
ನವದೆಹಲಿ(ಸೆ.01): ದೇಶದ ಆರ್ಥಿಕ ಕುಸಿತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಕೆಟ್ಟ ನಿರ್ವಹಣೆಯೇ ಕಾರಣ ಎಂದು ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಆರ್ಥಿಕ ಕುಸಿತಕ್ಕೆ ಮೋದಿ ಸರ್ಕಾರದ ಕಳಪೆ ನಿರ್ವಹಣೆ ಕಾರಣವಾಗಿದ್ದು, ರಾಜಕೀಯ ಹಗೆತನವನ್ನು ಬದಿಗಿಟ್ಟು ಈ ಬಿಕ್ಕಟ್ಟಿನಿಂದ ಹೊರಬರುವ ಪ್ರಯತ್ನಗಳನ್ನು ಕೇಂದ್ರ ಸರ್ಕಾರ ಮಾಡಬೇಕಿದೆ ಎಂದು ಡಾ. ಸಿಂ.ಗ್ ಅಭಿಪ್ರಾಯಪಟ್ಟಿದ್ದಾರೆ.
ದೇಶದ ಆರ್ಥಿಕ ಸ್ಥಿತಿಗತಿ ತೀವ್ರ ಚಿಂತಾಜನಕವಾಗಿದ್ದು, ತ್ರೈಮಾಸಿಕ ಜಿಡಿಪಿ ಬೆಳವಣಿಗೆಯ ದರ ಶೇ.5 ರಷ್ಟಕ್ಕೆ ಕುಸಿದಿರುವುದು ಅಪಾಯದ ಮುನ್ಸೂಚನೆ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.