ಆರ್ಥಿಕ ತಜ್ಞನ ಅಡ್ಡಕಸುಬಿ ಬಜೆಟ್‌: ಅಶೋಕ್‌ ಟೀಕೆ

By Kannadaprabha News  |  First Published Feb 17, 2024, 8:32 AM IST

ಸಾಧನೆಯ ಬಲದಿಂದಾಗಲಿ ಅಥವಾ ಅಭಿವೃದ್ಧಿ ಕೆಲಸಗಳಿಂದಾಗಲಿ ಲೋಕಸಭೆ ಚುನಾವಣೆ ಎದುರಿಸುವುದು ಅಸಾಧ್ಯವೆಂದು ತಿಳಿದಿರುವ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯ ಪವಿತ್ರ ಸಾಂವಿಧಾನಿಕ ಕರ್ತವ್ಯವನ್ನು ಚುನಾವಣಾ ಭಾಷಣವಾಗಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಸಂವಿಧಾನಕ್ಕೆ ಮತ್ತು ಮತ ನೀಡಿ ಅಧಿಕಾರ ಕೊಟ್ಟ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ ಎಂದು ಅವರು ಕಿಡಿಕಾರಿದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ 


ಬೆಂಗಳೂರು(ಫೆ.17):  ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ''ಅಡ್ಡಕಸುಬಿ ಬಜೆಟ್‌ʼ ಮಂಡಿಸಿದ್ದಾರೆ. ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ಟೀಕಿಸಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್‌ಗೆ ಪ್ರತಿಕ್ರಿಯೆ ನೀಡಿದ ಅವರು, ಸಾಧನೆಯ ಬಲದಿಂದಾಗಲಿ ಅಥವಾ ಅಭಿವೃದ್ಧಿ ಕೆಲಸಗಳಿಂದಾಗಲಿ ಲೋಕಸಭೆ ಚುನಾವಣೆ ಎದುರಿಸುವುದು ಅಸಾಧ್ಯವೆಂದು ತಿಳಿದಿರುವ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯ ಪವಿತ್ರ ಸಾಂವಿಧಾನಿಕ ಕರ್ತವ್ಯವನ್ನು ಚುನಾವಣಾ ಭಾಷಣವಾಗಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಸಂವಿಧಾನಕ್ಕೆ ಮತ್ತು ಮತ ನೀಡಿ ಅಧಿಕಾರ ಕೊಟ್ಟ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ ಎಂದು ಅವರು ಕಿಡಿಕಾರಿದರು.

Tap to resize

Latest Videos

undefined

ಕರ್ನಾಟಕ ಬಜೆಟ್‌ 2024: ಬೆಂಗ್ಳೂರಿಗೆ ಭರಪೂರ ಕೊಡುಗೆ ನೀಡಿದ ಸಿದ್ದರಾಮಯ್ಯ, ಯಾವ ಜಿಲ್ಲೆಗೆ ಏನು ಸಿಕ್ತು?

ತಮ್ಮ ಮೊದಲ ಅವಧಿಯಲ್ಲಿ ಒಂದು ಲಕ್ಷ ಕೋಟಿ ರು.ಗೂ ಹೆಚ್ಚು ಸಾಲ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಪ್ರತಿ ಪ್ರಜೆಯ ತಲೆಯ ಮೇಲೆ 44 ಸಾವಿರ ರು.ಗಳಿಗೂ ಅಧಿಕ ಸಾಲದ ಹೊರೆ ಹೇರಿದ್ದು ದೊಡ್ಡ ಸಾಧನೆ. ಆ ಭಾಗ್ಯ, ಈ ಭಾಗ್ಯ ಎಂದು ರಾಜ್ಯದ ಜನತೆಯ ಮೇಲೆ ಸಾಲ ಭಾಗ್ಯ ಹೊರಿಸಿ ಈಗ ಎರಡನೇ ಅವಧಿಯಲ್ಲೂ ಸಿಎಂ ಸಿದ್ದರಾಮಯ್ಯನವರು ಕರ್ನಾಟಕವನ್ನು ದೊಡ್ಡ ಸಾಲದ ಸುಳಿಯಲ್ಲಿ ಸಿಲುಕಿಸಲು ಹೊರಟಿದ್ದಾರೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬುದು ಈ ಸರ್ಕಾರದಲ್ಲಿ ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ ಎಂಬಂತಾಗಿದೆ ಎಂದು ಲೇವಡಿ ಮಾಡಿದರು.

ಲೂಟಿ ಹೊಡೆದ ಹಣವನ್ನು ಸಾಗಿಸಲು ಸುರಂಗ ಯೋಜನೆ ರೂಪಿಸಿದ್ದಾರೆ. ಹಿಂದೆ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಉತ್ತಮ ಅನುದಾನ ನೀಡಿದ್ದಾರೆ. ಆದರೆ ಈಗಿನ ಬಜೆಟ್‌ನಲ್ಲಿ ಬೆಂಗಳೂರಿಗೆ ಅನುದಾನವೇ ಇಲ್ಲ. ಇದು ಚುನಾವಣೆಗಾಗಿ ಮಾಡಿದ ಬೋಗಸ್‌ ಬಜೆಟ್‌ ಎಂದರು.

click me!