟ್ಟೆ ಅಭಿವೃದ್ಧಿ ಪಡಿಸಲು ಶೂಕ್ತ ಕ್ರಮ ಕೈಗೊಳ್ಳಲಾಗುವುದು. ರೇಷ್ಣೆಗೆ ತಕ್ಕು ಪ್ರೋತ್ಸಾಹ ನೀಡಲು ವಾರ್ಷಿಕ 12 ಕೋಟಿ ರೂ. ನೀಡಲಾಗುವುದು. ರೇಷ್ಮೆಗೆ ನೀಡುವ ಪ್ರೋತ್ಸಾಹ ದನವನ್ನು ಹೆಚ್ಚಿಸಲಾಗುವುದು. ಅಮೃತ ಸ್ವಾಭಿಮಾನಿ  ಎಂಬ  ಕುರಿಗಾಯಿ ಯೋಜನೆಯಡಿಯಲ್ಲಿ 10 ಸಾವಿರ ಫಲಾನುಭವಿಗಳಿಗೆ ಅಗತ್ಯ ನೆರವು ನೀಡಲಾಗುವುದು. 

2:38 PM IST:

ಬಜೆಟ್‌ನಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ. ತೆರಿಗೆ ಹಂಚಿಕೆ ಯಲ್ಲಿ ಅನ್ಯಾಯ ಆಗುತ್ತಿದೆ ಎಂಬ ಅಂಶ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ. ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷವೇ ಹಲವು ರಾಜ್ಯಗಳಲ್ಲಿ ಅಧಿಕಾರದಲ್ಲಿ ಇದೆ. ಈ ಕಾರಣಕ್ಕಾಗಿ ಅವರೂ ದನಿ ಎತ್ತಲು ಆಗುತ್ತಿಲ್ಲ ಎಂದ ಸಿದ್ದರಾಮಯ್ಯ. ಈ ಸಾಲನ್ನು ಓದುವಾಗ ಬಿಜೆಪಿ ಸದಸ್ಯರ ಆಕ್ಷೇಪ. ಬಜೆಟ್ ಓದುವಾಗ ಜೋರು ಗದ್ದಲ ಆರಂಭಿಸಿದ ಆರ್ ಅಶೋಕ್, ಇತರೆ ಬಿಜೆಪಿ ಸದಸ್ಯರು. ಮುಂದುವರಿದೆ ಗಲಾಟೆ.

2:39 PM IST:

ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ ಒದಗಿಸಲಾಗುವುದು

10:42 AM IST:

ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು,  ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3 ಮತ್ತು 4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ.

ಬಜೆಟ್ ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ದವಾಗಿ ಕೂಡಲೇ ಜಾರಿಗೆ ತರಲು ವಾರ್ತಾ ಇಲಾಖೆ ಮುಂದಾಗಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಿನಂತಿಸಿದ್ದಾರೆ.

10:40 AM IST:

ರೈತರು ಬೆಳೆದ ಬೆಳೆಗೆ ಉತ್ತಮ ಮಾರುಕಟ್ಟೆ ಸೌಲಭ್ಯ ಒದಗಿಸುವ ಜೊತೆಗೆ, ಕೃಷಿ, ತೋಟಗಾರಿಗೆ, ಪಶು ಸಂಗೋಪನೆ ಇಲಾಖೆಗಳ ಸಮನ್ವಯ ಸಾಧಿಸಲು ಸಿಎಂ ನೇತೃತ್ವದಲ್ಲಿ ಪ್ರಾಧಿಕಾರ ಸ್ಥಾಪಿಸಲು ನಿರ್ಧರಿಸಲಾಗಿದೆ. ಸ್ಥಳೀಯ ಬೆಳೆಗಳ ತಳಿಗಳನ್ನು ಸಂರಕ್ಷಿಸಲು, ಬೆಳೆಸಲು ಬೀಜ ಬ್ಯಾಂಕ್ ಆರಂಭ. ಸಿರಿ ಧಾನ್ಯನಗಳು ಹಾಗೂ ಮೌಲ್ವವರ್ಧಿಕ ಉತ್ಪನ್ನಗಳನ್ನು ಕೈ ಗೆಟುಕುವ ದರದಲ್ಲಿ ಒದದಿಸಲು ಅಗತ್ಯ ಕ್ರಮ ಕೈಗೊಳ್ಳಲು ಸರಕಾರ ಕ್ರಮ. 

