ವೀರ ಸಾವರ್ಕರ್‌ಗೆ ಭಾರತ ರತ್ನ: ಮಹಾರಾಷ್ಟ್ರ ಗೆಲ್ಲಲು ಬಿಜೆಪಿ ಪ್ರಯತ್ನ!

By Web Desk  |  First Published Oct 15, 2019, 4:18 PM IST

'ಮಹಾರಾಷ್ಟ್ರ ಗೆದ್ದರೆ ವೀರ್ ಸಾವರ್ಕರ್‌ಗೆ ಭಾರತ ರತ್ನ ಗ್ಯಾರಂಟೀ'| ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ| ಸಾವರ್ಕರ್‌ಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯದ ಭರವಸೆ| ಜ್ಯೋತಿಬಾ ಪುಲೆ ಹಾಗೂ ಸಾವಿತ್ರಿ ಭಾಯಿ ಪುಲೆ ಅವರಿಗೂ ಭಾರತ ರತ್ನ ನೀಡುವಂತೆ ಮನವಿ| ಮತ್ತೆ ಅಧಿಕಾರಕ್ಕೆ ಬರುವ ಭರವಸೆ ವ್ಯಕ್ತಪಡಿಸಿದ ಬಿಜೆಪಿ|


ಮುಂಬೈ(ಅ.15): ವಿಧಾನಸಭೆ ಹೊಸ್ತಿಲಲ್ಲಿರುವ ಮಹಾರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿಯೇ ಇದೆ. ಅದರಲ್ಲೂ ಮತ್ತೆ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿರುವ ಬಿಜೆಪಿ, ಚುನಾವಣಾ ತಂತ್ರಗಾರಿಕೆಯಲ್ಲಿ ಇತರ ಪಕ್ಷಗಳಿಗಿಂತ ಒಂದು ಹೆಜ್ಜೆ ಮುಂದಿದೆ.

ಅದರಂತೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ಅಧಿಕಾರಕ್ಕೆ ಬಂದರೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದೆ.

Tap to resize

Latest Videos

undefined

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ರಾಜ್ಯ ಬಿಜೆಪಿ ಘಟಕದ ನಾಯಕರು, ನಮಗೆಲ್ಲಾ ಸ್ಪೂರ್ತಿಯ ಚಿಲುಮೆಯಾಗಿರುವ ವಿ.ಡಿ,. ಸಾವರ್ಕರ್ ಅವರಿಗರ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಜನರಲ್ಲಿ ಮನವಿ ಮಾಡಿದರು.

हाच संकल्प नवमहाराष्ट्राचा!

महात्मा फुले, सावित्रीबाई फुले व स्वातंत्र्यवीर सावरकर यांना भारतरत्न पुरस्कार मिळण्यासाठी पाठपुरावा करणार pic.twitter.com/vQyJz20E2Z

— भाजपा महाराष्ट्र (@BJP4Maharashtra)

ಇದೇ ವೇಳೆ ಜ್ಯೀತಿಬಾ ಪುಲೆ ಹಾಗೂ ಸಾವಿತ್ರಿ ಭಾಯಿ ಪುಲೆ ಅವರಿಗೂ ಭಾರತ ರ್ತನ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು ಎಂದು ಮಹಾರಾಷ್ಟ್ರ ಬಿಜೆಪಿಒ ಘಟಕ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರಸೆ ನೀಡಿದೆ.

click me!