
ಕೋಲ್ಕೊತಾ[ನ.08] ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ನರೇಂದ್ರ ಮೋದಿ ಸರಕಾರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವನ್ನೇ ವಶಪಡಿಸಿಕೊಳ್ಳಲು ಮುಂದಾಗಿದೆ ಎಂದು ಕಾಂಗ್ರೆಸ್ ನಾಯಕ, ಕೇಂದ್ರ ಹಣಕಾಸು ಇಲಾಖೆ ಮಾಜಿ ಸಚಿವ ಪಿ.ಚಿದಂಬರಂ ಗಂಭೀರ ಆರೋಪ ಮಾಡಿದ್ದಾರೆ.
ದೇಶದ ಆರ್ಥಿಕತೆ ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ. ಕೇಂದ್ರ ಬ್ಯಾಂಕಿನ ನಿರ್ದೇಶಕರಿಗೂ ಸಹ ಸೂಚನೆ ನೀಡುತ್ತಿದೆ. ನವೆಂಬರ್ 19ರಂದು ನಡೆಯುವ ಆರ್‌ಬಿಐ ನಿರ್ದೇಶಕ ಮಂಡಳಿ ಸಭೆಯಲ್ಲಿ ತನ್ನ ಪ್ರಸ್ತಾವಗಳಿಗೆ ಸಮ್ಮತಿ ಪಡೆದುಕೊಳ್ಳಲು ಸರಕಾರ ಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ವಿತ್ತೀಯ ಕೊರತೆ ಬಿಕ್ಕಟ್ಟಿನಿಂದ ಸರಕಾರಕ್ಕೆ ಭಯ ಹುಟ್ಟಿದೆ. ಎಲ್ಲ ಮಾರ್ಗಗಳೂ ವಿಫಲವಾದ ಬಳಿಕ ಆರ್‌ಬಿಐ ಮೀಸಲು ನಿಧಿಯಿಂದ 1 ಲಕ್ಷ ಕೋಟಿ ರೂ.ಗಳನ್ನು ನೀಡುವಂತೆ ಕೇಂದ್ರ ಸರಕಾರ ಬೇಡಿಕೆ ಇಟ್ಟಿದ್ದು ದೇಶದ ಮೂಲ ಹಣಕ್ಕೆ ಕೈ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.