PAN - Aadhaar Link: ಪ್ಯಾನ್‌ಗೆ ಆಧಾರ್‌ ಲಿಂಕ್‌ ಮಾಡದಿದ್ದರೆ ಡಬ್ಬಲ್‌ ದಂಡ, ಜೂ. 30 ಕಡೆಯ ದಿನಾಂಕ

By Sharath Sharma  |  First Published Jun 27, 2022, 7:04 PM IST

Last day for linking PAN and Aadhaar: ಪ್ಯಾನ್‌ ಕಾರ್ಡ್‌ ಜೊತೆಗೆ ಆಧಾರ್‌ ಇನ್ನೂ ಲಿಂಕ್‌ ಮಾಡಿಲ್ಲವಾ? ಹಾಗಾದರೆ ಈಗ ಕಟ್ಟುತ್ತಿರುವ ದಂಡಕ್ಕಿಂತ ಹೆಚ್ಚಿನ ದಂಡವನ್ನು ಕಟ್ಟಲು ಸಿದ್ಧರಾಗಿ. ಜೂನ್‌ 30ರೊಳಗೆ ಲಿಂಕ್‌ ಮಾಡದಿದ್ದರೆ ಎರಡು ಪಟ್ಟು ದಂಡವನ್ನು ತೆರಬೇಕು ಎಂದು ಹಣಕಾಸು ಇಲಾಖೆ ಸ್ಪಷ್ಟಪಡಿಸಿದೆ.


ನವದೆಹಲಿ (ಜೂ.27): ಆಧಾರ್ ನೊಂದಿಗೆ  (Aadhaar) ಪ್ಯಾನ್ ಕಾರ್ಡ್ (PAN Card) ಲಿಂಕ್  (Link) ಮಾಡಲು  2022ರ ಏಪ್ರಿಲ್  1ರ ಬಳಿಕ 500ರೂ. ದಂಡ ವಿಧಿಸಲಾಗುವುದು ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಈ ಹಿಂದೆಯೇ ತಿಳಿಸಿತ್ತು. ಆದ್ರೆ ಜುಲೈ 1ರ ಬಳಿಕ ಈ ಕೆಲ್ಸ ಮಾಡಲು 500ರೂ. ಅಲ್ಲ 1000ರೂ. ದಂಡ (Penalty) ಪಾವತಿಸಬೇಕಾಗುತ್ತದೆ ಎಂದು ಕೂಡ ಸಿಬಿಡಿಟಿ ತಿಳಿಸಿದೆ. ಆದ್ರೆ ಈ ದಂಡ ಪಾವತಿಸೋದು ಹೇಗೆ? ಇಲ್ಲಿದೆ ಮಾಹಿತಿ.

ಕೇಂದ್ರ ಸರ್ಕಾರ ಪ್ಯಾನ್ -ಆಧಾರ್ ಜೋಡಣೆ ಅಂತಿಮ ಗಡುವನ್ನು (Deadline) 2023ರ ಮಾರ್ಚ್ 31ರ ತನಕ ವಿಸ್ತರಿಸಿದೆ. ಈ ಹಿಂದೆ ಈ ವರ್ಷದ ಮಾರ್ಚ್ 31ರ ತನಕ ಗಡುವು ನೀಡಲಾಗಿತ್ತು. ಆದ್ರೆ ಈ ವರ್ಷದ ಏಪ್ರಿಲ್ 1ರಿಂದ ತೆರಿಗೆದಾರರು (Taxpayers) ಆಧಾರ್-ಪ್ಯಾನ್ ಜೋಡಣೆಗೆ ದಂಡ ಪಾವತಿಸಬೇಕಿದೆ. ಈ ಬಗ್ಗೆ ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಹೊರಡಿಸಿರುವ ಸುತ್ತೋಲೆಯಲ್ಲಿ 2022 ರ ಏಪ್ರಿಲ್ 1ರಿಂದ ಜೂನ್ 30ರ ತನಕ ತೆರಿಗೆದಾರರು ಆಧಾರ್ ಜೊತೆ ಪ್ಯಾನ್ ಲಿಂಕ್ ಮಾಡಿದ್ರೆ  500ರೂ. ವಿಳಂಬ ಶುಲ್ಕ (late fee) ಪಾವತಿಸಬೇಕು. ಇನ್ನು ಜುಲೈ 1ರ ಬಳಿಕ ಆಧಾರ್-ಪ್ಯಾನ್ ಜೋಡಣೆಗೆ  1000 ರೂ. ದಂಡ ಪಾವತಿಸಬೇಕು ಎಂದು ತಿಳಿಸಿದೆ. 

Tap to resize

Latest Videos

ಇದನ್ನೂ ಓದಿ: ರಾಜ್ಯಗಳಿಗೆ ಪರಿಹಾರ ಕೊಡಲು ಮಾಡಿದ್ದ ಸಾಲ ತೀರಿಸಲೆಂದು ಸೆಸ್‌ 4 ವರ್ಷ ವಿಸ್ತರಣೆ!

