Price Hike ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 250 ರೂಪಾಯಿ ಏರಿಕೆ, ಒಂದು ಸಿಲಿಂಡರ್ ಬೆಲೆ 2250 ರೂಪಾಯಿ!

Published : Apr 01, 2022, 12:07 PM IST
 Price Hike ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 250 ರೂಪಾಯಿ ಏರಿಕೆ, ಒಂದು ಸಿಲಿಂಡರ್ ಬೆಲೆ 2250 ರೂಪಾಯಿ!

ಸಾರಾಂಶ

ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ದೊಡ್ಡಮಟ್ಟದ ಏರಿಕೆ ಒಂದೇ ದಿನದಲ್ಲಿ 250 ರೂಪಾಯಿ ಏರಿಕೆ ಮಾಡಿದ ಸರ್ಕಾರ ವಾಣಿಜ್ಯ ಬಳಕೆಯ ಒಂದು ಸಿಲಿಂಡರ್ ನ ಬೆಲೆ 2250 ರೂಪಾಯಿ

ನವದೆಹಲಿ (ಏ. 1): ವಾಣಿಜ್ಯ ಸಿಲಿಂಡರ್‌ಗಳ (LPG Cylinder) ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬೆಲೆಯನ್ನು ಸೋಮವಾರ  250 ರೂಪಾಯಿ ಹೆಚ್ಚಿಸಲಾಗಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ, 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆ  2,253 ರೂಪಾಯಿ ಆಗಿದೆ. ಆದರೆ,  ಗೃಹಬಳಕೆಯ (domestic gas cylinders) LPG ಸಿಲಿಂಡರ್ ದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಲಾಗಿದೆ. 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಈಗ ದೆಹಲಿಯಲ್ಲಿ 949.50 ರೂಪಾಯಿ ಆಗಿದೆ.

ಮುಂಬೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2,205 ರೂಪಾಯಿ ಆಗಿದ್ದರೆ,  ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್‌ಪಿಜಿ ದರ 2,351 ರೂಪಾಯಿ ಎನಿಸಿದೆ. ಚೆನ್ನೈನಲ್ಲಿ ಈಗ 19 ಕೆಜಿ ಸಿಲಿಂಡರ್ 2,406 ರೂಪಾಯಿಗೆ ಲಭ್ಯವಿರುತ್ತದೆ. ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಎಲ್‌ಪಿಜಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ದಿನನಿತ್ಯ ಎನ್ನುವಂತೆ ಏರಿಕೆಯಾಗುತ್ತಿದೆ. ಇದರ ನಡುವೆ ಇಂಧನ ದರವನ್ನು ಯಥಾಸ್ಥಿತಿಯಲ್ಲಿ ಇರಿಸಲಾಗಿದೆ. ಮಾರ್ಚ್ 22 ರಿಂದ ಇಂಧನ ದರಗಳಲ್ಲಿ ಒಂಬತ್ತು ಬಾರಿ ಪರಿಷ್ಕರಣೆಯಾಗಿದ್ದು, ಪ್ರತಿ ಲೀಟರ್ ಮೇಲೆ 6.40 ರೂಪಾಯಿ ಏರಿಕೆಯಾಗಿದೆ.

ಕಳೆದ ಎರಡು ತಿಂಗಳಲ್ಲಿ, 19-ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 346 ರೂಪಾಯಿಗೆ ಹೆಚ್ಚಿಸಲಾಗಿದೆ. ಈ ಹಿಂದೆ ಮಾರ್ಚ್ 1 ರಂದು 19 ಕೆಜಿಯ ವಾಣಿಜ್ಯ ಸಿಲಿಂಡರ್ ದರವನ್ನು 105 ರೂ.ಗಳಷ್ಟು ಹೆಚ್ಚಿಸಲಾಗಿತ್ತು ಮತ್ತು ನಂತರ ಮಾರ್ಚ್ 22 ರಂದು ಅದರ ಬೆಲೆಯನ್ನು 9 ರೂಪಾಯಿ ಇಳಿಸಲಾಗಿತ್ತು.

Price Hike ಪೆಟ್ರೋಲ್‌, ಡೀಸೆಲ್‌,ಎಲ್‌ಪಿಜಿ ಬೆಲೆ ಏರಿಕೆ, 4 ತಿಂಗಳ ಬಳಿಕ ದರ ಪರಿಷ್ಕರಣೆ!

ಗೃಹಬಳಕೆಯ LPG ಸಿಲಿಂಡರ್‌ಗಳ ಬೆಲೆಯನ್ನು ಮಾರ್ಚ್ 22 ರಂದು 50 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಹೆಚ್ಚಳದ ನಂತರ, 14.2 ಕೆಜಿ ಸಬ್ಸಿಡಿ ರಹಿತ LPG ಸಿಲಿಂಡರ್ ಈಗ ದೆಹಲಿಯಲ್ಲಿ 949.50 ರೂಪಾಯಿ ಆಗಿದೆ. ಅಲ್ಲದೆ, ಜಾಗತಿಕ ಇಂಧನ ಬೆಲೆಗಳ ಏರಿಕೆಯ ಹಿನ್ನೆಲೆಯಲ್ಲಿ ಸರ್ಕಾರವು ಗುರುವಾರ ವಿದ್ಯುತ್ ಉತ್ಪಾದಿಸಲು, ರಸಗೊಬ್ಬರಗಳನ್ನು ತಯಾರಿಸಲು, ಸಿಎನ್‌ಜಿಗೆ ಪರಿವರ್ತಿಸಲು ಮತ್ತು ಅಡುಗೆಗಾಗಿ ಮನೆಯ ಅಡುಗೆಮನೆಗಳಿಗೆ ಪೈಪ್‌ಲೈನ್‌ಗೆ ಬಳಸುವ ನೈಸರ್ಗಿಕ ಅನಿಲದ ಬೆಲೆಯನ್ನು ದ್ವಿಗುಣಗೊಳಿಸಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!