
ಬೆಂಗಳೂರು(ಜು.8): ಜಿಎಸ್‌ಟಿ ಅನ್ವಯ ಸುಮಾರು ೧೫ ಕೋಟಿ ತೆರಿಗೆ ಪಾವತಿಸದ ಆರೋಪದಡಿಯಲ್ಲಿ ಬೆಂಗಳೂರಿನ ಆಟೋಮೊಟಿವ್ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕರನ್ನು ಬಂಧಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾವತಿಸದ ಹಿನ್ನೆಲೆಯಲ್ಲಿ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017 ರ ನಿಬಂಧನೆಗಳ ಅಡಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರನ್ನು ಬಂಧಿಸಲಾಗಿದೆ.
ಕೇಂದ್ರೀಯ ತೆರಿಗೆ ಇಲಾಖೆಯ ಪ್ರಿವೆಂಟಿವ್ ಯುನಿಟ್‌ನಿಂದ ಸಂಗ್ರಹಿಸಲಾದ ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದಲ್ಲಿ ತೆರಿಗೆ ವಂಚನೆ ಪ್ರಕರಣ ಪತ್ತೆಯಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆ ನೀಡಿದೆ. ಆರೋಪಿಯು 2017 ರ ಆಗಸ್ಟ್‌್‌ನಿಂದ 2018 ರ ಮೇ ವರೆಗೆ ಜಿಎಸ್‌ಟಿ ಪಾವತಿ ಮಾಡದೆ ವಂಚಿಸಿದರು.
ಕೇಂದ್ರೀಯ ಸರಕು ಮತ್ತು ಸೇವಾ ತೆರಿಗೆ ಸೆಕ್ಷನ್ 132 ರ ಅನುಸಾರ ಅಪರಾಧಿಗೆ ಕನಿಷ್ಟ 5 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಅಲ್ಲದೇ ಈ ಅಪರಾಧವು ಜಾಮೀನು ರಹಿತ ಪ್ರಕರಣ ಎಂದು ಗುರುತಿಸಲ್ಪಡಲಿದೆ. ಸದ್ಯ ಆರೊಪಿ ತಾನು ತೆರಿಗೆ ವಂಚನೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.