ರಾಜ್ಯದಲ್ಲಿ ಪರಿಸರ ಸ್ನೇಹಿ ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಉತ್ಪಾದನೆಗೆ ವಿಪುಲ ಅವಕಾಶಗಳಿವೆ. ಈ ಸಂಬಂಧ ಇಂಧನ ಮತ್ತು ಕೈಗಾರಿಕಾ ಇಲಾಖೆಗಳು ಜಂಟಿಯಾಗಿ ಚರ್ಚಿಸಿ ರೂಪಿಸಲಾಗುವುದು. ಜತೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರೊಂದಿಗೆ ಉದ್ಯಮಿಗಳು ಮತ್ತು ಹೂಡಿಕೆದಾರರ ಸಭೆ ನಡೆಸಿ, ಹಸಿರು ಇಂಧನ ಕ್ಷೇತ್ರದ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗುವುದು ಎಂದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್
ಬೆಂಗಳೂರು(ಅ.23): ರಾಜ್ಯದಲ್ಲಿ ಹಸಿರು ಇಂಧನ ಉತ್ಪಾದನೆಗೆ ಒತ್ತು ನೀಡುವ ಸಂಬಂಧ ಇಂಧನ ಇಲಾಖೆ ಜೊತೆಗೂಡಿ ಸೂಕ್ತ ನೀತಿ ರೂಪಿಸಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ಖನಿಜ ಭವನದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಹಸಿರು ಇಂಧನ ಮತ್ತು ಕೋರ್ ಉತ್ಪಾದನಾ ವಲಯಗಳಿಗೆ ಸಂಬಂಧಪಟ್ಟ ಸರ್ಕಾರದ ವಿಷನ್ ಗ್ರೂಪ್ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಸರ ಸ್ನೇಹಿ ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಉತ್ಪಾದನೆಗೆ ವಿಪುಲ ಅವಕಾಶಗಳಿವೆ. ಈ ಸಂಬಂಧ ಇಂಧನ ಮತ್ತು ಕೈಗಾರಿಕಾ ಇಲಾಖೆಗಳು ಜಂಟಿಯಾಗಿ ಚರ್ಚಿಸಿ ರೂಪಿಸಲಾಗುವುದು. ಜತೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರೊಂದಿಗೆ ಉದ್ಯಮಿಗಳು ಮತ್ತು ಹೂಡಿಕೆದಾರರ ಸಭೆ ನಡೆಸಿ, ಹಸಿರು ಇಂಧನ ಕ್ಷೇತ್ರದ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಒಂದು ವಾರದಲ್ಲಿ ಅಂತಿಮ ಸ್ಥಳ ಘೋಷಣೆ: ಸಚಿವ ಎಂ.ಬಿ. ಪಾಟೀಲ
ಅವಾಡಾ ಸಂಸ್ಥೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಿಶೋರ್ ನಾಯರ್ ಮಾತನಾಡಿ, ಗ್ರೀನ್ ಹೈಡೋಜನ್ ಉತ್ಪಾದನೆಗಾಗಿ ರಾಜ್ಯ ಸರ್ಕಾರದೊಂದಿಗೆ 45 ಸಾವಿರ ಕೋಟಿ ರು. ಹೂಡಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಸರ್ಕಾರ ಸೂಕ್ತ ಪ್ರೋತ್ಸಾಹ ಭತ್ಯೆ ಮತ್ತು ನೀತಿ ಜಾರಿಗೆ ಗಮನಹರಿಸಬೇಕು. ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬು ಬೆಳೆಯಲಾಗುತ್ತಿದ್ದು, ಪರಿಸರ ಸ್ನೇಹಿ ಎಥೆನಾಲ್ ಮತ್ತು ಗ್ರೀನ್ ಹೈಡೋಜನ್ ಉತ್ಪಾದನೆಗೆ ಆದ್ಯತೆ ನೀಡಬಹುದು ಎಂದು ಸಲಹೆ ನೀಡಿದರು.
ಅದಕ್ಕೆ ಪ್ರತಿಕ್ರಿಯಿಸಿದ ಸಚಿವ ಎಂ.ಬಿ. ಪಾಟೀಲ್, ಹಸಿರು ಕೈಗಾರಿಕಾ ವಲಯ ಸ್ಥಾಪನೆ ಮಾಡುವ ಬಗ್ಗೆ ಚಿಂತನೆಯಿದೆ. ಇದರಿಂದ ಹೂಡಿಕೆಯನ್ನೂ ಆಕರ್ಷಿಸಬಹುದು ಎನ್ನುವ ಸಲಹೆಗಳಿವೆ. ಆಂಧ್ರಪ್ರದೇಶದಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪರಿಣಾಮಕಾರಿ ನೀತಿಯಿದೆ. ರಾಜ್ಯದಲ್ಲೂ ಅಂತಹ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಅದರ ಭಾಗವಾಗಿ ಜಲಜನಕ ಮತ್ತು ಸೌರಕೋಶ ಉತ್ಪಾದನಾ ಘಟಕಗಳ ಸ್ಥಾಪನೆಗೆ ಜಿಎಸ್‌ಟಿ ರಿಯಾಯಿತಿ ನೀಡಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಪರಿಣಾಮಕಾರಿ ಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.
ರೆನ್ಯೂ ಪರ್ವ ಅಧ್ಯಕ್ಷ ವಿವೇಕ್ ಸಿಂಘ್ನಾ ಎಂವಿ ಸೋಲಾರ್ ಸ್ಥಾಪಕ ಡಿ.ವಿ. ಮಂಜುನಾಥ್, ಬಲ್ಬಟ ಸಮೂಹದ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಕುಮಾರ್, ಸಂಡೂರು ಮ್ಯಾಂಗನೀಸ್ ಆ್ಯಂಡ್ ಐರನ್ ಓರ್ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಬಹಿರಜಿ ಘೋರ್ಪಡೆ ಇತರರಿದ್ದರು.