ಪೆಟ್ರೋಲ್‌ ಬಂಕ್‌ಗಳಲ್ಲಿ ಇನ್ಮುಂದೆ ಕ್ರೆಡಿಟ್ ಕಾರ್ಡ್ ಬಳಸಿದ್ರೆ ಡಿಸ್ಕೌಂಟ್ ಸಿಗಲ್ಲ!

Published : Sep 26, 2019, 11:16 AM IST
ಪೆಟ್ರೋಲ್‌ ಬಂಕ್‌ಗಳಲ್ಲಿ ಇನ್ಮುಂದೆ ಕ್ರೆಡಿಟ್ ಕಾರ್ಡ್ ಬಳಸಿದ್ರೆ ಡಿಸ್ಕೌಂಟ್ ಸಿಗಲ್ಲ!

ಸಾರಾಂಶ

ಬಂಕ್‌ಗಳಲ್ಲಿ ಕ್ರೆಡಿಟ್‌ ಕಾರ್ಡ್‌ ಬಳಸಿದ ಖರೀದಿಗೆ ಇನ್ಮುಂದೆ ರಿಯಾಯಿತಿ ಸೌಲಭ್ಯ ಸಿಗಲ್ಲ| ಕೇಂದ್ರ ಸರ್ಕಾರದ ನಿರ್ದೇಶನವನ್ನು ರದ್ದುಗೊಳಿಸಲು ಮುಂದಾದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು

ನವದೆಹಲಿ[ಸೆ.26]: ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ಗೆ ಕ್ರೆಡಿಟ್‌ ಕಾರ್ಡ್‌ ಮೂಲಕ ಹಣ ಪಾವತಿಸಿದ ಗ್ರಾಹಕರು ಪಡೆಯುತ್ತಿದ್ದ ಶೇ.0.75 ಕ್ಯಾಶ್‌ಬ್ಯಾಕ್‌ ಸೌಲಭ್ಯವು ಅ.1ರಿಂದ ರದ್ದಾಗಲಿದೆ.

2016ರಲ್ಲಿ ನೋಟು ಅಪನಗದೀಕರಣದ ಬಳಿಕ ಡಿಜಿಟಲ್‌ ಪಾವತಿ ವ್ಯವಸ್ಥೆ ಪ್ರೋತ್ಸಾಹಕ್ಕಾಗಿ ಕ್ರೆಡಿಟ್‌ ಕಾರ್ಡ್‌ ಬಳಸುವ ಗ್ರಾಹಕರಿಗೆ ರಿಯಾಯತಿ ನೀಡುವಂತೆ ಕೇಂದ್ರ ಸರ್ಕಾರದ ನಿರ್ದೇಶನವನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ರದ್ದುಗೊಳಿಸಲು ಮುಂದಾಗಿವೆ.

2019ರ ಅ.1ರಿಂದ ಕ್ರೆಡಿಟ್‌ ಕಾರ್ಡ್‌ ಮೂಲಕ ಹಣ ಪಾವತಿಸುವ ಗ್ರಾಹಕರಿಗೆ ನೀಡಲಾಗುತ್ತಿದ್ದ ಶೇ.0.75 ಕ್ಯಾಶ್‌ಬ್ಯಾಕ್‌ ಕೊಡುಗೆಯನ್ನು ರದ್ದುಗೊಳಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿರ್ಧರಿಸಿವೆ ಎಂದು ತನ್ನ ಕ್ರೆಡಿಟ್‌ ಕಾರ್ಡ್‌ ಬಳಕೆಯ ಗ್ರಾಹಕರಿಗೆ ಎಸ್‌ಬಿಐ ಸಂದೇಶ ರವಾನಿಸಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಇನ್ಮುಂದೆ Zepto, Blinkit, Swiggy 10 ನಿಮಿಷದ ಡೆಲಿವರಿ ಸಿಗಲ್ಲ: ಸರ್ಕಾರದ ಆದೇಶ! ಖುಷಿಯಿಂದ ಒಪ್ಕೊಂಡ ಗ್ರಾಹಕರು
ಮುಂಬೈ ಪಾಲಿಕೆ ಚುನಾವಣೆಗಾಗಿ ಷೇರು ಮಾರುಕಟ್ಟೆ ಕ್ಲೋಸ್! ಜೆರೋಧಾ ಸಿಇಒ ನಿತಿನ್ ಕಾಮತ್ ಕೆಂಡಾಮಂಡಲ