Petrol Diesel Rate:ವಾರಾಂತ್ಯದಲ್ಲಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

By Suvarna NewsFirst Published Dec 18, 2021, 11:40 AM IST
Highlights

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸಾಕಷ್ಟು ಏರಿಳಿತಗಳು ಕಂಡುಬಂದಿದ್ದರೂ ದೇಶದಲ್ಲಿ ಮಾತ್ರ ಕಳೆದ ಒಂದೂವರೆ ತಿಂಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. 

ಬೆಂಗಳೂರು (ಡಿ.18): ರಾಜ್ಯದಲ್ಲಿ ಪೆಟ್ರೋಲ್ (Petrol) ಹಾಗೂ ಡೀಸೆಲ್  (Diesel)ಬೆಲೆಯಲ್ಲಿ (Price) ದೀಪಾವಳಿ ಬಳಿಕ  ಯಾವುದೇ ಬದಲಾವಣೆಯಾಗಿಲ್ಲ. ಸುಮಾರು ಒಂದೂವರೆ ತಿಂಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (Crude oil) ಬೆಲೆಯಲ್ಲಿ ನಿರಂತರ ಏರಿಳಿತ ಕಂಡುಬಂದಿದ್ದರೂ ಅದು ದೇಶೀಯ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಸಾಮಾನ್ಯವಾಗಿ ಪೆಟ್ರೋಲ್ ಹಾಗ ಡೀಸೆಲ್ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬದಲಾವಣೆಗೆ ಅನುಗುಣವಾಗಿ ಏರಿಳಿತ ಕಾಣುತ್ತವೆ. ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ವಿಧಿಸೋ ತೆರಿಗೆಗಳು(Taxes) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ.  ದೆಹಲಿ (Delhi) ಸರ್ಕಾರ ಈ ತಿಂಗಳ ಪ್ರಾರಂಭದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್(VAT)ಕಡಿತಗೊಳಿಸಿ ಬೆಲೆಯಲ್ಲಿ ಇಳಿಕೆ  ಮಾಡಿತ್ತು.  ಬೇರೆ ಯಾವ ರಾಜ್ಯ ಸರ್ಕಾರಗಳು ಕೂಡ ಒಂದು ತಿಂಗಳಿಂದ ಇಂಧನಗಳ ಮೇಲಿನ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.  ಇಂದು (ಡಿ.18) ಕೂಡ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗ ಡೀಸೆಲ್ ಬೆಲೆ ಸ್ಥಿರವಾಗಿದೆ.  ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು(ಡಿ.17)  ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ? 

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್  ದರ 85.01 ರೂ.ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ.  ಮೈಸೂರಿನಲ್ಲಿ (Mysore)ಪೆಟ್ರೋಲ್ ದರ ಲೀಟರ್ ಗೆ 100.08ರೂ. ಇದೆ. ನಿನ್ನೆ 100.22ರೂ. ಇತ್ತು. ಅಂದ್ರೆ ನಿನ್ನೆಗಿಂತ ಇಂದು 0.14ರೂ. ಇಳಿಕೆಯಾಗಿದೆ. ಇನ್ನು ಡೀಸೆಲ್ ದರ ಇಂದು ಲೀಟರ್ ಗೆ  84.56ರೂ.ಇದೆ.  ನಿನ್ನೆ 84.68ರೂ. ಇತ್ತು. ಅಂದ್ರೆ ನಿನ್ನೆಗಿಂತ ಇಂದು 0.12ರೂ. ಇಳಿಕೆಯಾಗಿದೆ. ಕಲಬುರಗಿಯಲ್ಲಿ(Kalburgi) ಪೆಟ್ರೋಲ್  ಬೆಲೆ ಲೀಟರ್ ಗೆ 101.04ರೂ. ಇದೆ. ನಿನ್ನೆ 100.28ರೂ. ಇದೆ. ಅಂದ್ರೆ ನಿನ್ನೆಗಿಂತ ಇಂದು ೦.76ರೂ. ಏರಿಕೆಯಾಗಿದೆ. ಡೀಸೆಲ್ ಲೀಟರ್ ಗೆ ನಿನ್ನೆ 84.77ರೂ. ಇತ್ತು. ಇಂದು 85.45ರೂ. ಇದೆ. ಅಂದ್ರೆ 0.68ರೂ. ಏರಿಕೆಯಾಗಿದೆ.  

Government Stake in PSU Banks: ಬ್ಯಾಂಕಿಂಗ್‌ ಕಾಯ್ದೆ ತಿದ್ದುಪಡಿಗೆ ಮೋದಿ ಪ್ಲಾನ್‌: ಸರ್ಕಾರದ ಪಾಲು 26%?

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ? 
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

e-filling Portal:ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"


 

click me!