10:38 AM IST:

ಬೆಂಗಳೂರು ಅಭಿವೃದ್ಧಿಗೆ ನಿರೀಕ್ಷೆಯಂತೆ ಸಿದ್ದರಾಮಯ್ಯ ಅವರು ಸಾಕಷ್ಟು ಅನುದಾನ ಮೀಸಲಿಡಲು ನಿರ್ಧರಿಸಿದ್ದು, ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಆಸ್ಪತ್ರೆ ಕಟ್ಟಲು ನಿರ್ಧರಿಸುವುದಾಗಿ ಘೋಷಿಸಿದ್ದಾರೆ. 

10:37 AM IST:

ಕೇಂದ್ರದಲ್ಲಿ ಆಡಳಿತ ಇರುವ ಪಕ್ಷವೇ ರಾಷ್ಟ್ರದ ಹಲವು ರಾಜ್ಯಗಳಲ್ಲಿ ಆಡಳಿದಲ್ಲಿ ಇರುವದರಿಂದ ಕೇಂದ್ರದ ಧೋರಣೆ ಬಗ್ಗೆ ಧ್ವನಿ ಎತ್ತುವಲ್ಲಿ ವಿಫಲವಾಗಿದೆ ಎಂದ ಸಿಎಂ. ಇದಕ್ಕೆ ವಿಪಕ್ಷಗಳ ಆಕ್ರೋಶ. ಸದನದಲ್ಲಿ ತುಸು ಕಾಲ ಗೊಂದಲ.

10:35 AM IST:

ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಒತ್ತು ನೀಡಿರುವ ಸಿದ್ದರಾಮಯ್ಯ, ಪುಷ್ಪ ಬೆಳೆಗಾರರಿಗೆ ಅನುಕೂಲವಾಗುಂತೆ ನೆರವ ನೀಡಲು ಮುಂದಾಗಿದ್ದಾರೆ. 15ನೇ ಹಣಕಾಸು ಆಯೋಗದಿಂದ ಶಿಪಾರಸಿನಿಂದ ರಾಜ್ಯಕ್ಕೆ ಕಡಿಮೆ ಅನುದಾನ ಹಂಚಿಕೆ ಆಗುವ ನಿರೀಕ್ಷೆಯಾಗಿದೆ. ರಾಜ್ಯಕ್ಕೆ 92 ಸಾವಿರ ಕೋಟಿ ನಷ್ಟವಾಗಿದೆ. 15ನೇ ಹಣಕಾಸು ಆಯೋಗವು ಮೊದಲನೇ ವರದಿಯಲ್ಲಿ 5 ಸಾವಿರ 445 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಶಿಫಾರಸು ಮಾಡಿತ್ತು. ಆದರೆ, ಇದನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಡಬಲ್ ಎಂಜಿನ್ ಸರಕಾರ ಎಂದು ಹೇಳಿಕೊಂಡರೂ ಹಿಂದಿನ ಸರಕಾರ ರಾಜ್ಯಕ್ಕೆ ಬರಬೇಕಾಗಿದ್ದ ಪಾಲನ್ನು ಪಡೆಯಲು ವಿಫಲವಾಗಿದೆ. ಎಲ್ಲ ರೀತಿಯಲ್ಲಿಯೂ ರಾಜ್ಯಕ್ಕೆ ನ್ಯಾಯಕ್ಕೆ ಸಿಕ್ಕಿರುವುದಿಲ್ಲ. ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಡೆಯಲು ಜ್ಞಾಪನ ಪತ್ರವನ್ನು ತಯಾರಿಸಿ, 16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಲು ಕರ್ನಾಟಕ ಸರಕಾರ ನಿರ್ಧರಿಸಿದೆ.

