
ನವದೆಹಲಿ(ಸೆ.19): ಮಹತ್ವದ ಬೆಳವಣಿಗೆಯೊಂದರಲ್ಲಿ 9,100 ಕೋಟಿ ರೂ. ಮೌಲ್ಯದ ರಕ್ಷಣಾ ಸಾಮಾಗ್ರಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಇಂದು ನಡೆದ ಡಿಫೆನ್ಸ್ ಆಕ್ವಿಝಿಶನ್ ಕೌನ್ಸಿಲ್ (ಡಿಎಸಿ) ಸಭೆಯಲ್ಲಿ 9,100 ಕೋಟಿ ರೂ. ಮೌಲ್ಯದ ಸಾಮಾಗ್ರಿಗಳನ್ನು ರಕ್ಷಣಾ ಪಡೆಗಳಿಗಾಗಿ ಖರೀದಿ ಮಾಡಲು ಅನುಮೋದನೆ ನೀಡಲಾಯಿತು.
9,100 ಕೋಟಿ ರೂ.ದಲ್ಲಿ ದೇಶೀಕರಣ ಮತ್ತು ಸ್ವಾವಲಂಬನೆಯ ಗುರಿಯೊಂದಿಗೆ ರಕ್ಷಣಾ ಸಾಮಾಗ್ರಿಗಳನ್ನು ಖರೀದಿ ಮಾಡಲಾಗುತ್ತದೆ. ಇದಲ್ಲದೆ, ಭಾರತ್ ಡೈನಾಮಿಕ್ಸ್ ಲಿಮಿಟೆಡ್'ನಿಂದ 2 ರಿಜಿಮೆಂಟ್ ಗಳಿಗೆ ಆಕಾಶ್ ಮಿಸೈಲ್ ಸಿಸ್ಟಮ್ ಹಾಗೂ ಇತರ ಶಕ್ತಿಶಾಲಿ ರಕ್ಷಣಾ ಸಾಮಾಗ್ರಿಗಳನ್ನು ಖರೀದಿ ಮಾಡಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.