ದಂಡ ಪಾವತಿಸೋದು ಹೇಗೆ?
ಆಧಾರ್ -ಪ್ಯಾನ್ ಲಿಂಕ್ ಮಾಡುವ ಮನವಿ ಸಲ್ಲಿಕೆಯಾಗುವ ಮುನ್ನ ದಂಡ ಕಟ್ಟಬೇಕು. ಜೂನ್ 30ರ ತನಕ 500ರೂ. ಹಾಗೂ ಜುಲೈ 1ರ ಬಳಿಕ 1000 ರೂ. ವಿಳಂಬ ಶುಲ್ಕ ಪಾವತಿಸಬೇಕು.
ಹಂತ 1: ಆಧಾರ್-ಪ್ಯಾನ್ ಲಿಂಕ್ ಮನವಿ ಸಲ್ಲಿಕೆ ಪ್ರಕ್ರಿಯೆ  ಮುಂದುವರಿಸಲು https://onlineservices.tin.egov-nsdl.com/etaxnew/tdsnontds.jsp ಭೇಟಿ ನೀಡಿ.
ಹಂತ 2:  ಆಧಾರ್-ಪ್ಯಾನ್ ಲಿಂಕ್ ಮನವಿ ಸಲ್ಲಿಕೆಗೆ ಚಲನ್ ಸಂಖ್ಯೆ/ಐಟಿಎನ್ ಎಸ್ 280 ಅಡಿಯಲ್ಲಿಪ್ರಕ್ರಿಯೆ ಮುಂದುವರಿಕೆ (Proceed under CHALLAN NO./ITNS 280) ಮೇಲೆ ಕ್ಲಿಕ್ ಮಾಡಿ.
ಹಂತ3: ಈಗ  tax applicable ಆಯ್ಕೆ ಮಾಡಿ.
ಹಂತ 4: ಒಂದೇ ಚಲನ್ ನಲ್ಲಿ ಶುಲ್ಕ ಪಾವತಿಯನ್ನು ಮೈನರ್ ಹೆಡ್ 500 (ಶುಲ್ಕ) ಹಾಗೂ ಮೇಜರ್ ಹೆಡ್ 0021 (ಕಂಪನಿಗಳನ್ನು ಹೊರತುಪಡಿಸಿದ ಆದಾಯ ತೆರಿಗೆ ) ಅಡಿಯಲ್ಲಿ ಮಾಡಿರೋದನ್ನು ಖಚಿತಪಡಿಸಿ.
ಹಂತ 5: ಈಗ ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್  ನಲ್ಲಿ ಯಾವುದು ನಿಮ್ಮ ಪಾವತಿ ವಿಧಾನ ಎಂಬುದನ್ನು ಆಯ್ಕೆ ಮಾಡಿ.
ಒಮ್ಮೆ ಪಾವತಿಯಾದ ಬಳಿಕ ತೆರಿಗೆದಾರರು 4-5 ದಿನಗಳಲ್ಲಿ ಪ್ಯಾನ್-ಆಧಾರ್ ಲಿಂಕ್ ಮನವಿ ಸಲ್ಲಿಕೆಗೆ ಪ್ರಯತ್ನಿಸುವಂತೆ ಶಿಫಾರಸ್ಸು ಮಾಡಲಾಗುತ್ತದೆ.

ಇದನ್ನೂ ಓದಿ: ITR FORM 16: ಫಾರ್ಮ್ -16 ಅಂದ್ರೇನು? ಇದ್ರಲ್ಲಿ ಯಾವೆಲ್ಲ ಮಾಹಿತಿಯಿರುತ್ತದೆ? ಐಟಿಆರ್ ಫೈಲ್ ಮಾಡೋವಾಗ ಇದ್ಯಾಕೆ ಮುಖ್ಯ?

2023ರ ಮಾರ್ಚ್ 31 ಅಂತಿಮ ಗಡುವು
2023ರ ಮಾರ್ಚ್ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್ ಜೊತೆ ಲಿಂಕ್ ಮಾಡದಿದ್ರೆ 2023ರ ಏಪ್ರಿಲ್ 1ರಿಂದ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ. ಒಮ್ಮೆ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ನಿಮಗೆ ಆದಾಯ ತೆರಿಗೆ ರಿಟರ್ನ್  (ITR) ಸಲ್ಲಿಕೆ ಮಾಡಲು ಸಾಧ್ಯವಾಗೋದಿಲ್ಲ.ಅಲ್ಲದೆ, ಬ್ಯಾಂಕ್ ಖಾತೆ (Bank Account) ತೆರೆಯಲು, ಮ್ಯೂಚುವಲ್ ಫಂಡ್ ನಲ್ಲಿ (Mutual Fund) ಹೂಡಿಕೆ (Invest) ಮಾಡಲು ಹಾಗೂ ಡಿಮ್ಯಾಟ್ ಖಾತೆ (Demat account) ತೆರೆಯಲು ಸಾಧ್ಯವಾಗೋದಿಲ್ಲ. ಇನ್ನು 50 ಸಾವಿರ ರೂ.ಗಿಂತ ಅಧಿಕ ಮೊತ್ತದ ಬ್ಯಾಂಕಿಂಗ್ ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಅತ್ಯಗತ್ಯ.  ಹೀಗಾಗಿ ಪ್ಯಾನ್ ನಿಷ್ಕ್ರಿಯಗೊಂಡ್ರೆ ಬ್ಯಾಂಕಿಂಗ್ ಸೇವೆಗಳನ್ನು (Banking Services) ಪಡೆಯಲು ತೊಂದರೆಯಾಗುತ್ತದೆ.

click me!