10:31 AM IST:

ದೇಶದ ಆರ್ಥಿಕತೆಯನ್ನು ರೂಪಿಸುವಲ್ಲಿ ಕರ್ನಾಟಕದ ಆರ್ಥಿಕ ಅಭಿವೃದ್ಧಿ ಹೆಚ್ಚಿನ ಪಾಲು ನೀಡಲಿದೆ. ಸೇವಾ ವಲಯವು ಬೆಳವಣಿಗೆ ಸಾಧಿಸಿದೆ. ಪ್ರಸಕ್ತ ವರ್ಷದಲ್ಲಿ ಮುಂಗಾರು ವೈಫಲ್ಯದಿಂದ ರಾಜ್ಯ ಬರ ಎದುರಿಸಬೇಕಾಯಿತು. ಎಲ್ಲದರ ನಡುವೆಯೂ ರಾಜ್ಯದಲ್ಲಿ 2.8 ಶತಕೋಟಿ ಅಮೆರಿಕನ್ ಡಾಲರ್ ವಿದೇಶಿ ಹೂಡಿಕೆಯಾಗಿದ್ದು, ವಿದೇಶಿಗರಿಗೆ ರಾಜ್ಯ ಅವರನ್ನು ಹೇಗೆ ಸ್ವಾಗತಿಸುತ್ತದೆ ಎಂಬುದನ್ನು ತೋರಿಸುತ್ತದೆ. 

ರಾಜ್ಯವು ದೇಶದಲ್ಲಿ ಹೆಚ್ಚು ಜಿಎಸ್ಟಿ ಸಂಗ್ರಹಿಸುತ್ತಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದಲ್ಲಿ ಶೇ.12ರಷ್ಟು ಸಾಧನೆ ತೋರಲಿದೆ. ಜನರ ಆರ್ಥಿಕತೆ ಉತ್ತೇಜಿಸುವಲ್ಲಿ ಇದು ಪೂರಕವಾಗಿದೆ. ರಾಜ್ಯಗಳ ಜೊತೆಗೆ ಸಮಾನತೆಯ ಆಧಾರದಲ್ಲಿ ಸಹಕರಿಸಬೇಕೆೆಂದು ಭಾರತ ರತ್ನಿ ಕರ್ಪೂರಿ ಠಾಕೂರ್ ಹೇಳಿದಂತೆ ಕ್ರಮ ಕೈಗೊಳ್ಳಲಾಗುತ್ತದೆ. 

10:28 AM IST:

ಸಾಂಸ್ಥಿಕ ಸುಧಾರಣೆಗಳು, ವಿಕೇಂದ್ರಿಕರಣ, ಆಡಳಿತ ವ್ಯವಸ್ಥೆ ಕುರಿತು ಜನರಲ್ಲಿ ವಿಶ್ವಾಸ ಮೂಡಿಸುವುದು ಸರಕಾರದ ಆಶಯ. ಅಭಿವೃದ್ಧಿಯ ನಕಾಶೆಯನ್ನು ವಾಸ್ತವಗೊಳಿಸಲು ಮುಂದಿನ ನಾಲ್ಕು ವರ್ಷ ಶ್ರಮಿಸುತ್ತೇವೆ. ಬಸವಣ್ಣ ಮತ್ತು ಡಾ.ಅಂಬೇಡ್ಕರ್ ಹೇಳಿದಂತೆ ಕ್ರಾಂತಿಕಾರಕ ಹೆಜ್ಜೆಗಳನ್ನು ಇಡುತ್ತೇವೆ. ಮುಂದಿನ ಒಂದು ದಶಕದಲ್ಲಿ ಕರ್ನಾಟಕವನ್ನು ಜಾಗತಿಕವಾಗಿ ಗುರುತಿಸಲ್ಪಡುವಂತೆ ಅಭಿವೃದ್ಧಿಗೊಳಿಸಲಾಗುವುದು. ಎಲ್ಲರಿಗೂ ಸಮಾನ ಆದ್ಯತೆ ನೀಡಲಾಗುತ್ತದೆ. 

