ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಕೇಂದ್ರ ಬಜೆಟ್‌ನಲ್ಲಿ ₹7564 ಕೋಟಿ ಮೀಸಲು. ಬೆಂಗಳೂರಿನ ಸಬರ್ಬನ್ ರೈಲ್ವೆಗೆ ₹350 ಕೋಟಿ ಮೀಸಲು, ಕವಚ್ 4ಓ ಯೋಜನೆ ಜಾರಿ.
ಬೆಂಗಳೂರು (ಫೆ.1): ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಕೇಂದ್ರ ಬಜೆಟ್‌ನಲ್ಲಿ ಕಳೆದ ವರ್ಷದ ಬಜೆಟ್‌ಗಿಂತ 5 ಕೋಟಿ ಹೆಚ್ಚಿನ ಹಣವನ್ನು ಮೀಸಲಿಡಲಾಗಿದೆ. ಕಳೆದ ಬಾರಿ ನಿರ್ಮಲಾ ಸೀತಾರಾಮನ್ ಕರ್ನಾಟಕಕ್‌ಕೆ ರೈಲ್ವೆ ಬಜೆಟ್‌ಲ್ಲಿ 7559 ಕೋಟಿ ರೂಪಾಯಿ ಮೀಸಲಿಟ್ಟಿತ್ತು. ಈ ಬಾರಿ ಇದರಲ್ಲಿ ಐದು ಕೋಟಿ ಏರಿಕೆ ಮಾಡಿದ್ದು 7564 ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. ರಾಜ್ಯದ ಮಹತ್ವದ ರೈಲ್ವೆ ಯೋಜನೆಗಳಲ್ಲಿ ಒಂದಾದ ಬೆಂಗಳೂರಿನ ಸಬರ್ಬನ್ ರೈಲ್ವೆಗೆ ಕಳೆದ ಬಾರಿ 350 ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿಯೂ ಅಷ್ಟೇ ಪ್ರಮಾಣದ ಹಣವನ್ನು ಮೀಸಲಿಡಲಾಗಿದೆ.
ಇನ್ನು ರೈಲ್ವೇ ಇಲಾಖೆಗೆ ಕಳೆದ ಸಾಲಿನಲ್ಲಿ 2.51 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು. ಇದರಲ್ಲಿ ಬಹುತೇಕ 2 ಲಕ್ಷ ಕೋಟಿ ರೂಪಾಯಿ ಅನುದಾನವನ್ನು ರೈಲ್ವೆ ಬಳಸಿಕೊಂಡಿತ್ತು. ಈ ಬಜೆಟ್‌ನಲ್ಲಿಯೂ ಸಹ 2.51 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ/. ಈ ಪೈಕಿ ಪ್ರಯಾಣಿಕರ ಸವಲತ್ತುಗಳಿಗಾಗಿ 12 ಸಾವಿರ ಕೋಟಿ ರೂಪಾಯಿ, ಸುರಕ್ಷತೆ ವ್ಯವಸ್ಥೆಗಳಿಗಾಗಿ ರೂ.1,16,500 ಕೋಟಿ ಮೀಸಲಿಡಲಾಗಿದೆ. ಕಳೆದ ವರ್ಷ ಪ್ರಯಾಣಿಕರ ಸುರಕ್ಷತೆಗಾಗಿ 1,14,000 ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ರೈಲ್ವೆಗಳಿಗೆ ರೋಲಿಂಗ್ ಸ್ಟಾಕ್‌ಗೆ ₹45,530 ಕೋಟಿ ಹಂಚಿಕೆಯಾಗಿದೆ. ಸಿಗ್ನಲಿಂಗ್ ಮತ್ತು ದೂರಸಂಪರ್ಕಕ್ಕೆ ₹6,800 ಕೋಟಿ ಹಂಚಿಕೆಯಾಗಿದ್ದರೆ, ವಿದ್ಯುದೀಕರಣ ಯೋಜನೆಗಳಿಗೆ ₹6,150 ಕೋಟಿ ಹಂಚಿಕೆಯಾಗಿದೆ.
