ಕೇಂದ್ರ ಬಜೆಟ್ ಮಂಡನೆಯಾಗಿದೆ. ಇದರ ಮೇಲೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಇದೀಗ ಬಜೆಟ್ ಭಾರಿ ಚರ್ಚೆಯಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಹಲವು ವಿಶೇಷತಗಳಿವೆ. ಜೊತೆಗೆ ಅತೀ ದೊಡ್ಡ ಘೋಷಣೆಗಳಿವೆ.
ನವದೆಹಲಿ(ಫೆ.01): ಕೇಂದ್ರ ಬಜೆಟ್ ಮಂಡನೆಯಾದ ಬೆನ್ನಲ್ಲೇ ಇದೀಗ ಭಾರಿ ಚರ್ಚೆಗೆ ಒಳಪಟ್ಟಿದೆ. ಹಲವರು ಐತಿಹಾಸಿಕ ಬಜೆಟ್ ಎಂದು ಘೋಷಿಸಿದ್ದರೆ, ವಿಪಕ್ಷಗಳು ಇದು ಎಲೆಕ್ಷನ್ ಘೋಷಣಾ ಬಜೆಟ್ ಎಂದು ಟೀಕಿಸಿದೆ. ಇದರ ನಡುವೆ ಆರ್ಥಿಕ ತಜ್ಞರು ಕೇಂದ್ರದ ಬಜೆಟ್ ಮೇಲೆ ವಿಶ್ಲೇಷಣೆ ಮಾಡಿದ್ದಾರೆ. ಇಷ್ಟೇ ಅಲ್ಲ ಈ ಬಾರಿಯ ಬಜಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಕೆಲ ಅತೀ ದೊಡ್ಡ ಘೋಷಣೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಘೋಷಣೆಗಳು ಹೊಸ ಭಾರತದ ನಿರ್ಮಾಣಕ್ಕೆ ಕಾರಣವಾಗಲಿದೆ ಎಂದಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿನ ಅತೀ ದೊಡ್ಡ ಘೋಷಣೆ ಹಾಗೂ ವಿಶೇಷತೆಗಳ ಪಟ್ಟಿ ಇಲ್ಲಿದೆ.
ರೈಲ್ವೇ ಇಲಾಖೆ ಇದುವರೆಗಿನ ಅತೀ ದೊಡ್ಡ ಮೊತ್ತವನ್ನು ಮೀಸಲಿಟ್ಟಿದೆ. ಬಜೆಟ್‌ನಲ್ಲಿ 2.4 ಲಕ್ಷ ಕೋಟಿ ರೂಪಾಯಿ ಮೊತ್ತವನ್ನು ರೈಲ್ವೇ ಇಲಾಖೆಗೆ ನೀಡಿದೆ
ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ.
ಸಾರಿಗೆ ಸಂಪರ್ಕ ಬಲಪಡಿಸಲು ಹಾಗೂ ಮೂಲಭೂತ ಸೌಕರ್ಯ ಹೆಚ್ಚಿಸಲು 50 ವಿಮಾನ ನಿಲ್ದಾಣ ಹಾಗೂ ಹೆಲಿಪ್ಯಾಡ್ ನಿರ್ಮಾಣ
50 ಪ್ರೇಕ್ಷಣೀಯ ಸ್ಥಳಗಳನ್ನು ಆಯ್ಕೆ ಮಾಡಿ ಪ್ರವಾಸೋದ್ಯಮ ಅಭಿವೃದ್ಧಿ
ಮಹಿಳಾ ಸಮ್ಮಾನ್ ಉಳಿತಾಯ ಯೋಜನೆ ಜಾರಿ, ಈ ಮೂಲಕ ಮಹಿಳೆಯರು 2 ವರ್ಷದ ಅವಧಿಗೆ ಗರಿಷ್ಠ 2 ಲಕ್ಷ ರೂಪಾಯಿ ಉಳಿತಾಯ ಮಾಡಬಹುದು. ಇದಕ್ಕೆ 7.5 ಶೇಕಡಾ ಬಡ್ಡಿ ಪಡೆಯಲಿದ್ದಾರೆ.
ಹಿರಿಯ ನಾಗರೀಕರ ಉಳಿತಾಯ ಯೋಜನೆ ಠೇವಣಿ ಮೊತ್ತವನ್ನು 15 ಲಕ್ಷ ರೂಪಾಯಿಂದ 30 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.