10:26 AM IST:

ಇಷ್ಟು ದೊಡ್ಡ ಮಟ್ಟದ ಗ್ಯಾರಂಟಿ ಯೋಜನೆಗಳು 21 ಸಾವಿರ ಕೋಟಿ ಮೊತ್ತವನ್ನು ನೀಡಿವೆ. ಗ್ರಾಮೀಣ ರಸ್ತೆಗಳು, ವಿಶ್ವದರ್ಜನೆಯ ವಿಮಾನ ನಿಲ್ದಾಣಗಳು ಹಾಗೂ ಅಗತ್ಯ ಯೋಜನೆಗಳನ್ನು ರೂಪಿಸಲು ಆದ್ಯತೆ ನೀಡಲಾಗುತ್ತಿದೆ. ಇಂಧನ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡಲಾಗುವುದು. ಬೆಂಗಳೂರನ್ನು ಜಾಗತಿಕ ಮಟ್ಟದ ನಗರವನ್ನಾಗಿ ಅಭಿವೃದ್ಧಿಗೊಳಿಸಲಾಗುವುದು. ಪ್ರವರ್ಧಮಾನಕ್ಕೆ ಬರುತ್ತಿರುವ ವಲಯಗಳ ಜಾಗತಿಕ ಪ್ರತಿಭೆಗಳನ್ನು ಗುರುತಿಸಲು ಸರಕಾರ ಕ್ರಮ ಕೈಗೊಳ್ಳಲಿದೆ. ಮಾನವ ಸಂಪನ್ಮೂಲ ಅಭಿವೃದ್ಧಿಗೆ ಆಧ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆರಂಭಿಸಲಾಗುತ್ತದೆ. 

10:24 AM IST:

ರಾಜ್ಯ ಸರಕಾರ ಯೋಜಿಸಿದ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ. ನಿಷ್ಪಕ್ಷಪಾತ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸಂಪತ್ತನ್ನು ಎಲ್ಲೆಡೆ ಹಂಚಲು ಕೈ ಕೊಂಡ ಯೋಜನೆಗಳಿವು. ಕೇಂದ್ರ ಸರಕಾರ ಮಾಡದ್ದನ್ನು ಕರ್ನಾಟಕ ಸರಕಾರ ಮಾಡಿ ತೋರಿಸಿದ, ಕೀಳಾದವನೂ ಮೇಲೆ ಬರಲು ಅವಕಾಶ ಮಾಡಿಕೊಡಲು, ಕುವೆಂಪು ಅವರ ಆಧ್ಯಾತ್ಮಿಕ ದೃಷ್ಟಿಯಿಂದ ಮುನ್ನಡೆಸಲು ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೂ ಕನಿಷ್ಠ 50 ಸಾವಿರ ರೂ. ನೀಡಲಾಗುತ್ತಿದೆ. ಇದರ ಜಾರಿಗೆ ಇಡೀ ಭಾರತವೇ ಕರ್ನಾಟಕದ ಮೇಲೆ ಮೆಚ್ಚುಗೆ ಸೂಚಿಸಿದೆ. ಅಂತಾರಾಷ್ಟ್ರೀಯ ಸಂಸ್ಥೆಗಳೂ ನಮ್ಮ ಯೋಜನೆಗಳಿಗೆ ಭೇಷ್ ಹೇಳಿವೆ. ಬಸ್ ಹತ್ತುವ ಮುನ್ನ ನಮಸ್ಕರಿಸಿದ ಮಹಿಳೆ, ಹಾಗೂ ಯುವನಿಧಿ ಯೋಜನೆಯ ಫಲಾನುವಭವಿ ಹಾಕಿದ ಆನಂದ ಭಾಷ್ಪ ನನ್ನ ನಂಬಿಕೆಯೆನ್ನು ಹೆಚ್ಚಿಸಿದೆ. 

