ಮೆಗಾ ಜವಳಿ ಪಾರ್ಕ್, ಹೊಸ ವಿವಿ ಸೇರಿ ಹಲವು ಯೋಜನೆ, ಬಜೆಟ್ ಬಗ್ಗೆ ಚಿಕ್ಕಮಗಳೂರು ಜನರಿಂದ ಮಿಶ್ರ ಪ್ರತಿಕ್ರಿಯೆ

By Suvarna NewsFirst Published Feb 17, 2023, 6:01 PM IST
Highlights

ರಾಜ್ಯ ಬಜೆಟ್ ಬಗ್ಗೆ ಚಿಕ್ಕಮಗಳೂರು ಜಿಲ್ಲೆಯ ಜನರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನ ಮೆಗಾ ಜವಳಿ ಪಾರ್ಕ್ ನಿರ್ಮಿಸಲು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಇಂದು ಮಂಡಿಸಿದ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿಕ್ಕಮಗಳೂರು (ಫೆ.17): ರಾಜ್ಯ ಬಜೆಟ್ ಬಗ್ಗೆ ಚಿಕ್ಕಮಗಳೂರು ಜಿಲ್ಲೆಯ ಜನರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನ ಮೆಗಾ ಜವಳಿ ಪಾರ್ಕ್ ನಿರ್ಮಿಸಲು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಇಂದು ಮಂಡಿಸಿದ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ರಾಯಚೂರು, ಕಲ್ಬರ್ಗಿ, ವಿಜಯನಗರ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಜವಳಿ ಪಾರ್ಕ್ ನಿರ್ಮಾಣಗೊಂಡರೆ,ರಾಜ್ಯದ 25 ಸ್ಥಳಗಳಲ್ಲಿ ಮಿನಿ ಜವಳಿ ಪಾರ್ಕಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುತ್ತಿದ್ದು, ಇದರಿಂದ ಸುಮಾರು 25 ಸಾವಿರ ಜನರಿಗೆ ಉದ್ಯೋಗ ಸೃಜನೆಯಾಗಲಿದೆ ಮುಖ್ಯಮಂತ್ರಿಗಳು ಪ್ರಕಟಿಸಿದ್ದಾರೆ. ಈ ವರ್ಷದಲ್ಲಿ ಚಿಕ್ಕಮಗಳೂರು ಹೊಸ ವಿವಿ.ಯನ್ನು ತಂತ್ರಜ್ಞಾನದ ಗರಿಷ್ಟ ಬಳಕೆಯೊಂದಿಗೆ ಮತ್ತು ಕಡಿಮೆ ಮಾನವ ಸಂಪನ್ಮೂಲಗಳನ್ನು ಒಳಗೊಂಡತೆ ಸ್ಥಾಪಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ. ಈ ಹಿಂದೆಯೇ ಶಾಸಕ ಸಿ.ಟಿ.ರವಿ ಸರ್ಕಾರದ ಗಮನಕ್ಕೆ ತಂದಿರುವುದಾಗಿ ಹೇಳಿಕೆ ನೀಡಿದ್ದರು. ಅದರಂತೆ ಹೊಸ ವಿಶ್ವವಿದ್ಯಾಲಯ ಸ್ಥಾಪನೆಯಾಗುತ್ತಿದ್ದು,ಇದುವರೆಗೆ ಚಿಕ್ಕಮಗಳೂರು ಜಿಲ್ಲೆ ಕುವೆಂಪು ವಿಶ್ವವಿದ್ಯಾಲಯದೊಂದಿಗೆ ಸೇರ್ಪಡೆಗೊಂಡಿದ್ದು, ಇದರಿಂದ ಕಾಫಿ ನಾಡು ಹೊರಬರಲಿದೆ.

