
ನವದೆಹಲಿ(ಅ.7): ಶಿಕ್ಷಣ ಸೆಸ್, ಕೃಷಿ ಸೆಸ್, ಸ್ವಚ್ಛ ಭಾರತ ಸೆಸ್, ಹೀಗೆ ಜನರಿಂದ ಹತ್ತು ಹಲವು ಸೆಸ್ ಗಳನ್ನು ಸಂಗ್ರಹಿಸಿದ ಕೇಂದ್ರ ಸರ್ಕಾರ, ಅದನ್ನು ಸಂಪೂರ್ಣ ಬಳಕೆ ಮಾಡಿಕೊಳ್ಳದೆ ಹಾಗೆ ಉಳಿಸಿಕೊಂಡಿದೆ.
ಹಣಕಾಸು ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, 2016-17ನೇ ಸಾಲಿನಲ್ಲಿ ಒಟ್ಟು 1,78,594 ಕೋಟಿ ರೂ. ಸೆಸ್ ಸಂಗ್ರಹಿಸಲಾಗಿದ್ದು, ಈ ಪೈಕಿ 1,00,871 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಳ್ಳಲಾಗಿದೆ.
ಸೆಸ್ ಬಳಕೆಯಾಗದಿರುವುದಕ್ಕೆ ಸರ್ಕಾರ ಹಲವು ಕಾರಣಗಳನ್ನು ನೀಡಬಹುದು. ಆದರೆ ಜನರಿಂದ ಹೆಚ್ಚಿನ ಹಣ ಸಂಗ್ರಹಿಸಲು ಸರ್ಕಾರಕ್ಕೆ ಸೆಸ್ ಒಂದು ಸಾಧನವಾಗಿದ್ದು, ಅದು ಬಳಕೆಯಾಗದಿದ್ದರೆ ಜನರಿಗೆ ಅನಗತ್ಯ ಹೊರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಆದಾಯವನ್ನು ಹೆಚ್ಚಿಸಿಕೊಳ್ಳಲು ಸೆಸ್ ಒಂದು ವಿಧಾನವಾಗಿದೆ. ಸರ್ಕಾರ ಕೋಟ್ಯಾಧೀಶ ಉದ್ಯಮಿಗಳಿಗೆ ಲಕ್ಷಾಂತರ ಕೋಟಿ ತೆರಿಗೆ ವಿನಾಯ್ತಿ ನೀಡುತ್ತದೆ. ಮತ್ತೊಂದು ಕಡೆ ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಸೆಸ್ ವಿಧಿಸುತ್ತದೆ. ಆದರೆ ಅದನ್ನು ಬಳಕೆ ಮಾಡದಿದ್ದರೆ ಏನು ಪ್ರಯೋಜನ ಎಂದು ಆರ್ಥಿಕ ತಜ್ಷರು ಪ್ರಶ್ನಿಸಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.