ಆದರೆ, ರಾಜ್ಯದಲ್ಲಿ ಬೊಕ್ಕಸದಲ್ಲಿ ಹಣವಿಲ್ಲವೆಂದು ವಿಪಕ್ಷಗಳು ಟೀಕಿಸುತ್ತಿವೆ. ಸುಳ್ಳು ಸುದ್ದಿಗಳನ್ನು ಹರಡಿಸುತ್ತಿವೆ. ಮನ ಶುದ್ಧಿ ಇಲ್ಲದೇ...ಎಂಬ ಶರಣರ ವಚನ ವಿವರಿಸಿ ಬಿಜೆಪಿಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ.

10:20 AM IST:

ಬಜೆಟ್ ಭಾಷಣ ಆರಂಭಿಸಿದ ಸಿಎಂ ಸಿದ್ದರಾಮಯ್ಯ. ದುಡಿಮೆಯ ಭಾಗವನ್ನು ದಾಸೋಹಕ್ಕೆ ಬಳಸಬೇಕೆಂಬ ಆಶಯದೊಂದಿಗೆ ಅನ್ನ ಭಾಗ್ಯ ಯೋಜನೆ. ಬಸವ, ಶರಣಾದಿ ಗಳನ್ನು ಭಾಷಣದ ಆರಂಭದಲ್ಲಿಯೇ ನೆನೆದ ಸಿಎಂ. ಡಾ.ರಾಜ್ ಕುಮಾರ್ ಅವರ ಆಗದು ಎಂದು ಕೈ ಕಟ್ಟಿ ಕುಳಿತರೆ ಹಾಡನ್ನು ನೆನಪಿಸಿಕೊಂಡು, ಸರಕಾರದ ಯೋಜನೆಗಳು ಜನರ ಆಶೋತ್ತರಗಳನ್ನು ಪೂರೈಸಲು ರೂಪಿತವಾಗಿವೆ ಎಂದ ಸಿಎಂ. ಬಡ ಜನರಿಗೆ ನ್ಯಾಯ ಒದಗಿಸುವ ಕಾರ್ಯಕ್ಕಾಗಿ ಸರಕಾರದ ಯೋಜನೆಗಳು. ಆರಂಭದಲ್ಲಿಯೇ ಕೇಂದ್ರ ಸರಕಾರದ ಯೋಜನೆಗಳನ್ನು ಟೀಕಿಸಿದ ಸಿದ್ದರಾಮಯ್ಯ.

10:17 AM IST:

ಶಲ್ಯ ಹಾಕ್ಕೊಂಡು ಬಂದ ಕಾಂಗ್ರೆಸ್ ಸದಸ್ಯರು. ಇನ್ನೇನು ಕೆಲವೇ ಕ್ಷಣಗಳಲ್ಲಿ ಬಜೆಟ್ ಭಾಷಣ ಶುರು. ಸದನಕ್ಕೆ ಆಗಮಿಸಿದ ಸ್ಪೀಕರ್. 

10:11 AM IST:

ಟೋಪಿ ಹಾಕೋದು ಬೇಡ ಅಂತ ಹಿರಿಯ ಸದಸ್ಯರ ಸಲಹೆ. ಟೋಪಿ ಹಾಕುವ ನಿರ್ಧಾರದಿಂದ ಬಿಜೆಪಿ ವಾಪಸ್. ಸದನದಲ್ಲಿ ಟೋಪಿ ಹಾಕಿಕೊಂಡು ಭಾಗವಹಿಸಲು ಬಿಜೆಪಿ ಸದಸ್ಯರ ನಿರ್ಧಾರ. ಟೋಪಿ ಬದಲು ಪೋಸ್ಟರ್ ಪ್ರದರ್ಶನಕ್ಕೆ ಬಿಜೆಪಿ ಪ್ಲಾನ್. ಏನಿಲ್ಲ - ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಹೇಳುವುದು ನಿಜವಲ್ಲ ಅನ್ನೋ ಪೋಸ್ಟರ್.