ರೇಲ್ವೆ ಸುರಕ್ಷತೆಗೆ ಕವಚ್ 4ಓ ಯೋಜನೆ ಜಾರಿಗೊಳಿಸಿದೆ. ಈ ಬಗ್ಗೆ ಪ್ರಯೋಗವನ್ನು ಈಗಾಗಲೇ ನಡೆಸಲಾಗಿದೆ. ಕವಚ್ ದೇಶಿಯ ತಂತ್ರಜ್ಷಾನ ಆಧಾರಿತವಾಗಿದೆ ಮತ್ತು ಪರೀಕ್ಷೆ ಯಶಸ್ವಿಯಾಗಿದೆ. ಸುಮಾರು 10,000 ರೈಲ್ವೆ ಇಂಜಿನಗಳಿಗೆ ಕವಚ್ ಅಳವಡಿಸಲಾಗುವುದು. ಈ ಕಾರ್ಯ ಪ್ರಗತಿಯಲ್ಲಿದೆ. ನವದೆಹಲಿ - ಮುಂಬೈ ಮತ್ತು ನವದೆಹಲಿ-ಕೋಲ್ಕತ್ತಾ ಮಾರ್ಗದಲ್ಲಿ ಡಿಸೆಂಬರ್ 2025ರಲ್ಲಿ ಕವಚ್ ಅಳವಡಿಕೆ ಮುಗಿಯಲಿದೆಯೆಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
2025 ಭಾರತೀಯ ರೇಲ್ವೆಯ ವಿದ್ಯುದೀಕರಣ ಶತಮಾನೋತ್ಸವ ವರ್ಷವೆಂದು ಬಣ್ಣಿಸಿ, 100% ವಿದ್ಯುದೀಕರಣ ಮುಗಿಸಲಾಗುವುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. 2025-26ರಲ್ಲಿ ನಾನ್ ಎಸಿ ಅಮೃತ್ ಭಾರತ್ ರೈಲು ಪ್ರಾರಂಭಿಸಲಾಗುವುದು, ಪ್ರಾರಂಭದಲ್ಲಿ 100 ಅಮೃತ್ ಭಾರತ್ ರೈಲ್ವೆ ತಯಾರಿಸಲಾಗುತ್ತಿದೆ. ಅಹ್ಲಾದಕರ ಪ್ರಯಾಣ ವ್ಯವಸ್ಥೆ ಅಮೃತ್ ಭಾರತ್ ರೈಲ್ವೆಯಲ್ಲಿ ದೊರಕಲಿದೆ. ಮುಂದಿನ 4 ವರ್ಷಗಳಲ್ಲಿ 1300ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳನ್ನು ಅಭವೃದ್ದಿ ಪಡಿಸಲಾಗುವುದು. ವಂದೇ ಸ್ಲೀಪರ್ ಕೋಚ್ ಪರೀಕಾರ್ಥವಾಗಿ ಚಲನೆಯಲ್ಲಿದೆ. 50 ವಂದೇ ಭಾರತ್ ಸ್ಲೀಪರ್ ಟ್ರೇನ್2025-26ಮತ್ತು 2026-27ರಲ್ಲಿ ಸಿದ್ದಪಡಿಸಿ ಲೋಕಾರ್ಪಣೆಗೊಳಿಸಲಾಗುವುದು. ಇವು ದೂರದ ಪ್ರಯಾಣಕ್ಕೆ ಅನುಕೂಲವಾಗಲಿದೆಯೆಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಜನಪ್ರಿಯ ಬಜೆಟ್ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳನ್ನು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ರೇಲ್ವೆ ಹಾಗೂ ಜಲ ಜೀವನ್ ಮಿಶನ್‌ಗೆ ಆದ್ಯತೆ ನೀಡಿ, ದೇಶದ ಸರ್ವಾಂಗಿಣ ಅಭಿವೃದ್ದಿಗೆ ನೀಡಿದ ಕೊಡುಗೆಯನ್ನು ನಾನು ಅತ್ಯಂತ ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಇದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳನ್ನು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
Budget 2025: ಭಾರತದ ಗ್ರಾಹಕರು ಕಟ್ಟಬೇಕಾದ ತೆರಿಗೆಗಳು ಯಾವುದು? ಇಲ್ಲಿದೆ ಡೀಟೇಲ್ಸ್..