
ಬೆಂಗಳೂರು(ಆ.21): ದೇಶದ ಅತಿ ದೊಡ್ಡ ಹೌಸಿಂಗ್ ಫೈನಾನ್ಸ್ ಕಂಪನಿಯಾಗಿರುವ ಸರ್ಕಾರಿ ಸ್ವಾಮ್ಯದ ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಅಸಿಸ್ಟೆಂಟ್ ಅಸೋಸಿಯೇಟ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್‌ಗಳ ನೇಮಕಕ್ಕೆ ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 6 ಕೊನೆಯ ದಿನಾಂಕ ಎಂದು ಘೊಷಿಸಿದೆ.
ಒಟ್ಟು 300 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆನ್‌ಲೈನ್ ಪರೀಕ್ಷೆಯನ್ನು ಅಕ್ಟೋಬರ್ 6 ಮತ್ತು 7 ರಂದು ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಹುದ್ದೆಗಳಿಗೆ ತಕ್ಕಂತೆ ಅರ್ಹತೆಯನ್ನು ನಿಗದಿಪಡಿಸಿದ್ದು, ಪದವಿ, ಎಂಬಿಎ, ಎಂಎಂಎಸ್ ಕೋರ್ಸ್ ಗಳು ಶೈಕ್ಷಣಿಕ ವಿದ್ಯಾರ್ಹತೆಗಳಾಗಿವೆ.
ಈ ಹುದ್ದೆಗಳಿಗೆ ಕನಿಷ್ಠ 21 ಮತ್ತು ಗರಿಷ್ಠ 28 ವಯೋಮಿತಿಯನ್ನು ನಿಗದಿಗೊಳಿಸಲಾಗಿದ್ದು, ರಾಜ್ಯದಲ್ಲಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಮಾತ್ರ ಪರೀಕ್ಷಾ ಕೇಂದ್ರಗಳು ಇರಲಿವೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ www.lichousing.com ಗೆ ಭೇಟಿ ನೀಡುವಂತೆ ಮನವಿ ಮಾಡಲಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.