9:54 AM IST:

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಸೂಟ್‌ಕೇಸ್‌ ಬಿಟ್ಟು ಲಿಡ್ಕರ್ ಸಂಸ್ಥೆಯ ಲೆದರ್‌ ಬ್ಯಾಗ್‌ನಲ್ಲಿ ಬಜೆಟ್ ಪ್ರತಿಗಳನ್ನು ಹೊತ್ತು ತರುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

9:06 AM IST:

ಏನು ಇರೋದಿಲ್ಲಾ, ಏನು ಇರೋದಿಲ್ಲಾ ಬಜೆಟ್ ನಲ್ಲಿ "ಸಾಲ-ಸುಳ್ಳು” ಬಿಟ್ಟರೇ, ಬೇರೆ ಏನು ಇರೋದಿಲ್ಲಾ...!! ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ 15ನೇ ಬಜೆಟ್ ಮಂಡನೆಗೂ ಮುನ್ವವೇ ಬಿಜೆಪಿ ಟ್ವೀಟ್ ಮಾಡಿದೆ.

ಏನು ಇರೋದಿಲ್ಲಾ,
ಏನು ಇರೋದಿಲ್ಲಾ

ಬಜೆಟ್ ನಲ್ಲಿ "ಸಾಲ-ಸುಳ್ಳು” ಬಿಟ್ಟರೇ, ಬೇರೆ ಏನು ಇರೋದಿಲ್ಲಾ...!! pic.twitter.com/x217THCn34

— BJP Karnataka (@BJP4Karnataka)

8:57 AM IST:

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16 ರಂದು ರಾಜ್ಯ ಬಜೆಟ್‌ ಮಂಡಿಸಲಿದ್ದು ವಿವಿಧ ವಲಯಗಳಲ್ಲಿ ಬಜೆಟ್‌ ಘೋಷಣೆಗಳ ಬಗ್ಗೆ ಭಾರಿ ನಿರೀಕ್ಷೆ ಮೂಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆದ ಬಳಿಕ ಮಂಡಿಸಲಿರುವ ಎರಡನೇ ಬಜೆಟ್‌ ಇದಾಗಿದ್ದರೂ, ಪೂರ್ಣ ಅವಧಿಗೆ ಮಂಡಿಸಲಿರುವ ಮೊದಲ ಬಜೆಟ್‌ ಆಗಿರುತ್ತದೆ.  

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

8:52 AM IST:

1995- ಎಚ್.ಡಿ. ದೇವೇಗೌಡ ಸಿಎಂ -ಸಿದ್ದರಾಮಯ್ಯ ಹಣಕಾಸು ಸಚಿವ -ಬಜೆಟ್ ಮಂಡನೆ
1996 - ಎಚ್.ಡಿ. ದೇವೇಗೌಡ ಸಿಎಂ - ಸಿದ್ದರಾಮಯ್ಯ ಡಿಸಿಎಂ - ಬಜೆಟ್ ಮಂಡನೆ
1997-ಜೆ.ಎಚ್. ಪಟೇಲ್ ಸಿಎಂ - ಸಿದ್ದರಾಮಯ್ಯ ಡಿಸಿಎಂ- ಬಜೆಟ್ ಮಂಡನೆ
1998- ಜೆ.ಎಚ್. ಪಟೇಲ್ ಸಿಎಂ - ಸಿದ್ದರಾಮಯ್ಯ ಡಿಸಿಎಂ- ಬಜೆಟ್ ಮಂಡನೆ
1999- ಜೆ.ಎಚ್. ಪಟೇಲ್ ಸಿಎಂ - ಸಿದ್ದರಾಮಯ್ಯ ಡಿಸಿಎಂ- ಬಜೆಟ್ ಮಂಡನೆ
2005- ಧರಂ ಸಿಂಗ್ ಸಿಎಂ - ಸಿದ್ದರಾಮಯ್ಯ ಡಿಸಿಎಂ - ಬಜೆಟ್ ಮಂಡನೆ 
2006 - ಧರಂ ಸಿಂಗ್ ಸಿಎಂ - ಸಿದ್ದರಾಮಯ್ಯ ಡಿಸಿಎಂ - ಬಜೆಟ್ ಮಂಡನೆ 
2013 ರಿಂದ 2018ರವರೆಗೆ ಸಿಎಂ ಆಗಿ ಸತತ 6 ಬಾರಿ ಬಜೆಟ್‌ ಮಂಡನೆ
2023ರ ಜುಲೈ  7ರಂದು 14ನೇ ಬಾರಿಗೆ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ
2024, ಫೆಬ್ರವರಿ 16ಕ್ಕೆ 15ನೇ ಬಾರಿಗೆ ಸಿದ್ದರಾಮಯ್ಯ ಬಜೆಟ್ ಮಂಡನೆ

