ಮೊಬೈಲ್‌ ಕಂಪನಿಗಳನ್ನು ಸೆಳೆಯಲು ಕೇಂದ್ರದ ಬಿಗ್ ಆಫರ್!

Published : Jun 03, 2020, 01:53 PM IST
ಮೊಬೈಲ್‌ ಕಂಪನಿಗಳನ್ನು ಸೆಳೆಯಲು ಕೇಂದ್ರದ ಬಿಗ್ ಆಫರ್!

ಸಾರಾಂಶ

ಮೊಬೈಲ್‌ ಕಂಪನಿಗಳನ್ನು ಸೆಳೆಯಲು 50 ಸಾವಿರ ಕೋಟಿ ರು. ಪ್ರೋತ್ಸಾಹ| ಈ ಯೋಜನೆಗೆ ಸರ್ಕಾರ ಮಂಗಳವಾರ ಅರ್ಜಿ ಆಹ್ವಾನ| ಪ್ರಸ್ತುತ ಭಾರತ ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್‌ ತಯಾರಿಕಾ ದೇಶ

ನವದೆಹಲಿ(ಜೂ.03): ಜಾಗತಿಕ ಮೊಬೈಲ್‌ ಫೋನ್‌ ತಯಾರಿಕಾ ಕಂಪನಿಗಳನ್ನು ಭಾರತಕ್ಕೆ ಆಕರ್ಷಿಸಲು ಮತ್ತು ಸ್ಥಳೀಯ ಇಲೆಕ್ಟ್ರಾನಿಕ್‌ ಸಾಧನಗಳ ಉತ್ಪಾದಕ ಕಂಪನಿಗಳನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ 50 ಸಾವಿರ ಕೋಟಿ ರು. ಮೊತ್ತದ ಪ್ರೋತ್ಸಾಹಧನ ನೀಡುವ ಯೋಜನೆಯೊಂದನ್ನು ರೂಪಿಸಿದ್ದು, ಈ ಯೋಜನೆಗೆ ಸರ್ಕಾರ ಮಂಗಳವಾರ ಅರ್ಜಿಗಳನ್ನು ಆಹ್ವಾನಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌, ಜಾಗತಿಕವಾಗಿ ಅಗ್ರಸ್ಥಾನದಲ್ಲಿರುವ 5-6 ಕಂಪನಿಗಳು ಜಾಗತಿಕ ಮಾರುಕಟ್ಟೆಯ ಶೇ.80ರಷ್ಟುಪಾಲನ್ನು ಹೊಂದಿವೆ. ನಾವು ಆರಂಭದಲ್ಲಿ 5 ಜಾಗತಿಕ ಮೊಬೈಲ್‌ ಫೋನ್‌ ತಯಾರಿಕಾ ಕಂಪನಿಗಳನ್ನು ಭಾರತಕ್ಕೆ ಕರೆ ತರಲು ಮತ್ತು ಸ್ಥಳೀಯ 5 ಸ್ಥಳೀಯ ಕಂಪನಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಉದ್ದೇಶಿಸಲಾಗಿದೆ. ಇವುಗಳಿಗೆ 50 ಸಾವಿರ ಕೋಟಿ ಪ್ರೋತ್ಸಾಹ ಧನ ನೀಡಲಾಗುವುದು ಎಂದಿದ್ದಾರೆ.

ಅಲ್ಲದೇ ಪ್ರಸ್ತುತ ಭಾರತ ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್‌ ತಯಾರಿಕಾ ದೇಶ ಎನಿಸಿಕೊಂಡಿದೆ. ಈ ಕ್ಷೇತ್ರದಲ್ಲಿ ಭಾರತವನ್ನು ಅಗ್ರಸ್ಥಾನಕ್ಕೆ ಏರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!