
ಬೆಂಗಳೂರು (ಫೆ.16): ಬೆಂಗಳೂರಿನ BIEC ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.
ಈ ಹಿಂದೆಯೇ ತುಮಕೂರು, ಆನೇಕಲ್, ಬಿಡದಿಗೆ ಮೆಟ್ರೋ ವಿಸ್ತರಣೆಗೆ ಡಿಪಿಆರ್ ಸಲ್ಲಿಕೆಗೆ ಡಿಸಿಎಂ ಸೂಚನೆ ನೀಡಿದ್ದರು. ಹೀಗಾಗಿ ತುಮಕೂರುವರೆಗೆ ಮೆಟ್ರೋ ವಿಸ್ತರಣೆ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿರುವುದು ಇಂದು ಘೋಷಿಸಿದ ಬಜೆಟ್ ನಿಂದ ತಿಳಿದುಬಂದಿದೆ.
ವೈದ್ಯಕೀಯ ಮತ್ತು ಉನ್ನತ ಶಿಕ್ಷಣಕ್ಕೆ ಸಿದ್ದರಾಮಯ್ಯ ಘೋಷಿಸಿದ ಅನುದಾನಗಳಿವು
ಈಗಾಗಲೇ ಮೆಟ್ರೋ ರೈಲನ್ನು ತುಮಕೂರಿನವರೆಗೂ ವಿಸ್ತರಿಸುವುದಾಗಿ ಗೃಹ ಸಚಿವರೇ ಹೇಳುತ್ತಾ ಬಂದಿದ್ದರು. ತುಮಕೂರಿನ ಸಮೀಪದಲ್ಲೇ ವಸಂತನರಸಾಪುರ ಕೈಗಾರಿಕಾ ಹಬ್ ಇದ್ದು ಮೆಟ್ರೋವನ್ನು ತುಮಕೂರಿಗೆ ನೀಡಿದರೆ ಸಾಕಷ್ಟು ಅನುಕೂಲವಾಗುತ್ತದೆ ಎಂಬುದು ಜನರು ಹಾಗೂ ಕೈಗಾರಿಕೋದ್ಯಮಿಗಳ ಒಲವಾಗಿತ್ತು.
ಇದರ ಜೊತೆಗೆ ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ (Satellite Townships) ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.
ಸಿದ್ದು ಬಜೆಟ್: ನದಿ ತಿರುವು ಯೋಜನೆ ಆಯ್ತು, ಈಗ ಕರಾವಳಿಯ ನೇತ್ರಾವತಿ, ಗುರುಪುರ ನದಿಗಳಲ್ಲಿ ಜಲಮೆಟ್ರೋ ಸೇವೆ
ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನದಟ್ಟಣೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಿಂಗ್ ರಸ್ತೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪೆರಿಫೆರಲ್ ರಿಂಗ್ ರಸ್ತೆಯನ್ನು ಪಿಪಿಪಿ ಅಥವಾ ಟೌನ್ ಪ್ಲಾನಿಂಗ್ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು ಎಂದು ಘೋಷಿಸಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.