ನೂತನ ವಿಶ್ವವಿದ್ಯಾಲಯ, ಆಸ್ಪತ್ರೆ ಮೇಲ್ದರ್ಜೆಗೆ: 
ಬೀದರ್, ಹಾವೇರಿ ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ ಮತ್ತು ಹಾಸನ ಜಿಲ್ಲೆಗಳಲ್ಲಿ 7 ವಿಶ್ವವಿದ್ಯಾಲಯ ಸ್ಥಾಪನೆಯಾಗುತ್ತಿದ್ದು, ಮಂಡ್ಯ ಜಿಲ್ಲೆಯನ್ನು ವಿವಿಯನ್ನು ಸಂಯೋಜಿತ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲಾಗಿದೆ. ತಾಲೂಕು ಆಸ್ಪತ್ರೆಗಳಿಲ್ಲ ಖಾನಪುರ, ಆನೆಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು ನೆಲಮಂಗಲ ಮತ್ತು ಹೊಸಕೋಟೆ ತಾಲೂಕು ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು ನೂರು ಹಾಸಿಗೆಗಳ ಸಾಮಾರ್ಥ್ಯ ತಾಲೂಕು ಆಸ್ಪತ್ರೆಗಳನ್ನಾಗಿ ಹಂತಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು.

Women in Karnataka Budget 2023-24 : ಮಹಿಳೆಯರಿಗೆ ಬಂಪರ್‌ ಗಿಫ್ಟ್: ಮಹಿಳೆ- ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ಪಾಸ್

 

ಪಿಎಂಎಬಿಎಚ್ಐಎಚ್ ಅಡಿಯಲ್ಲಿ ತೃತೀಯ ಹಂತದ ಆರೈಕೆಯನ್ನು ಒದಗಿಸಲು ಕೋಲಾರ ಬಾಗಲಕೋಟೆ. ಯಾದಗಿರಿ ಗದಗ ಮತ್ತು ಚಿಕ್ಕಮಗಳೂರು, ರಾಮನಗರ, ವಿಜಯಪುರ ದೊಡ್ಡಪುರ ಆಸ್ಪತ್ರೆಗಳಲ್ಲಿ 50 ಹಾಸಿಗೆಯ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಹಾಗೂ ತುಮಕೂರು ಮತ್ತು ಬೆಂಗಳೂರು 100 ಹಾಸಿಗೆಗಳ ಕ್ರಿಟಿಕಲ್ ಬ್ಲಾಕ್‌ಗಳನ್ನು  ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Karnataka Budget 2023-24: ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಒತ್ತು; ಭೂ ಸಿರಿ ನೂತನ ಯೋಜನೆ ಘೋಷಣೆ

15 ಲಕ್ಷರೂ ಗೆ ಏರಿಕೆ : 
ಮಾನವ ವನ್ಯಜೀವಿಸ ಸಂಘರ್ಷದಿಂದ ಸಂಭವಿಸುವ ಮಾನವ ಪ್ರಾಣಹಾನಿಗೆ ನೀಡಿರುವ ಪರಿಹಾರವನ್ನು 7.50 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಬೆಳೆಹಾನಿ ಪ್ರಕರಣಗಳಲ್ಲಿ ನೀಡುತ್ತಿರುವ ಪರಿಹಾರಧನವನ್ನು ದ್ವಿಗುಣಗೊಳಿಸಲಾಗಿದೆ. ಜಿಲ್ಲೆಯ ಮೂಡಿಗೆರೆ ಸೇರಿದಂತೆ ಮಲೆನಾಡು ಭಾಗದಲ್ಲಿ ಕಾಡುಪ್ರಾಣಿಗಳಿಂದ ಬೆಳೆಹಾನಿಯಾಗುತ್ತಿರುವುದಕ್ಕೆ  ಅನೇಕರು ಜಮೀನನ್ನು ಪಾಳುಬಿಟ್ಟಿದ್ದು, ಇನ್ನು ಮುಂದೆ ಸಾಗುವಳಿ ಮಾಡಲು ಸಹಕಾರಿಯಾಗಲಿದೆ. ಕಾಡಾನೆ ಹಾವಳಿ ತಡೆಗಟ್ಟಲು ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಕಾರ್ಯಪಡೆಯನ್ನು ರಚಿಸಲಾಗಿದೆ.

click me!