
ನ್ಯೂಯಾರ್ಕ್(ಜು.7): ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಮತ್ತು ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ನಂತರದ ಸ್ಥಾನವನ್ನು ಪಡೆಯುವಲ್ಲಿ ಜುಕರ್ ಬರ್ಗ್ ಯಶಸ್ವಿಯಾಗಿದ್ದಾರೆ.
ನಿನ್ನೆ ಫೇಸ್ ಬುಕ್ ಷೇರುಗಳ ಮೌಲ್ಯ ಶೆ.2.4ರಷ್ಟು ಏರಿಕೆ ಕಂಡಿದ್ದು, ಜುಕರ್ ಬರ್ಗ್ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯಲು ಕಾರಣವಾಗಿದೆ. ಪ್ರಸಿದ್ಧ ಉದ್ಯಮಿ ವಾರನ್ ಬಫೆಟ್ ಅವರನ್ನು ಹಿಂದಿಕ್ಕಿ ಜುಕರ್ ಬರ್ಗ್ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವುದು ವಿಶೇಷ.
ಇನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಸೇರಿದ ಮೂರು ಸಂಸ್ಥೆಗಳ ದಿಗ್ಗಜರು ವಿಶ್ವದ ಟಾಪ್ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನ ಪಡೆದಿರುವುದು ಇದೇ ಮೊದಲ ಬಾರಿ ಎನ್ನಲಾಗಿದ್ದು, ಈ ಮೂಲಕ ತಂತ್ರಜ್ಞಾನವು ಸಂಪತ್ತಿನ ಸೃಷ್ಟಿಯಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಸದ್ಯ ಮಾರ್ಕ್ ಜುಕರ್ ಬರ್ಗ್ ಅವರ ಒಟ್ಟು ಆಸ್ತಿ ಮೌಲ್ಯ 81.6 ಶತಕೋಟಿ ಡಾಲರ್ ಆಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.