8:17 AM IST:

ಸಿದ್ದು ಬಜೆಟ್..ನಿರೀಕ್ಷೆಗಳೇನು..?
ಮೇಕೆದಾಟು, ಎತ್ತಿನಹೊಳೆ ಯೋಜನೆಗೆ ಅನುದಾನ ನಿರೀಕ್ಷೆ
ಕೃಷ್ಣ ಮೇಲ್ದಂಡೆ ಯೋಜನೆಗೆ ವಿಶೇಷ ಅನುದಾನ 
ಪೌರ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ
ತಳ ಸಮುದಾಯಗಳ ಅಭಿವೃದ್ಧಿ ಕಲ್ಯಾಣ ಮಂಡಳಿ ರಚನೆ
ಅಲ್ಪಸಂಖ್ಯಾತರ ಅಭಿವೃದ್ಧಿಗೆ 5,000 ಕೋಟಿ ವಿಶೇಷ ನಿಧಿ ಸಾಧ್ಯತೆ
ಸಂತ ಶಿಶುನಾಳ ಷರೀಫ್, ಭಗಿರಥ ಪ್ರತಿಮೆ ನಿರ್ಮಾಣಕ್ಕೆ ಅನುದಾನ
SC/ST ಸಮುದಾಯದ ಯುವತಿಯರ ಉನ್ನತ ಶಿಕ್ಷಣಕ್ಕೆ ಯೋಜನೆ
ಗರ್ಭಕೋಶ ರೋಗದಿಂದ ಬಳಲುವ ಮಹಿಳೆಯರ ಚಿಕಿತ್ಸೆಗೆ ಯೋಜನೆ
ಅನಾಥ ಮಕ್ಕಳ ಶಿಕ್ಷಣಕ್ಕಾಗಿ ವಿಶೇಷ ಶಾಲೆಗಳ ನಿರ್ಮಾಣಕ್ಕೆ ಪ್ಲಾನ್
ಹೈನುಗಾರಿಕೆ ಪ್ರೋತ್ಸಾಹಕ್ಕೆ ಉತ್ತರಕರ್ನಾಟಕದಲ್ಲಿ KMF ತರಬೇತಿ ಘಟಕ

8:03 AM IST:

7:42 AM IST:

2024-25ರ ಬಜೆಟ್‌ಗೆ ಸಿದ್ದರಾಮಯ್ಯ ತಯಾರಿ
ದಾಖಲೆ ಬಜೆಟ್ ಮಂಡನೆಗೆ ಸಜ್ಜಾದ ಸಿದ್ದರಾಮಯ್ಯ
15ನೇ ಆಯವ್ಯಯ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
ಲೋಕಸಭೆ ಎಲೆಕ್ಷನ್‌..ಕುತೂಹಲ ಮೂಡಿಸಿದ ಬಜೆಟ್
ಕಳೆದ ಬಾರಿ 3.27 ಲಕ್ಷ ಕೋಟಿ ಬಜೆಟ್ ಮಂಡನೆ