ವರ್ಷದ ಕೊನೆಯ ತಿಂಗಳ ಮೊದಲ ದಿನವೇ ಸಾಮಾನ್ಯ ಜನರಿಗೆ ಶಾಕ್; 5 ತಿಂಗಳಲ್ಲಿ 173 ರೂಪಾಯಿ ಏರಿಕೆ

Published : Dec 01, 2024, 12:25 PM IST
ವರ್ಷದ ಕೊನೆಯ ತಿಂಗಳ ಮೊದಲ ದಿನವೇ ಸಾಮಾನ್ಯ ಜನರಿಗೆ ಶಾಕ್; 5 ತಿಂಗಳಲ್ಲಿ 173 ರೂಪಾಯಿ ಏರಿಕೆ

ಸಾರಾಂಶ

LPG cylinder prices: ಡಿಸೆಂಬರ್ ಮೊದಲ ದಿನವೇ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದೆ. ಕಳೆದ 5 ತಿಂಗಳಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 173 ರೂ. ಏರಿಕೆಯಾಗಿದೆ.

ನವದೆಹಲಿ: 2024 ವರ್ಷದ ಕೊನೆಯ ತಿಂಗಳ ಮೊದಲ ದಿನ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್ ತಗುಲಿದೆ. ಪ್ರತಿ ತಿಂಗಳ ಮೊದಲನೇ ದಿನದಂದು ತೈಲ ಕಂಪನಿಗಳು ಹೊಸ ದರ ಪ್ರಕಟಿಸುತ್ತವೆ. ಇಂದು ಸಹ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಕೊಂಚ ಏರಿಕೆ ಏರಿಕೆ ಕಂಡುಬಂದಿದ್ದು, ಇಂದಿನಿಂದಲೇ ಹೊಸ ದರಗಳು ಅನ್ವಯವಾಗಲಿವೆ. ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿನ ಎಲ್‌ಪಿಜಿ ದರದಲ್ಲಿ ಬದಲಾವಣೆಯಾಗಿದೆ. ನವೆಂಬರ್‌ನಲ್ಲಿಯೂ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿತ್ತು. ಇದೀಗ ಮತ್ತೊಮ್ಮೆ ಬೆಲೆ ಹೆಚ್ಚಳಗೊಂಡಿದೆ.  ಆದರೆ ಈ ಬೆಲೆ ಹೆಚ್ಚಳ ಕೇವಲ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗೆ ಅನ್ವಯವಾಗಲಿದೆ.  14 ಕೆಜಿಯ ಗೃಹ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. 

ವಾಣಿಜ್ಯ ಬಳಕೆಯ 19 ಕೆಜಿ ತೂಕದ ಸಿಲಿಂಡರ್ ಬೆಲೆಯಲ್ಲಿ ಸರಾಸರಿ 15 ರಿಂದ 16 ರೂಪಾಯಿಯವರೆಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ನಗರಿ ಮುಂಬೈ, ಚೆನ್ನೈ, ಕೋಲ್ಕತ್ತಾ ಸೇರಿದಂತೆ ಎಲ್ಲಾ ನಗರಗಳಲ್ಲಿಯೂ 19  ಕೆಜಿ ತೂಕದ  ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ಕಳೆದ 5 ತಿಂಗಳಿನಿಂದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 173 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ (Delhi Cylinder Price) 1,802 ರೂ.ಗೆ ಸಿಗುತ್ತಿದ್ದ  ಸಿಲಿಂಡರ್ ಬೆಲೆ ಇದೀಗ 1818.50 ರೂ.ಗೆ ತಲುಪಿದೆ. 19  ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ಕೋಲ್ಕತ್ತಾ, ಮುಂಬೈ  ಮತ್ತು ಚೆನ್ನೈನಲ್ಲಿ ಕ್ರಮವಾಗಿ 1927 ರೂ., 1771 ರೂ. ಮತ್ತು 1980.50 ರೂ.ಗಳಾಗಿದೆ.

ಇದನ್ನೂ ಓದಿ: ಡಿಸೆಂಬರ್ 1ರಿಂದ ಈ ಹಣಕಾಸಿನ ನಿಯಮಗಳಲ್ಲಿ ಮಹತ್ವದ ಬದಲಾವಣೆ

ಬೆಂಗಳೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 14.2 ಕೆಜಿ ಸಿಲಿಂಡರ್ ಬೆಲೆ 805  ರೂ.  ಆಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ 1,879 ರೂ.ಗಳಿಗೆ ಮಾರಾಟವಾಗುತ್ತಿದೆ. 47.5 ಕೆಜಿ ಸಿಲಿಂಡರ್‌ ಬೆಲೆ 4,659 ರೂ. ಆಗಿದೆ.

ಗೃಹಬಳಕೆ ಸಿಲಿಂಡರ್ ಬೆಲೆ
ಈ ವರ್ಷದ ಆಗಸ್ಟ್‌ನಿಂದ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಕಳೆದ 5 ತಿಂಗಳಿನಿಂದ ಗೃಹಬಳಕೆ ಸಿಲಿಂಡರ್ ಬೆಲೆ ಸ್ಥಿರವಾಗಿದೆ. ಇಂಡೇನ್ ಕಂಪನಿ ಅತಿದೊಡ್ಡ ಎಲ್‌ಪಿಜಿ ಬ್ರ್ಯಾಂಡ್ ಆಗಿದ್ದು, ಇಂಡಿಯನ್ ಆಯಿಲ್ ಎರಡನೇ ಸ್ಥಾನದಲ್ಲಿದೆ. ಇತ್ತೀಚೆಗೆ ಎಲ್‌ಪಿಜಿ ಸಿಲಿಂಡರ್‌ಗಳನ್ನು 5 ಕೆಜಿ ಮತ್ತು 14.2 ಕೆಜಿಗಳಲ್ಲಿಯೂ ವಿತರಣೆ ಮಾಡಲಾಗುತ್ತಿದೆ. ವಾಣಿಜ್ಯ ಬಳಕೆ ಸಿಲಿಂಡರ್‌ಗಳು 19 ಕೆಜಿ, 47.5ಕೆಜಿ ಮತ್ತು 425 ಕೆಜಿ ವಿತರಣೆ ಮಾಡಲಾಗುತ್ತದೆ. 425 ಕೆಜಿ ಜಂಬೋ ಸಿಲಿಂಡರ್‌ಗಳನ್ನು ಕೈಗಾರಿಕೆಗಳಲ್ಲಿ ಬಳಸಲಾಗುತ್ತದೆ.

ಇದನ್ನೂ ಓದಿ: ಭಾರತದ ಯಾವ ರಾಜ್ಯದಲ್ಲಿ ಕಡಿಮೆ ಬೆಲೆಗೆ ಚಿನ್ನ ಮಾರಾಟ ಆಗುತ್ತೆ?

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್
ಮದ್ಯ ಮಾರಾಟಕ್ಕೆ ಇಳಿದ ಯುವರಾಜ್‌ ಸಿಂಗ್‌, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್‌!